Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*
  • *ಸೆ.5 ರಂದು ಶಿಕ್ಷಕರ ದಿನಾಚರಣೆ*
  • *ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*
  • *ಟೈಲರಿಂಗ್ ಯಂತ್ರೋಪಕರಣ ವಿತರಣೆ*
  • *ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*
  • *ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   
  • *31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*
  • *ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*
  • *ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*
  • *ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಈರಮಂಡ ಹರಿಣಿ ವಿಜಯ್ ಹಾಗೂ ಕಟ್ರತನ ಲಲಿತಾ ಅಯ್ಯಣ್ಣ ಗೆ ಗೌರಮ್ಮ ದತ್ತಿನಿಧಿ ಪ್ರಶಸ್ತಿ ಪ್ರದಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಈರಮಂಡ ಹರಿಣಿ ವಿಜಯ್ ಹಾಗೂ ಕಟ್ರತನ ಲಲಿತಾ ಅಯ್ಯಣ್ಣ ಗೆ ಗೌರಮ್ಮ ದತ್ತಿನಿಧಿ ಪ್ರಶಸ್ತಿ ಪ್ರದಾನ*

ಅಕ್ಟೋಬರ್ 27, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.27 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಕಾಲೇಜು ಸಭಾಂಗಣದಲ್ಲಿ ನಡೆದ 2022-23 ನೇ ಸಾಲಿನ 19 ನೇ ಗೌರಮ್ಮ ದತ್ತಿನಿಧಿ ಪ್ರಶಸ್ತಿಯನ್ನು ಸಾಹಿತಿ ಕಟ್ರತನ ಲಲಿತ ಅಯ್ಯಣ್ಣ ಮತ್ತು ಈರಮಂಡ ಹರಿಣ್ ವಿಜಯ್ ಅವರಿಗೆ ಗಣ್ಯರು ಪ್ರದಾನ ಮಾಡಿದರು. ಅಲ್ಲದೆ ಗೌರಮ್ಮ ದತ್ತಿನಿಧಿ ಕಥಾಸ್ಪರ್ಧೆ ಬಹುಮಾನವನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.
