Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರ : ಸಮ ಸಮಾಜದ ಪರಿಕಲ್ಪನೆ ಹನ್ನೆರಡನೇ ಶತಮಾನದ ಹೋರಾಟ ಇಂದಿಗೂ ಮುಂದುವರೆದಿರುವುದು ವಿಷಾದ : ಡಾ.ಸುನಿಲ್ ಕುಮಾರ್* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರ : ಸಮ ಸಮಾಜದ ಪರಿಕಲ್ಪನೆ ಹನ್ನೆರಡನೇ ಶತಮಾನದ ಹೋರಾಟ ಇಂದಿಗೂ ಮುಂದುವರೆದಿರುವುದು ವಿಷಾದ : ಡಾ.ಸುನಿಲ್ ಕುಮಾರ್* 

ನವೆಂಬರ್ 6, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ನ.6 : ಸಮಾನತೆಯ ಸಮಾಜ ನಿರ್ಮಾಣಕ್ಕಾಗಿ ಹನ್ನೆರಡನೇ ಶತಮಾನದಲ್ಲಿ ಬಸವಾದಿ ಶರಣರು ನಡೆಸಿದ ಹೋರಾಟ 800 ವರ್ಷಗಳು ಕಳೆದರೂ ಇಂದಿಗೂ ಕೂಡ ನಡೆಯುತ್ತಲೇ ಇದ್ದರೂ ಕೂಡ ಸಮ ಸಮಾಜ ಸಾಧ್ಯವಾಗುತ್ತಿಲ್ಲ ಎಂದು ಕುಶಾಲನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ  ಡಾ.ಸುನಿಲ್ ಕುಮಾರ್ ವಿಷಾದಿಸಿದರು.
ಕೊಡಗು ಜಿಲ್ಲಾ ವಚನ ಸಾಹಿತ್ಯ ವೇದಿಕೆ ವತಿಯಿಂದ ಸ್ಥಳೀಯ ಕನ್ನಡ ಭಾರತಿ ಪಿಯು ಕಾಲೇಜಿನಲ್ಲಿ  ಹಮ್ಮಿಕೊಂಡಿದ್ದ “ವಚನಗಳ ನಡಿಗೆ – ವಿದ್ಯಾರ್ಥಿಗಳ ಕಡೆಗೆ ” ಚಿಂತನಾ ಗೋಷ್ಠಿಯಲ್ಲಿ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದ ಅವರು, ಶತ ಶತಮಾನಗಳಿಂದ ಅದೆಷ್ಟೋ ಆಡಳಿತಗಳು, ಸರ್ಕಾರಗಳು ಬಂದು ಹೋದರೂ ಕೂಡ ಜಾತಿ, ಧರ್ಮ, ವರ್ಣ, ಬೇಧಗಳ ತಾರತಮ್ಯ ದೂರವಾಗಿಲ್ಲ. ವಿದ್ಯಾವಂತರಿಂದಲೇ ಸಮಾಜದಲ್ಲಿಂದು ಹೆಚ್ಚಿನ ಕೆಡುಕುಗಳು ಉಂಟಾಗುತ್ತಿವೆ ಹೊರತು ಅವಿದ್ಯಾವಂತರಿಂದಲ್ಲ. ದಯೆಯೇ ಧರ್ಮದ ಮೂಲ ಎಂದು ಬಸವಣ್ಣನವರು ಸಾರಿ ಹೋಗಿದ್ದಾರೆ. ಆದರೆ ಯುದ್ಧಗಳ ಹೆಸರಲ್ಲಿ ಮಕ್ಕಳಾದಿಯಾಗಿ ಜನರನ್ನು ಸಿಡಿಮದ್ದು ಗುಂಡುಗಳ ಸಿಡಿಸಿ ಅಮಾನುಷವಾಗಿ ಕೊಲ್ಲಲಾಗುತ್ತಿದೆ. ಒಳಿತು ಕೆಡುಕುಗಳ ಅವಲೋಕನ ಮಾಡುವಲ್ಲಿ ಇಂದು ನಾವು ಸೋತಿದ್ದೇವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಬುದ್ಧ – ಬಸವ, ಅಂಬೇಡ್ಕರ್, ಮಹಮದ್ ಪೈಗಂಬರ್, ಅಬ್ದುಲ್ ಕಲಾಂ, ಕನಕದಾಸ ಮೊದಲಾದ ಶ್ರೇಷ್ಟ ಸಾಧಕರ ಆದರ್ಶಗಳು ಹಾಗೂ ಅವರ ಜೀವನ ಮೌಲ್ಯಗಳನ್ನು ವಿದ್ಯಾರ್ಥಿಗಳು ತಿಳಿಯಬೇಕಿದೆ. ಹನ್ನೆರಡೇ ಶತಮಾನದಲ್ಲಿ ಅಕ್ಕಮಹಾದೇವಿ ಸಮಾಜದ ಒಳಿತಿಗೆ ಕೌಶಿಕ ಮಹಾರಾಜನನ್ನೇ ತಿರಸ್ಕರಿಸಿ ಅನುಭವ ಮಂಟಪಕ್ಕೆ ಬಂದಳು. ಆದರೆ ಇಂದು ರಾತ್ರಿ ಏಕಾಂಗಿಯಾಗಿ ಮಹಿಳೆ ಅಥವಾ ಯುವತಿ ರಸ್ತೆಯಲ್ಲಿ ಓಡಾಡದಂತಹ ದುಸ್ಥಿತಿ ನಿರ್ಮಾಣವಾಗಿದೆ ಎಂದು ಆತಂಕ ವ್ಯಕ್ತಪಡಿಸಿದ ಡಾ.ಸುನಿಲ್ ಕುಮಾರ್, ಮಾನವ ಜನ್ಮ ಸಾರ್ಥಕಗೊಳಿಸಲು ಮೊದಲು ಮನಸ್ಸನ್ನು ಶುದ್ಧಗೊಳಿಸಿಕೊಳ್ಳಬೇಕಿದೆ. ಸಕಲ ಜೀವಿಗಳಲ್ಲಿ ದಯೆ, ಪ್ರೀತಿ ಸಾಮರಸ್ಯ ಒಡಮೂಡಬೇಕಿದೆ. ಇದೇ ವಚನಸಾಹಿತ್ಯದ ಶ್ರೇಷ್ಠ ಮೌಲ್ಯ ಎಂದು ಅವರು ಹೇಳಿದರು.

