ಪುತ್ತೂರು ನ.6 : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಇಬ್ಬರು ವಿದ್ಯಾರ್ಥಿನಿಯರು ಮಂಗಳೂರಿನಲ್ಲಿ ನಡೆದ ಹಾಫ್ ಮ್ಯಾರಥಾನ್ ಸ್ಪರ್ಧೆಯಲ್ಲಿ ಪದಕಗಳೊಂದಿಗೆ ನಗದು ಬಹುಮಾನವನ್ನು ಗೆದ್ದುಕೊಂಡಿದ್ದಾರೆ.
ಮಂಗಳೂರು ರನ್ನರ್ಸ್ ಕ್ಲಬ್ ಇದರ ಆಶ್ರಯದಲ್ಲಿ ಮಂಗಳೂರಿನಲ್ಲಿ ನಡೆದ ನೀವಿಯಸ್ ಮಂಗಳೂರು ಮ್ಯಾರಥಾನ್-2023 ಇದರ 21.1 ಕಿಲೋಮೀಟರ್ ಹಾಫ್ ಮ್ಯಾರಥಾನ್ ಸ್ಪರ್ಧೆಯಲ್ಲಿ ಕಾಲೇಜಿನ ಅಂತಿಮ ಎಂಬಿಎ ವಿಭಾಗದ ವಿದ್ಯಾರ್ಥಿನಿ ರಕ್ಷಿತಾ.ಐ ದ್ವಿತೀಯ ಸ್ಥಾನ ಗಳಿಸಿ ರೂ.15 ಸಾವಿರ ನಗದು ಬಹುಮಾನ ಪಡೆದುಕೊಂಡಿದ್ದಾರೆ. ಇದೇ ವಿಭಾಗದಲ್ಲಿ ಕಾಲೇಜ್ ನ ತೃತೀಯ ವರ್ಷದ ಎಲೆಕ್ಟ್ರಾನಿಕ್ಸ್ ವಿಭಾಗದ ವಿದ್ಯಾ.ಸಿ.ಎಸ್ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದು ರೂ.10 ಸಾವಿರ ನಗದು ಬಹುಮಾನ ಗಳಿಸಿದ್ದಾರೆ.
ಈ ವಿದ್ಯಾರ್ಥಿಗಳು ಕಳೆದ ಬಾರಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದ ಕ್ರಾಸ್-ಕಂಟ್ರಿ ಸ್ಪರ್ಧೆಯಲ್ಲಿಯೂ ಬಹುಮಾನವನ್ನು ಗೆದ್ದಿದ್ದರು. ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನ ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ .ಕೆ ತಿಳಿಸಿದ್ದಾರೆ.








