Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮೂರ್ನಾಡುವಿನಲ್ಲಿ ಆಯುಧ ಪೂಜಾ ಸಂಭ್ರಮಾಚರಣೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮೂರ್ನಾಡುವಿನಲ್ಲಿ ಆಯುಧ ಪೂಜಾ ಸಂಭ್ರಮಾಚರಣೆ

ಅಕ್ಟೋಬರ್ 27, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮೂರ್ನಾಡು  ಅ.27 :  ಮೂರ್ನಾಡುವಿನ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ  ಆಯುಧ ಪೂಜಾ ಕಾರ್ಯಕ್ರಮವು ಸಂಭ್ರಮದಿಂದ ನಡೆಯಿತು.

ಪಾಂಡಾಣೆ ಶಾಲಾ ಮೈದಾನದಲ್ಲಿ ನಿರ್ಮಿಸಲಾದ ಭವ್ಯ ಬಯಲು ಅಲಂಕೃತ ವೇದಿಕೆಯಲ್ಲಿ 30ನೇ ವರ್ಷದ ಆಯುಧ ಪೂಜೆ ನೆರವೇರಿತು.

ಅಲಂಕೃತ ವಾಹನಗಳಿಗೆ ಸಾಮೂಹಿಕ ಪೂಜೆಯನ್ನು ನೆರವೇರಿಸಿ, ನಂತರ ಮುಖ್ಯ ರಸ್ತೆಯಲ್ಲಿ  ಮೆರವಣಿಗೆ ಮೂಲಕ ಪಟ್ಟಣದ ಮುಖ್ಯ ಬೀದಿಗಳಲ್ಲಿ ತೆರಳಲಾಯಿತು. ಈ ಸಂದರ್ಭ  ವಿಶೇಷವಾಗಿ ಅಲಂಕೃತಗೊಂಡ ವಾಹನಗಳಲ್ಲಿ ಚಂದ್ರಯಾನ-3, ಮದ್ಯಪಾನದಿಂದ ಆಗುವ ಅಪಘಾತಗಳ ಸ್ತಬ್ದ ಚಿತ್ರಣ, ಐತಿಹಾಸಿಕ ಹಿನ್ನಲೆಯುಳ್ಳ ಶ್ರೀರಾಮನಿಂದ ರಾವಣದ ಸಂಹಾರ, ದುರ್ಗೆಯಿಂದ ದುರ್ಗಾಸುರನ ವಧೆ, ಶುಂಭನ ವಧೆ, ಶಿವಾಂಶನಿಂದ ಕಾಲಾಂಶನ ವಧೆಯ ಚಿತ್ರಣಗಳು, ಭಾರತದ ಚಂದ್ರಯಾನ-3 ಯಶಸ್ವಿ ಉಡಾವಣೆ ಹಾಗೂ ಸುರಕ್ಷಿತ ಲ್ಯಾಂಡಿಂಗ್, ರೈತ ದೇಶದ ಬೆನ್ನುಲೆಬು, ಸರ್ಕಾರಿ ಶಾಲೆಗಳನ್ನು ಉಳಿಸಿ ಹೀಗೆ ಇನ್ನು ಹಲವಾರು ಸ್ತಬ್ದ ಚಿತ್ರಗಳು ಮತ್ತು ವಿಟ್ಲದ ಕಲಾ ರಸಿಕ ಆಟ್ರ್ಸ್ ಬೊಂಬೆ ಬಳಗದ ಗೊಂಬೆ ಕುಣಿತ ಮತ್ತು ವಾದ್ಯಗೋಷ್ಠಿಗಳು ವೀಕ್ಷಕರ ಗಮನ ಸೆಳೆದವು.

ಸಮಾರಂಭದಕ್ಕೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಹಿರಿಯ ಮುಖ್ಯ ಶಿಕ್ಷಕಿ ವಿ.ಕೆ. ಲಲಿತ ಮಾತನಾಡಿ ಸಂಘಟನೆ ಬರಿ ಮಾತಲ್ಲ, ಕಾರ್ಯಗತಗೊಂಡಾಗ ಮಾತ್ರ ಸಂಘಗಳು ಗಟ್ಟಿಗೊಳ್ಳುತ್ತದೆ. ಸರ್ಕಾರಿ ಶಾಲೆ ಮತ್ತು ಪಾಂಡಾಣೆ ಮೈದಾನಕ್ಕೆ ಸಂಬಂಧಪಟ್ಟವರು ಹಾಗೂ ಸಂಘದ ಆಡಳಿತ ಮಂಡಳಿಯವರು ಸರ್ಕಾರದ ಮಟ್ಟದಲ್ಲಿ ಮಾತುಕತೆ ನಡೆಸಿದರೆ ಶಾಶ್ವತ ವೇದಿಕೆ ಕಾರ್ಯಗತಗೊಳ್ಳಲು ಸಾಧ್ಯವಾಗುತ್ತದೆ ಎಂದರು.

