Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತದ ಆರ್ಥಿಕತೆಗೆ ಯುದ್ಧದ ‘ಶಾಕ್’:ರೂಪಾಯಿ ಮೌಲ್ಯ ಪಾತಾಳಕ್ಕೆ,ಸಾರಿಗೆ ವೆಚ್ಚ ದುಬಾರಿ!*
  • *ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*
  • *ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*
  • *ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*
  • *ಮಾ.06 ರಂದು ಮಿನಿ ಉದ್ಯೋಗ ಮೇಳ*
  • *ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*
  • *ಮಡಿಕೇರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*
  • *ಭಾರತಕ್ಕೆ ಮುಟ್ಟಿದ ಯುದ್ಧದ ಬಿಸಿ: ಒಮನ್ ದಾಳಿಯಲ್ಲಿ ಕನ್ನಡಿಗರು ಇದ್ದಾರೆಯೇ? ಮೃತ ಭಾರತೀಯನ ಗುರುತು ಪತ್ತೆಗೆ ವಿದೇಶಾಂಗ ಇಲಾಖೆ ಕಾರ್ಯತತ್ಪರ*
  • *ಮಿತ್ರ ರಾಷ್ಟ್ರದ ಮೇಲೆ ಮಿತ್ರನಿಂದಲೇ ಅಟ್ಯಾಕ್: ಅಮೆರಿಕದ 3 ಫೈಟರ್ ಜೆಟ್‌ಗಳನ್ನು ಹೊಡೆದುರುಳಿಸಿದ ಕುವೈತ್; ಪೈಲಟ್‌ಗಳು ಪ್ರಾಣಾಪಾಯದಿಂದ ಪಾರು!*
  • *ಕಾವೇರಿ ನದಿ ಅಳಿದರೆ ಸಂಸ್ಕೃತಿಯೇ ಅಳಿದಂತೆ; ಕಣಿವೆ ಆರತಿ ಕಾರ್ಯಕ್ರಮದಲ್ಲಿ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಹುತಾತ್ಮ ಪೊಲೀಸರ ಗುಂಪು ವಿಮಾ ಮೊತ್ತ 20 ಲಕ್ಷದಿಂದ 50 ಲಕ್ಷಕ್ಕೆ ಏರಿಕೆ : ಮುಖ್ಯಮಂತ್ರಿ ಸಿದ್ದರಾಮಯ್ಯ*
ಇತ್ತೀಚಿನ ಸುದ್ದಿಗಳು

*ಹುತಾತ್ಮ ಪೊಲೀಸರ ಗುಂಪು ವಿಮಾ ಮೊತ್ತ 20 ಲಕ್ಷದಿಂದ 50 ಲಕ್ಷಕ್ಕೆ ಏರಿಕೆ : ಮುಖ್ಯಮಂತ್ರಿ ಸಿದ್ದರಾಮಯ್ಯ*

ಅಕ್ಟೋಬರ್ 21, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Follow us on Google News
Google News
Facebook Twitter WhatsApp Email Telegram Copy Link

ಬೆಂಗಳೂರು ಅ.20 : ಕರ್ತವ್ಯದ ವೇಳೆ ಹುತಾತ್ಮರಾದ ಪೊಲೀಸ್ ಸಿಬ್ಬಂದಿಯ ಗುಂಪು ವಿಮೆ ಮೊತ್ತವನ್ನು 20 ಲಕ್ಷ ರೂಪಾಯಿಗಳಿಂದ 50 ಲಕ್ಷ ರೂಪಾಯಿಗಳಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಘೋಷಿಸಿದ್ದಾರೆ.

ಬೆಂಗಳೂರಿನ ಮೈಸೂರು ರಸ್ತೆಯ ಹುತಾತ್ಮರ ಉದ್ಯಾನವನದಲ್ಲಿ  ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಬಳಿಕ ಪೊಲೀಸ್ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಈ ವಿಷಯ ಪ್ರಕಟಿಸಿದರು.

