Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮಡಿಕೇರಿ ದಸರಾ : ವಾಹನ ಸಂಚಾರ, ನಿಲುಗಡೆ ಸ್ಥಳದ ವಿವರ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮಡಿಕೇರಿ ದಸರಾ : ವಾಹನ ಸಂಚಾರ, ನಿಲುಗಡೆ ಸ್ಥಳದ ವಿವರ

ಅಕ್ಟೋಬರ್ 19, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಅ.24 : ಮಡಿಕೇರಿ ನಗರ ಮತ್ತು ಗೋಣಿಕೊಪ್ಪ ಪಟ್ಟಣದಲ್ಲಿ ನಡೆಯಲಿರುವ ನಾಡಹಬ್ಬ ದಸರಾ ಸಂಬಂಧ ವಾಹನ ದಟ್ಟಣೆ ನಿಯಂತ್ರಿಸಿ, ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸುವ ದೃಷ್ಟಿಯಿಂದ ವಾಹನ ಸಂಚಾರ ಮತ್ತು ನಿಲುಗಡೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ.
ಅ.24 ರಂದು ಮಧ್ಯಾಹ್ನ 2 ಗಂಟೆಯಿಂದ ಅ.25 ರ ಬೆಳಗ್ಗೆ 10 ಗಂಟೆಯವರೆಗೆ ಮಂಗಳೂರು ಕಡೆಯಿಂದ ಮಡಿಕೇರಿ ಮುಖಾಂತರ ಮೈಸೂರು ಕಡೆಗೆ ತೆರಳುವ ಭಾರಿ ವಾಹನಗಳು (ಟ್ಯಾಂಕರ್, ಕ್ಯಾಂಟರ್, ಸರಕು ಲಾರಿಗಳು) ಬದಲಿ ಮಾರ್ಗವಾದ ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ, ಸಕಲೇಶಪುರ, ಮೈಸೂರು ಮಾರ್ಗವಾಗಿ ಸಂಚರಿಸುವುದು.
ಅ.24 ರಂದು ಮಧ್ಯಾಹ್ನ 2 ಗಂಟೆಯಿಂದ ಅ.25 ರ ಬೆಳಗ್ಗೆ 10 ಗಂಟೆಯವರೆಗೆ ಮೈಸೂರು ಕಡೆಯಿಂದ ಮಂಗಳೂರು ಕಡೆಗೆ ತೆರಳುವ ಭಾರಿ ವಾಹನಗಳನ್ನು (ಟ್ಯಾಂಕರ್, ಕ್ಯಾಂಟರ್, ಸರಕು ಲಾರಿಗಳು) ಬಿಳಿಕೆರೆ, ಕೆ.ಆರ್.ನಗರ, ಹೊಳೆನರಸೀಪುರ ಹಾಸನ ಸಕಲೇಶಪುರ ಮಾರ್ಗವಾಗಿ ಸಂಚರಿಸುವುದು.
ಅ.24 ರಂದು ಸಂಜೆ 4 ಗಂಟೆಯಿಂದ ಅ.25 ರ ಬೆಳಗ್ಗೆ 10 ಗಂಟೆಯವರೆಗೆ ಮಡಿಕೇರಿ ನಗರದೊಳಗೆ ಯಾವುದೇ ವಾಹನಗಳಿಗೆ ಪ್ರವೇಶ ಇರುವುದಿಲ್ಲ.
ಮಡಿಕೇರಿ ಪಟ್ಟಣದಲ್ಲಿ ವಾಹನ ಸಂಚಾರಗಳ ತಾತ್ಕಾಲಿಕವಾಗಿ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ವ್ಯವಸ್ಥೆಯ ವಿವರ : ಮೈಸೂರು ರಸ್ತೆ ಕಡೆಯಿಂದ ಬರುವ ವಾಹನಗಳು ಮತ್ತು ಸೋಮವಾರಪೇಟೆ ಕಡೆಯಿಂದ ಬರುವ ವಾಹನಗಳು ಸಂಪಿಗೆ ಕಟ್ಟೆ ಕಡೆಯಿಂದ ಎ.ವಿ.ಶಾಲೆ, ಮುತ್ತಪ್ಪ ದೇವಸ್ಥಾನ ಮುಂದೆ ಸೆಂಟ್ ಜೋಸೆಫ್ ಕಾನ್ವೆಂಟ್ ಮೈದಾನದಲ್ಲಿ ವಾಹನ ನಿಲುಗಡೆಗೊಳಿಸುವುದು. ಮುಂದುವರೆದು ಎಸ್.ಪಿ ಕಚೇರಿ ಜಂಕ್ಷನ್, ಮುಂದೆ ಐಟಿಐ ಜಂಕ್ಷನ್ ಕಡೆಯಿಂದ ಎಫ್.ಎಂ.ಸಿ ಕಾಲೇಜು ಮೈದಾನದಲ್ಲಿ ವಾಹನಗಳನ್ನು ನಿಲುಗಡೆಗೊಳಿಸುವುದು.
