Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಜಾನಪದ ದಸರಾ ಉತ್ಸವದ ಮೆರುಗು : ಸೌಹಾರ್ದತೆ ಹಂಚುವ ಶಕ್ತಿ ಜಾನಪದಕ್ಕಿದೆ : ಬಿ.ಜಿ.ಅನಂತಶಯನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಜಾನಪದ ದಸರಾ ಉತ್ಸವದ ಮೆರುಗು : ಸೌಹಾರ್ದತೆ ಹಂಚುವ ಶಕ್ತಿ ಜಾನಪದಕ್ಕಿದೆ : ಬಿ.ಜಿ.ಅನಂತಶಯನ*

ಅಕ್ಟೋಬರ್ 19, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.19 : ಪ್ರೀತಿ, ಸೌಹಾರ್ದತೆ, ಮಾನವೀಯ ಕಳಕಳಿಯನ್ನು ತನ್ನೊಳಗೆ ಮಿಳಿತವಾಗಿಸಿಕೊಂಡಿರುವ ‘ಜಾನಪದ’ವೆನ್ನುವುದು ಬದುಕಿನ ಪದ್ಧತಿಯೇ ಆಗಿದ್ದು, ಇಂತಹ ಜಾನಪದ ಸಂಸ್ಕೃತಿಯನ್ನು ವೈವಿಧ್ಯಮಯ ಕಲಾ ಪ್ರಕಾರಗಳ ಪ್ರದರ್ಶನಗಳೊಂದಿಗೆ ಸಮರ್ಥವಾಗಿ ಕಟ್ಟಿಕೊಡುವಲ್ಲಿ ಮಡಿಕೇರಿಯ ಜಾನಪದ ದಸರಾ ಉತ್ಸವ ಯಶಸ್ವಿಯಾಯಿತು.
ಜಾನಪದ ಉಡುಪು ತೊಟ್ಟ ಮಕ್ಕಳು, ಪುಟಾಣಿಗಳ ಚೆಂಡೆ ಮೇಳ, ವೀರಗಾಸೆ, ಪಟ ಕುಣಿತ, ಡೊಳ್ಳು ಕುಣಿತಗಳೊಂದಿಗೆ ಗುರುವಾರ ಬೆಳಗ್ಗೆ ನಗರದ ಜನರಲ್ ತಿಮ್ಮಯ್ಯ ವೃತ್ತದ ಬಳಿಯಿಂದ ಗಾಂಧಿ ಮೈದಾನದವರೆಗೆ ನಡೆದ ‘ಕಲಾ ಜಾಥ’ ದಸರಾ ಉತ್ಸವಕ್ಕೆ ವಿಶೇಷ ಮೆರುಗನ್ನು ನೀಡಿ, ಈ ನೆಲದ ಶ್ರೀಮಂತ ಜಾನಪದ ಸಂಸ್ಕೃತಿಯ ಸೌಗಂಧವನ್ನು ಪಸರಿಸಿತು. ಕಲಾ ಜಾಥಕ್ಕೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಚಾಲನೆ ನೀಡಿದರೆ, ಜಾನಪದ ದಸರಾ ಉತ್ಸವದ ಪ್ರಮುಖ ರೂವಾರಿಯಾದ ಕೊಡಗು ಜಿಲ್ಲಾ ಜಾನಪದ ಪರಿಷತ್‍ನ ಅಧ್ಯಕ್ಷರಾದ ಬಿ.ಜಿ.ಅನಂತಶಯನ ಮತ್ತು ಪದಾಧಿಕಾರಿಗಳು, ಮಡಿಕೇರಿ ದಸರಾ ಸಮಿತಿ ಅಧ್ಯಕ್ಷೆ ಅನಿತಾ ಪೂವಯ್ಯ ಮತ್ತು ಪದಾಧಿಕಾರಿಗಳು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು.
