Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಝೀಕಾ ವೈರಸ್ : ಮುನ್ನೆಚ್ಚರ ವಹಿಸಲು ಡಾ.ಸತೀಶ್ ಕುಮಾರ್ ಮನವಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಝೀಕಾ ವೈರಸ್ : ಮುನ್ನೆಚ್ಚರ ವಹಿಸಲು ಡಾ.ಸತೀಶ್ ಕುಮಾರ್ ಮನವಿ*

ನವೆಂಬರ್ 6, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.6 : ಕೊರೋನಾ ನಡುವೆಯೇ ಇದೀಗ ಝೀಕಾ ವೈರಸ್ ತಲ್ಲಣ ಸೃಷ್ಟಿಸುತ್ತಿದೆ. ಈಗಾಗಲೇ ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರ ದಿಬ್ಬೂರಹಳ್ಳಿ ವ್ಯಾಪ್ತಿಯ ತಲಕಾಯಲಬೆಟ್ಟ ಹಳ್ಳಿಯಲ್ಲಿ ಈಡಿಸ್ ಈಜಿಪ್ಟಾ ಸೊಳ್ಳೆಗಳ ಸಮೂಹ ಮಾದರಿಗಳನ್ನು ಪರೀಕ್ಷಿಸಿದಾಗ ಝೀಕಾ ವೈರಸ್ ಕಂಡುಬಂದಿರುವ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಯಾದ ಕೊಡಗು ಜಿಲ್ಲೆಯಲ್ಲೂ ಕೂಡ ಕಟ್ಟೆಚ್ಚರ ವಹಿಸುವಂತೆ ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕೆ.ಎಂ.ಸತೀಶ್ ಕುಮಾರ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಡೆಂಗ್ಯೂ/ ಚಿಕುಂಗುನ್ಯಾ, ವೆಸ್ಟನೈಲ್ ಹಾಗೂ ಹಳದಿ ಜ್ವರವನ್ನು ಹರಡುವಂತಹ ಸೊಳ್ಳೆಗಳಾದ ಈಡೀಸ್ ಜಾತಿಯ ಸೊಳ್ಳೆಗಳು ಕಚ್ಚುವುದರಿಂದ ಝೀಕಾ ವೈರಸ್ ಖಾಯಿಲೆಯು ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಝೀಕಾ ವೈರಸ್ ಕೇವಲ ಸೊಳ್ಳೆಗಳ ಕಡಿತದಿಂದ ಹರಡುವುದಲ್ಲದೇ ರಕ್ತದ ವರ್ಗಾವಣೆ, ಅಸುರಕ್ಷಿತ ಲೈಂಗಿಕತೆ ಮುಂತಾದ ದೇಹದ ದ್ರವಗಳ ವಿನಿಮಯದ ಮೂಲಕವೂ ಹರಡುತ್ತದೆ. ಮಳೆಗಾಲದಲ್ಲಿ ಈ ವೈರಸ್ ಹರಡಲು ಅನುಕೂಲವಾದ ವಾತಾವರಣ ಸೃಷ್ಟಿಯಾಗುತ್ತದೆ. ಮಳೆಗಾಲದಲ್ಲಿ ನಿಂತ ನೀರಿನಲ್ಲಿ ಸೊಳ್ಳೆಗಳ ಸಾಂದ್ರತೆ ಜಾಸ್ತಿ ಇರುತ್ತದೆ.
ಈ ಸೊಳ್ಳೆಗಳು ಸಾಮಾನ್ಯವಾಗಿ ಹಗಲಿನಲ್ಲಿ ಕಚ್ಚುತ್ತವೆ. ಜ್ವರ, ಕೆಂಪಾದ ಕಣ್ಣುಗಳು, ಮೈ-ಕೈ ನೋವು, ಕೀಲುಗಳಲ್ಲಿ ನೋವು, ದೇಹದ ಮೇಲೆ ಕೆಂಪುರಕ್ತ ಮಿಶ್ರಿತ ಗುಳ್ಳೆಗಳು (ಗಂಧೆಗಳು) ಕಾಣಿಸಿಕೊಳ್ಳುವುದು ಪ್ರಮುಖ ಲಕ್ಷಣವಾಗಿದ್ದು, 2-7 ದಿನಗಳ ಅವಧಿಗೆ ಕಾಣಿಸಿಕೊಳ್ಳುತ್ತವೆ. ರಕ್ತ ಹಾಗೂ ಮೂತ್ರವನ್ನು ಪರೀಕ್ಷಿಸಿದಾಗ ಈ ರೋಗದ ಸೋಂಕು ಇರುವುದು ಕಂಡುಬರುತ್ತದೆ.
