Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*
  • *ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*
  • *ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*
  • *ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*
  • *ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*
  • *ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*
  • *ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  
  • *ಕೊಡಗು ಜಿಲ್ಲೆಯನ್ನು ಕಡೆಗಣಿಸಿದ ಬಜೆಟ್ : ತೇಲಪಂಡ ಶಿವಕುಮಾರ್ ಟೀಕೆ*
  • *ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*
  • *ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅ.28 ರಂದು ಮಹರ್ಷಿ ವಾಲ್ಮೀಕಿ ಜಯಂತಿ : ವ್ಯವಸ್ಥಿತವಾಗಿ ನಡೆಸಲು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅ.28 ರಂದು ಮಹರ್ಷಿ ವಾಲ್ಮೀಕಿ ಜಯಂತಿ : ವ್ಯವಸ್ಥಿತವಾಗಿ ನಡೆಸಲು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಸಲಹೆ*

ಅಕ್ಟೋಬರ್ 20, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.20 : ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅ.28 ರಂದು ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಅರ್ಥಪೂರ್ಣವಾಗಿ ಆಯೋಜಿಸುವ ಸಂಬಂಧ ಪೂರ್ವಭಾವಿ ಸಭೆಯು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು.
ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಕಾರ್ಯಕ್ರಮ ಆಯೋಜನೆ ಸಂಬಂಧಿಸಿದಂತೆ ಸುದೀರ್ಘ ಚರ್ಚೆ ನಡೆಯಿತು.
ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಮಾತನಾಡಿ ಸರ್ಕಾರದ ನಿರ್ದೇಶನದಂತೆ ಕಾರ್ಯಕ್ರಮ ಆಯೋಜಿಸಬೇಕು. ಶಿಷ್ಟಾಚಾರವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಐಟಿಡಿಪಿ ಇಲಾಖಾ ಅಧಿಕಾರಿ ಸೂಚಿಸಿದರು.
ಮಹರ್ಷಿ ವಾಲ್ಮೀಕಿ ಕುರಿತು ಮಾತನಾಡುವ ಭಾಷಣಕಾರರನ್ನು ಕರೆಸುವುದು. ಎಸ್‍ಎಸ್‍ಎಲ್‍ಸಿ, ಪಿಯುಸಿ ಪದವಿಯಲ್ಲಿ ಹೆಚ್ಚು ಅಂಕ ಪಡೆದವರನ್ನು ಸನ್ಮಾನಿಸುವುದು ಸೇರಿದಂತೆ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಅಗತ್ಯ ಕ್ರಮವಹಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಹೇಳಿದರು.
ಸಭೆಯ ಆರಂಭದಲ್ಲಿ ಮಾತನಾಡಿದ ಕುಡಿಯರ ಮುತ್ತಪ್ಪ ಅವರು ಪರಿಶಿಷ್ಟ ಪಂಗಡದಲ್ಲಿ ಹಲವು ಸಮಾಜಗಳಿದ್ದು, ವಾಲ್ಮೀಕಿ ಸಮಾಜದ ಜೊತೆ ಯರವ, ಕುಡಿಯ, ಮಲೆ ಕುಡಿಯ, ಸೋಲಿಗ, ಕಾಡುಕುರುಬ, ಜೇನುಕುರುಬ, ಬೆಟ್ಟ ಕುರುಬ ಹೀಗೆ ಹಲವು ಸಮಾಜಗಳಿದ್ದು, ಇತರ ಸಮಾಜದಲ್ಲಿ ದುಡಿದವರನ್ನು ಗುರುತಿಸಿ ಸನ್ಮಾನಿಸುವಂತಾಗಬೇಕು ಎಂದು ಸಲಹೆ ಮಾಡಿದರು.