ಮೂರ್ನಾಡಿನ ಅಯ್ಯಪ್ಪ ಸೇವಾ ಸಮಿತಿ ಅಧ್ಯಕ್ಷ ದಂಬೆಕೊಡಿ ಕೆ. ಸುಬ್ರಮಣಿ ಮುಖ್ಯ ಅತಿಥಿಗಳ ಸ್ಥಾನದಿಂದ ಮಾತನಾಡಿ, ದುಷ್ಟರ ಸಂಹಾರವಾಗಿ ಶಿಷ್ಟರ ರಕ್ಷಣೆಯಾಗುವ ಈ ದಿನ ದುರ್ಗಾದೇವಿಯನ್ನು ಪೂಜಿಸುವ ಪುರಾಣ ಹಿನ್ನಲೆಯಿಂದ, ಆಯುಧಗಳಿಗೆ ಪೂಜೆಯನ್ನು ಮಾಡುವುದರೊಂದಿಗೆ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಿ ಜನರ ಮನತಣಿಸುವ ಕಾರ್ಯಗಳು ಸಂಘಗಳಿಂದ ಪ್ರಸ್ತುತದಲ್ಲಿ ಆಗುತ್ತಿದೆ ಎಂದು ತಿಳಿಸಿದರು.

ಸಭೆಯ ಅಧ್ಯಕ್ಷತೆಯನ್ನು ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ಅಧ್ಯಕ್ಷ ಕರವಂಡ ಕೆ. ಸಜನ್ ಗಣಪತಿ ವಹಿಸಿದ್ದರು.

ಮೂರ್ನಾಡು ಗ್ರಾ.ಪಂ  ಅಧ್ಯಕ್ಷ ಬಿ.ಎಸ್. ಕುಶನ್ ರೈ ಪಂಚಾಯಿತಿ ಉಪಾಧ್ಯಕ್ಷೆ ಬಿ.ಎಸ್. ರೇಖಾ ಬಾಲು, ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್‍ನ ವಿಜೇತ ರಾಹುಲ್ ರಾವ್, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ವಿಜಯ್ ಕುಮಾರ್, ಹಿಂದೂ ರುದ್ರಭೂಮಿಯ ಅಧ್ಯಕ್ಷ ಬಿ.ಎಸ್. ಅರುಣ್ ರೈ (ಬಾಬಾ), ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ಗೌರವ ಅಧ್ಯಕ್ಷ ಎನ್.ಕೆ. ಕಂಞರಾಮ, ಮೂರ್ನಾಡು ಕೊಡವ ಸಮಾಜದ ಅಧ್ಯಕ್ಷ ನೆರವಂಡ ಎನ್. ಅನೂಪ್ ಉತ್ತಯ್ಯ, ಮೂರ್ನಾಡು ಗೌಡ ಸಮಾಜದ ಅಧ್ಯಕ್ಷ ಪಾಣತ್ತಲೆ ಟಿ. ಹರೀಶ್, ಮೂರ್ನಾಡು ಸ್ಪೋಟ್ರ್ಸ್ ಕ್ಲಬ್‍ನ ಅಧ್ಯಕ್ಷ ಮುಂಡಂಡ ಪವಿ ಸೋಮಣ್ಣ, ಅಯ್ಯಪ್ಪ ಯುವಕ ಸಂಘದ ಅಧ್ಯಕ್ಷ ಕಂಬೀರಂಡ ಕೆ. ಸತೀಶ್ ಮುತ್ತಪ್ಪ, ಬಂಟರ ಸಂಘದ ಅಧ್ಯಕ್ಷ ಚಂದಶೇಖರ್ ರೈ, ತೊತ್ತಿಯಂಡ ಬೆಳ್ಳಿಯ್ಯಪ್ಪ, ಸಂಘದ ಉಪಾಧ್ಯಕ್ಷ ಅಶ್ವಥ್ ರೈ, ಕಾರ್ಯದರ್ಶಿ ಎನ್.ಎನ್. ಶರಣು, ಖಜಾಂಚಿ ಹೆಚ್.ಹೆಚ್. ಜಯಂತ್ ಕುಮಾರ್, ಸಹ ಕಾರ್ಯದರ್ಶಿ ದಿನೇಶ್ ರೈ  ಹಾಜರಿದ್ದರು.