ಸಂಭವಿಸಬಹುದಾದಂತಹ ಅಪಾಯ: ಗರ್ಭಿಣಿಯರು ಝೀಕಾ ವೈರಸ್ ಸೋಂಕಿಗೆ ಒಳಗಾಗಿದ್ದರೆ ಗರ್ಭಪಾತವಾಗುವ ಸಾಧ್ಯತೆ ಇದೆ ಹಾಗೂ ಹುಟ್ಟಲಿರುವ ಮಗುವಿಗೂ ಕೂಡ ಸೋಂಕು ರವಾನೆಯಾಗಬಹುದಾಗಿದೆ. ಹುಟ್ಟುವ ಮಕ್ಕಳಲ್ಲಿ ಅಂಗಾಗ ನ್ಯೂನತೆ (ಮೈಕ್ರೋಸೆಫಲಿ -ಅಂದರೆ ಮಗುವಿನ ಮೆದುಳಿನ ಬೆಳವಣಿಗೆ ಕುಂಠಿತವಾಗುವುದು) ಕಾಣಿಸಿಕೊಳ್ಳುವ ಸಾಧ್ಯತೆಯೂ ಹೆಚ್ಚಾಗಿದೆ. ವಯಸ್ಕರಲ್ಲಿ ತೀವ್ರತರವಾದ ನರಗಳ ದೌರ್ಬಲ್ಯ (Guillain-barre syndrome) ವಿರಳವಾಗಿ ಕಾಣಿಸಿಕೊಳ್ಳಬಹುದು.
ರೋಗ ಲಕ್ಷಣಗಳು ಕಂಡು ಬಂದರೆ ಏನು ಮಾಡಬೇಕು: ಇದುವರೆಗೆ ಈ ಕಾಯಿಲೆಗೆ ಯಾವುದೇ ಲಸಿಕೆ ಕಂಡುಹಿಡಿದಿಲ್ಲ.
ಸಾಕಷ್ಟು ದ್ರವ ಆಹಾರಗಳನ್ನು ಸೇವಿಸುವುದರ ಮೂಲಕ ನಿರ್ಜಲೀಕರಣವನ್ನು ತಡೆಯಬೇಕು. ಸಾಕಷ್ಟು ವಿಶ್ರಾಂತಿಯನ್ನು ಪಡೆಯಬೇಕು. ಯಾವುದೇ ಜ್ವರವಿರಲಿ ತಕ್ಷಣವೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆದುಕೊಳ್ಳುವುದು.
ಸೊಳ್ಳೆಗಳ ಉತ್ಪತ್ತಿ ತಾಣಗಳು: ಈ ಸೊಳ್ಳೆಗಳು ಹಗಲು ಹೊತ್ತು ಕಚ್ಚುತ್ತವೆ. ಡ್ರಮ್, ಬ್ಯಾರೆಲ್, ನೀರಿನ ತೊಟ್ಟಿ, ಏರ್ ಕೂಲರ್, ಪ್ರಿಜ್, ಅನುಪಯುಕ್ತ ಟೈರ್, ಒಡೆದ ಮಡಕೆ, ತೆಂಗಿನ ಚಿಪ್ಪು, ತಾರಸಿ ಮನೆಗಳ ಮೇಲ್ಚಾವಣಿ, ಮನೆಗಳಲ್ಲಿ ಉಪಯೋಗಿಸಿ ಬಿಸಾಡಿದಂತಹ ಘನತ್ಯಾಜ್ಯ ವಸ್ತುಗಳು, ಅಡಿಕೆ ತೋಟಗಳಲ್ಲಿ ಬಿದ್ದಿರುವ ಹಾಳೆಗಳು(ಎಲೆಗಳು), ರಬ್ಬರ್ ತೋಟಗಳಲ್ಲಿ ರಬ್ಬರ್ ಸಂಗ್ರಹಿಸುವ ಕಪ್, ಹೂವಿನ ಕುಂಡ, ಶಾಲಾ-ಕಚೇರಿಗಳ ಮೇಲ್ಚಾವಣಿ ಇತ್ಯಾದಿಗಳಲ್ಲಿ ನೀರು ನಿಂತು ಈಡಿಸ್ ಸೊಳ್ಳೆ ಉತ್ಪತ್ತಿಯಾಗುತ್ತದೆ.