ಜಾನಪದ ಸಂಸ್ಕೃತಿಯೊಂದಿಗೆ ಮುನ್ನಡೆಯಿರಿ- ಜಾನಪದ ಸಂಸ್ಕೃತಿಯನ್ನು ಪ್ರತಿಬಿಂಬಿಸುವಂತೆ ರೂಪಿಸಿದ್ದ ಕಲಾ ಸಂಭ್ರಮ ವೇದಿಕೆಯಲ್ಲಿ ರಾಗಿ ಬೀಸುವ ಜಾನಪದ ಹಾಡಿನ ಹಿಮ್ಮೇಳದಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ರಾಗಿಕಲ್ಲನ್ನು ತಿರುಗಿಸುವ ಮೂಲಕ ಜಾನಪದ ದಸರಾಕ್ಕೆ ಚಾಲನೆ ನೀಡಿ, ಜಾನಪದ ಶ್ರೀಮಂತ ಸಂಸ್ಕೃತಿಯೊಂದಿಗೆ ನಾವೆಲ್ಲರು ಮುನ್ನಡೆಯಬೇಕಾಗಿದೆ. ಬದುಕಿನ ಪದ್ಧತಿಯೇ ಆಗಿರುವ ಜಾನಪದದ ಅರಿವನ್ನು ಮುಂದಿನ ಪೀಳಿಗೆಗೆ ನೀಡುವ ಅಗತ್ಯವಿದೆಯೆಂದು ನುಡಿದರು.
ಈ ನೆಲದ ಬದುಕು, ಪರಂಪರೆ, ಹಬ್ಬ ಹರಿದಿನಗಳನ್ನು ಒಳಗೊಂಡ ಜಾನಪದ ಸಂಸ್ಕೃತಿಯ ಉಳಿವು ಅತ್ಯವಶ್ಯವಾಗಿ ನಡೆಯಬೇಕಾಗಿದ್ದು, ಇದಕ್ಕಾಗಿ ಇದರ ಕುರಿತ ತಿಳುವಳಿಕೆಯನ್ನು ಯುವ ಪೀಳಿಗೆಗೆ ನೀಡುವುದು ಅತ್ಯವಶ್ಯ. ವಿಶಾಲವಾದ ಭಾರತ ದೇಶದಲ್ಲಿ ನೂರಾರು ಭಾಷೆ, ಸಂಸ್ಕೃತಿಗಳಿವೆಯಾದರು, ಜಾನಪದವೆನ್ನುವುದು ಒಂದೇ ಆಗಿದೆ. ಎಲ್ಲರ ನಡುವಿನ ಪ್ರೀತಿ ವಿಶ್ವಾಸ, ಪರಸ್ಪರ ಸೌಹಾರ್ದತೆಗಳೆ ಜಾನಪದದ ಆಂತರ್ಯದ ಮೂಲಸೆಲೆಯಾಗಿದೆ. ಈ ಹಿನ್ನೆಲೆ ಜಾನಪದ ಕಾರ್ಯಕ್ರಮ ದಸರಾ ಉತ್ಸವಕ್ಕಷ್ಟೆ ಸೀಮಿತವಾಗದಿರಲಿ ಎಂದು ಆಶಿಸಿದರು.
ಮಡಿಕೇರಿ ದಸರಾ ಸಮಿತಿ ಅಧ್ಯಕ್ಷರಾದ ಅನಿತಾ ಪೂವಯ್ಯ ಮಾತನಾಡಿ, ಈ ಬಾರಿ ಏಳನೇ ವರ್ಷದ ಜಾನಪದ ದಸರಾ ಉತ್ಸವವನ್ನು ನಡೆಸಲಾಗುತ್ತಿದೆ. ಇದರ ಮೂಲಕ ಮರೆಯಾಗಿ ಹೋಗುತ್ತಿರುವ ನಮ್ಮ ಜಾನಪದ ಬದುಕು, ಸಂಸ್ಕೃತಿಯನ್ನು ಮುನ್ನೆಲೆಗೆ ತರುವ ಶ್ಲಾಘನೀಯ ಕಾರ್ಯ ನಡೆಯುತ್ತಿದೆಯೆಂದರು.
