Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಹೆಬ್ಬಾಲೆಯಲ್ಲಿ ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮ :  ವಿಶ್ವಕರ್ಮ ಪರಂಪರೆ ಉಳಿಸಲು ಚಿಂತನೆ ಅಗತ್ಯ : ಶಿಲ್ಪಿ ಮಂಜುನಾಥ್ ಆಚಾರ್ಯ*
ಇತ್ತೀಚಿನ ಸುದ್ದಿಗಳು

*ಹೆಬ್ಬಾಲೆಯಲ್ಲಿ ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮ :  ವಿಶ್ವಕರ್ಮ ಪರಂಪರೆ ಉಳಿಸಲು ಚಿಂತನೆ ಅಗತ್ಯ : ಶಿಲ್ಪಿ ಮಂಜುನಾಥ್ ಆಚಾರ್ಯ*

October 20, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಕುಶಾಲನಗರ, ಅ.20  :  ವಿಶ್ವಕರ್ಮ ಸಮಾಜಕ್ಕೆ ತನ್ನದೇ ಆದ ಇತಿಹಾಸ ಇದ್ದು, ಜಗತ್ತನ್ನೇ ಸೃಷ್ಟಿಸಿದ ಇತಿಹಾಸಗಳು ಇವೆ. ಅಲ್ಲದೆ ಎಲ್ಲಾ ಸಮಾಜಕ್ಕೂ ನಾಗರಿಕತೆ, ಸಂಸ್ಕಾರ, ಸಂಸ್ಕೃತಿ ಕಲಿಸಿಕೊಟ್ಟ ಸಮುದಾಯ ಎಂದರೆ ಅದು ವಿಶ್ವಕರ್ಮ ಸಮುದಾಯ ಎಂದು ಗೌಡಳ್ಳಿ – ಬೀಟಿಕಟ್ಟೆಯ ಗುರುಪಾದ ಶಿಲ್ಪಾಕಲಾ ಪ್ರಧಾನ ಶಿಲ್ಪಿ ಹಾಗೂ ಕಲಾವಿದ ಶಿಲ್ಪಿ ಮಂಜುನಾಥ್ ಆಚಾರ್ಯ  ಹೇಳಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕದ ವತಿಯಿಂದ ಹೆಬ್ಬಾಲೆ ಕಾಳಿಕಾಂಭ ದೇವಾಲಯ ಸಮಿತಿ ಆಶ್ರಯದಲ್ಲಿ ಹೆಬ್ಬಾಲೆ ಶ್ರೀ ಕಾಳಿಕಾಂಬ ದೇವಾಲಯದ ಆವರಣದಲ್ಲಿ
ದಿವಂಗತ ಪುಟ್ಟಮ್ಮ ಮತ್ತು ಹೆಬ್ಬಾಲೆ ದಿ.ನಂಜಾಚಾರ್ ಅವರ ಜ್ಞಾಪಕಾರ್ಥವಾಗಿ ಏರ್ಪಡಿಸಲಾಗಿದ್ದ ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮದಲ್ಲಿ “ಸಮಾಜಕ್ಕೆ ವಿಶ್ವಕರ್ಮರ ಕೊಡುಗೆಗಳು ” ಎಂಬ ವಿಷಯದ ಕುರಿತು ಮಾತನಾಡಿದರು.

