Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಸಾಕ್ಷ್ಯಚಿತ್ರ ಪ್ರದರ್ಶನ : ಕೆಟ್ಟ ಸಂಸ್ಕೃತಿಯ ವಿರುದ್ಧ ಕಾರ್ಯಯೋಜನೆ ಸಿದ್ಧವಾಗಬೇಕು : ಪ್ರಕಾಶ್ ಕಾರ್ಯಪ್ಪ ಅಭಿಮತ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಸಾಕ್ಷ್ಯಚಿತ್ರ ಪ್ರದರ್ಶನ : ಕೆಟ್ಟ ಸಂಸ್ಕೃತಿಯ ವಿರುದ್ಧ ಕಾರ್ಯಯೋಜನೆ ಸಿದ್ಧವಾಗಬೇಕು : ಪ್ರಕಾಶ್ ಕಾರ್ಯಪ್ಪ ಅಭಿಮತ

ನವೆಂಬರ್ 2, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ನ.2 : ನಮ್ಮ ಸಂಸ್ಕೃತಿಯೊಳಗಿನ ಮೂಲಾಂಶಗಳು ದಾಖಲಾತಿಗೊಳ್ಳುವ ಅಗತ್ಯ ಇದೆ. ಆದರೆ ಕೇಡನ್ನು ಮುಂದಿಡುವ ಸಂಸ್ಕೃತಿಯನ್ನು ಇಲ್ಲವಾಗಿಸುವ ನಿಟ್ಟಿನಲ್ಲಿ ಕಾರ್ಯಯೋಜನೆಯನ್ನು ರೂಪಿಸುವ ಪ್ರಯತ್ನವನ್ನು ಮಾಡಬೇಕಾಗಿದೆ. ಅಂತಹ ಪ್ರಯತ್ನವನ್ನು ಸಂಶೋಧಕಿ ಪೂರ್ಣಿಮಾ ರವಿ ಅವರು ತಮ್ಮ “ಗಾಡ್ಸ್ ವೈವ್ಸ್ ಮೆನ್ಸ್ ಸ್ಲೇವ್” ಎಂಬ ಸಾಕ್ಷ್ಯಚಿತ್ರದ ಮೂಲಕ ಮಾಡಿ ತೋರಿಸಿದ್ದಾರೆ ಎಂದು ಖ್ಯಾತ ಚಲನಚಿತ್ರೋದ್ಯಮಿ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಅವರು ಅಭಿಪ್ರಾಯಪಟ್ಟಿದ್ದಾರೆ.
ಮಡಿಕೇರಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸ್ನಾತಕೋತ್ತರ ಇಂಗ್ಲೀಷ್ ಅಧ್ಯಯನ ಮತ್ತು ಸಂಶೋಧನಾ ವಿಭಾಗವು ಇಂಗ್ಲೀಷ್ (ಯುಜಿ), ಸಮಾಜಶಾಸ್ತ್ರ, ಸಮಾಜಕಾರ್ಯ, ಕನ್ನಡ ಹಾಗೂ ಪತ್ರಿಕೋದ್ಯಮ ವಿಭಾಗದ ಸಹಯೋಗದಲ್ಲಿ ಆಯೋಜಿಸಿದ “ಗಾಡ್ಸ್ ವೈವ್ಸ್ ಮೆನ್ಸ್ ಸ್ಲೇವ್ ಸಾಕ್ಷ್ಯಚಿತ್ರ ಪ್ರದರ್ಶನ ಕಾರ್ಯಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಸಾಕ್ಷ್ಯಚಿತ್ರ ತಯಾರಿಸಿದ ಪೂರ್ಣಿಮಾ ರವಿ ಅವರನ್ನು ಅಭಿನಂದಿಸಿ ಅಂತರರಾಷ್ಟ್ರೀಯ ಮಟ್ಟದ ಚಿತ್ರೋತ್ಸವಕ್ಕೆ ಸಾಕ್ಷ್ಯಚಿತ್ರವನ್ನು ಕಳುಹಿಸುವಂತೆ ಸಲಹೆ ನೀಡಿದರು.
ಸಂಶೋಧನಾ ಮಾರ್ಗದರ್ಶಕರಾದ ಡಾ.ನಯನ ಕಶ್ಯಪ್ ಮಾತನಾಡಿ ಪೂರ್ಣಿಮಾ ರವಿ ಅವರು ಇಂಗ್ಲೀಷ್ ಸಾಹಿತ್ಯ ಕೃತಿಗಳಲ್ಲಿ ದೇವದಾಸಿಗಳ ಬದುಕಿನ ಕುರಿತು ಸಾಹಿತ್ಯಕ ಅಧ್ಯಯನ ಕೈಗೊಳ್ಳುವ ಸಂದರ್ಭ ದಾಖಲಾತಿ ಪ್ರಕ್ರಿಯೆಯ ಹಿನ್ನೆಲೆಯಲ್ಲಿ ಈ ಸಾಕ್ಷ್ಯಚಿತ್ರವನ್ನು ತಯಾರಿಸಿದ್ದಾರೆ. ಸಾಕಷ್ಟು ಸಮಯ ಮತ್ತು ಹಣವನ್ನು ವ್ಯಯಿಸಿದ್ದಾರೆ ಎಂದರು.