ಕೊಡಗು ವಿಶ್ವ ವಿದ್ಯಾಲಯದ ಮೈಕ್ರೋ ಬಯಾಲಜಿ ವಿಭಾಗದ ಮುಖ್ಯಸ್ಥರಾದ ಡಾ.ಐ.ಕೆ.ಮಂಜುಳಾ ಚಿಂತನಾ ಗೋಷ್ಢಿಯನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಪಠ್ಯದ ಜೊತೆಗೆ ವಚನ ಸಾಹಿತ್ಯದ ಅರಿವು ಬೆಳೆದಲ್ಲಿ ಅವರ ಬದುಕು ಶ್ರೇಷ್ಠವಾಗುತ್ತದೆ. ಆಧುನಿಕ ಜೀವನ ಶೈಲಿ ವಿದ್ಯಾರ್ಥಿಗಳಿಗೆ ಮಾರಕವಾಗಿರವುದರಿಂದ ಸಾಹಿತಿಗಳು, ಚಿಂತಕರು ಸಾಧಕರ ಜೀವನ ಚರಿತ್ರೆಗಳನ್ನು ಓದುವ ಮೂಲಕ ವ್ಯಕ್ತಿತ್ವ ವಿಕಸನಕ್ಕೆ ಡಾ.ಮಂಜುಳಾ ಕರೆಕೊಟ್ಟರು.
ವಿವೇಕಾನಂದ ಪಿಯು ಕಾಲೇಜು ಪ್ರಾಂಶುಪಾಲ ಡಾ.ನಾಗೇಂದ್ರ ಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಸ್ಥ ಸಮಾಜದ ಕೈಗನ್ನಡಿಯಾದ ವಚನ ಸಾಹಿತ್ಯದ ಅರಿವು ಮರೆಯಾಗುತ್ತಿರುವ ಇಂದಿನ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳೆಡೆಗೆ ವಚನಗಳ ನಡಿಗೆ ಒಂದು ಒಳ್ಳೆಯ ವೇದಿಕೆಯಾಗಿದೆ. ಹಾಗೆಯೇ ಶೈಕ್ಷಣಿಕ ರಾಜಧಾನಿ ಕುಶಾಲನಗರದಲ್ಲಿ ವಚನ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸುವ ಮೂಲಕ ಜನಸಾಮಾನ್ಯರಲ್ಲಿ ವಚನಗಳ ವೈಭವವನ್ನು ಸೂರೆಗೊಳಿಸಲು ಕರೆಕೊಟ್ಟರು.
ಕನ್ನಡ ಭಾರತಿ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿಯೂ ಆದ ಕುಶಾಲನಗರ ಪುರಸಭೆ ಅಧ್ಯಕ್ಷ ಜಯವರ್ಧನ, ಕನ್ನಡ ಭಾರತಿ ಪದವಿ ಕಾಲೇಜು ಪ್ರಾಂಶುಪಾಲ ಕೆ.ಎಸ್.ರುದ್ರಪ್ಪ, ವಚನ ಸಾಹಿತ್ಯ ವೇದಿಕೆ ಜಿಲ್ಲಾಧ್ಯಕ್ಷ ಕೆ.ಎಸ್.ಮೂರ್ತಿ, ಹೆಲ್ಪ್ ಲೈನ್ ಕೆ.ಬಿ.ಗಣೇಶ್, ಉಪನ್ಯಾಸಕ ಮಂಜುನಾಥ, ಮುರುಳಿ, ರಶ್ಮಿ  ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.