Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ*

ಅಕ್ಟೋಬರ್ 31, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.31 : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿ ಬೋಧಕ ಆಸ್ಪತ್ರೆ, ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರ ಕುಶಾಲನಗರ, ಪುರಸಭೆ ವತಿಯಿಂದ ಜಿಲ್ಲಾ ಮಟ್ಟದ ಆಯುಷ್ಮಾನ್ ಭವ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

ಕುಶಾಲನಗರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದ ಶಿಬಿರದಲ್ಲಿ ಸಾಮಾನ್ಯ ವೈದಶಾಸ್ತ್ರ, ಶಸ್ತ್ರ ಚಿಕಿತ್ಸೆ, ಕಣ್ಣು, ಪ್ರಸೂತಿ ಮತ್ತು ಸ್ತ್ರೀ ರೋಗ, ಮಕ್ಕಳ, ಚರ್ಮ ರೋಗ, ಕಿವಿ ಮೂಗು ಗಂಟಲು, ಮೂಳೆ ಮತ್ತು ಕೀಲು, ಸಮುದಾಯ ವ್ಯೆದ್ಯಕೀಯ, ದಂತ, ಮಾನಸಿಕ ರೋಗ, ಆಸಾಂಕ್ರಾಮಿಕ ರೋಗಗಳ ನುರಿತ ತಜ್ಞ ವ್ಯೆದ್ಯರು ವೈದ್ಯಕೀಯ ಸೇವೆಯನ್ನು ನೀಡಲಾಯಿತು.

ಸುಮಾರು 250 ಕ್ಕಿಂತ ಹೆಚ್ಚು ಹೊರ ರೋಗಿಗಳ ವ್ಯೆದ್ಯರ ಭೇಟಿ, 20 ಯುಡಿಐಡಿ ಕಾರ್ಡ್ ಗಳು, 125 ಕ್ಕಿಂತ ಹೆಚ್ಚಿನ ಜನರು ಆಸಾಂಕ್ರಾಮಿಕ ರೋಗಗಳ ಪರೀಕ್ಷೆಯನ್ನು ಸಾರ್ವಜನಿಕರಿಗೆ ಕಲ್ಪಿಸಿಕೊಡಲಾಯಿತು ಹಾಗೂ ಹೆಚ್ಚಿನ ಚಿಕಿತ್ಸೆಗಾಗಿ ವ್ಯೆದ್ಯಕೀಯ ಕಾಲೇಜು ಮಡಿಕೇರಿಗೆ 34 ರೋಗಿಗಳನ್ನು ಕಳುಹಿಸಲಾಯಿತು.

ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದ

ಕುಶಾಲನಗರದ ಸಮುದಾಯ ಆರೋಗ್ಯ ಕೇಂದದ ಆಡಳಿತ ವೈದ್ಯಾಧಿಕಾರಿ ಡಾ.ಎಂ.ಎನ್.ಮಧುಸೂದನ್ ಮಾತನಾಡಿ, ಆಯುಷ್ಮಾನ್ ಭವ ಕಾರ್ಯಕ್ರಮದ ಅಡಿಯಲ್ಲಿ ನಡೆಯುವ ಈ ಶಿಬಿರವು ಕುಶಾಲನಗರದ ಸುತ್ತಮುತ್ತ ಹಲವು ಹಾಡಿಗಳು ಹಾಗೂ ಹೆಚ್ಚಿನ ಜನಸಂಖ್ಯೆ ಇರುವ ಪ್ರದೇಶವಾದ್ದರಿಂದ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಹಾಗೂ ಈ ಶಿಬಿರದ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಲು ತಿಳಿಸಿದರು.

ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ನಂಜುಂಡಯ್ಯ ಶಿಬಿರದ ಮೇಲ್ವಿಚಾರಣೆಯನ್ನು ಮಾಡಿದರು.

ಆಯುಷ್ಮಾನ್ ಭವ ಜಿಲ್ಲಾ ನೋಡಲ್ ಅಧಿಕಾರಿ ಡಾ. ರಾಮಚಂದ್ರ ಕಾಮತ್ ಮಾತನಾಡಿ, ಪ್ರಧಾನ ಮಂತ್ರಿಗಳು ಆಯುಷ್ಮಾನ್ ಭವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು, ಸೆಪ್ಟೆಂಬರ್ ನಿಂದ ಡಿಸೆಂಬರ್ ತಿಂಗಳವರೆಗೂ ಜಿಲ್ಲೆಯ ವಿವಿಧ ಕಡೆ ಆರೋಗ್ಯ ಕಾರ್ಯಕ್ರಮಗಳು ಹಾಗೂ ಶಿಬಿರಗಳನ್ನು ಆಯೋಜನೆ ಮಾಡಿ ಎಲ್ಲರಿಗೂ ಉತ್ತಮ ಆರೋಗ್ಯ ಸೇವೆಯನ್ನು ಒದಗಿಸುವುದು ನಮ್ಮ ಗುರಿ ಹಾಗೂ ಕೊಡಗು ವ್ಯೆದ್ಯಕೀಯ ಕಾಲೇಜಿನಲ್ಲಿ ಸಿಗುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.

