Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಅರಣ್ಯ ಅಧಿಕಾರಿಗಳು ಕಾನೂನು ಮೀರಬಾರದು : ಕೊಡಗಿನ ಜನ ಆತಂಕ ಪಡುವ ಅಗತ್ಯವಿಲ್ಲ : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅಭಯ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಅರಣ್ಯ ಅಧಿಕಾರಿಗಳು ಕಾನೂನು ಮೀರಬಾರದು : ಕೊಡಗಿನ ಜನ ಆತಂಕ ಪಡುವ ಅಗತ್ಯವಿಲ್ಲ : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅಭಯ

ಅಕ್ಟೋಬರ್ 31, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಅ.31 : ಹುಲಿ ಉಗುರು ಸೇರಿದಂತೆ ವನ್ಯಜೀವಿ ಉತ್ಪನ್ನಗಳಿಗೆ ಸಂಬಂಧಿಸಿದಂತೆ ಅರಣ್ಯ ಅಧಿಕಾರಿಗಳು ಯಾವುದೇ ಕಾರಣಕ್ಕು ಕಾನೂನು ಮೀರಬಾರದು. ಈ ವಿಚಾರದಲ್ಲಿ ಕೊಡಗಿನ ಜನ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿರುವ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು, ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿವರೊಂದಿಗೆ ಚರ್ಚಿಸಿ ಗೊಂದಲಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ವನ್ಯಜೀವಿ ಉತ್ಪನ್ನಗಳ ವಿಚಾರದಲ್ಲಿ ಅರಣ್ಯ ಅಧಿಕಾರಿಗಳಿಗೆ ಸಚಿವರು ಯಾವುದೇ ನಿರ್ದೇಶನ ನೀಡಿಲ್ಲ. ಅಧಿಕಾರಿಗಳು ತಮಗಿಷ್ಟ ಬಂದಂತೆ ವರ್ತಿಸುತ್ತಿದ್ದು, ಕಾನೂನು ಮೀರುತ್ತಿರುವುದು ಕಂಡು ಬಂದಿದೆ. ನಟ ಜಗ್ಗೇಶ್ ಅವರ ಪ್ರಕರಣ ಹೈಕೋರ್ಟ್‍ನಲ್ಲಿರುವುದರಿಂದ ಇದು ಇತ್ಯರ್ಥವಾಗುವವರೆಗೆ ಅಧಿಕಾರಿಗಳು ಕಾರ್ಯಾಚರಣೆ ಮುಂದುವರೆಸಬಾರದು ಎಂದು ಒತ್ತಾಯಿಸಿದರು.
ಈ ವಿಚಾರವಾಗಿ ಮುಖ್ಯಮಂತ್ರಿಗಳು ಹಾಗೂ ಅರಣ್ಯ ಅಧಿಕಾರಿಗಳೊಂದಿಗೆ ಚರ್ಚಿಸಿ ವಾಸ್ತವ ಸ್ಥಿತಿಗತಿಯನ್ನು ಮನವರಿಕೆ ಮಾಡಿಕೊಡಲಾಗುವುದು ಮತ್ತು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಮನವಿ ಮಾಡಿಕೊಳ್ಳಲಾಗುವುದು. ಪೂರ್ವಜರ ಕಾಲದಿಂದಲೂ ಇರುವ ವನ್ಯಜೀವಿ ಉತ್ಪನ್ನಗಳಿಗೆ ಕಾನೂನಿನಲ್ಲಿ ರಿಯಾಯಿತಿ ಇದೆ. ದಾರಿಯಲ್ಲಿ ಹೋಗುವಾಗ ಹುಲಿ ಉಗುರು ಬಿದ್ದು ಸಿಕ್ಕಿತೆಂದರೆ ಅದು ಅಪರಾಧವಾಗಲು ಸಾಧ್ಯವಿಲ್ಲ. ಮೊದಲು ಅಧಿಕಾರಿಗಳು ಕಾನೂನನ್ನು ಅರಿತುಕೊಳ್ಳಬೇಕು. ಕಾನೂನು ಇರುವುದು ಜನರನ್ನು ರಕ್ಷಣೆ ಮಾಡಲು, ಆದ್ದರಿಂದ ಕೊಡಗಿನ ಜನ ಆತಂಕಕ್ಕೆ ಒಳಗಾಗಬೇಕಾದ ಅಗತ್ಯವಿಲ್ಲ ಎಂದರು.
::: ಅಭಿವೃದ್ಧಿ ಆರಂಭ :::
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳನ್ನು ಪೂರೈಸಲು ಸುಮಾರು 4 ತಿಂಗಳ ಕಾಲ ಆರ್ಥಿಕ ಹೊರೆಯಾಗಿತ್ತು. ಆದರೆ ಈಗ ಎಲ್ಲವೂ ಸರಿಯಾಗಿದ್ದು, ಅಭಿವೃದ್ಧಿ ಕಾರ್ಯಗಳು ಆರಂಭಗೊಳ್ಳಲಿವೆ. ವಿವಿಧ ಕಾಮಗಾರಿಗಳಿಗೆ ಕ್ರಿಯಾ ಯೋಜನೆ ತಯಾರಾಗುತ್ತಿದ್ದು, ಅನುದಾನ ಬಿಡುಗಡೆಯಾಗಲಿದೆ. ಕೊಡಗಿನಲ್ಲೂ ಅಭಿವೃದ್ಧಿ ಕಾರ್ಯಗಳು ವೇಗವನ್ನು ಪಡೆದುಕೊಳ್ಳಲಿದೆ ಎಂದು ಪೊನ್ನಣ್ಣ ಸ್ಪಷ್ಟಪಡಿಸಿದರು.
