Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಲ್ಲುಬಾಣೆಯಲ್ಲಿ ಅಭಿನಂದನಾ ಕಾರ್ಯಕ್ರಮ : ಪ್ರತಿಯೊಬ್ಬರು ನಾಡಿನ ಅಭಿವೃದ್ಧಿಗೆ ಪೂರಕವಾಗಿ ಜವಬ್ದಾರಿ ನಿರ್ವಹಿಸಬೇಕು : ಶಾಸಕ ಎ.ಎಸ್.ಪೊನ್ನಣ್ಣ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಲ್ಲುಬಾಣೆಯಲ್ಲಿ ಅಭಿನಂದನಾ ಕಾರ್ಯಕ್ರಮ : ಪ್ರತಿಯೊಬ್ಬರು ನಾಡಿನ ಅಭಿವೃದ್ಧಿಗೆ ಪೂರಕವಾಗಿ ಜವಬ್ದಾರಿ ನಿರ್ವಹಿಸಬೇಕು : ಶಾಸಕ ಎ.ಎಸ್.ಪೊನ್ನಣ್ಣ*

ನವೆಂಬರ್ 1, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ನ.1 : ಜನತೆ ನಮ್ಮನ್ನು ಆಯ್ಕೆ ಮಾಡಿ ಕಳುಹಿಸುವುದು ನಾಡಿನ ಏಳಿಗೆ ಮತ್ತು ಅಭಿವೃದ್ಧಿಯನ್ನು ಪಡಿಸುವುದಕ್ಕಾಗಿ, ಶಾಸಕ ಒಬ್ಬನೇ ಏನನ್ನೂ ಮಾಡಲು ಸಾದ್ಯವಿಲ್ಲ, ಎಲ್ಲರೂ ಕೈಜೋಡಿಸಿ ನಾಡಿನ ಅಭಿವೃದ್ಧಿಗೆ ಪೂರಕವಾಗಿ ಜವಬ್ದಾರಿ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು, ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು.
ಕಲ್ಲುಬಾಣೆ ನಾಗರೀಕ ವೇದಿಕೆ ಹಾಗೂ ಕಲ್ಲುಬಾಯ್ಸ್ ತಂಡದ ವತಿಯಿಂದ ಕಲ್ಲುಬಾಣೆಯ ಬದ್ರಿಯ ಶಾಲಾ ಆವರಣದಲ್ಲಿ ನಡೆದ ನೂತನ ಶಾಸಕರಿಗೆ ಅಭಿನಂದನಾ ಸಮಾರಂಭ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಪ್ರಜಾಪ್ರಭುತ್ವವೆಂದರೆ ಸಾಮೂಹಿಕ ನಾಯಕತ್ವದಲ್ಲಿ ನಡೆಯಬೇಕಾಗಿರುವುದು. ನನ್ನ ಕ್ಷೇತ್ರದ ಅಭಿವೃದ್ಧಿಗೆ ಸದಾ ನಾನು ಬದ್ಧನಾಗಿರುತ್ತೇನೆ. ನಾನು ಗೆದ್ದರೆ ಸ್ವಚ್ಛ ಆಡಳಿತವನ್ನು ನೀಡುತ್ತೇನೆ ಎಂದು ಭರವಸೆ ಕೊಟ್ಟಿದ್ದೆ. ಅದೇ ರೀತಿ ನಡೆಯುವವನಿದ್ದೇನೆ. ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಗ್ಯಾರೆಂಟಿ ಕಾರ್ಡ್ ಬಗ್ಗೆ ಯಾವುದೇ ಗೊಂದಲ ಬೇಡ. ನಮ್ಮ ಸರ್ಕಾರ ಮಾಡಿರುವ ಅಷ್ಟು ಗ್ಯಾರೆಂಟಿ ಯೋಜನೆಗಳು ಸಂವಿಧಾನಬದ್ಧವಾಗಿದ್ದು, ರಾಜ್ಯದ ಜನತೆಯನ್ನು ತಲುಪಿದೆ ಎಂದರು.