ಪ್ರಾಚೀನ ಕಾಲದಿಂದ ಬಂದ ವಿಶ್ವಕರ್ಮ ಪರಂಪರೆಯನ್ನು ನಾವು ಉಳಿಸುವತ್ತ ಚಿಂತನೆ ಮಾಡಬೇಕಿದೆ. ಚಿತ್ರಕಲೆ, ಶಿಲ್ಪಕಲೆ ಹೀಗೆ ಹಲವಾರು ಕರಕುಶಲ ಕಲೆ ಬಗ್ಗೆ ಜನರಿಗೆ ತಿಳಿಸಿದ ವಿಶ್ವಕರ್ಮವು ಕರ್ಮವನ್ನು ತೊಡೆದು ಹಾಕಿ, ಸನ್ಮಾರ್ಗದಿಂದ ನಡೆಯುಂತೆ ಜನರಲ್ಲಿ ಮಾರ್ಗದರ್ಶನ ಮಾಡಿದ್ದಾರೆ ಎಂದು ತಿಳಿಸಿದರು.
ವಿಶ್ವಕರ್ಮ ಸಮಾಜ ಇಂದು ಕುಶಲ ಕರ್ಮಿಗಳಾಗಿ ಸಮಾಜದಲ್ಲಿ ತಮ್ಮದೇ ಸೇವೆ ಸಲ್ಲಿಸುತ್ತಿದ್ದಾರೆ. ಕಲೆ ಗುರುತಿಸಿಕೊಟ್ಟ ಏಕೈಕ ಸಮಾಜವೆಂದರೆ ಅದು ವಿಶ್ವಕರ್ಮ ಸಮಾಜ ಎಂದು ಮಂಜುನಾಥ್ ಆಚಾರ್ಯ ಬಣ್ಣಿಸಿದರು.
ಸಮಾಜದ ವೃತ್ತಿ ಪರ ಆಚರಣೆಗಳು ಇತರೆ ಸಮಾಜಕ್ಕೆ ಪೂರಕ, ಕೃಷಿ ಚಟುವಟಿಕೆಗಳು ರೈತರ ಬೆನ್ನೆಲುಬಾದರೆ ಕೃಷಿಕರಿಗೆ ವಿಶ್ವಕರ್ಮ ಸಮುದಾಯದ ಕುಲಕಸುಬುಗಳು ಆಧಾರವಾಗಿ ನಿಲ್ಲುತ್ತವೆ ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ಹೆಬ್ಬಾಲೆ ಗ್ರಾ.ಪಂ ಅಧ್ಯಕ್ಷೆ ಎಚ್.ಪಿ.ಅರುಣ ಕುಮಾರಿ, ಸಮಾಜದ ಅಭಿವೃದ್ಧಿಗೆ ವಿಶ್ವಕರ್ಮ ಸಮುದಾಯದ ಕೊಡುಗೆ ಅಪಾರವಾದದ್ದು ಎಂದರು.
ಅಧ್ಯಕ್ಷತೆ ವಹಿಸಿ  ಮಾತನಾಡಿದ  ತಾಲ್ಲೂಕು ಕ.ಸಾ.ಪ.ಅಧ್ಯಕ್ಷ ಕೆ.ಎಸ್.ನಾಗೇಶ್, ಕ.ಸಾ.ಪ.ವತಿಯಿಂದ ಕನ್ನಡ ನಾಡು – ನುಡಿ, ಕಲೆ, ಸಂಸ್ಕೃತಿ ಹಾಗೂ ಭವ್ಯ ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದ್ದು, ಈ ದಿಸೆಯಲ್ಲಿ ಇಂದಿನ ಯುವ ಜನಾಂಗ ಇಂತಹ ಕೈಂಕರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಕ.ಸಾ.ಪ.ಸಮಿತಿ ನಿರ್ದೇಶಕ ಎಂ.ಎನ್.ವೆಂಕಟನಾಯಕ್,
ರಾಷ್ಟ್ರ ನಿರ್ಮಾಣಕ್ಕೆ ವಿಶ್ವಕರ್ಮರ ಕೊಡುಗೆ ಹಿರಿದು. ಇಂದು ತಂತ್ರಜ್ಞಾನ ಮುಂದುವರಿದಂತೆ ವಿಶ್ವಕರ್ಮರ ಜೀವನಶೈಲಿ ಬದಲಾದರೂ ಗ್ರಾಮೀಣ ಭಾಗದಲ್ಲಿ ಕುಲಕಸುಬುಗಳು ಜೀವಂತಿಕೆ ಪಡೆದಿರುವುದು ವಿಶ್ವಕರ್ಮ ಸಮುದಾಯಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಬಣ್ಣಿಸಿದರು.