ವಿರಾಜಪೇಟೆ, ಮೂರ್ನಾಡು ಮತ್ತು ಮಂಗಳೂರು ಕಡೆಯಿಂದ ಬರುವ ವಾಹನಗಳಿಗೆ ಜಿಟಿ ವೃತ್ತದಿಂದ ಮೈಸೂರು ರಸ್ತೆ ಕಡೆಗೆ ತಿರುಗಿ ಮೈಸೂರು ರಸ್ತೆಯಲ್ಲಿ ಸಾಗಿ ಚೈನ್‍ಗೇಟ್ ಮೂಲಕ ಮ್ಯಾನ್ಸ್ ಕಾಂಪೌಂಡ್ ಮೈದಾನದಲ್ಲಿ ನಿಲುಗಡೆಗೊಳಿಸುವುದು. ಗಾಳಿಬೀಡು ಅಬ್ಬಿಪಾಲ್ಸ್, ಕಾಲೂರು ಕಡೆಯಿಂದ ಬರುವ ವಾಹನಗಳು ಎಫ್.ಎಂ.ಸಿ ಕಾಲೇಜು ಮೈದಾನದಲ್ಲಿ ನಿಲುಗಡೆಗೊಳಿಸುವುದು. ಮೈಸೂರು, ಸಿದ್ದಾಪುರ, ಮಂಗಳೂರು ಕಡೆಯಿಂದ ಬರುವ ದ್ವಿಚಕ್ರ ವಾಹನಗಳ ನಿಲುಗಡೆಗೆ ಮೈಸೂರು ರಸ್ತೆಯ ಈಸ್ಟ್ ಎಂಡ್ ಹೋಟೆಲ್ ಮುಂಭಾಗದಲ್ಲಿರುವ ಶಾಂತಿ ಚರ್ಚ್ ಮೈದಾನದಲ್ಲಿ ನಿಲುಗಡೆ ಮಾಡುವುದು.
ನಗರದಲ್ಲಿರುವ ಗಣಪತಿ ಬೀದಿ, ಮಹದೇವಪೇಟೆ ನಿವಾಸಿಗಳು ತಮ್ಮ ವಾಹನಗಳನ್ನು ಕ್ರಸೆಂಟ್ ಶಾಲೆಯ ಮೈದಾನದಲ್ಲಿ ನಿಲುಗಡೆಗೊಳಿಸುವುದು. ಕಾಲೇಜು ರಸ್ತೆ, ಕೊಹಿನೂರು ರಸ್ತೆ ಮತ್ತು ನಗರದ ಮಧ್ಯಭಾಗದಲ್ಲಿರುವ ಸಾರ್ವಜನಿಕರು ತಮ್ಮ ವಾಹನಗಳನ್ನು ರಸ್ತೆಯಲ್ಲಿ ನಿಲ್ಲಿಸದೇ ಹಿಂದುಸ್ಥಾನಿ ಶಾಲೆಯ ಮೈದಾನದಲ್ಲಿ ನಿಲುಗಡೆಗೊಳಿಸುವುದು.
ಅ.24 ರಂದು ಸಂಜೆ 4 ಗಂಟೆಯಿಂದ ಅ.25 ರ ಬೆಳಗ್ಗೆ 10 ಗಂಟೆಯವರೆಗೆ ನಗರದೊಳಗೆ ವಾಹನ ಸಂಚಾರವನ್ನು ನಿರ್ಬಂಧಿಸುವುದು, ಮತ್ತು ನಗರದೊಳಗೆ ಇರುವ ಎಲ್ಲಾ ರಸ್ತೆಗಳನ್ನು ನಿಲುಗಡೆ ರಹಿತ ರಸ್ತೆಗಳೆಂದು ಪ್ರಕಟಿಸುವುದು.