ಚುನಾವಣೆ ಪೂರ್ವದಲ್ಲಿಕಲ್ಲುಬಾಣೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಹಲವಾರು ಸಮಸ್ಯೆಗಳಿರುವುದು ಗಮನಕ್ಕೆ ಬಂದಿತ್ತು. ಗ್ರಾಮಸ್ಥರು ಚುನಾವಣೆ ಬಹಿಷ್ಕಾರ ಮಾಡುವುದಾಗಿ ನಿರ್ದರಿಸಿದ್ದರು. ಗ್ರಾಮಸ್ಥರ ಕೋರಿಕೆಯಂತೆ ಗ್ರಾಮದ ಅಭಿವೃದ್ಧಿಯ ನಿಟ್ಟಿನಲ್ಲಿ ಸಹಕರಿಸಿವುದಾಗಿ ಭರವಸೆ ನೀಡಿದ್ದೆ. ಅದರಂತೆ ಈ ವಾರ್ಡ್‍ನ ರಸ್ತೆ, ಕ್ರೀಡಾ ಮೈದಾನದ ಬೇಡಿಕೆ ಸೇರಿದಂತೆ ಹಲವಾರು ಸಮಸ್ಯೆಗಳಿಗೆ ಪರಿಹಾರ ಒದಗಿಸಿ ಕೊಡುತ್ತೇನೆ ಎಂದು ತಿಳಿಸಿದರು.
ಕೊಡಗಿನ ಅಭಿವೃದ್ಧಿಗೆ ಕಾರ್ಯನಿರ್ವಹಿಸುವುದಾಗಿ ಹಾಗೂ ಭ್ರಷ್ಟಾಚಾರದ ರಹಿತ ಆಡಳಿತವನ್ನು ನೀಡುವುದಾಗಿ ಹೇಳಿದರು. ಅಲ್ಲದೆ ಸಮಾಜ ಬಾಂಧವರ ಬೇಡಿಕೆಗಳಿಗೆ ಸ್ಪಂದಿಸುವುದಾಗಿ ಭರವಸೆ ನೀಡಿದರು.

ಆರ್ಜಿ ಗ್ರಾ.ಪಂ ಸದಸ್ಯ, ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಕೊಡಗು ಜಿಲ್ಲಾ ಅಧ್ಯಕ್ಷ ಕೆ.ಟಿ.ಬಷೀರ್ ಮಾತನಾಡಿ, ಚುನಾವಣೆ ಬಳಿಕ ಕಲ್ಲುಬಾಣೆ ಬೂತ್‍ಗೆ ಶಾಸಕ ಪೊನ್ನಣ್ಣ ಆಗಮಿಸಿರುವುದು ಸಂತೋಷದಾಯಕ ವಿಚಾರ, ಕಲ್ಲುಬಾಣೆಯ ನಾಗರೀಕರಿಗೆ ಇರುವ ಮೂಲಭೂತ ಸೌಲಭ್ಯಗಳ ಕೊರತೆ ಬಗ್ಗೆ ಚುನಾವಣೆ ಪೂರ್ವದಲ್ಲೇ ಶಾಸಕ ಪೊನ್ನಣ್ಣ ಅವರ ಗಮನ ಸೆಳೆಯಲಾಗಿತ್ತು. ಬಹಳ ವರ್ಷಗಳಿಂದ ಇಲ್ಲಿನ ರಸ್ತೆ ಹದಗೆಟ್ಟು ಸಾರ್ವಜನಿಕರಿಗೆ ಸಂಚಾರ ದುಸ್ಥರವಾಗಿದೆ. ಇತ್ತಿಚೆಗೆ ಅದನ್ನು ಸರಿಪಡಿಸುವ ಕೆಲಸವಾಗಿದ್ದರೂ ಇದೀಗ ಮತ್ತೆ ಡಾಂಬರೀಕರಣ ಕಿತ್ತುಹೋಗಿದ್ದು ಒಡಾಟಕ್ಕೆ ಅನಾನುಕೂಲವಾಗಿದೆ. ರಸ್ತೆ ಅಗಲೀಕರಣವಾಗಬೇಕು, ಕಲ್ಲುಬಾಣೆಯಿಂದ ಆರ್ಜಿಗೆ ಸಂಪರ್ಕ ಕಲ್ಪಿಸಲು ರಸ್ತೆ ನಿರ್ಮಾಣವಾಗಬೇಕು, ಇಲ್ಲಿನ ಮಕ್ಕಳಿಗೆ ಆಟವಾಡಲು ಕ್ರೀಡಾಂಗಣದ ವ್ಯವಸ್ಥೆ, ಸಮುದಾಯ ಆರೋಗ್ಯ ಕೇಂದ್ರದ ವ್ಯವಸ್ಥೆ ಆಗಬೇಕು ಎಂದರು.