ಪೊಲೀಸ್ ವ್ಯವಸ್ಥೆಯು ರಾಜ್ಯ ಮತ್ತು ಸರ್ಕಾರದ ಘನತೆ ಹೆಚ್ಚಿಸುವ ಕೆಲಸ ಮಾಡುತ್ತದೆ. ಅಭಿವೃದ್ಧಿ ಮತ್ತು ಕಾನೂನು ಸುವ್ಯವಸ್ಥೆ ನಡುವೆ ನೇರ ಸಂಬಂಧವಿದೆ.ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿದ್ದಾಗ ಹೆಚ್ಚಿನ ಬಂಡವಾಳ ಹೂಡಿಕೆಯಾಗುತ್ತದೆ ಎಂದು ಹೇಳಿದರು.

ಇದು ಉದ್ಯೋಗ ಸೃಷ್ಟಿಯನ್ನು ಹೆಚ್ಚಿಸುತ್ತದೆ ಮತ್ತು ಅಭಿವೃದ್ಧಿಯನ್ನು ವೇಗಗೊಳಿಸುತ್ತದೆ. ಪರಿಣಾಮವಾಗಿ, ದೇಶದ ಜನರ ತಲಾ ಆದಾಯವೂ ಹೆಚ್ಚಾಗುತ್ತದೆ. ದೇಶದ ಕಾನೂನು ಸುವ್ಯವಸ್ಥೆಯನ್ನು ಪೊಲೀಸ್ ಇಲಾಖೆ ಕಟ್ಟುನಿಟ್ಟಾಗಿ ಕಾಪಾಡಬೇಕು ಎಂದು ಕರೆ ನೀಡಿದರು.

ತಂತ್ರಜ್ಞಾನದ ಪ್ರಗತಿಯಿಂದ ಪೊಲೀಸ್ ಇಲಾಖೆಗೆ ಹೊಸ ಸವಾಲುಗಳು ಎದುರಾಗುತ್ತಿದ್ದು, ಸೈಬರ್ ತಂತ್ರಜ್ಞಾನದ ಜತೆಗೆ ಸೈಬರ್ ಅಪರಾಧಗಳೂ ಹೆಚ್ಚುತ್ತಿವೆ, ಇದನ್ನು ಪರಿಣಾಮಕಾರಿಯಾಗಿ ತಡೆಯಬೇಕು ಎಂದು ಸೂಚನೆ ನೀಡಿದರು.

ಎಲ್ಲ ಜನರನ್ನು ಸಮಾನವಾಗಿ ಕಾಣುವುದು ಮತ್ತು ನೋಡುವುದು ಸರ್ಕಾರ ಮತ್ತು ಪೊಲೀಸ್ ವ್ಯವಸ್ಥೆಯ ಜವಾಬ್ದಾರಿಯಾಗಿದೆ. ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

ಸುಳ್ಳು ಮತ್ತು ದ್ವೇಷಪೂರಿತ ಸುದ್ದಿಗಳು ದೇಶದ ಬೆಳವಣಿಗೆಗೆ ಹಾನಿಕಾರಕವಾಗಿದೆ, ಅಶಾಂತಿಯ ಪರಿಣಾಮವಾಗಿ ಜನರ ತಲಾ ಆದಾಯದ ಮೇಲೂ ಪರಿಣಾಮ ಬೀರುತ್ತದೆ. ಆದ್ದರಿಂದ ನಕಲಿ ಸುದ್ದಿಗಳನ್ನು ಹರಡುವ ವೆಬ್‌ಸೈಟ್‌ಗಳು ಮತ್ತು ಅವುಗಳನ್ನು ನಿರ್ವಹಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು.