ಕೊಡಗು ವಿಶ್ವ ವಿದ್ಯಾನಿಲಯದ ಚಿಕ್ಕಅಳುವಾರ ಜ್ಞಾನಕಾವೇರಿ ಕನ್ನಡ ಉಪನ್ಯಾಸಕ ಡಾ.ಜಮೀರ್ ಅಹ್ಮದ್ ಮಾತನಾಡಿ ಕತೆಗಾರ್ತಿ ಕೊಡಗಿನ ಗೌರಮ್ಮ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ವರ್ಣಿಸಿದರು.
ಕೊಡಗಿನ ಗೌರಮ್ಮ ಸ್ವಾತಂತ್ರ್ಯ ಪೂರ್ವದಲ್ಲಿ ಸಣ್ಣ ಕತೆಗಳನ್ನು ಬರೆಯುವ ಮೂಲಕ ಮಹಿಳಾ ಸಬಲೀಕರಣ, ಸಮಾಜದಲ್ಲಿ ಸಮಾನತೆ ಹೀಗೆ ಹಲವು ವಿಚಾರಗಳ ಕುರಿತು ಕನ್ನಡ ಸಾಹಿತ್ಯದಲ್ಲಿ ಬೆಳಕು ಚೆಲ್ಲಿದ್ದಾರೆ ಎಂದು ಅವರು ನುಡಿದರು.
ಬದುಕಿದ 27 ವರ್ಷದಲ್ಲಿ ಸಾಮಾಜಿಕ ಕ್ರಾಂತಿಯನ್ನೇ ಉಂಟು ಮಾಡಿದ್ದರು. ಮಹಾತ್ಮ ಗಾಂಧೀಜಿಯವರು ಭೇಟಿ ನೀಡಿದ ಸಂದರ್ಭದಲ್ಲಿ ಬಡ ವರ್ಗದವರು ಮುಖ್ಯವಾಹಿನಿಗೆ ಬರುವಂತಾಗಲು ತಮ್ಮಲ್ಲಿದ್ದ ಒಡವೆಗಳನ್ನು ಮಹಾತ್ಮ ಗಾಂಧೀಜಿಯವರಿಗೆ ನೀಡಿದ್ದರು ಎಂದು ಸ್ಮರಿಸಿದರು.
ಜೀವನದಲ್ಲಿ ಸರಳ ಸಜ್ಜನ ಬದುಕು ನಡೆಸಿದ್ದ ಗೌರಮ್ಮ ಅವರು ಸಂವೇದನಾಶೀಲ ಹಾಗೂ ಕ್ರೀಯಾಶೀಲ ಸಾಹಿತ್ಯ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದರು. ಸಮಾಜಮುಖಿ ಕಾರ್ಯಗಳಿಗಾಗಿ ಸದಾ ಮುಂಚೂಣಿಯಲ್ಲಿದ್ದರು ಎಂದು ಹೇಳಿದರು.
ಗೌರಮ್ಮನವರ ಸಣ್ಣ ಕತೆಗಳು ಪ್ರಸ್ತುತವಾಗಿದ್ದು ಸಮಾಜಮುಖಿಯಾಗಿ ಬೆಳಕು ಚೆಲ್ಲುತ್ತದೆ ಎಂದು ಕೊಡಗು ವಿಶ್ವವಿದ್ಯಾನಿಲಯದ ಉಪನ್ಯಾಸಕರು ವಿವರಿಸಿದರು.
ವೈಚಾರಿಕ, ವೈಜ್ಞಾನಿಕತೆ, ಜೀವನ ಮೌಲ್ಯವನ್ನು ಗೌರಮ್ಮನವರ ಸಾಹಿತ್ಯದಲ್ಲಿ ಕಾಣಬಹುದಾಗಿದೆ. ಕನ್ನಡ ಸಾರಸ್ವತ ಲೋಕಕ್ಕೆ ಗೌರಮ್ಮನವರ ಕೊಡುಗೆ ಅಪಾರ ಎಂದು ವಿವರಿಸಿದರು.
ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ಗೌರಮ್ಮ ದತ್ತಿನಿಧಿ ಪ್ರಶಸ್ತಿಯಿಂದ ಕೊಡಗು ಜಿಲ್ಲೆಯಲ್ಲಿ ಹಲವು ಮಹಿಳಾ ಬರಹಗಾರರನ್ನು ಗುರುತಿಸುವಂತಾಗಿದೆ ಎಂದು ಹೇಳಿದರು.