ಜಿಲ್ಲಾ ಕ.ಸಾ.ಪ.ಸಮಿತಿ ನಿರ್ದೇಶಕಿ ಹಂಚೆಟ್ಟಿರ ಫ್ಯಾನ್ಸಿ ಮುತ್ತಣ್ಣ, ನಿವೃತ್ತ ಪ್ರಾಂಶುಪಾಲ ಎಚ್.ಎನ್.ನಾಗಾಚಾರಿ, ಹೆಬ್ಬಾಲೆ ಪ್ರೌಢಶಾಲಾ ‌ಆಡಳಿತ ಮಂಡಳಿಯ ಅಧ್ಯಕ್ಷ ಎಚ್.ಎಲ್. ರಮೇಶ್ ಮಾತನಾಡಿದರು.
ನಿವೃತ್ತ ಪ್ರಾಂಶುಪಾಲರಾದ ಎಚ್.ಬಿ.ಲಿಂಗಮೂರ್ತಿ, ಕಾಳಿಕಾಂಭ ದೇವಸ್ಥಾನ ಸಮಿತಿ ಅಧ್ಯಕ್ಷ ಎಚ್.ಟಿ.ಮಂಜುನಾಥ್, ಕ.ಸಾ.ಪ. ಹೆಬ್ಬಾಲೆ ವಲಯ ಘಟಕದ ಅಧ್ಯಕ್ಷ ಎಂ.ಎನ್.ಮೂರ್ತಿ, ಕಾರ್ಯದರ್ಶಿ ಕವಿತಾ ಪುಟ್ಟೇಗೌಡ, ತಾಲ್ಲೂಕು ಕ.ಸಾ.ಪ.ಸಮಿತಿಯ ಗೌರವ ಕೋಶಾಧಿಕಾರಿ ಕೆ.ವಿ.ಉಮೇಶ್, ಸಂಘಟನಾ ಕಾರ್ಯದರ್ಶಿ ಸೂದನ ರತ್ನಾವತಿ, ಕಾರ್ಯಕಾರಿ ಸಮಿತಿ ಸದಸ್ಯರಾದ ಬಿ.ಬಿ.ಸಾವಿತ್ರಿ, ಲೀಲಾಕುಮಾರಿ ತೊಡಿಕಾನ, ಎಚ್.ಎಂ.ವೆಂಕಟೇಶ್, ಡಿ.ಎಸ್.ಸೋಮಶೇಖರ್, ದೇವಸ್ಥಾನ ಸಮಿತಿಯ ಮಾಜಿ ಅಧ್ಯಕ್ಷ ಎಚ್. ರಾಚಾಚಾರಿ, ಭಜನಾ ಮಂಡಳಿಯ ಅಧ್ಯಕ್ಷೆ ಶೋಭಾರಾಣಿ, , ಎಚ್.ಆರ್.ನಂಜುಂಡಚಾರ್, ‌ಎಚ್.ಬಿ.ದಿನೇಶಾಚಾರಿ, ಲೋಕನಾಥ್ ಇತರರು ಇದ್ಧರು.
ಉಪನ್ಯಾಸ ಕಾರ್ಯಕ್ರಮದ ನಂತರ ಭಜನಾ ಮಂಡಳಿಯ ವತಿಯಿಂದ ನವರಾತ್ರಿ ಉತ್ಸವದ ಅಂಗವಾಗಿ ಭಜನಾ ಕಾರ್ಯಕ್ರಮ ನಡೆಸಿಕೊಡಲಾಯಿತು. 

Share. Facebook Twitter Pinterest LinkedIn Tumblr Email WhatsApp
Previous Article*ಮಡಿಕೇರಿ ದಸರಾ : ಅಲಂಕಾರ ಸ್ಪರ್ಧೆ*
Next Article *ಮಡಿಕೇರಿಯಲ್ಲಿ ಮಕ್ಕಳ ದಸರಾ ಸಂಭ್ರಮ*

Website design development company services in Mangalore

Forex Trading Teacher in India

Related Posts

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

ಬೆಂಗಳೂರು: ರಾಜ್ಯದ ಲಕ್ಷಾಂತರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಭರ್ಜರಿ ಸಿಹಿಸುದ್ದಿ ನೀಡಿದೆ.…

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.