Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅ.20 ರಿಂದ ಸಿಎನ್‍ಸಿ 4ನೇ ಹಂತದ ಪಾದಯಾತ್ರೆ ಆರಂಭ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅ.20 ರಿಂದ ಸಿಎನ್‍ಸಿ 4ನೇ ಹಂತದ ಪಾದಯಾತ್ರೆ ಆರಂಭ*

ಅಕ್ಟೋಬರ್ 18, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.18 : ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಸೇರಿದಂತೆ ಸಂವಿಧಾನದತ್ತವಾದ 9 ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯಲು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಐದು ಹಂತಗಳಲ್ಲಿ ನಡೆಸುತ್ತಿರುವ ಪಾದಯಾತ್ರೆಯ ನಾಲ್ಕನೇ ಹಂತ ಅ.20 ರಿಂದ ಆರಂಭಗೊಳ್ಳಲಿದೆ ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ.
ಶುಕ್ರವಾರ ಬೆಳಗ್ಗೆ 10 ಗಂಟೆಗೆ ಕುಂದದಿಂದ ಪಾದಯಾತ್ರೆ ಆರಂಭಗೊಳ್ಳಲಿದೆ. ಬೊಟ್ಟಿಯತ್‍ನಾಡ್ (ಕುಂದ), ಕುತ್‍ನಾಡ್ (ಬಿ.ಶೆಟ್ಟಿಗೇರಿ) ಮತ್ತು ಬೆರಳಿನಾಡ್ (ಕಂಡಂಗಾಲ) ನ ಮೂರು ನಾಡುಗಳ ಮಂದ್ “ಕೈಮುಡಿಕೆ ಮಂದ್” ನಲ್ಲಿ ಬೆಳಗ್ಗೆ 10.30 ಗಂಟೆಗೆ ಕೊಡವ ಜನಜಾಗೃತಿ ಸಭೆ ನಡೆಯಲಿದೆ.
ಅ.21 ರಂದು ಬೆಳಗ್ಗೆ 10 ಗಂಟೆಗೆ ಬಿಟ್ಟಂಗಾಲ ಜಂಕ್ಷನ್ ಬಳಿಯಿಂದ ಪಾದಯಾತ್ರೆ ಆರಂಭಗೊಳಲಿದೆ. ನಂತರ ಪಟ್ಟಿಬಾಣೆ ಮಂದ್ ಪೆರವನಾಡ್ (ಬುಟ್ಟಂಗಾಲ) ನಲ್ಲಿ ಮತ್ತು ಮಧ್ಯಾಹ್ನ 2.30 ಗಂಟೆಗೆ ಬೋಟೋಳಿನಾಡ್ (ವಿರಾಜಪೇಟೆ ತಾಲ್ಲೂಕಿನ ಆರ್ಜಿ ಬೊಟೋಳಿ,)ನಲ್ಲಿ ಜಾಗೃತಿ ಸಭೆಯನ್ನು ಆಯೋಜಿಸಲಾಗಿದೆ.
ಕೊಡವ, ಕೊಡವತಿಯರು ಕೋವಿಯೊಂದಿಗೆ ಸಾಂಪ್ರದಾಯಿಕ ಉಡುಪಿನಲ್ಲಿ ಪಾಲ್ಗೊಳ್ಳಲಿದ್ದು, 9 ಬೇಡಿಕೆಗಳ ಹಕ್ಕೊತ್ತಾಯಗಳನ್ನು ಮಂಡಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಸಂವಿಧಾನದ ವಿಧಿಗಳಡಿಯಲ್ಲಿ ಕೊಡವ ಸಮುದಾಯಕ್ಕೆ ರಕ್ಷಣೆ ಒದಗಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮುಂದಾಗಬೇಕು. ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನವು ಅತ್ಯಂತ ಶ್ರೇಷ್ಠ ಮತ್ತು ಶಾಶ್ವತವೂ ಆಗಿರುವುದರಿಂದ ಸಂವಿಧಾನದಡಿಯಲ್ಲಿ ಕೊಡವರಂತಹ ಸೂಕ್ಷ್ಮ ಬುಡಕಟ್ಟು ಜನಾಂಗವನ್ನು ವಿಶೇಷವಾಗಿ ರಕ್ಷಿಸುವುದು ರಾಜ್ಯಾಂಗದತ್ತ ಋಣಭಾರವಾಗಿದೆ.