::: ಲಂಚ ಕೇಳಿದರೆ ವಿಡಿಯೋ ಮಾಡಿ :::
ಜಿಲ್ಲೆಯಲ್ಲಿ ಭ್ರಷ್ಟಾಚಾರ ಪ್ರಕರಣಗಳು ನಿಯಂತ್ರಣಕ್ಕೆ ಬಂದಿದೆ, ವಿರಾಜಪೇಟೆ ಕ್ಷೇತ್ರದಲ್ಲಿ ಲಂಚದ ಕುರಿತು ಯಾವುದೇ ದೂರುಗಳು ಕೇಳಿ ಬಂದಿಲ್ಲ. ಭ್ರಷ್ಟಾಚಾರ ನಿರ್ಮೂಲನೆ ಕೇವಲ ನನ್ನಿಂದ ಮಾತ್ರ ಸಾಧ್ಯವಿಲ್ಲ, ಜನರು ಕೂಡ ಜಾಗೃತರಾಗಬೇಕು. ಲಂಚ ಕೇಳಿದಾಕ್ಷಣ ನೀಡದೆ ಅದನ್ನು ಪ್ರತಿಭಟಿಸಬೇಕು, ಧ್ವನಿ ಮುದ್ರಣ ಅಥವಾ ವಿಡಿಯೋ ರೆಕಾರ್ಡ್ ಮಾಡಿಕೊಳ್ಳಬೇಕು. ಸೂಕ್ತ ಸಾಕ್ಷ್ಯ ಸಹಿತ ದೂರು ನೀಡಿದರೆ ನಾನು ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲು ಹಿಂಜರಿಯುವುದಿಲ್ಲ ಎಂದು ಅವರು ತಿಳಿಸಿದರು.
ಈಗಾಗಲೇ ಲೋಕಾಯುಕ್ತ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಭ್ರಷ್ಟಾಚಾರದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿರುವುದಾಗಿ ಹೇಳಿದರು.
::: ಆಪರೇಷನ್ ನಡೆಯಲ್ಲ :::
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಸಂಪೂರ್ಣ ಬಹುಮತವಿದೆ, ಆಪರೇಷನ್ ಕಮಲ ಮಾಡಲು ಸಾಧ್ಯವಿಲ್ಲ. 25 ಸಂಸದರನ್ನು ಹೊಂದಿರುವ ಬಿಜೆಪಿ 19 ಶಾಸಕರನ್ನು ಹೊಂದಿರುವ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದೆ. ಇದು ಸಂಸದರು ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡದೆ ಇರುವುದಕ್ಕೆ ಸಾಕ್ಷಿಯಾಗಿದೆ. ಅಭಿವೃದ್ಧಿ ಮಾಡಿದ್ದರೆ ಮೈತ್ರಿ ಇಲ್ಲದೆ ಗೆಲ್ಲಬಹುದಾಗಿತ್ತು, ಆದರೆ ಸೋಲಿನ ಹತಾಶೆಯಿಂದ ಮೈತ್ರಿ ಮಾಡಿಕೊಳ್ಳಲಾಗಿದೆ ಎಂದು ವ್ಯಂಗ್ಯವಾಡಿದರು.
ತಮ್ಮ ಪಕ್ಷವನ್ನು ಉಳಿಸಿಕೊಳ್ಳುವುದಕ್ಕಾಗಿ ಮೈತ್ರಿ ಮಾಡಿಕೊಂಡಿರುವುದಾಗಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿಕೊಂಡಿದ್ದಾರೆ. ಇಲ್ಲಿ ಜನಹಿತದ ಬದಲು ಸ್ವಾರ್ಥ ರಾಜಕಾರಣ ಎದ್ದು ಕಾಣುತ್ತಿದೆ ಎಂದು ಟೀಕಿಸಿದ ಪೊನ್ನಣ್ಣ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸುಭದ್ರವಾಗಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ, ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೊಲ್ಯದ ಗಿರೀಶ್, ಕೆಪಿಸಿಸಿ ಪ್ರಮುಖ ಟಿ.ಪಿ.ರಮೇಶ್ ಹಾಗೂ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ.ಇಸ್ಮಾಯಿಲ್ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಗಗನಕ್ಕೇರಿದ ಬೇಳೆಕಾಳುಗಳ ಬೆಲೆ; ಹಬ್ಬದ ಸಂಭ್ರಮಕ್ಕೆ ಬೆಲೆ ಏರಿಕೆಯ ಬರೆ!