ವಾಲ್ಮೀಕಿ ಸಮಾಜದ ಅಧ್ಯಕ್ಷ ಅಶೋಕ ಅವರು ಮಾತನಾಡಿ ಕುಶಾಲನಗರದಲ್ಲಿ 2014 ರಲ್ಲಿ ವಾಲ್ಮೀಕಿ ಭವನ ನಿರ್ಮಾಣ ಮಾಡಲಾಗಿದೆ. ಆದರೆ ಈ ಭವನ ಸಾರ್ವಜನಿಕರ ಉಪಯೋಗಕ್ಕೆ ಬರುತ್ತಿಲ್ಲ. ವಾಲ್ಮೀಕಿ ಭವನದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಿಲ್ಲ, ವಿದ್ಯುತ್ ಸಂಪರ್ಕ ಕಲ್ಪಿಸಿಲ್ಲ ಎಂದು ಅವರು ಸಭೆಯ ಗಮನಕ್ಕೆ ತಂದರು.
ಗಾಂಧಿ ಮಂಟಪದಿಂದ ಜನರಲ್ ತಿಮ್ಮಯ್ಯ ವೃತ್ತದ ಮಾರ್ಗ ಕಾವೇರಿ ಕಲಾಕ್ಷೇತ್ರದವರೆಗೆ ಮೆರವಣಿಗೆಗೆ ಅವಕಾಶ ಮಾಡಬೇಕು ಎಂದು ಕೋರಿದರು.
ಆದಿವಾಸಿ ಪ್ರಮುಖರಾದ ಸುಬ್ರಮಣಿ ಅವರು ಮಾತನಾಡಿ ಆದಿವಾಸಿಗಳಿಗೆ ಸರ್ಕಾರದ ಸೌಲಭ್ಯಗಳು ತಲುಪಬೇಕು. ಇಂದಿಗೂ ಸಹ ಹಾಡಿಯಲ್ಲಿ ವಾಸಿಸುವ ಆದಿವಾಸಿಗಳ ಬದುಕಿನ ಪರಿಸ್ಥಿತಿಯನ್ನು ಅವಲೋಕನ ಮಾಡಬೇಕು ಎಂದರು.
ಪ್ರಮುಖರಾದ ಗಂಗಾಧರ ಮಾತನಾಡಿ ಕಳೆದ ಬಾರಿ ಎಸ್‍ಎಸ್‍ಎಲ್‍ಸಿ, ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದವರನ್ನು ಸನ್ಮಾನಿಸುವಂತಾಗಬೇಕು. ಕಳೆದ ಬಾರಿ ಜಿಲ್ಲೆಗೆ ಮೂರನೇ ಸ್ಥಾನ ಪಡೆದ ವಿದ್ಯಾರ್ಥಿಯನ್ನು ಸನ್ಮಾನಕ್ಕೆ ಪರಿಗಣಿಸಿಲ್ಲ. ಮುಂದೆ ಈ ರೀತಿ ಆಗದಂತೆ ಗಮನಹರಿಸಬೇಕು ಎಂದು ಸಲಹೆ ಮಾಡಿದರು.
ಸಂಗೊಳ್ಳಿ ರಾಯಣ್ಣ ವೇದಿಕೆಯ ಜಿಲ್ಲಾಧ್ಯಕ್ಷರಾದ ಪ್ರಭಾಕರ ಅವರು ಮಾತನಾಡಿ ಪೋಷಕರು ಇಲ್ಲದ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸುವಂತಾಗಬೇಕು ಎಂದು ಸಲಹೆ ಮಾಡಿದರು.
ಪ್ರಮುಖರಾದ ಮುತ್ತಮ್ಮ ಅವರು ಮಾತನಾಡಿ ಗಿರಿಜನ ಆಶ್ರಮ ಶಾಲೆಗಳಲ್ಲಿ ಜೇನುಕುರುಬ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಗಿರಿಜನ ಆಶ್ರಮ ಶಾಲೆ ಹೆಸರು ಬದಲಿಗೆ ವಾಲ್ಮೀಕಿ ಆಶ್ರಮ ಶಾಲೆ ಎಂದು ಹೆಸರು ಬದಲಿಸುವುದು ಸರಿಯಲ್ಲ. ಈ ಹಿಂದಿನಂತೆಯೇ ಗಿರಿಜನ ಆಶ್ರಮ ಶಾಲೆ ಎಂದು ಇರಬೇಕು ಎಂದು ಅವರು ಸಲಹೆ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು ಸರ್ಕಾರವು ಕಾಲ ಕಾಲಕ್ಕೆ ಹೊರಡಿಸುವ ನಿರ್ದೇಶನವನ್ನು ಪಾಲಿಸುವುದು ಅಧಿಕಾರಿಗಳ ಕೆಲಸವಾಗಿದೆ. ಈ ನಿಟ್ಟಿನಲ್ಲಿ ತಮ್ಮ ಅಭಿಪ್ರಾಯವನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಹೇಳಿದರು.
ಅನಿಲ್ ರಾವ್ ಅವರು ಮಾತನಾಡಿ ಜಿಲ್ಲೆಯಲ್ಲಿ ಮೂರು ಲ್ಯಾಂಪ್ ಸೊಸೈಟಿ ಇದ್ದು, ಲ್ಯಾಂಪ್ ಸೊಸೈಟಿ ಅಧ್ಯಕ್ಷರು ಮತ್ತು ಸದಸ್ಯರನ್ನು ಆಹ್ವಾನಿಸುವಂತಾಗಬೇಕು ಎಂದು ಸಲಹೆ ಮಾಡಿದರು.
ಐಟಿಡಿಪಿ ಇಲಾಖಾ ಅಧಿಕಾರಿ ಎಸ್.ಹೊನ್ನೇಗೌಡ ಅವರು ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಗೆ ಸಂಬಂಧಿಸಿದಂತೆ ಹಲವು ಮಾಹಿತಿ ನೀಡಿದರು.
ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಪುಟ್ಟರಾಜು, ಪೌರಾಯುಕ್ತರಾದ ವಿಜಯ್, ಶಿಕ್ಷಣಾಧಿಕಾರಿ ಮಹದೇವಸ್ವಾಮಿ, ಜಿ.ಪಂ.ಎಂಜಿನಿಯರ್ ಸುರೇಶ್ ಕುಮಾರ್, ಮುತ್ತುರಾಜು, ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*

