Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಾವೇರಿ ನದಿ ಜಾಗೃತಿ ರಥಯಾತ್ರೆಗೆ ತಲಕಾವೇರಿ ಕ್ಷೇತ್ರದಲ್ಲಿ ಚಾಲನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಾವೇರಿ ನದಿ ಜಾಗೃತಿ ರಥಯಾತ್ರೆಗೆ ತಲಕಾವೇರಿ ಕ್ಷೇತ್ರದಲ್ಲಿ ಚಾಲನೆ*

ಅಕ್ಟೋಬರ್ 20, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಕುಶಾಲನಗರ, ಅ.20 : ಸ್ವಚ್ಛ ಮನಸ್ಸಿನ ಮೂಲಕ ಸ್ವಚ್ಛ ಪ್ರಕೃತಿ, ಸ್ವಚ್ಛ  ಸಮಾಜ ನಿರ್ಮಾಣ ಸಾಧ್ಯ ಎಂದು ಅರಮೇರಿ ಕಳಂಚೇರಿ ಮಠಾಧೀಶರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದರು.
 ಅಖಿಲ ಭಾರತ ಸನ್ಯಾಸಿ ಸಂಘ ಕಾವೇರಿ ನದಿ ಸ್ವಚ್ಛತಾ ಆಂದೋಲನ, ಕಾವೇರಿ ರಿವರ್ ಸೇವಾ ಟ್ರಸ್ಟ್ ಆಶ್ರಯದಲ್ಲಿ ಸ್ವಚ್ಛ ಕಾವೇರಿಗಾಗಿ 13ನೇ ವರ್ಷದ ಕಾವೇರಿ ನದಿ ಜಾಗೃತಿ ರಥಯಾತ್ರೆಗೆ ತಲಕಾವೇರಿ ಕ್ಷೇತ್ರದಲ್ಲಿ ಚಾಲನೆ ನೀಡಿ ಮಾತನಾಡಿದರು.
 ನಾಡಿನಲ್ಲಿ ಜಲಮೂಲ ಪ್ರಕೃತಿ ಮೂಲಗಳು ಹಲವು ರೀತಿಯಲ್ಲಿ ಕಲುಷಿತಗೊಳ್ಳುತ್ತಿದ್ದು ಈ ಬಗ್ಗೆ ಪ್ರತಿಯೊಬ್ಬರು ಎಚ್ಚರ ವಹಿಸಬೇಕಾಗಿದೆ. ಇಲ್ಲವಾದಲ್ಲಿ ಜೀವ ಸಂಕುಲಕ್ಕೆ ಅನಾಹುತ ಉಂಟಾಗುವ ಸಾಧ್ಯತೆ ಇದೆ ಎಂಬ ಆತಂಕ ವ್ಯಕ್ತಪಡಿಸಿದರು.
 ಪ್ರತಿಯೊಬ್ಬರೂ ಮನೆಯ ಕಸ ವಿಲೇವಾರಿಯನ್ನು ಸಮರ್ಪಕವಾಗಿ ಸಹಜವಾಗಿ ಮಾಡಿದಲ್ಲಿ ಮಾತ್ರ ಸ್ವಚ್ಛತೆ ಕಾಣಲು ಸಾಧ್ಯ ಎಂದ ಶ್ರೀಗಳು ಜಾಗೃತಿಯ ಮತ್ತು ಅರಿವಿನ ಕೊರತೆ ನಡುವೆ ನದಿ ಸಂರಕ್ಷಣೆಗೆ ಹೆಣಗಾಡುವ ಪರಿಸ್ಥಿತಿ ಸೃಷ್ಟಿಯಾಗಿದೆ ಎಂದು ಹೇಳಿದರು.
ಈ ನಡುವೆ ಜೀವನದಿ ಕಾವೇರಿಯ ಸಂರಕ್ಷಣೆಗೆ ಪಣತೊಟ್ಟಿರುವ ಸಂಘ ಸಂಸ್ಥೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
 ತಲಕಾವೇರಿಯಿಂದ ತಮಿಳುನಾಡಿನ ಬಂಗಾಲ ಕೊಲ್ಲಿ ತನಕ ಸಾಗಿ ಜನರಲ್ಲಿ ಅರಿವು ಜಾಗೃತಿ ಮೂಡಿಸುತ್ತಿರುವ ಸಾಧುಸಂತರ ಮತ್ತು ಸ್ಥಳೀಯ ಸಂಘ ಸಂಸ್ಥೆಗಳ ಯಾತ್ರೆಗೆ ಶ್ರೀಗಳು  ಶುಭ ಕೋರಿದರು.
 ಇದೇ ಸಂದರ್ಭ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವಿಶ್ವ ಹಿಂದೂ ಪರಿಷತ್ ರಾಷ್ಟ್ರೀಯ ಸಹ ಕಾರ್ಯದರ್ಶಿ  ಸೂರ್ಯನಾರಾಯಣ ಅವರು ಮಾತನಾಡಿ ಜೀವನದಿ ಕಾವೇರಿಯ ಸಂರಕ್ಷಣೆಯ ನಿಟ್ಟಿನಲ್ಲಿ ಮಾಡುತ್ತಿರುವ ಹೋರಾಟಕ್ಕೆ ತಮ್ಮ ಎಲ್ಲ ರೀತಿಯ ಬೆಂಬಲ ವ್ಯಕ್ತಪಡಿಸಿದರು.