ಸಭಾ ಕಾರ್ಯಕ್ರಮದಲ್ಲಿ  ನಿವೃತ್ತ ಸುಬೇದಾರ್ ಮೇಜರ್ ಬೈರಿಕುಂದಿರ ಉತ್ತಪ್ಪ, ನಿವೃತ್ತ ದೈಹಿಕ ಶಿಕ್ಷಕ ಅವರೆಮಾದಂಡ ಜಿ. ಗಣೇಶ್, ಬಲಮುರಿಯ ನಿವೃತ್ತ ಕರ್ನಲ್ ತೊತ್ತಿಯಂಡ ಬಿ. ಸಬಿತ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು. ಅಲಂಕೃತಗೊಂಡ ದ್ವಿಚಕ್ರ, ತ್ರಿಚಕ್ರ, ನಾಲ್ಕು ಚಕ್ರ, ಆರು ಚಕ್ರ ವಾಹನಗಳು ಮತ್ತು ಅಂಗಡಿಗಳಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ನಗದು ಬಹುಮಾನ ಹಾಗೂ ಪಾರಿತೋಷಕಗಳನ್ನು ಮುಖ್ಯ ಅತಿಥಿಗಳು ವಿತರಿಸಿದರು.  ತೃಶ ಕಾವೇರಪ್ಪ ಪ್ರಾರ್ಥಿಸಿ, ಎನ್.ಎನ್. ಶರಣು ಪ್ರಾಸ್ತಾವಿಕ ನುಡಿಯಾಡಿ, ಅಶ್ವಥ್ ರೈ ಸ್ವಾಗತಿಸಿ, ಸೀಮಾ ಸಜನ್ ಮತ್ತು ಕಿಶೋರ್ ರೈ ಕತ್ತಲೆಕಾಡು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಸಂಘದ ವತಿಯಿಂದ ನೆರೆದಿದ್ದ ಎಲ್ಲಾ ಸಾರ್ವಜನಿಕರಿಗೂ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು. ನಂತರ ರಾಹುಲ್ ರಾವ್ ಮತ್ತು ತಂಡದ ನೃತ್ಯ, ಭಾರತೀಯ ನೃತ್ಯ ಕಲಾ ಶಾಲೆಯ ಕಲಾವಿದರ ನೃತ್ಯಗಳು ಮತ್ತು ಸ್ಥಳೀಯ ಮಕ್ಕಳ ನೃತ್ಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರೆದ ಪ್ರೇಕ್ಷಕರ ಮನಸೂರೆಗೊಂಡವು.

Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿ ದಸರಾ ಜನೋತ್ಸವಕ್ಕೆ ಹೊಸ ವೈಭವ ತಂದುಕೊಟ್ಟ ಶಾಸಕ ಡಾ.ಮಂತರ್ ಗೌಡ : ಪ್ರಕಾಶ್ ಆಚಾರ್ಯ ಬಣ್ಣನೆ : ನಾಲ್ಕು ವರ್ಷಗಳ ದಸರಾ ಯಶಸ್ಸಿನ ಹಿಂದೆ ಶಾಸಕರ ಇಚ್ಛಾಶಕ್ತಿ ಮತ್ತು ವಿಶೇಷ ಆಸಕ್ತಿ : ದಸರಾ ಆರ್ಥಿಕ ವ್ಯವಸ್ಥೆಗೆ ಹೊಸ ಚೈತನ್ಯ

ನವೆಂಬರ್ 3, 2026

ಶಿಕ್ಷಣದೊಂದಿಗೆ ಮಾನವೀಯ ಮೌಲ್ಯಗಳನ್ನು ಅರಿಯೋಣ: ಉ.ರಾ. ನಾಗೇಶ್

ನವೆಂಬರ್ 3, 2026

ಕುಶಾಲನಗರದಲ್ಲಿ ಸ್ವಚ್ಛತಾ ಜಾಗೃತಿ: ಸರ್ಕಾರಿ ಬಾಲಕಿಯರ ಪ್ರೌಢಶಾಲೆಗೆ ಇನ್ನರ್ ವೀಲ್ ಸಂಸ್ಥೆಯಿಂದ ಕಸದ ಬುಟ್ಟಿ ಕೊಡುಗೆ

