Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*
  • *ಸೆ.5 ರಂದು ಶಿಕ್ಷಕರ ದಿನಾಚರಣೆ*
  • *ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*
  • *ಟೈಲರಿಂಗ್ ಯಂತ್ರೋಪಕರಣ ವಿತರಣೆ*
  • *ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*
  • *ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   
  • *31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*
  • *ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*
  • *ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*
  • *ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಾಮರಸ್ಯ, ಸಹೋದರತ್ವಕ್ಕೆ ಮಡಿಕೇರಿ ದಸರಾ ಮಾದರಿಯಾಗಿದೆ : ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅಭಿಮತ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸಾಮರಸ್ಯ, ಸಹೋದರತ್ವಕ್ಕೆ ಮಡಿಕೇರಿ ದಸರಾ ಮಾದರಿಯಾಗಿದೆ : ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅಭಿಮತ*

ಅಕ್ಟೋಬರ್ 25, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.25 : ಮಡಿಕೇರಿ ದಸರಾಗೆ ತನ್ನದೇ ಆದ ಇತಿಹಾಸವಿದ್ದು, ಧಾರ್ಮಿಕ ಹಾಗೂ ಸಾಂಸ್ಕೃತಿಕತೆಯ ಜೊತೆಗೆ ಸಾಮರಸ್ಯ ಮತ್ತು ಸಹೋದರತ್ವವನ್ನು ಒಳಗೊಂಡು ಮಾದರಿಯಾಗಿದೆ ಎಂದು ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಅಭಿಪ್ರಾಯಪಟ್ಟಿದ್ದಾರೆ.
ನಗರದ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ಮಂಗಳವಾರ ರಾತ್ರಿ ನಡೆದ ವಿಜಯದಶಮಿ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ದಸರಾ ಹಬ್ಬವು ಪ್ರತಿಯೊಬ್ಬರಲ್ಲಿ ಐಕ್ಯತೆ ಮತ್ತು ಭ್ರಾತೃತ್ವವನ್ನು ಮೂಡಿಸಿ ಒಗ್ಗಟ್ಟಾಗಿ ಪಾಲ್ಗೊಳ್ಳಲು ಪ್ರೇರಣೆ ನೀಡುವುದು ವಿಶೇಷವಾಗಿದೆ ಎಂದರು.
ರಾಷ್ಟçದ ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಸಮಾನ ಅವಕಾಶಗಳನ್ನು ಕಲ್ಪಿಸಲಾಗಿದ್ದು, ಅವುಗಳನ್ನು ಬಳಸಿಕೊಂಡು ಮುಖ್ಯವಾಹಿನಿಗೆ ಬರಲು ಎಲ್ಲರೂ ಪ್ರಯತ್ನಿಸಬೇಕು. ದ್ವೇಷ, ಅಸೂಯೆ, ಅಸಹನೆ, ಅಸಹಿಷ್ಟುತೆಯಿಂದ ಏನನ್ನು ಸಾಧಿಸಲು ಸಾಧ್ಯವಿಲ್ಲ. ಎಲ್ಲರೂ ಭ್ರಾತೃತ್ವದಿಂದ ಬದುಕಿದಾಗ ಉತ್ತಮ ಜೀವನ ಕಟ್ಟಿಕೊಳ್ಳಲು ಸಾಧ್ಯ ಎಂದು ಯು.ಟಿ.ಖಾದರ್ ಪ್ರತಿಪಾದಿಸಿದರು.
ಪ್ರತಿಯೊಬ್ಬ ಮನುಷ್ಯರಿಗೂ ಒಂದೇ ರೀತಿಯ ಅಂಗಾಂಗಗಳನ್ನು ದೇವರು ಸೃಷ್ಟಿಸಿರುತ್ತಾನೆ. ಕಪ್ಪು, ಬಿಳುಪು ಅಥವಾ ಕಂದು ಬಣ್ಣ ಇರಬಹುದು. ಮನುಷ್ಯನ ಅಂಗಾಂಗ ರಚನೆ ಒಂದೇ ರೀತಿ ಇರುತ್ತದೆ. ಆದ್ದರಿಂದ ಎಲ್ಲರೂ ಸಹೋದರತ್ವದಿಂದ ಬದುಕು ನಡೆಸುವಂತಾಗಬೇಕು. ಭಾರತವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದರು.
ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಮಾತನಾಡಿ ಪ್ರಸಕ್ತ ವರ್ಷದಲ್ಲಿ ಬರ ಇದ್ದರೂ ಸರ್ಕಾರ ಹೆಚ್ಚಿನ ಅನುದಾನ ಬಿಡುಗಡೆ ಮಾಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಡಿಕೇರಿ ದಸರಾಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಿದ್ದಾರೆ ಎಂದು ಹೇಳಿದರು.
ಮಡಿಕೇರಿ ದಸರಾದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳುವುದು ವಿಶೇಷವಾಗಿದೆ. ದಸರಾ ಯಶಸ್ಸಿಗೆ ಎಲ್ಲರೂ ಕೈಜೋಡಿಸಿರುವುದು ಶ್ಲಾಘನೀಯ ಕಾರ್ಯ ಎಂದರು.
ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಮಾತನಾಡಿ ಈ ಬಾರಿ ಮಳೆ ಕಡಿಮೆ ಆದ ಕಾರಣ ಬರ ಎಂದು ಘೋಷಣೆಯಾಗಿದೆ. ಆದಷ್ಟು ಇತಿ ಮಿತಿಯಲ್ಲಿ ಕಾರ್ಯಕ್ರಮವನ್ನು ಆಯೊಜಿಸಬೇಕು ಎಂದು ಮುಖ್ಯಮಂತ್ರಿಯವರು ಮತ್ತು ಉಪಮುಖ್ಯಮಂತ್ರಿ ಅವರು ಸಲಹೆ ಮಾಡಿದ್ದರು. ಆದರೂ ಮಡಿಕೇರಿ ದಸರಾಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಿದ್ದು, ಮುಖ್ಯಮಂತ್ರಿಯವರು ಹಾಗೂ ಉಪ ಮುಖ್ಯಮಂತ್ರಿಗಳಿಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.
ದಸರಾ ಕಾರ್ಯಕ್ರಮಕ್ಕೆ ಬಿಡುಗಡೆಯಾದ ಅನುದಾನಲ್ಲಿ 20-30 ಲಕ್ಷ ರೂ ಉಳಿಸಿ, ಗಾಂಧಿ ಮೈದಾನದಲ್ಲಿ ಶಾಶ್ವತ ವೇದಿಕೆ ನಿರ್ಮಾಣ ಮಾಡಲು ಪ್ರಯತ್ನಿಸಲಾಗುವುದು ಎಂದು ಶಾಸಕರು ತಿಳಿಸಿದರು.
ಪ್ರತಿಯೊಬ್ಬ ನಾಗರಿಕರಿಗೆ ಕುಡಿಯುವ ನೀರು, ವಿದ್ಯುತ್ ಸಂಪರ್ಕ, ರಸ್ತೆ ಹೀಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಿ, ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ಆದ್ಯತೆಯಾಗಿದೆ. ಕೊಡಗು ಜಿಲ್ಲೆಯಲ್ಲಿ ಕೃಷಿ ಜೊತೆಗೆ ಪ್ರವಾಸೋದ್ಯಮವನ್ನು ಸಹ ಅಭಿವೃದ್ಧಿ ಪಡಿಸಬೇಕಿದೆ ಎಂದರು.
ಹಿರಿಯ ಪತ್ರಕರ್ತ ಜಿ.ಚಿದ್ವಿಲಾಸ್ ಅವರು ಮಾತನಾಡಿ ಮಡಿಕೇರಿ ದಸರಾ ಆಚರಣೆ ಸಂಬಂಧಿಸಿದಂತೆ ಮೈಸೂರು ದಸರಾ ಮಾದರಿಯಲ್ಲಿ ಬಜೆಟ್‌ನಲ್ಲಿ ಅನುದಾನ ಪ್ರಕಟಿಸುವಂತಾಗಬೇಕು. ಆ ನಿಟ್ಟಿನಲ್ಲಿ ಪ್ರಯತ್ನಗಳು ಮುಂದುವರಿಯಬೇಕು ಎಂದು ಕೋರಿದರು.
ಚಿತ್ರನಟ ಅಭಿಷೇಕ್ ಅಂಬರೀಶ್ ಮಾತನಾಡಿ ನಮ್ಮ ಕುಟುಂಬ ಮತ್ತು ಕೊಡಗು ಜಿಲ್ಲೆಗೆ ಅವಿನಾಭಾವ ಸಂಬಂಧವಿದೆ. ನಮ್ಮ ತಂದೆಯವರು ಕೊಡಗು ಜಿಲ್ಲೆಯನ್ನು ಹೆಚ್ಚು ಗೌರವಿಸುತ್ತಿದ್ದರು. ಕಾವೇರಿ ನದಿ ಉಗಮ ಸ್ಥಾನ ತಲಕಾವೇರಿಯಲ್ಲಿ ಹುಟ್ಟುವುದು ವಿಶೇಷ. ಆ ನಿಟ್ಟಿನಲ್ಲಿ ಕೊಡಗು ಒಂದು ರೀತಿ ಹೆಚ್ಚು ಪ್ರೀತಿಪಾತ್ರವಾದ ಜಿಲ್ಲೆಯಾಗಿದೆ ಎಂದು ಹೇಳಿದರು.
ನಗರಸಭೆ ಅಧ್ಯಕ್ಷರು ಹಾಗೂ ನಗರ ದಸರಾ ಸಮಿತಿ ಅಧ್ಯಕ್ಷರಾದ ಅನಿತಾ ಪೂವಯ್ಯ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಕರಗ ಉತ್ಸವದೊಂದಿಗೆ ಮಡಿಕೇರಿ ದಸರಾ ಆರಂಭವಾಗುತ್ತದೆ. ದಶ ಮಂಟಪಗಳ ಶೋಭಾಯಾತ್ರೆ ಮಡಿಕೇರಿ ದಸರಾ ವಿಶೇಷವಾಗಿದೆ ಎಂದರು.