ಮಹಿಳೆ, ಮಕ್ಕಳು ಮತ್ತು ಹಿರಿಯ ನಾಗರಿಕರ ಸುರಕ್ಷತೆ ಮತ್ತು ಭದ್ರತೆಗೆ ಹೆಚ್ಚಿನ ರಕ್ಷಣೆ ಕೊಡುವ ಅಗತ್ಯವಿದೆ. ಸುಗಮ ಸಂಚಾರ ವ್ಯವಸ್ಥೆ ಇನ್ನಷ್ಟು ಪರಿಣಾಮಕಾರಿಯಾಗಬೇಕು. ಹೀಗಾಗಿ ಹೆಚ್ಚುವರಿ ಪೊಲೀಸ್ ಹುದ್ದೆ ಸೃಷ್ಟಿಸಿದ್ದೇವೆ. ಹೆಚ್ಚುವರಿ ಮಹಿಳಾ ಮತ್ತು ಸಂಚಾರ ಠಾಣೆಗಳನ್ನು ಆರಂಭಿಸಿದ್ದೇವೆ. ಹೊಸ ವಾಹನ ಖರೀದಿಗೆ 100 ಕೋಟಿ ರೂಪಾಯಿಗಳನ್ನು ನೀಡಲಾಗುವುದು ಎಂದರು.

2125 ಪೊಲೀಸ್ ವಸತಿ ಗೃಹಗಳನ್ನು ನಿರ್ಮಿಸಲು 450 ಕೋಟಿ ನೀಡಲಾಗುವುದು. ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳ ಆರೋಗ್ಯ ಭಾಗ್ಯಕ್ಕಾಗಿ 100 ಕೋಟಿ ರೂ ಒದಗಿಸಲಾಗಿದೆ. ನಿವೃತ್ತ ಸಿಬ್ಬಂದಿಯ ಆರೋಗ್ಯ, ಚಿಕಿತ್ಸೆಗಾಗಿ ನಿಶ್ಚಿತ ಠೇವಣಿ ಇಡಲಾಗಿದೆ. ಪೊಲೀಸ್ ಸಿಬ್ಬಂದಿಯ ಮಕ್ಕಳ ಶಿಕ್ಷಣಕ್ಕಾಗಿ 7 ಜಿಲ್ಲೆಗಳಲ್ಲಿ 7 ಪೊಲೀಸ್ ಪಬ್ಲಿಕ್ ಶಾಲೆ ಆರಂಭಿಸಲಾಗುತ್ತಿದೆ. ಇವುಗಳ ಮೂಲಕ ಗುಣಮಟ್ಟದ ಶಿಕ್ಷಣ ನೀಡಲು ನಮ್ಮ ಸರ್ಕಾರ ಬದ್ದವಾಗಿದೆ. ಪೊಲೀಸ್ ಕ್ಯಾಂಟೀನ್ ಗಳನ್ನು ಆರಂಭಿಸಲಾಗುತ್ತಿದೆ ಎಂದರು.

ನಿವೃತ್ತ ಸಿಬ್ಬಂದಿಯ ಆರೋಗ್ಯ ಮತ್ತು ಚಿಕಿತ್ಸೆಗಾಗಿ ನಿಶ್ಚಿತ ಠೇವಣಿ ಇರಿಸಲಾಗಿದೆ. ಪೊಲೀಸ್ ಸಿಬ್ಬಂದಿಯ ಮಕ್ಕಳ ಶಿಕ್ಷಣಕ್ಕಾಗಿ ಏಳು ಜಿಲ್ಲೆಗಳಲ್ಲಿ ಏಳು ಪೊಲೀಸ್ ಸಾರ್ವಜನಿಕ ಶಾಲೆಗಳನ್ನು ಪ್ರಾರಂಭಿಸಲಾಗುತ್ತಿದೆ. ಗುಣಮಟ್ಟದ ಶಿಕ್ಷಣ ನೀಡಲು ಸರ್ಕಾರ ಬದ್ಧವಾಗಿದೆ. ಪೊಲೀಸ್ ಕ್ಯಾಂಟೀನ್‌ಗಳನ್ನು ಪ್ರಾರಂಭಿಸಲಾಗುತ್ತಿದೆ ಎಂದು ಹೇಳಿದರು.

ರಾಜ್ಯ ಗೃಹ ಸಚಿವ ಜಿ.ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಹಾಗೂ ಪೊಲೀಸ್ ಇಲಾಖೆ ಮುಖ್ಯಸ್ಥರು ಪುಷ್ಪ ನಮನ ಸಲ್ಲಿಸಿದರು.