ಕೆಎಸ್‍ಆರ್‍ಟಿಸಿ ಬಸ್ಸುಗಳು ತಾತ್ಕಾಲಿಕವಾಗಿ ಕೆಎಸ್‍ಆರ್‍ಟಿಸಿ ಡಿಪೋ ಮತ್ತು ಆರ್.ಎಂ.ಸಿಯನ್ನು ಬಸ್ಸು ನಿಲ್ದಾಣವಾಗಿ ಮಾರ್ಪಾಡಿಸಿಕೊಳ್ಳುವುದು ಮತ್ತು ನಗರದೊಳಗೆ ಸಂಚರಿಸದಂತೆ ವ್ಯವಸ್ಥೆ ಮಾಡಿಕೊಳ್ಳುವುದು. ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣವನ್ನು ತಾತ್ಕಾಲಿಕವಾಗಿ ಸಾರ್ವಜನಿಕರಿಗೆ ವಾಹನ ನಿಲ್ಲಿಸಲು ಅನುವು ಮಾಡಿಕೊಡುವುದು.
ಖಾಸಗಿ ಬಸ್ಸುಗಳು ನಗರದೊಳಗೆ ಆಗಮಿಸದೇ ಜಿಟಿ ವೃತ್ತದಲ್ಲಿಯೇ ಪ್ರಯಾಣಿಕರನ್ನು ಇಳಿಸಿ, ಹತ್ತಿಸಿ ತೆರಳುವುದು. ಮತ್ತು ಖಾಸಗಿ ಬಸ್ಸು ನಿಲ್ದಾಣವನ್ನು ತಾತ್ಕಾಲಿಕವಾಗಿ ಸಾರ್ವಜನಿಕರಿಗೆ ವಾಹನ ನಿಲ್ಲಿಸಲು ಅನುವು ಮಾಡಿಕೊಡುವುದು.
::: ಪಾರ್ಕಿಂಗ್ ವ್ಯವಸ್ಥೆ ಮಾಡಿರುವ ಸ್ಥಳ :::
ಎಫ್.ಎಂ.ಸಿ ಕಾಲೇಜು ಮೈದಾನ, ಸೆಂಟ್ ಜೋಸೆಫ್ ಕಾನ್ವೆಂಟ್ ಮೈದಾನ, ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣ, ಕ್ರಸೆಂಟ್ ಶಾಲಾ ಮೈದಾನ, ಹಿಂದುಸ್ಥಾನಿ ಶಾಲಾ ಮೈದಾನ, ಐಟಿಐ ಕಾಲೇಜು ಮೈದಾನ, ಶಾಂತಿ ಚರ್ಚ್ ಮೈದಾನ (ದ್ವಿ ಚಕ್ರ ಮೋಟಾರು ಸೈಕಲ್ ಮಾತ್ರ), ಮ್ಯಾನ್ಸ್ ಕಾಂಪೌಂಡ್, ಜೂನಿಯರ್ ಕಾಲೇಜು ಮೈದಾನ, ಹೊಸ ಖಾಸಗಿ ಬಸ್ಸು ನಿಲ್ದಾಣ ಗೋಣಿಕೊಪ್ಪ ಪಟ್ಟಣ ದಸರಾ ಸಂದರ್ಭದಲ್ಲಿ ವಾಹನ ಸಂಚಾರಕ್ಕಾಗಿ ತಾತ್ಕಾಲಿಕ ಮಾರ್ಗ ಬದಲಾವಣೆ ಮಾಡಿರುವ ವಿವರ: ಗೋಣಿಕೊಪ್ಪಲು ನಗರದ ಉಮಾ ಮಹೇಶ್ವರಿ ದೇವಸ್ಥಾನದಿಂದ ಹರಿಶ್ಚಂದ್ರಪುರದವರೆಗೆ, ಪೊನ್ನಂಪೇಟೆ ರಸ್ತೆ ಜಂಕ್ಷನ್‍ನಿಂದ ಕೆ.ಪಿ.ಟಿ.ಸಿ.ಎಲ್ ಕಚೇರಿಯವರೆಗೆ, ಪೊನ್ನಂಪೇಟೆ ರಸ್ತೆ, ಬೈಪಾಸ್ ರಸ್ತೆ ಜಂಕ್ಷನ್‍ನಿಂದ ಐಪಿ ಜಂಕ್ಷನ್‍ವರೆಗೆ, ಪಾಲಿಬೆಟ್ಟ ರಸ್ತೆಯಲ್ಲಿ ಗೋಣಿಕೊಪ್ಪದ ಕೂರ್ಗ್ ಪಬ್ಲಿಕ್ ಸ್ಕೂಲ್ ರಸ್ತೆಯವರೆಗೆ ಮುಖ್ಯ ಬೀದಿಯಲ್ಲಿ ರಸ್ತೆಯ ಬದಿಯಲ್ಲಿ ವಾಹನಗಳ ನಿಲುಗಡೆ ನಿಷೇಧಿಸಿದೆ.