ಮಾರ್ಚ್ 7, 2026

*ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*

ಮಾರ್ಚ್ 7, 2026

*ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*

ಮಾರ್ಚ್ 7, 2026

*ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 7, 2026: ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಮೈಸೂರು ಈಗ ಮಾಹಿತಿ ತಂತ್ರಜ್ಞಾನದ (IT) ಹೊಸ ಕೇಂದ್ರವಾಗಿ ಹೊರಹೊಮ್ಮಲು…

*ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*

ಮಾರ್ಚ್ 7, 2026

*ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*

ಮಾರ್ಚ್ 6, 2026

*ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*

ಮಾರ್ಚ್ 6, 2026

*ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*

ಮಾರ್ಚ್ 6, 2026

*ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  

ಮಾರ್ಚ್ 6, 2026

*ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*

ಮಾರ್ಚ್ 6, 2026

*ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*

ಮಾರ್ಚ್ 6, 2026

*ಅಸ್ಸಾಂನಲ್ಲಿ ಸುಖೋಯ್-30 ಯುದ್ಧ ವಿಮಾನ ಪತನ: ಇಬ್ಬರು ಪೈಲಟ್‌ಗಳು ಹುತಾತ್ಮ*

ಮಾರ್ಚ್ 6, 2026

*ಹಾರ್ಮುಜ್ ಬಂದ್ ಆದ್ರೂ ತೈಲಕ್ಕೆ ಬರಲ್ಲ ಕಂಟಕ!: ಭಾರತದ ಇಂಧನ ಸುರಕ್ಷತೆ ಬಗ್ಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಅಪ್ಡೇಟ್*

ಮಾರ್ಚ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.