 ಅಖಿಲ ಭಾರತ ಸನ್ಯಾಸಿ ಸಂಘದ ಕಾರ್ಯದರ್ಶಿ ಆತ್ಮಾನಂದ ಸ್ವಾಮೀಜಿ ಮಾತನಾಡಿ ಕಳೆದ 13 ವರ್ಷಗಳಿಂದ ಕಾವೇರಿ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಜನರಿಗೆ ಅರಿವು ಜಾಗೃತಿ ಮೂಡಿಸುವ ಕೆಲಸ ನಿರಂತರವಾಗಿ ಸಾಗುತ್ತಿದೆ ಎಂದರು.
 ಈ ಸಂದರ್ಭ ರಥಯಾತ್ರೆಯಲ್ಲಿ ತಂದಿರುವ ಕಾವೇರಿ ಮಾತೆಗೆ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು. ತಲಕಾವೇರಿಯಿಂದ ಪವಿತ್ರ ತೀರ್ಥವನ್ನು ಕಳಸಗಳಲ್ಲಿ  ಸಂಗ್ರಹಿಸಿ ಪೂಜೆ ಸಲ್ಲಿಸಿ ರಥಯಾತ್ರೆಯಲ್ಲಿ ಕೊಂಡಯಲಾಯಿತು. ಈ ತೀರ್ಥವನ್ನು ಕಾವೇರಿ ಸಂಗಮವಾಗುವ ಬಂಗಾಲ ಕೊಲ್ಲಿ ಸಮುದ್ರ ಸಂಗಮದಲ್ಲಿ ನವಂಬರ್ 13ರಂದು ಪೂಜೆ ಸಲ್ಲಿಸಿ ವಿಸರ್ಜಿಸಲಾಗುವುದು ಎಂದು ಅಖಿಲ ಭಾರತ ಸನ್ಯಾಸಿ ಸಂಘದ ಕಾರ್ಯದರ್ಶಿ ಆತ್ಮನಂದ ಸ್ವಾಮೀಜಿ ಮಾಹಿತಿ ನೀಡಿದರು.
 ಕಾವೇರಿ ನದಿ ಸ್ವಚ್ಛತಾ ಆಂದೋಲನ ರಾಜ್ಯ ಸಂಚಾಲಕರಾದ ಎಂ ಎನ್ ಚಂದ್ರಮೋಹನ್ ಪ್ರಾಸ್ತಾವಿಕ ನುಡಿಗಳೊಂದಿಗೆ  ಕಾವೇರಿ ಜಾಗೃತಿ ರಥಯಾತ್ರೆಯ ಸಮಗ್ರ ಮಾಹಿತಿ ಒದಗಿಸಿದರು.
 ತಲಕಾವೇರಿಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಕ್ಷೇತ್ರದ ತಕ್ಕರಾದ ಕೋಡಿ ಮೋಟಯ್ಯ ಅವರು ನಾಡಿನಲ್ಲಿ ಉತ್ತಮ ಮಳೆ ಬೆಳೆಯೊಂದಿಗೆ ಸರ್ವ ಅಭಿವೃದ್ಧಿಗೆ ಪ್ರಾರ್ಥನೆ ಸಲ್ಲಿಸಿ ತೀರ್ಥಯಾತ್ರೆ ತಂಡಕ್ಕೆ ಶುಭ ಕೋರಿದರು. ನದಿ ಸ್ವಚ್ಛತಾ ಆಂದೋಲನದ ಕರಪತ್ರಗಳನ್ನು ಬಿಡುಗಡೆಗೊಳಿಸಲಾಯಿತು.
 ಇದೇ ಸಂದರ್ಭ ಕ್ಷೇತ್ರದಲ್ಲಿ ಯಾತ್ರ ತಂಡದ ಪ್ರಮುಖರು ಅರಮೇರಿ ಶ್ರೀಗಳನ್ನು, ಗಣ್ಯರನ್ನು ಸನ್ಮಾನಿಸಿ ಗೌರವಿಸಿದರು.
 ಈ ಸಂದರ್ಭ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಂಸ್ಥಾಪಕರಾದ ಶ್ರೀ ಗಣೇಶ ಸ್ವರೂಪನಂದ ಗಿರಿ ಸ್ವಾಮೀಜಿ, ಶ್ರೀರಂಗಪಟ್ಟಣ ಗೌತಮ ಕ್ಷೇತ್ರದ ಶ್ರೀ ಗಜಾನನ ಸ್ವಾಮೀಜಿ, ಅಖಿಲ ಭಾರತ ಸನ್ಯಾಸಿ ಸಂಘದ ಸ್ವಾಮಿ ಮೇಘಾನಂದ ಸರಸ್ವತಿ, ಸ್ವಾಮಿ ಶಿವರಾಮನಂದ, ಮುರುಗಾನಂದ ಸರಸ್ವತಿ  ಕಾವೇರಿ ಮಹಾ ಆರತಿ ಬಳಗದ ಸಂಚಾಲಕಿ ವನಿತ ಚಂದ್ರಮೋಹನ್, ಕೊಕ್ಕಲೆರ ಧರಣಿ ಸೇರಿದಂತೆ ಸಾಧುಸಂತರು  ಇದ್ದರು. ಯಾತ್ರ ತಂಡ ಭಾಗಮಂಡಲದಲ್ಲಿ ಕಾವೇರಿ ಮಾತೆಯ ಪ್ರತಿಮೆಗೆ ಅಷ್ಟ ಅಭಿಷೇಕ ನೆರವೇರಿಸಿ  ಸಂಗಮದಲ್ಲಿ ಮಹಾ ಆರತಿ ಬೆಳಗಲಾಯಿತು.
Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.