ಪೂರ್ಣಿಮಾ ರವಿ ಮಾತನಾಡಿ ಪಿ.ಎಚ್.ಡಿ ಸಂಶೋಧನೆಯಿಂದ ಆಗಬಹುದಾದ ಪ್ರಯೋಜನ ಏನು ಎಂಬ ಪ್ರಶ್ನೆಯೇ ನನ್ನಲ್ಲಿ ಈ ಸಾಕ್ಷ್ಯಚಿತ್ರ ತಯಾರಿಕೆಗೆ ಅನುವು ಮಾಡಿಕೊಟ್ಟಿತು. ಸಾಕ್ಷ್ಯಚಿತ್ರದ ಮೂಲಕ ಜಾಗೃತಿ ಮೂಡಿಸುವ ಪ್ರಯತ್ನಕ್ಕೆ ಕೈ ಹಾಕಲಾಗಿದೆ. ಆಯ್ಕೆ ಮಾಡಿಕೊಂಡ ವಿಷಯ ಸೂಕ್ಷ್ಮವಾದ ಕಾರಣ ಸೆನ್ಸಾರ್ ಸರ್ಟಿಫಿಕೇಟ್ ಪಡೆದುಕೊಳ್ಳಲಾಯಿತು. ಈ ಸಾಕ್ಷ್ಯಚಿತ್ರದ ಮೂಲಕ ಸಾಮಾಜಿಕ ವ್ಯವಸ್ಥೆ ಬದಲಾಗಬೇಕು ಎಂಬ ಅಭಿಲಾಷೆ ನನ್ನದು. ದೇವದಾಸಿಯರ ಬದುಕಿಗೆ ಸರಕಾರ ಮತ್ತು ಸಮಾಜ ಆಶಾಕಿರಣವಾಗಬೇಕಾದ ಅಗತ್ಯವಿದೆ ಎಂದು ಪೂರ್ಣಿಮಾ ರವಿ ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾರ್ಯಪ್ಪ ಕಾಲೇಜು ಪ್ರಾಂಶುಪಾಲ ಮೇಜರ್ ಪ್ರೊ.ರಾಘವ ಬಿ. ಅವರು ಪ್ರತಿಯೊಬ್ಬರಿಗೂ ಸಾಮಾಜಿಕ ಅರಿವಿನ ಅಗತ್ಯವಿದೆ, ಇಲ್ಲದಿದ್ದರೆ ಬದಲಾವಣೆ ಸಾಧ್ಯವಿಲ್ಲ. ಶಿಕ್ಷಣದಿಂದ ಮಾತ್ರ ಸಮಸ್ಯೆಗಳಿಗೆ ಪರಿಹಾರ ಸಿಗಲು ಸಾಧ್ಯ. ಸಮಾಜದಲ್ಲಿ ಮಾತೆ, ಮಾತೃತ್ವಕ್ಕೆ ಹೆಚ್ಚಿನ ಬೆಲೆ ನೀಡಲಾಗಿದೆ. ಆದರೂ ಹೆಣ್ಣಿನ ಮೇಲೆ ದೌರ್ಜನ್ಯ ನಿರಂತರವಾಗಿ ನಡೆಯುತ್ತಲೇ ಇದೆ. ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣೆ ಆಗಬೇಕಾಗಿದೆ. ಆರ್ಥಿಕವಾಗಿ ಸುಧಾರಣಾವಾದಿ ನೆಲೆಗಳು ರೂಪುಗೊಳ್ಳಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.
ದೇವದಾಸಿ ಪದ್ಧತಿಯ ಚಾರಿತ್ರಿಕ ಹಿನ್ನೆಲೆಯನ್ನು ಕಾಲೇಜ್ ನ ಇಂಗ್ಲೀಷ್ ವಿಭಾಗದ ಸಂಯೋಜಕ ಪೂಣಚ್ಚ ಕೆ.ಎಂ ವಿವರಿಸಿದರು.
ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಮೋನಿಕಾ ಹಾಗೂ ಸಮಾಜ ಕಾರ್ಯ ವಿಭಾಗದ ಉಪನ್ಯಾಸಕಿ ಕಾಂಚನ ಅವರು ಕಾರ್ಯಕ್ರಮ ನಿರೂಪಿಸಿದರು. ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಗಾಯತ್ರಿ ಎ.ಎನ್ ವಂದಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಗಗನಕ್ಕೇರಿದ ಬೇಳೆಕಾಳುಗಳ ಬೆಲೆ; ಹಬ್ಬದ ಸಂಭ್ರಮಕ್ಕೆ ಬೆಲೆ ಏರಿಕೆಯ ಬರೆ!

ಅಕ್ಟೋಬರ್ 17, 2026

ಬೇಟೋಳಿ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ; ವನದುರ್ಗೆಗೆ ವಿಶೇಷ ಪೂಜೆ

ಅಕ್ಟೋಬರ್ 17, 2026

ಮೈಸೂರು ದಸರಾ ಕಂಬಳಕ್ಕೆ ತೆರಳುವ ಕೋಣಗಳಿಗೆ ಮಡಿಕೇರಿಯಲ್ಲಿ ಸ್ವಾಗತ

ಅಕ್ಟೋಬರ್ 17, 2026

ಬೇಟೋಳಿ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ; ವನದುರ್ಗೆಗೆ ವಿಶೇಷ ಪೂಜೆ

ಅಕ್ಟೋಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಅ.17: ಸಮೀಪದ ಬೇಟೋಳಿ ಗ್ರಾಮದ ರಾಮನಗರದಲ್ಲಿರುವ ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ…

ಮೈಸೂರು ದಸರಾ ಕಂಬಳಕ್ಕೆ ತೆರಳುವ ಕೋಣಗಳಿಗೆ ಮಡಿಕೇರಿಯಲ್ಲಿ ಸ್ವಾಗತ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಮಕ್ಕಳ ದಸರಾ ಸಂಭ್ರಮ : ವಿದ್ಯಾರ್ಥಿಗಳ ಪ್ರತಿಭೆಗೆ ಪೋಷಕರ ಪ್ರೋತ್ಸಾಹ ಅಗತ್ಯ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 16, 2026

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.