Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ*
ಇತ್ತೀಚಿನ ಸುದ್ದಿಗಳು ಕರ್ನಾಟಕ

*ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ*

ನವೆಂಬರ್ 6, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಬೆಂಗಳೂರು ನ.6 :   ವಿದ್ಯುತ್‌ ಬೇಡಿಕೆ ಹೆಚ್ಚಿದ್ದರೂ ರಾಜ್ಯಾದ್ಯಂತ ಐಪಿ ಸೆಟ್‌ಗಳಿಗೆ ನಿರಂತರ  5 ರಿಂದ 7 ಗಂಟೆಗಳ ಕಾಲ ವಿದ್ಯುತ್‌ ಅನ್ನು ಒದಗಿಸಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಇಂಧನ ಇಲಾಖೆ ಪರಿಶೀಲನಾ ಸಭೆಯಲ್ಲಿ ವಿದ್ಯುತ್‌ ಬೇಡಿಕೆ, ಸಮಸ್ಯೆ ಕುರಿತಾಗಿ ವಿಸ್ತೃತವಾಗಿ ಚರ್ಚೆ ನಡೆಸಲಾಯಿತು.

ವಿವಿಧ ವಿದ್ಯುತ್‌ ಸರಬರಾಜು ಕಂಪೆನಿಗಳ ವ್ಯಾಪ್ತಿಯಲ್ಲಿ ರೈತರ ಅಗತ್ಯತೆಗನುಗುಣವಾಗಿ ಐದರಿಂದ ಏಳು ಗಂಟೆಗಳ ಅವಧಿಗೆ ನಿರಂತರ ವಿದ್ಯುತ್‌ ಪೂರೈಕೆ ಮಾಡಲಾಗುತ್ತಿದೆ. ಸರ್ಕಾರದ ಮೇಲೆ ಹೆಚ್ಚಿನ ಹೊರೆಯಾಗದಂತೆ ಪ್ರತಿದಿನ ಏಳು ತಾಸು ವಿದ್ಯುತ್‌ ನೀಡಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಯಿತು

ರಾಜ್ಯದಾದ್ಯಂತ ಐಪಿ ಸೆಟ್‌ಗಳಿಗೆ ನಿರಂತರ ಏಳು ಗಂಟೆಗಳ ಅವಧಿಗೆ ವಿದ್ಯುತ್‌ ಒದಗಿಸಲು ದಿನಕ್ಕೆ 600 ಮೆಗಾವ್ಯಾಟ್‌/ಗಂಟೆ ಹಾಗೂ ಪ್ರತಿದಿನಕ್ಕೆ 14 ಮಿಲಿಯನ್‌ ಯುನಿಟ್‌ಗಳ ಅಗತ್ಯವಿದೆ. ಇದಕ್ಕಾಗಿ ಸುಮಾರು 1500 ಕೋಟಿ ರೂ. ಅಗತ್ಯವಿದೆ ಎಂದು ಅಂದಾಜಿಸಲಾಗಿದೆ. ಅನುದಾನದ ಉಳಿತಾಯ, ಮರುಹಂಚಿಕೆಯ ಮೂಲಕ ಈ ವೆಚ್ಚ ಭರಿಸಲಾಗುವುದು ಎಂದು ಸಭೆಗೆ ಅಧಿಕಾರಿಗಳು ಮಾಹಿತಿ ನೀಡಿದರು. ಈ ಕುರಿತು ಚರ್ಚಿಸಿ ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ವಹಿಸಲು ಅನುಮತಿ ನೀಡಲಾಯಿತು.

ಮುಂದಿನ ವರ್ಷದಲ್ಲಿ ಐಪಿ ಸೆಟ್‌ಗಳಿಗೆ ವಿದ್ಯುತ್‌ ಪೂರೈಕೆಯನ್ನು ಸೌರವಿದ್ಯುತ್‌ ಮೂಲದಿಂದ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ (Solarisation of EIP Feeders). ಟೆಂಡರ್‌ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಮುಂದಿನ ವರ್ಷದ ವೇಳೆಗೆ ಹಗಲು ವೇಳೆಯಲ್ಲಿಯೇ ರೈತರಿಗೆ ವಿದ್ಯುತ್‌ ನೀಡಲು ಇದರಿಂದ ಅನುಕೂಲವಾಗಲಿದೆ ಎಂದು ಸಭೆಗೆ ವಿವರಿಸಲಾಯಿತು.