ಈ ರೀತಿಯ ಆರೋಗ್ಯ ಶಿಬಿರಗಳನ್ನು ನಡೆಸುವುದರಿಂದ ಈ ಭಾಗದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವುದು ನಮ್ಮ ಸಂಸ್ಥೆಯ ಉದ್ದೇಶ ಹಾಗೂ ಈ ಶಿಬಿರದಲ್ಲಿ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆ ಬೇಕಾದಲ್ಲಿ ವ್ಯೆದ್ಯಕೀಯ ಕಾಲೇಜು ಬೋಧಕ ಆಸ್ಪತ್ರೆ ಮಡಿಕೇರಿಗೆ ಬರಲು ತಿಳಿಸಿದ ಅವರು, ಬರುವ ಸಂದರ್ಭದಲ್ಲಿ ಆಯುಷ್ಮಾನ್ ಕಾರ್ಡ್ / ಪಡಿತರ ಚೀಟಿ ಹಾಗೂ ಆಧಾರ್ ಕಾರ್ಡ್ ತಂದಲ್ಲಿ ಎಲ್ಲಾ ರೀತಿಯ ಪರೀಕ್ಷೆ ಹಾಗೂ ಚಿಕಿತ್ಸೆಗಳು ಉಚಿತವಾಗಿ ದೊರೆಯುವುದು ಎಂದು ತಿಳಿಸಿದರು.

ಕುಶಾಲನಗರ ತಾಲ್ಲೂಕು ಪ್ರಭಾರ ಆರೋಗ್ಯಧಿಕಾರಿ ಡಾ. ಇಂದುಧರ್ ಮಾತನಾಡಿ, ತಾಲ್ಲೂಕಿನಲ್ಲಿ ಪ್ರತಿ ಮಂಗಳವಾರ ತಜ್ಞ ವೈದ್ಯರು ಹಾಗೂ ಆಸ್ಪತ್ರೆಯಲ್ಲಿ ಲಭ್ಯವಿರುವ ವೈದ್ಯರೊಂದಿಗೆ ತಾಲ್ಲೂಕಿನ ಎಲ್ಲಾ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳು, ಪ್ರಾಥಮಿಕ, ಸಮುದಾಯ, ತಾಲ್ಲೂಕು, ಆಸ್ಪತ್ರೆಗಳಲ್ಲಿ ಆರೋಗ್ಯ ಶಿಬಿರಗಳನ್ನು ನಡೆಸುತ್ತಿದ್ದು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಹಾಗೂ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿ ಜಿಲ್ಲೆಯ ಎಲ್ಲಾ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಇದ್ದು ಪಡಿತರ ಚೀಟಿ ಆಧಾರ್ ಕಾರ್ಡ್ ನೀಡಿ ಚಿಕಿತ್ಸೆ ಪಡೆಯಬಹುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಇಎನ್‍ಟಿ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಶ್ರೀಕಾಂತ್, ಕೀಲು ಮೂಳೆ ವಿಭಾಗದ ಡಾ. ಎಚ್.ಎಸ್.ಅನುಪ್, ಕಣ್ಣಿನ ವಿಭಾಗದ ಡಾ.ಮೊಹಮ್ಮದ್ ಕಾಯುಂ, ಸಮುದಾಯ ವೈದ್ಯಶಾಸ್ತ್ರದ ಡಾ. ಕೃತಿಕಾ ಹಾಗೂ ವ್ಯೆದ್ಯಕೀಯ ಕಾಲೇಜಿನ ವ್ಯೆದ್ಯರು, ವ್ಯೆದ್ಯಕೀಯ ವಿದ್ಯಾರ್ಥಿಗಳು, ಅರೆ ವ್ಯೆದ್ಯಕೀಯ ವಿದ್ಯಾರ್ಥಿಗಳು, ಸಿಬ್ಬಂದಿಗಳು, ಸಮುದಾಯ ಆರೋಗ್ಯ ಕೇಂದ್ರ ಕುಶಾಲನಗರದ ವ್ಯೆದ್ಯರು ಹಾಗೂ ಸಿಬ್ಬಂದಿಗಳು, ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಸಿಬ್ಬಂದಿಗಳು, ಕುಶಾಲನಗರ ಪುರಸಭೆಯ ಅಧಿಕಾರಿಗಳು ಕುಶಾಲನಗರ ವ್ಯಾಪ್ತಿಯ ಸಾರ್ವಜನಿಕರು ಹಾಜರಿದ್ದರು. ಕುಶಾಲನಗರ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ ವಂದಿಸಿದರು.

ಶಿಬಿರದಲ್ಲಿ ಕೊಡಗು ವ್ಯೆದ್ಯಕೀಯ ವಿಜ್ಞಾನಗಳ ಸಂಸ್ಥೆಯ ವತಿಯಿಂದ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆ, ಉಚಿತ ಆಯುಷ್ಮಾನ್ ಕಾರ್ಡ್ ಗಳ ನೋಂದಣಿ, ಉಚಿತ UDID ನೋಂದಣಿ, ದೇಹದಾನ, ನೇತ್ರದಾನ, ಅಂಗಾಂಗ ದಾನ ಕುರಿತು ಹಾಗೂ ಇನ್ನಿತರ ಯೋಜನೆಗಳ ಬಗ್ಗೆ ಆರೋಗ್ಯ ಮಿತ್ರರಾದ ಪ್ರತಿಭಾ ಹಾಗೂ ಮೈನಾ ಮಾಹಿತಿಯನ್ನು ನೀಡಿದರು. ಈ ಸಂದರ್ಭದಲ್ಲಿ 39 ಜನ ಅಂಗಾಗ ದಾನ ನೋಂದಣಿ ಮಾಡಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.