ಅಕ್ಟೋಬರ್ 17, 2026

ಬೇಟೋಳಿ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ; ವನದುರ್ಗೆಗೆ ವಿಶೇಷ ಪೂಜೆ

ಅಕ್ಟೋಬರ್ 17, 2026

ಮೈಸೂರು ದಸರಾ ಕಂಬಳಕ್ಕೆ ತೆರಳುವ ಕೋಣಗಳಿಗೆ ಮಡಿಕೇರಿಯಲ್ಲಿ ಸ್ವಾಗತ

ಅಕ್ಟೋಬರ್ 17, 2026

ಬೇಟೋಳಿ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ; ವನದುರ್ಗೆಗೆ ವಿಶೇಷ ಪೂಜೆ

ಅಕ್ಟೋಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಅ.17: ಸಮೀಪದ ಬೇಟೋಳಿ ಗ್ರಾಮದ ರಾಮನಗರದಲ್ಲಿರುವ ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ…

ಮೈಸೂರು ದಸರಾ ಕಂಬಳಕ್ಕೆ ತೆರಳುವ ಕೋಣಗಳಿಗೆ ಮಡಿಕೇರಿಯಲ್ಲಿ ಸ್ವಾಗತ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಮಕ್ಕಳ ದಸರಾ ಸಂಭ್ರಮ : ವಿದ್ಯಾರ್ಥಿಗಳ ಪ್ರತಿಭೆಗೆ ಪೋಷಕರ ಪ್ರೋತ್ಸಾಹ ಅಗತ್ಯ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 16, 2026

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.