ಕರ್ನಾಟಕದಲ್ಲಿ 2022 ನೇ ವರ್ಷದ ಇದೇ ಅವಧಿಗೆ ಹೋಲಿಸಿದರೆ 2023 ರಲ್ಲಿ ವಿದ್ಯುತ್‌ ಬೇಡಿಕೆ ಸರಾಸರಿ ಶೇ. 43 ರಷ್ಟು ಹೆಚ್ಚಿದೆ. ಅಕ್ಟೋಬರ್‌ ತಿಂಗಳಲ್ಲಿ 15,978 ಮೆಗಾವ್ಯಾಟ್‌ ಬೇಡಿಕೆ ದಾಖಲಾಗಿದೆ. ವಿದ್ಯುತ್‌ ಬಳಕೆಯಲ್ಲಿ ಕಳೆದ ವರ್ಷಕ್ಕಿಂತ ಶೇ. 45 ರಷ್ಟು ಹೆಚ್ಚಿದೆ ಎಂದು ಅಧಿಕಾರಿಗಳು ಅಂಕಿ ಅಂಶಗಳನ್ನು ನೀಡಿದರು.

ಕೃಷಿ ಬಳಕೆಯಲ್ಲಿ ಶೇ. 55ರಿಂದ 119 ರಷ್ಟು ಹೆಚ್ಚಳವಾಗಿದೆ. ಇತರ ವಿಭಾಗಗಳಲ್ಲಿ ಶೇ. 9 ರಿಂದ 14 ರಷ್ಟು ಹೆಚ್ಚಳವಾಗಿದೆ. ಮಳೆ ಕೊರತೆ, ವಾಡಿಕೆಗಿಂತ ಮೊದಲೇ ಐಪಿ ಸೆಟ್‌ ಗಳ ಬಳಕೆ ಪ್ರಾರಂಭವಾಗಿರುವುದು ಹಾಗೂ ಕೋವಿಡ್‌ 19 ರ ನಂತರದ ಆರ್ಥಿಕ ಪುನಶ್ಚೇತನ ಇದಕ್ಕೆ ಕಾರಣವಾಗಿದೆ ಎಂದು ತಿಳಿಸಲಾಯಿತು.

ಕಳೆದ ಬಾರಿ ಪ್ರಗತಿ ಪರಿಶೀಲನೆಯ ನಂತರ ರಾಯಚೂರು, ಬಳ್ಳಾರಿ ಉಷ್ಣವಿದ್ಯುತ್‌ ಸ್ಥಾವರಗಳ ಉತ್ಪಾದನೆ ಹೆಚ್ಚಾಗಿದೆ. ಉತ್ತರ ಪ್ರದೇಶ, ಪಂಜಾಬ್‌ ಮತ್ತು ಹಿಮಾಚಲ ಪ್ರದೇಶಗಳಿಂದ ವಿದ್ಯುತ್‌ ಪಡೆಯಲಾಗುತ್ತಿದೆ ಎಂದು ಅಧಿಕಾರಿಗಳು ವಿವರಿಸಿದರು.

ಸೆಕ್ಷನ್‌ 11 ಅಡಿ ಬೇರೆ ರಾಜ್ಯಗಳಿಗೆ ವಿದ್ಯುತ್‌ ನೀಡದಂತೆ ಆದೇಶ ಹೊರಡಿಸಿ, ವಿದ್ಯುತ್‌ ಪಡೆಯಲಾಗುತ್ತಿದೆ. ಆ ಮೂಲಕ ವಿದ್ಯುತ್‌ ವಿತರಣೆ ಸಹಜ ಸ್ಥಿತಿಗೆ ಬಂದಿದೆ. ನೋಡಲ್‌ ಅಧಿಕಾರಿಗಳು ನಿರಂತರವಾಗಿ ಪರಿಸ್ಥಿತಿಯನ್ನು ಗಮನಿಸುತ್ತಿದ್ದಾರೆ. ಇದರಿಂದ ಬೇಸಿಗೆಯವರೆಗೂ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ತಿಳಿಸಲಾಯಿತು.

ಸಭೆಯಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್‌, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಜೀರ್‌ ಅಹ್ಮದ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯಲ್‌, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತಾ, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌ ಮತ್ತು ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.