ಕೊಡಗು ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಆರ್.ಕೆ.ಅಬ್ದುಲ್ ಸಲಾಂ ಮಾತನಾಡಿ, ಕಳೆದ ಇಪ್ಪತ್ತು ವರ್ಷಗಳಿಂದ ಕಾಂಗ್ರೆಸ್ ಗೆಲ್ಲಬೇಕು ಎನ್ನುವುದು ನಮ್ಮೇಲರ ಕನಸಾಗಿತ್ತು. ಅದು ನನಸಾಗಿದೆ. ಈ ಚುನಾವಣೆಯಲ್ಲಿ ಪ್ರತಿಯೊಬ್ಬ ಕಾರ್ಯಕರ್ತನು ಮುತುವರ್ಜಿ ವಹಿಸಿ ಕೆಲಸ ಮಾಡಿದ ಕಾರಣ ಗೆಲುವು ನಮಗೆ ಒಲಿದಿದೆ. ಕಲ್ಲುಬಾಣೆ ಬೂತ್‍ನಿಂದ ಹೆಚ್ಚು ಮತಗಳು ಶಾಸಕರಿಗೆ ಲಭಿಸಿದೆ. ಮುಂದಿನ ದಿನಗಳಲ್ಲಿ ಕಲ್ಲುಬಾಣೆಯ ಅಭಿವೃದ್ಧಿಗೆ ಶಾಸಕರು ವಿಶೇಷ ಒತ್ತು ನೀಡಿ ಹೆಚ್ಚಿನ ಅನುದಾನ ನೀಡಿ ಅಭಿವೃಧ್ದಿಗೊಳಿಸಬೇಕು ಎಂದರು.
ಆರ್ಜಿ ಗ್ರಾ.ಪಂ ಸದಸ್ಯ ಶಹದೀರ್ ಅಲಿ ಕಲ್ಲುಬಾಣೆಯ ಜ್ವಲಂತ ಸಮಸ್ಯೆಗಳು, ರಸ್ತೆ ವಿಸ್ತರಣೆ ಸಂಭಂಧಿಸಿದ ಕುರಿತು ಮನವಿ ಸಲ್ಲಿಸಿದರು.
ಇದೇ ಸಂದರ್ಭ ಕಲ್ಲುಬಾಣೆಯ ಮಹಿಳೆಯರ ಸಂಘಟನೆ ವತಿಯಿಂದ ವಿರಾಜಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಇರುವ ವೈದ್ಯರುಗಳ ಕೊರತೆ ಹಾಗೂ ಇನ್ನಿತರ ಸಮಸ್ಯೆಗಳ ಬಗ್ಗೆ ಶಾಸಕ ಪೊನ್ನಣ್ಣ ಅವರಿಗೆ ಮನವಿ ಸಲ್ಲಿಸಿದರು.
ವೇದಿಕೆಯಲ್ಲಿ ಹಿರಿಯರಾದ ಎಂ.ಇ.ಮೊಯಿದ್ದೀನ್ ಕುಟ್ಟಿ, ಕಲ್ಲುಬಾಯ್ಸ್ ತಂಡದ ಅಧ್ಯಕ್ಷ ರಹೀಂ, ಕಾಂಗ್ರೆಸ್ ವಲಯ ಅಧ್ಯಕ್ಷ ಹಾಗೂ ಆರ್ಜಿ ಗ್ರಾ.ಪಂ ಮಾಜಿ ಸದಸ್ಯ ಜಾಫರ್, ಆರ್ಜಿ ಗ್ರಾ.ಪಂ ಸದಸ್ಯ ಉಪೇಂದ್ರ, ಅನೂಪ್, ಅನ್ ಜೋವಿಟಾ, ಆರ್ಜಿ ಗ್ರಾ.ಪಂ ಮಾಜಿ ಅಧ್ಯಕ್ಷೆ ಹೆಚ್.ಬಿ.ಪಾರ್ವತಿ, ಸೇರಿದಂತೆ ಇತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕಲ್ಲುಬಾಣೆಯ ಗ್ರಾಮಸ್ಥರು, ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.