ಮೈಸೂರಿನಿಂದ ತಿತಿಮತಿ, ಗೋಣಿಕೊಪ್ಪ ಮಾರ್ಗವಾಗಿ ವಿರಾಜಪೇಟೆಗೆ ಬರುವ ವಾಹನಗಳು- ತಿತಿಮತಿ, ಪಾಲಿಬೆಟ್ಟ, ಅಮ್ಮತ್ತಿ ಮಾರ್ಗವಾಗಿ ವಿರಾಜಪೇಟೆಗೆ ಹೋಗುವುದು.
ವಿರಾಜಪೇಟೆಯಿಂದ ಗೋಣಿಕೊಪ್ಪ-ತಿತಿಮತಿ ಮಾರ್ಗವಾಗಿ ಮೈಸೂರಿಗೆ ಹೋಗುವ ವಾಹನಗಳು- ಕೈಕೇರಿ ಗ್ರಾಮದ ಕಳತ್ಮಾಡ್-ಅತ್ತೂರು ಶಾಲೆ ಜಂಕ್ಷನ್- ಪಾಲಿಬೆಟ್ಟದ ಟಾಟಾ ಸ್ಟೋರ್ ಜಂಕ್ಷನ್-ತಿತಿಮತಿ ಮಾರ್ಗವಾಗಿ ಮೈಸೂರಿಗೆ ಹೋಗುವುದು.
ಕೇರಳದಿಂದ ಪೆರುಂಬಾಡಿ-ಗೋಣಿಕೊಪ್ಪ ಮಾರ್ಗವಾಗಿ ಮೈಸೂರಿಗೆ ಹೋಗುವ ವಾಹನಗಳು- ಪೆರುಂಬಾಡಿ-ವಿರಾಜಪೇಟೆ-ಅಮ್ಮತ್ತಿ-ಸಿದ್ದಾಪುರ ಮೂಲಕ ಹೋಗುವುದು
ವಿರಾಜಪೇಟೆಯಿಂದ ಗೋಣಿಕೊಪ್ಪ ಮಾರ್ಗವಾಗಿ-ಕಾನೂರು-ಶ್ರೀಮಂಗಲ-ಕುಟ್ಟ ಕಡೆಗಳಿಗೆ ಹೋಗುವ ವಾಹನಗಳು – ವಿರಾಜಪೇಟೆ-ಹಾತೂರು-ಕುಂದಾ-ಪೊನ್ನಂಪೇಟೆ ಮಾರ್ಗವಾಗಿ ಸಂಚರಿಸುವುದು.
ಬಾಳಲೆಯಿಂದ ಗೋಣಿಕೊಪ್ಪ ಮಾರ್ಗವಾಗಿ ವಿರಾಜಪೇಟೆಗೆ ಹೋಗುವ ವಾಹನಗಳು-ಬಾಳಲೆ-ಪೊನ್ನಂಪೇಟೆ-ಕುಂದಾ-ಹಾತೂರು ಮಾರ್ಗವಾಗಿ ವಿರಾಜಪೇಟೆಗೆ ಸಂಚರಿಸುವುದು.
ಕುಟ್ಟ, ಶ್ರೀಮಂಗಲ, ಕಾನೂರು ಕಡೆಯಿಂದ ಗೋಣಿಕೊಪ್ಪ ಮಾರ್ಗವಾಗಿ ವಿರಾಜಪೇಟೆಗೆ ಹೋಗುವ ವಾಹನಗಳು ಪೊನ್ನಂಪೇಟೆ-ಕುಂದಾ-ಹಾತೂರು ಮಾರ್ಗವಾಗಿ ವಿರಾಜಪೇಟೆಗೆ ಸಂಚರಿಸುವುದು.