ರಾಜರ ಕಾಲದಿಂದಲೂ ಮಡಿಕೇರಿ ದಸರಾ ಆಚರಿಸಿಕೊಂಡು ಬರಲಾಗಿದೆ. ಈ ಹಿಂದೆ ತನ್ವೀರ್ ಶೇಠ್ ಅವರು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಸಂದರ್ಭದಲ್ಲಿ ಸರ್ಕಾರದಿಂದ 10 ಲಕ್ಷ ರೂ. ಬಿಡುಗಡೆ ಮಾಡಿಸಿದ್ದರು. ಅವರ ಅವಧಿಯಿಂದ ಮಡಿಕೇರಿ ದಸರಾಗೆ ಸರ್ಕಾರದಿಂದ ಅನುದಾನ ಬಿಡುಗಡೆಯಾಗುತ್ತ ಬಂದಿದೆ. ಮಡಿಕೇರಿ ದಸರಾಗೆ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಡಳಿತ, ಪೊಲೀಸ್ ಇಲಾಖೆ, ನಗರ ದಸರಾ ಸಮಿತಿ ಹೀಗೆ ಎಲ್ಲರೂ ಕೈಜೋಡಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಸಾಂಸ್ಕೃತಿಕ, ಜಾನಪದ, ಮಹಿಳಾ ಮತ್ತು ಮಕ್ಕಳ, ಯುವ, ಕ್ರೀಡಾ, ಕವಿಗೋಷ್ಠಿ ಹೀಗೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಪ್ರೇಕ್ಷಕರನ್ನು ಸೆಳೆಯುವಲ್ಲಿ ಯಶಸ್ಸು ಆಗಿದೆ ಎಂದರು.
ಹೈಕೋರ್ಟ್ ಹಿರಿಯ ವಕೀಲ ಹೆಚ್.ಎಸ್.ಚಂದ್ರಮೌಳಿ ಅವರು ಮಾತನಾಡಿ ದಸರಾ ಹಬ್ಬಗೆ ಎಲ್ಲರೂ ಶ್ರಮಿಸಿದ್ದು, ಹಲವು ಸಂಘ ಸಂಸ್ಥೆಗಳು ಸಹ ಕೈಜೋಡಿಸಿವೆ ಎಂದು ತಿಳಿಸಿದರು.
ಸಭಾ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜು, ಶಾಸಕ ಡಾಮಂತರ್ ಗೌಡ ಹಾಗೂ ಅಭಿಷೇಕ್ ಅಂಬರೀಷ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ, ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ಮಾಜಿ ಅಧ್ಯಕ್ಷರಾದ ಟಿ.ಪಿ.ರಮೇಶ್, ಪೌರಾಯುಕ್ತರಾದ ವಿಜಯ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಚಿನ್ನಸ್ವಾಮಿ, ನಗರದಸರಾ ಸಮಿತಿ ಕಾರ್ಯಾಧ್ಯಕ್ಷರಾದ ಪ್ರಕಾಶ್ ಆಚಾರ್ಯ, ಪ್ರಧಾನ ಕಾರ್ಯದರ್ಶಿ ರಾಜೇಶ್ ಯಲ್ಲಪ್ಪ, ಖಜಾಂಜಿ ಅರುಣ್ ಶೆಟ್ಟಿ, ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.1 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ…

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಟೈಲರಿಂಗ್ ಯಂತ್ರೋಪಕರಣ ವಿತರಣೆ*

ಸೆಪ್ಟೆಂಬರ್ 1, 2026

*ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*

ಸೆಪ್ಟೆಂಬರ್ 1, 2026

*ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   

ಸೆಪ್ಟೆಂಬರ್ 1, 2026

*31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*

ಸೆಪ್ಟೆಂಬರ್ 1, 2026

*ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*

ಸೆಪ್ಟೆಂಬರ್ 1, 2026

*ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*

ಸೆಪ್ಟೆಂಬರ್ 1, 2026

*ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*

ಸೆಪ್ಟೆಂಬರ್ 1, 2026

*ಸಣ್ಣ ಪ್ರಮಾಣದ ಬೆಟ್ಟ ಕುಸಿತ*

ಸೆಪ್ಟೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.