ಮುಂಜಾನೆಯಿಂದ ಸಂಜೆಯವರೆಗಿನ ಗ್ರಾಮಿಣ ಬದುಕಿನ ಪ್ರತಿಯೊಂದು ಹಂತದಲ್ಲಿಯೂ ಜಾನಪದದ ಸೊಗಡನ್ನು ಕಾಣಬಹುದಾಗಿದೆ. ಇಂತಹ ಶ್ರೀಮಂತ ಜಾನಪದ ಪರಂಪರೆಯ ಉಳಿವಿನಲ್ಲಿ ಪೋಷಕರ ಪಾತ್ರ ಅತ್ಯಂತ ಮಹತ್ವದ್ದು. ಬದಲಾದ ಕಾಲ ಘಟ್ಟದಲ್ಲಿ ಇಂಗ್ಲೀಷ್ ಅನಿವಾರ್ಯವಾದರು, ತಮ್ಮ ಮಕ್ಕಳಿಗೆ ಈ ನೆಲದ ಭಾಷೆ, ಸಂಸ್ಕೃತಿಯ ಮಹತ್ವವನ್ನು ತಿಳಿಸಿಕೊಡಲು ಎಂದಿಗೂ ಮರೆಯದಿರಿ ಎಂದು ಕಿವಿ ಮಾತುಗಳನ್ನಾಡಿ, ಜಾನಪದ ಸಂಸ್ಕೃತಿಯ ಕ್ರೀಡೆಗಳನ್ನು ಶಾಲಾ ಮಟ್ಟದಲ್ಲಿ ನಡೆಸಲು ಜಾನಪದ ಪರಿಷತ್ ಮುಂದಾಗುವಂತೆ ಮನವಿ ಮಾಡಿದರು.
ಸೌಹಾರ್ದತೆ ಹಂಚುವ ಶಕ್ತಿ ಚೈತನ್ಯ ಜಾನಪದಕ್ಕಿದೆ- ಪ್ರಾಸ್ತಾವಿಕವಾಗಿ ಮಾತನಾಡಿದ ಕೊಡಗು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷರಾದ ಬಿ.ಜಿ. ಅನಂತಶಯನ, ಪರಸ್ಪರ ಪ್ರೀತಿ, ವಿಶ್ವಾಸ, ಮಮಕಾರ, ಸೌಹಾರ್ದತೆಗಳನ್ನು ಹೃದಯದಿಂದ ಹೃದಯಕ್ಕೆ ಹಂಚುವ ಶಕ್ತಿ ಮತ್ತು ಚೈತನ್ಯ ‘ಜಾನಪದ’ಕ್ಕಿದೆ. ಇತರರನ್ನು ವಿಶ್ವಾಸದಿಂದ ಕಂಡು ಪ್ರೀತಿ , ಸೌಹಾರ್ದತೆಗಳನ್ನು ತೋರುವ ಮನಸ್ಥಿತಿ ಅತ್ಯಂತ ಸಹಜವಾಗಿ ಜಾನಪದ ಸಂಸ್ಕೃತಿಯಲ್ಲಿ ಅಂತರ್ಗತವಾಗಿದೆ. ಇಂತಹ ಜಾನಪದ ಸಂಸ್ಕೃತಿಯನ್ನು ಸಂರಕ್ಷಿಸಿಕೊಂಡು ಮುನ್ನಡೆಯಬೇಕೆನ್ನವ ಆಶಾ ಭಾವನೆಯನ್ನು ವ್ಯಕ್ತಪಡಿಸಿದರು.