ಸಾಹಿತ್ಯ ಲೋಕದಲ್ಲಿ ಗೌರಮ್ಮ ದತ್ತಿನಿಧಿ ಪ್ರಶಸ್ತಿ ರಾಜ್ಯ ಮಟ್ಟಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆದಿವೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ಗೌರಮ್ಮ ಅವರು ಬರೆದಿರುವ 21 ಸಣ್ಣ ಕತೆಗಳು ಸಾರ್ವಕಾಲೀಕವಾಗಿವೆ. ಗೌರಮ್ಮ ದತ್ತಿನಿಧಿ ಕಥಾ ಸ್ಪರ್ಧೆಯಿಂದ ವಿದ್ಯಾರ್ಥಿಗಳಿಗೆ ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಪ್ರೇರಣೆಯಾಗಿದೆ ಎಂದು ಟಿ.ಪಿ.ರಮೇಶ್ ನುಡಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪಿ.ಕೆ.ವೆಂಕಟೇಶ್ ಪ್ರಸನ್ನ ಮಾತನಾಡಿ, ಹೃದಯದ ಬದುಕನ್ನು ಹತ್ತಿರಕ್ಕೆ ಬೆಸೆಯುವುದು ಸಾಹಿತ್ಯವಾಗಿದೆ. ಜಾತಿ, ಧರ್ಮವನ್ನು ಮೀರುವಂತದ್ದು ಸಾಹಿತ್ಯ. ಬದುಕನ್ನು ಅರ್ಥೈಸಿಕೊಳ್ಳಲು ಸಾಹಿತ್ಯ ಸಹಕಾರಿ. ಗೌರಮ್ಮ ಅವರು ಮಹಿಳಾ ಕಥೆ ಗಾರ್ತಿಯಾಗಿ ಸಮಾಜದಲ್ಲಿ ಜಾಗೃತಿ ಮೂಡಿಸಿದ್ದಾರೆ ಎಂದರು.
ಗೌರಮ್ಮ ದತ್ತಿನಿಧಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಕಟ್ರತನ ಲಲಿತ ಅಯ್ಯಣ್ಣ ಅವರು ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಕುಟುಂಬದವರ ಪ್ರೇರಣೆ ಹೆಚ್ಚಿನದ್ದಾಗಿದೆ ಎಂದರು.
ಈರಮಂಡ ಹರಿಣಿ ವಿಜಯ್, ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಮುನೀರ್ ಅಹ್ಮಮದ್ ಮಾತನಾಡಿದರು.
ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ರೇವತಿ ರಮೇಶ್, ಗೌರವ ಕೋಶಾಧಿಕಾರಿ ಎಸ್.ಎ.ಸಂಪತ್ ಕುಮಾರ್, ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಘಟಕದ ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್(ಮಡಿಕೇರಿ), ಎಸ್.ಡಿ.ವಿಜೇತ(ಸೋಮವಾರಪೇಟೆ), ಬೈತಡ್ಕ ಜಾನಕಿ ಬೆಳ್ಯಪ್ಪ, ಸ್ಮಿತಾ ಅಮೃತರಾಜ್, ಸಂಗೀತ ರವಿರಾಜ್, ಡಾ. ಕೋರನ ಸರಸ್ವತಿ, ಡಾ.ಕಾವೇರಿ ಪ್ರಕಾಶ್, ಸುನಿತಾ ಲೋಕೇಶ್, ಸಹನ ಕಾಂತಬೈಲು, ಕೆ.ಟಿ.ಬೇಬಿ ಮ್ಯಾಥ್ಯೂ, ನವೀನ್ ಅಂಬೆಕಲ್ಲು, ಕುಡೆಕಲ್ ಸಂತೋಷ್ ಇತರರು ಇದ್ದರು.
ರೇವತಿ ರಮೇಶ್ ಸ್ವಾಗತಿಸಿದರು, ಸಾಹಿತ್ಯ ಪರಿಷತ್ತಿನ ನಿರ್ದೇಶಕಿ ಕೆ.ಜಿ.ರಮ್ಯಾ, ಪ್ರೇಮ ರಾಘವಯ್ಯ ಅವರ ತಂಡದವರು ನಾಡಗೀತೆ ಹಾಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.1 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ…

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಟೈಲರಿಂಗ್ ಯಂತ್ರೋಪಕರಣ ವಿತರಣೆ*

ಸೆಪ್ಟೆಂಬರ್ 1, 2026

*ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*

ಸೆಪ್ಟೆಂಬರ್ 1, 2026

*ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   

ಸೆಪ್ಟೆಂಬರ್ 1, 2026

*31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*

ಸೆಪ್ಟೆಂಬರ್ 1, 2026

*ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*

ಸೆಪ್ಟೆಂಬರ್ 1, 2026

*ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*

ಸೆಪ್ಟೆಂಬರ್ 1, 2026

*ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*

ಸೆಪ್ಟೆಂಬರ್ 1, 2026

*ಸಣ್ಣ ಪ್ರಮಾಣದ ಬೆಟ್ಟ ಕುಸಿತ*

ಸೆಪ್ಟೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.