ಮಡಿಕೇರಿ ನ.3 : ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದು, ಇವರ ಅಂತಿಮ ದರ್ಶನ ಪಡೆಯಲು ಬರುತ್ತಿದ್ದ ಸಂಬಂಧಿಯೊಬ್ಬರು ಅಪಘಾತದಲ್ಲಿ ಮೃತಪಟ್ಟ ಘಟನೆ ನಡೆದಿದೆ.
ಸುಮಾರು 4 ದಿನಗಳ ಹಿಂದೆ ನಾಪತ್ತೆಯಾಗಿದ್ದ ಸುಂಟಿಕೊಪ್ಪ ಹೋಬಳಿಯ ಕೆದಕಲ್ ಗ್ರಾ.ಪಂ ವ್ಯಾಪ್ತಿಯ 7ನೇ ಮೈಲು ನಿವಾಸಿ ಪೌಲ್ ಡಿಸೋಜ ಅವರ ಮೃತ ದೇಹ ಸಮೀಪದ ತೋಟದ ಕೆರೆಯಲ್ಲಿ ಪತ್ತೆಯಾಗಿದೆ. ಮೃತದೇಹದಲ್ಲಿ ಭಾರವಾದ ಕಲ್ಲುಗಳನ್ನು ಕಟ್ಟಿಕೊಂಡಿರುವುದು ಗೋಚರಿಸಿದೆ. ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೃತರು ಪತ್ನಿ ಹಾಗೂ ಇಬ್ಬರು ಪತ್ರಿಯರನ್ನು ಅಗಲಿದ್ದಾರೆ.
::: ಸಂಬಂಧಿ ಸಾವು :::
ಈ ನಡುವೆ ಪೌಲ್ ಡಿಸೋಜ ಅವರ ಅಂತಿಮ ದರ್ಶನ ಪಡೆಯಲು ಬರುತ್ತಿದ್ದ ಅಣ್ಣನ ಮಗ ಸಿಲ್ವಿನ್ ಡಿಸೋಜ ಅವರು ಅಪಘಾತದಲ್ಲಿ ಕೊನೆಯುಸಿಳೆದಿದ್ದಾರೆ.
ತಾವು ಪ್ರಯಾಣಿಸುತ್ತಿದ್ದ ಕಾರು ಬಿಡದಿ ಬಳಿ ರಸ್ತೆ ಬದಿಯ ಡಿವೈಡರ್‍ಗೆ ಡಿಕ್ಕಿಯಾಗಿ ಮಗುಚಿಕೊಂಡಿದೆ. ಪರಿಣಾಮ ಕಾರಿನಡಿಯಲ್ಲಿ ಸಿಲುಕಿದ ಪೌಲ್ ಡಿಸೋಜ ಅವರು ಮೃತಪಟ್ಟರು. ಕಾರಿನಲ್ಲಿದ್ದ ಉಳಿದ ನಾಲ್ವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

