Follow us on Google News
Share. Facebook Twitter Pinterest LinkedIn Tumblr Email WhatsApp
Previous Article*ಹೆಬ್ಬಾಲೆಯಲ್ಲಿ‌ ‘ಕರ್ನಾಟಕ ಸುವರ್ಣ ಸಂಭ್ರಮ’ ಆಚರಣೆಗೆ ಕ.ಸಾ.ಪ ನಿರ್ಧಾರ  : ಗ್ರಾಮಸ್ಥರ ಸಹಭಾಗಿತ್ವದಲ್ಲಿ ಅರ್ಥಪೂರ್ಣ ಆಚರಣೆಗೆ ಟಿ.ಪಿ.ರಮೇಶ್ ಮನವಿ*
Next Article *ಮಡಿಕೇರಿ : ತಾವರೆ ಪುಷ್ಪದ ಅಲಂಕಾರದಲ್ಲಿ  ಗಮನ ಸೆಳೆಯುತ್ತಿರುವ ಶ್ರೀ ದಂಡಿನ ಮಾರಿಯಮ್ಮ*

*ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*

ಮಾರ್ಚ್ 2, 2026

ಮಡಿಕೇರಿ, NEWS DESK ಮಾ.2:-ಮಡಿಕೇರಿ ತಾಲೂಕಿನ ಕೆ.ನಿಡುಗಣೆಯಲ್ಲಿ ನೂತನ ಗ್ರಾಮ ಪಂಚಾಯತ್ ಕಚೇರಿ ನಿರ್ಮಾಣಕ್ಕೆ ಮಡಿಕೇರಿ ವಿಧಾನ ಸಭಾ ಕ್ಷೇತ್ರದ…

*ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*

ಮಾರ್ಚ್ 2, 2026

*ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*

ಮಾರ್ಚ್ 2, 2026

*ಮಾ.06 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 2, 2026

*ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*

ಮಾರ್ಚ್ 2, 2026

*ಮಡಿಕೇರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*

ಮಾರ್ಚ್ 2, 2026

*ಭಾರತಕ್ಕೆ ಮುಟ್ಟಿದ ಯುದ್ಧದ ಬಿಸಿ: ಒಮನ್ ದಾಳಿಯಲ್ಲಿ ಕನ್ನಡಿಗರು ಇದ್ದಾರೆಯೇ? ಮೃತ ಭಾರತೀಯನ ಗುರುತು ಪತ್ತೆಗೆ ವಿದೇಶಾಂಗ ಇಲಾಖೆ ಕಾರ್ಯತತ್ಪರ*

ಮಾರ್ಚ್ 2, 2026

*ಮಿತ್ರ ರಾಷ್ಟ್ರದ ಮೇಲೆ ಮಿತ್ರನಿಂದಲೇ ಅಟ್ಯಾಕ್: ಅಮೆರಿಕದ 3 ಫೈಟರ್ ಜೆಟ್‌ಗಳನ್ನು ಹೊಡೆದುರುಳಿಸಿದ ಕುವೈತ್; ಪೈಲಟ್‌ಗಳು ಪ್ರಾಣಾಪಾಯದಿಂದ ಪಾರು!*

ಮಾರ್ಚ್ 2, 2026

*ಕಾವೇರಿ ನದಿ ಅಳಿದರೆ ಸಂಸ್ಕೃತಿಯೇ ಅಳಿದಂತೆ; ಕಣಿವೆ ಆರತಿ ಕಾರ್ಯಕ್ರಮದಲ್ಲಿ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ*

ಮಾರ್ಚ್ 2, 2026

*”ಕಲೆಯ ಮೂಲಕ ಕಲಿಕೆ” ರೋಟರಿ ಮಡಿಕೇರಿ ವುಡ್ಸ್ ನಿಂದ ವಿಶಿಷ್ಟ ಕಾರ್ಯಕ್ರಮ : ಭಾಷೆ, ಬರಹ ಮತ್ತು ಭಾವನೆಗಳ ಸಮ್ಮಿಲನವೇ ಶಿಕ್ಷಣ : ಯು.ಆರ್.ನಾಗೇಶ್ ಕುಮಾರ್*

ಮಾರ್ಚ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.