ಕೊಡವರು ಕೊಡವ ನೆಲದ ಪ್ರಾಚೀನ ಬುಡಕಟ್ಟು ಜನರಾಗಿದ್ದು, ಕೊಡವ ಮಂದ್ ಗಳು, ಜಲದೇವತೆ ಕಾವೇರಿ, ಸೂರ್ಯ, ಚಂದ್ರ, ಭೂಮಿತಾಯಿಯಷ್ಟೇ ಪವಿತ್ರವೂ ಆಗಿದ್ದಾರೆ. ಪ್ರಾಚೀನ ಬುಡಕಟ್ಟು ಕೊಡವ ಜನಾಂಗವನ್ನು ಈ ದೇಶದ ಜನ ಹಾಗೂ ಸರ್ಕಾರ ಸಂವಿಧಾನದ 51 ಎ.ಎಫ್ ವಿಧಿ ಮತ್ತು ವಿಶ್ವ ರಾಷ್ಟ್ರ ಸಂಸ್ಥೆಯ ಸನದ್ ನ ಪ್ರಕಾರ ರಕ್ಷಿಸಿ ಪೋಷಿಸಿ ಕಾಪಾಡಬೇಕಾಗಿದೆ.
ಕಾಶ್ಮೀರಿ ಪಂಡಿತರು ಕಾಶ್ಮೀರಕ್ಕೆ ಮಾತ್ರ ಸೀಮಿತರಾಗಿ ಕಾಶ್ಮೀರದಲ್ಲಿ ತಾಯಿ ಬೇರನ್ನು ಹೊಂದಿದ್ದಾರೆ. ಕೊಡವರು ಕೂಡ ಕೊಡಗಿನ ಆದಿಮಸಂಜಾತರಾಗಿದ್ದು, ಕೊಡಗು ಹೊರತು ಪಡಿಸಿ ಕೊಡಗಿನ ಹೊರಗೆ ಕೊಡವರಿಗೆ ಎಲ್ಲೂ ತಾಯಿ ಬೇರಿಲ್ಲ. ಆದ್ದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರ ಕೊಡವ ಬಾಹುಳ್ಯ ಜನ್ಮ ಭೂಮಿಯನ್ನು ಸಂವಿಧಾನದ 244 ವಿಧಿ ಹಾಗೂ 6 ಮತ್ತು 8 ನೇ ಶೆಡ್ಯೂಲ್ ಪ್ರಕಾರ ಕೊಡವರ ಸ್ವಯಂ ಶಾಸನದ ಜನ್ಮಭೂಮಿ ಎಂದು ಡಾರ್ಜಿಲಿಂಗ್ ಗೂರ್ಖಾಲ್ಯಾಂಡ್, ಬೋಡೋ ಲ್ಯಾಂಡ್, ಕರ್ಬಿ ಹಾಂಗ್ ಲಾಂಗ್ ಲ್ಯಾಂಡ್, ಗಾರೊಲ್ಯಾಂಡ್, ಜಯಂತಿಯ ಲ್ಯಾಂಡ್, ಕಾಸಿ ಹಿಲ್ಸ್ ಲ್ಯಾಂಡ್ ಇತ್ಯಾದಿ ಭಾರತದ ಈಶಾನ್ಯ ರಾಜ್ಯಗಳ ಹತ್ತು ಸ್ವಾಯತ್ತ ಪ್ರದೇಶಗಳು ಮತ್ತು ಪರಿಷತ್ ಗಳು ಹಾಗೂ ಲಡಾಕ್ ನ ಲೇಹ್ ಮತ್ತು ಲಡಾಕ್ ಬುದ್ದಿಷ್ಠ್ ಅಟೋನಮಸ್ ಕೌನ್ಸಿಲ್ ಮಾದರಿಯಲ್ಲಿ ಘೋಷಿಸಿ ಶಾಸನಬದ್ಧಗೊಳಿಸಬೇಕು ಎಂಬುವುದು ನಮ್ಮ ಬೇಡಿಕೆಯಾಗಿದೆ.
ಇದನ್ನು ಈಡೇರಿಸುವಂತೆ ಒತ್ತಾಯಿಸಿ ಸಿಎನ್‍ಸಿ ಸಂಘಟನೆಯಿಂದ ನಿರಂತರವಾಗಿ ಶಾಂತಿಯುತ ಹೋರಾಟಗಳನ್ನು ನಡೆಸುತ್ತಾ ಬರಲಾಗುತ್ತಿದ್ದು, ಮುಂದುವರೆದ ಭಾಗವಾಗಿ ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ನಾಚಪ್ಪ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.