ಭಾರತವನ್ನಾಳಿದ ಬ್ರಿಟೀಷರು ಇಲ್ಲಿನ ಶಿಕ್ಷಣ ಕ್ರಮಗಳನ್ನು, ಸಂಸ್ಕೃತಿಯನನ್ನು ಬದಲಾಯಿಸುವ ಮೂಲ ಚಿಂತನೆಗಳನ್ನು ಹೊಂದಿದ್ದಂತಹವರು. ಅಂತಹ ಬ್ರಿಟೀಷರು ಇಲ್ಲಿನ ಗ್ರಾಮೀಣ ಭಾಗದ ಜನತೆಯಲ್ಲಿ ಕಂಡು ಬಂದ ಪ್ರೀತಿ, ವಿಶ್ವಾಸ, ಪರಸ್ಪರ ಸಹಕಾರ, ಸಹಾನುಭೂತಿಗಳಿಂದ ಆಶ್ಚರ್ಯ ಚಕಿತರಾಗಿದ್ದರು. ಬದುಕಿನ ಈ ಸುಂದರ ಪಾಠಗಳನ್ನು ಮತ್ತೆ ಅಳವಡಿಸಿಕೊಳ್ಳಲು ಬ್ರಿಟೀಷರಿಗೆ ಜಾನಪದ ಬದುಕು ಪ್ರೇರಣೆಯನ್ನು ನೀಡಿತ್ತೆಂದು ಅನಂತಶಯನ ಅವರು ತಿಳಿಸಿ, ಜಾರ್ಜ್ ಫರ್ಡಿನಾಂಡ್ ಕಿಟ್ಟೆಲ್ ಅವರು ಗ್ರಾಮೀಣ ಭಾಗಗಳಲ್ಲಿ ಸಂಚರಿಸಿ, ಅಲ್ಲಿನ ಜನತೆಯೊಂದಿಗೆ ಒಡನಾಡಿ ರಚಿಸಿರುವ ‘ಶಬ್ದ ಕೋಶ’ ಕನ್ನಡ ಅಧಿಕೃತವಾದ ಶಬ್ದಕೋಶವಾಗಿದೆ. ಅದರಲ್ಲಿ 5 ಸಾವಿರಕ್ಕೂ ಹೆಚ್ಚಿನ ಜಾನಪದ ಗಾದೆಗಳನ್ನು ಶಬ್ದಗಳ ಅರ್ಥ ವಿವರಣೆಗಳನ್ನು ನೀಡಲು ಬಳಸಲಾಗಿದೆಯೆಂದು ಮಾಹಿತಿಯನ್ನಿತ್ತರು.
ಬದಲಾಗುತ್ತಿರುವ ಸಾಮಾಜಿಕ ಪರಿಸ್ಥಿತಿಗಳ ನಡುವೆ ಭಾವನೆಗಳೆ ಇಲ್ಲದ ಬದುಕನ್ನು ಕಾಣುತ್ತಿದ್ದು, ಇದು ಬದಲಾಗಬೇಕಾಗಿದೆ. ಅನಾದಿ ಕಾಲದ ಜಾನಪದದೊಂದಿಗೆ ಸುಖೀ ಮತ್ತು ಪ್ರೇಮ ತುಂಬಿದ ಸಮಾಜವನ್ನು ಕಟ್ಟೋಣವೆನ್ನುವೆ ಆಶಯವನ್ನು ವ್ಯಕಪಡಿಸಿದರಲ್ಲದೆ, ಕೊಡಗು ಜಿಲ್ಲಾ ಜಾನಪದ ಪರಿಷತ್‍ಗೆ ಕಟ್ಟಡವೊಂದನ್ನು ಒದಗಿಸುವಂತೆ ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿ, ಬೇಡಿಕೆ ಈಡೇರಿಸಿದಲ್ಲಿ ಜಾನಪದ ಮ್ಯೂಸಿಯಂ ಮಾಡುವುದಾಗಿ ತಿಳಿಸಿದರು.
ವೇದಿಕೆಯಲ್ಲಿ ಮಡಿಕೇರಿ ದಸರಾ ಸಮಿತಿ ಉಪಾಧ್ಯಕ್ಷರಾದ ಸವಿತಾ ರಾಕೇಶ್, ಕಾರ್ಯಾಧ್ಯಕ್ಷರಾದ ಪ್ರಕಾಶ್ ಆಚಾರ್ಯ, ಪ್ರಧಾನ ಕಾರ್ಯದರ್ಶಿ ರಾಜೇಶ್ ಯಲ್ಲಪ್ಪ, ಖಜಾಂಚಿ ಅರುಣ್ ಶೆಟ್ಟಿ, ನಗರಸಭಾ ಸ್ಥಾಯಿ ಸಮಿತಿ ಅಧ್ಯಕ್ಷರಾದ ಎಸ್.ಸಿ. ಸತೀಶ್, ನಗರಸಭಾ ಸದಸ್ಯರಾದ ಶಾರದಾ ನಾಗರಾಜು, ಕೆ.ಎಸ್.ರಮೇಶ್, ಸರ್ವೋದಯ ಸಮಿತಿ ಅಧ್ಯಕ್ಷರಾದ ಅಂಬೆಕಲ್ ಕುಶಾಲಪ್ಪ, ಜಾನಪದ ಪರಿಷತ್ ತಾಲ್ಲೂಕು ಅಧ್ಯಕ್ಷರುಗಳಾದ ಸುಜಲಾ ದೇವಿ, ಟೋಮಿ ಥೋಮಸ್, ಪ್ರಕಾಶ್, ಚಂದ್ರ್ರಮೋಹನ್, ಪ್ರಶಾಂತ್, ದಿಲನ್ ಚಂಗಪ್ಪ ಮೊದಲಾದವರಿದ್ದರು.