ನವೆಂಬರ್ 3, 2026

ಶಿಕ್ಷಣದೊಂದಿಗೆ ಮಾನವೀಯ ಮೌಲ್ಯಗಳನ್ನು ಅರಿಯೋಣ: ಉ.ರಾ. ನಾಗೇಶ್

ನವೆಂಬರ್ 3, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ನ.3: ಬದುಕಿಗಾಗಿ ಶಿಕ್ಷಣ ಪಡೆಯುವುದರ ಜೊತೆಗೆ ಮಾನವೀಯ ಮೌಲ್ಯಗಳನ್ನು ಅರಿತು ಜೀವನದಲ್ಲಿ ಅಳವಡಿಸಿಕೊಂಡಾಗ ಉತ್ತಮ ಪ್ರಜೆಗಳಾಗಲು…

ಕುಶಾಲನಗರದಲ್ಲಿ ಸ್ವಚ್ಛತಾ ಜಾಗೃತಿ: ಸರ್ಕಾರಿ ಬಾಲಕಿಯರ ಪ್ರೌಢಶಾಲೆಗೆ ಇನ್ನರ್ ವೀಲ್ ಸಂಸ್ಥೆಯಿಂದ ಕಸದ ಬುಟ್ಟಿ ಕೊಡುಗೆ

ನವೆಂಬರ್ 3, 2026

ಮಡಿಕೇರಿಯಲ್ಲಿ ರಾಷ್ಟ್ರ ಸೇವಿಕಾ ಸಮಿತಿ ಬೈಠಕ್: ಶತಮಾನೋತ್ಸವದ ಗುರಿಯೊಂದಿಗೆ ಶಾಖೆ ಪುನರಾರಂಭ

ನವೆಂಬರ್ 3, 2026

ಅಹಿಂದ ಬಳಗದಿಂದ ಶಾಸಕ ಡಾ. ಮಂತರ್ ಗೌಡರಿಗೆ ಸನ್ಮಾನ

ನವೆಂಬರ್ 3, 2026

ಕುಶಾಲನಗರ : ಜಿ.ಎಲ್ ಆಚಾರ್ಯ ಜುವೆಲ್ಲರ್ಸ್ ನಲ್ಲಿ  ದೀಪಾವಳಿ ಹಬ್ಬದ ಪ್ರಯುಕ್ತ ಚಿನ್ನಾಭರಣ ಖರೀದಿಗೆ ವಿಶೇಷ ರಿಯಾಯಿತಿ : ನ.5ರಿಂದ 11ರವರೆಗೆ

ನವೆಂಬರ್ 3, 2026

ಕುಶಾಲನಗರ : ಜಿ.ಎಲ್ ಆಚಾರ್ಯ ಜುವೆಲ್ಲರ್ಸ್ ನಲ್ಲಿ  ದೀಪಾವಳಿ ಹಬ್ಬದ ಪ್ರಯುಕ್ತ ಚಿನ್ನಾಭರಣ ಖರೀದಿಗೆ ವಿಶೇಷ ರಿಯಾಯಿತಿ : ನ.5ರಿಂದ 11ರವರೆಗೆ

ನವೆಂಬರ್ 3, 2026

ಕೊಡಗು ಜಿಲ್ಲಾ ಮಾದಿಗ ಜಾತಿ ಉಪಜಾತಿ ಸಂಘಟನೆಗಳ ಒಕ್ಕೂಟದಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ

ನವೆಂಬರ್ 3, 2026

ಕಳೆದ 8 ತಿಂಗಳಿನಿoದ ಪೌಷ್ಟಿಕ ಆಹಾರ ನೀಡದ ಸರಕಾರ : ಚುನಾವಣೆ ಬಹಿಷ್ಕಾರಕ್ಕೆ ಕೊಡಗು ಬುಡಕಟ್ಟು ಜನಾಂಗಗಳ ನಿರ್ಧಾರ : ಅಭಿವೃದ್ಧಿ ಕಾರ್ಯಗಳಿಗೆ ಆಗ್ರಹ

ನವೆಂಬರ್ 3, 2026

ಕಳೆದ 8 ತಿಂಗಳಿನಿoದ ಪೌಷ್ಟಿಕ ಆಹಾರ ನೀಡದ ಸರಕಾರ : ಚುನಾವಣೆ ಬಹಿಷ್ಕಾರಕ್ಕೆ ಕೊಡಗು ಬುಡಕಟ್ಟು ಜನಾಂಗಗಳ ನಿರ್ಧಾರ : ಅಭಿವೃದ್ಧಿ ಕಾರ್ಯಗಳಿಗೆ ಆಗ್ರಹ

ನವೆಂಬರ್ 3, 2026

ನ.6 ರಂದು ವಿಷ್ಣುಮೂರ್ತಿ ಕೋಲ

ನವೆಂಬರ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.