ಮಡಿಕೇರಿ ಅ.20 : ಪ್ರಸಕ್ತ(2023-24) ಸಾಲಿಗೆ ಭಾಗಮಂಡಲ ಜೇನುಗಾರಿಕೆ ತರಬೇತಿ ಕೇಂದ್ರದಲ್ಲಿ ರೈತರ ಮಕ್ಕಳಿಗೆ 3 ತಿಂಗಳ ಜೇನುಗಾರಿಕೆ ತರಬೇತಿ ಕಾರ್ಯಾಕ್ರಮವು ನವೆಂಬರ್, 02 ರಿಂದ 2024 ರ ಜನವರಿ, 31 ರವರೆಗೆ ನಡೆಯಲಿದ್ದು, ಈ ಸಂಬಂಧ ಕೊಡಗು ಜಿಲ್ಲೆಯಿಂದ ಒಬ್ಬ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಅವಕಾಶವಿದ್ದು (ಸಾಮಾನ್ಯ ವರ್ಗ-1) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಕ್ಟೋಬರ್, 25 ರವರೆಗೆ ಅರ್ಜಿಯನ್ನು ಕಚೇರಿಯಲ್ಲಿ/ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ(ರಾಜ್ಯ ವಲಯ), ಮಡಿಕೇರಿ, ಭಾಗಮಂಡಲ ಜೇನುಗಾರಿಕೆ ತರಬೇತಿ ಕೇಂದ್ರ, ಇಲಾಖಾ ವೆಬ್‍ಸೈಟ್ https://horticulturedir.karnataka.gov.in ನಲ್ಲಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಅ.27 ರ ಸಂಜೆ 5.30 ಗಂಟೆಯೊಳಗೆ ಸಲ್ಲಿಸಬೇಕು. ಮೂಲ ಅಗತ್ಯ ದಾಖಲಾತಿಗಳೊಡನೆ (ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ತಂದೆ/ತಾಯಿ/ಪೋಷಕರ ಹೆಸರಿನಲ್ಲಿರುವ ಜಮೀನಿನ ಆರ್‍ಟಿಸಿ, ತಂದೆ/ತಾಯಿಯವರ ಒಪ್ಪಿಗೆ ಪತ್ರ ಮತ್ತಿತರ) ಅರ್ಹ ಅಭ್ಯರ್ಥಿಗಳು ನಿಗಧಿತ ಸಮಯದೊಳಗೆ ಅರ್ಜಿಯನ್ನು ತೋಟಗಾರಿಕೆ ಉಪ ನಿರ್ದೇಶಕರ ಕಚೇರಿ/ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ(ರಾಜ್ಯ ವಲಯ), ಮಡಿಕೇರಿ ಇಲ್ಲಿಗೆ ಖುದ್ದು ಸಲ್ಲಿಸಬೇಕು ಎಂದು ತೋಟಗಾರಿಕೆ ಉಪ ನಿರ್ದೇಶಕರು(ಜಿಪಂ) ತಿಳಿಸಿದ್ದಾರೆ.