ಮನೆ ಪರಿಸರ, ಅಂಗಡಿ ಮುಂಗಟ್ಟುಗಳಲ್ಲಿ ಎಲ್ಲಿಯೂ ನೀರು ನಿಂತು ಸೊಳ್ಳೆ ಉತ್ಪತ್ತಿಯಾಗದಂತೆ ಸಾರ್ವಜನಿಕರು ಮುಂಜಾಗ್ರತೆ ವಹಿಸಬೇಕು ಮತ್ತು ಆರೋಗ್ಯ ಸಿಬ್ಬಂದಿ/ಆಶಾ ಕಾರ್ಯಕರ್ತೆಯರು ನೀಡುವ ಸಲಹೆ-ಸೂಚನೆಗಳನ್ನು ಪಾಲಿಸಬೇಕು. ಸೊಳ್ಳೆಗಳು ಪ್ರವೇಶಿಸದಂತೆ ಮನೆಯ ಕಿಟಕಿ ಬಾಗಿಲುಗಳಿಗೆ ಜಾಲರಿ ಅಳವಡಿಸುವುದು. ಹೊರಾಂಗಣದಲ್ಲಿ ಮಲಗುವುದನ್ನು ಸಾಧ್ಯವಾದಷ್ಟು ತಪ್ಪಿಸುವುದು ಹಾಗೂ ವಿಶ್ರಾಂತಿ ಪಡೆಯುವಾಗ ಮತ್ತು ಮಲಗುವಾಗ ವಿಶೇಷವಾಗಿ ಗರ್ಭಿಣಿಯರು/ ವಯಸ್ಕರು ಮತ್ತು ಮಕ್ಕಳು ಕೀಟನಾಶಕ ಲೇಪಿತ ಸೊಳ್ಳೆ ಪರದೆಗಳನ್ನು ಉಪಯೋಗಿಸುವುದು. ನೀರಿನ ತೊಟ್ಟಿ/ ಟ್ಯಾಂಕ್‍ನ್ನು ಕನಿಷ್ಟ ಪಕ್ಷ ವಾರಕ್ಕೆ ಎರಡು ಸಲ ಪೂರ್ತಿ ಖಾಲಿ ಮಾಡಿ ಸ್ವಚ್ಛಗೊಳಿಸುವುದು.
ಬಯಲಿನಲ್ಲಿ ತ್ಯಾಜ್ಯ ವಸ್ತುಗಳಾದ ಟೈರ್, ಎಳೆನೀರಿನ ಚಿಪ್ಪು, ಒಡೆದ ಬಾಟಲಿ ಮುಂತಾದವುಗಳಲ್ಲಿ ನೀರು ಸಂಗ್ರಹವಾಗದಂತೆ ಎಚ್ಚರವಹಿಸಿವುದು ಅಥವಾ ಸೂಕ್ತ ವಿಲೇವಾರಿ ಮಾಡುವುದು. ಸಾಧ್ಯವಾದಷ್ಟು ಮೈಮುಚ್ಚುವಂತೆ ಬಟ್ಟೆಯನ್ನು ಧರಿಸುವುದು.
ಪರಿಸರವನ್ನು ಸ್ವಚ್ಚವಾಗಿಟ್ಟುಕೊಳ್ಳುವುದು. ಸೊಳ್ಳೆ ಕಚ್ಚದಂತೆ ಎಲ್ಲಾ ರೀತಿಯ ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸುವುದು. ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ ಹಾಗೂ ನಗರಸಭೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿ ಮಾಡಲು ಸೂಕ್ತ ಕ್ರಮಗಳನ್ನು ವಹಿಸಬೇಕು.
ಯಾವುದೇ ಜ್ವರವಿರಲಿ ತಕ್ಷಣವೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆದುಕೊಳ್ಳುವುದರೊಂದಿಗೆ ಈ ಎಲ್ಲಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್ ಮತ್ತು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಬಿ.ಎಲ್.ಶ್ರೀನಿವಾಸ್ ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.