ಮೈಸೂರು-ತಿತಿಮತಿ-ಗೋಣಿಕೊಪ್ಪ-ಶ್ರೀಮಂಗಲ-ಕುಟ್ಟ ಕಡೆಗಳಿಗೆ ಹೋಗುವ ವಾಹನಗಳು ತಿತಿಮತಿ-ಕೋಣನಕಟ್ಟೆ-ಪೊನ್ನಪ್ಪಸಂತೆ-ನಲ್ಲೂರು-ಪೊನ್ನಂಪೇಟೆ ಮಾರ್ಗವಾಗಿ ಸಂಚರಿಸುವುದು.
ಕುಟ್ಟ-ಶ್ರೀಮಂಗಲ-ಪೊನ್ನಂಪೇಟೆ-ಗೋಣಿಕೊಪ್ಪ-ಮೈಸೂರು ಕಡೆಗೆ ಹೋಗುವ ವಾಹನಗಳು, ಕುಟ್ಟ-ಶ್ರೀಮಂಗಲ, ಪೊನ್ನಂಪೇಟೆ, ನಲ್ಲೂರು, ಪೊನ್ನಪ್ಪಸಂತೆ, ಕೋಣನಕಟ್ಟೆ, ತಿತಿಮತಿ ಮಾರ್ಗವಾಗಿ ಸಂಚರಿವುದು.
ವಿರಾಜಪೇಟೆಯಿಂದ ಗೋಣಿಕೊಪ್ಪ ಮಾರ್ಗವಾಗಿ ಬಾಳಲೆ ಕಡೆಗೆ ಹೋಗುವ ವಾಹನಗಳು ವಿರಾಜಪೇಟೆ-ಹಾತೂರು-ಕುಂದಾ-ಪೊನ್ನಂಪೇಟೆ ಮಾರ್ಗವಾಗಿ ಸಂಚರಿಸುವುದು.
ದಸರಾ ವೀಕ್ಷಿಸಲು ಬರುವ ಸಾರ್ವಜನಿಕರ ವಾಹನ ನಿಲುಗಡೆ ಸ್ಥಳಗಳು: ದಸರಾ ವೀಕ್ಷಣೆಗೆ ಗೋಣಿಕೊಪ್ಪಕ್ಕೆ ವಿರಾಜಪೇಟೆ ಕಡೆಯಿಂದ ಬರುವ ವಾಹನಗಳಿಗೆ-ಗೋಣಿಕೊಪ್ಪ ಕಾವೇರಿ ಕಾಲೇಜು ಮೈದಾನ, ಪೊನ್ನಂಪೇಟೆ ಕಡೆಯಿಂದ ಬರುವ ವಾಹನಗಳಿಗೆ-ಗೋಣಿಕೊಪ್ಪ-ಪೊನ್ನಂಪೇಟೆ ರಸ್ತೆಯಲ್ಲಿರುವ ರುದ್ರಭೂಮಿಯ ಹಿಂದಕ್ಕೆ ಪೊನ್ನಂಪೇಟೆ ರಸ್ತೆಯ ಬದಿಯಲ್ಲಿ, ತಿತಿಮತಿ ಮತ್ತು ಬಾಳೆಲೆ ಕಡೆಯಿಂದ ಬರುವ ವಾಹನಗಳಿಗೆ- ಗೋಣಿಕೊಪ್ಪಲು ಆರ್.ಎಂ.ಸಿ. ಆವರಣದಲ್ಲಿ ಹಾಗೂ ಪಾಲಿಬೆಟ್ಟ ಕಡೆಯಿಂದ ಬರುವ ವಾಹನಗಳಿಗೆ-ಪಾಲಿಬೆಟ್ಟ ರಸ್ತೆಯಲ್ಲಿ ಶಾಸ್ತಾ ಇಂಡಸ್ಟ್ರೀಸ್ ನಿಂದ ಅತ್ತೂರು ಕಡೆಗೆ ರಸ್ತೆಯ ಒಂದು ಬದಿಯಲ್ಲಿ ವಾಹನ ನಿಲುಗಡೆ ಮಾಡುವುದು.
ಸೂಚನಾ ಫಲಕವನ್ನು ಅಳವಡಿಸಲು ಜಿಲ್ಲಾ ಪೆÇಲೀಸ್ ಅದಿsೀಕ್ಷಕರಿಗೆ ಅಧಿಕಾರ ನೀಡಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ ರಾಜಾ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.15 NEWS DESK  : ಕೃಷಿ ಹಾಗೂ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಅಕ್ಟೋಬರ್, 17 ರಂದು…

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.