ಜಾನಪದ ಪರಿಷತ್‍ನ ಎಸ್.ಐ.ಮುನೀರ್ ಅಹಮ್ಮದ್ ಕಾರ್ಯಕ್ರಮ ನಿರೂಪಿಸಿದರೆ, ದಸರಾ ಸಾಂಸ್ಕøತಿಕ ಸಮಿತಿ ಅಧ್ಯಕ್ಷರು ಹಾಗೂ ಜಾನಪದ ಪರಿಷತ್ ಪದಾಧಿಕಾರಿ ಅನಿಲ್ ಎಚ್.ಟಿ. ಸ್ವಾಗತಿಸಿದರು. ಜಾನಪದ ಪರಿಷತ್ ಖಜಾಂಚಿ ಸಂಪತ್ ಕುಮಾರ್ ವಂದಿಸಿದರು.
ಜಾನಪದ ವಸ್ತು ಪ್ರದರ್ಶನ- ಮೂರ್ನಾಡು ಜಾನಪದ ಪರಿಷತ್ ಘಟಕದ ಪದಾಧಿಕಾರಿಗಳಾದ ಕಿಗ್ಗಾಲು ಹರೀಶ್ ಅವರು ಇದೇ ಸಂದರ್ಭ ಆಯೋಜಿಸಿದ್ದ, ಅತ್ಯಪರೂಪದ ಹಳೆಯ ನಿತ್ಯೋಪಯೋಗಿ ವಸ್ತುಗಳ ಪ್ರದರ್ಶನ ಗಮನ ಸೆಳೆಯಿತು.
::: ಬೊಂಬೆ ಜೋಡಣೆ, ಕಥಾ ಸ್ಪರ್ಧೆ ವಿಜೇತರು :::
ಮಡಿಕೇರಿ: ಜಾನಪದ ದಸರಾ ವೇದಿಕೆ ಸಮಾರಂಭದಲ್ಲಿ ಬೊಂಬೆ ಜೋಡಣೆ ಸ್ಪರ್ಧೆ ಮತ್ತು ಕಥೆ ಹೇಳುವ ಸ್ಪರ್ಧೆಗಳ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಬೊಂಬೆ ಜೋಡಣೆ ಸ್ಪರ್ಧೆಯಲ್ಲಿ ಮಾಲಾ ರೋಶನ್ ಮತ್ತು ಶುಭಾ ವಿಶ್ವನಾಥ್ ಪ್ರಥಮ, ನೀತು ಮತ್ತು ಸವಿತಾ ರಾಕೇಶ್ ದ್ವಿತೀಯ, ಹೇಮಾ ರಘ ತೃತೀಯ ಬಹುಮಾನ ಪಡೆದುಕೊಂಡರು.
ಕಥೆ ಹೇಳುವ ಸ್ಪರ್ಧೆಯಲ್ಲಿ ಭಾಗೀರಥಿ ಹುಲಿತಾಳ ಪ್ರಥಮ, ಪ್ರಮೀಳಾ ರಮೇಶ್ ದ್ವಿತೀಯ ಮತ್ತು ನಗರದ ಸಂತ ಜೋಸೆಫರ ಶಾಲೆಯ ಕುಮಾರಿ ಅನಘ ತೃತೀಯ ಬಹುಮಾನ ಸ್ವೀಕರಿಸಿದರು.  

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.