Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಡಿ.1 ರಿಂದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಆರಂಭ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾಹಿತಿ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಡಿ.1 ರಿಂದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಆರಂಭ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾಹಿತಿ

ನವೆಂಬರ್ 8, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ನ.8 : ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಇದೇ ಡಿ.1 ರಿಂದ ಆರಂಭವಾಗಲಿದ್ದು, ಜಿಲ್ಲೆಯ ರೈತರು ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಕೋರಿದ್ದಾರೆ.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ 2023-24 ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೇಂದ್ರ ಸರ್ಕಾರದ ಆದೇಶದಂತೆ 2023-24ನೇ ಸಾಲಿಗೆ ರೈತರಿಂದ ಕನಿಷ್ಟ ಬೆಂಬಲ ಬೆಲೆಯೋಜನೆಯಡಿ ಭತ್ತ ಖರೀದಿ ಮಾಡಲಾಗುತ್ತಿದ್ದು, ಈ ಯೋಜನೆಯ ಸದುಪಯೋಗ ಪಡೆಯುವಂತೆ ಕೃಷಿಕರಲ್ಲಿ ಮನವಿ ಮಾಡಿದರು.
ರೈತರ ನೋಂದಣಿ ಸಂಬಂಧ ತಾಂತ್ರಿಕ ತೊಂದರೆಗಳು ಕಂಡುಬಂದಲ್ಲಿ ಕೂಡಲೆ ಸರಿಪಡಿಸಲು ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರಾದ ಕುಮುದಾ ಶರತ್ ಅವರು ಜಿಲ್ಲೆಗೆ ಭತ್ತ ಮತ್ತು ರಾಗಿ ಖರೀದಿಸಲು ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯನ್ನು ಖರೀದಿ ಏಜೆನ್ಸಿ ಯನ್ನಾಗಿ ಸರ್ಕಾರ ನೇಮಕ ಮಾಡಿದ್ದು ಖರೀದಿ ಪ್ರಕ್ರಿಯೆಯು ಇವರ ಮುಖಾಂತರ ನಡೆಯುತ್ತಿದೆ ಎಂದು ವಿವರಿಸಿದರು.
ಕೇಂದ್ರ ಸರ್ಕಾರದ ಬೆಂಬಲ ಬೆಲೆಯಡಿ ಡಿಸೆಂಬರ್‍ನಿಂದ ರೈತರ ನೋಂದಣಿ ಕಾರ್ಯ ಆರಂಭವಾಗಿದ್ದು, ಕೆಲವೇ ದಿನಗಳಲ್ಲಿ ಭತ್ತ/ ರಾಗಿ ಖರೀದಿ ಪ್ರಕ್ರಿಯೆ ನಡೆಯಲಿದೆ. ಪ್ರತಿ ಎಕರೆಗೆ 25 ಕ್ವಿಂಟಾಲ್ ನಂತೆ ಒಬ್ಬ ಬೆಳಗಾರರಿಂದ ಗರಿಷ್ಠ 40 ಕ್ವಿಂಟಾಲ್ ಭತ್ತ ಹಾಗೂ ರಾಗಿ ಕನಿಷ್ಟ 10 ರಿಂದ ಗರಿಷ್ಟ 20 ಕ್ವಿಂಟಾಲ್ ಖರೀದಿಸಲಾಗುತ್ತಿದೆ. ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್ ಗೆ 2183 ರೂ. ನಿಗದಿಪಡಿಸಲಾಗಿದ್ದು, ರಾಗಿ ಪ್ರತಿ ಕ್ವಿಂಟಲ್ ಗೆ 3846 ರೂ ನಿಗದಿಪಡಿಸಲಾಗಿದೆ ಎಂದು ಆಹಾರ ಇಲಾಖೆಯ ಜಂಟಿ ನಿರ್ದೇಶಕರು ಮಾಹಿತಿ ನೀಡಿದರು.
ಜಿಲ್ಲೆಯಾದ್ಯಂತ ರೈತರಿಗೆ ಅನುಕೂಲ ಆಗುವಂತೆ ಮಡಿಕೇರಿ ಎಪಿಎಂಸಿ ಆವರಣ, ಕುಶಾಲನಗರ ಎಪಿಎಂಸಿ ಆವರಣ, ಗೋಣಿಕೊಪ್ಪ ಎಪಿಎಂಸಿ ಆವರಣ ಹಾಗೂ ಸೋಮವಾರಪೇಟೆ ಎಪಿಎಂಸಿ ಮಾರ್ಕೇಟ್ ಆವರಣದಲ್ಲಿ ಖರೀದಿ ಮಾಡಲಾಗುತ್ತಿದೆ. ರೈತರು ಸಂಬಂಧಪಟ್ಟ ನೋಂದಣಿ ಕೇಂದ್ರಗಳಲ್ಲಿಯೇ ತಮ್ಮ ಭತ್ತವನ್ನು ನೀಡಬಹುದಾಗಿದೆ ಎಂದರು.
ಬೇಡಿಕೆಗೆ ತಕ್ಕಂತೆ ಹೆಚ್ಚಿನ ಕೇಂದ್ರ ತೆರೆಯಲು ಸಹ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸೂಕ್ತ ದಾಸ್ತಾನಿಗಾಗಿ ಭತ್ತ ಖರೀದಿ ಕೇಂದ್ರಗಳಲ್ಲಿ ಭತ್ತದ ಗುಣಮಟ್ಟವನ್ನು ಪರೀಕ್ಷಿಸಲು ಗ್ರೇಡರ್‍ಗಳನ್ನು ನಿಯೋಜಿಸಲು ಕೃಷಿ ಇಲಾಖೆ ಜಂಟಿ ನಿರ್ದೇಶಕರಿಗೆ ಸಲಹೆ ಮಾಡಿದರು.
ಭತ್ತವನ್ನು ಮಾರಾಟ ಮಾಡಬೇಕಾದ ರೈತರು ಈಗಾಗಲೇ ಪ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿಯಾಗಿರಬೇಕು. ಒಂದು ವೇಳೆ ರೈತರು ನೋಂದಣಿ ಮಾಡದಿದ್ದಲ್ಲಿ ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಂಡು ತಾವು ಬೆಳದ ಭತ್ತವನ್ನು ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಬಹುದಾಗಿದೆ ಎಂದರು.
ಖರೀದಿ ಕೇಂದ್ರಗಳಲ್ಲಿ ರೈತರಿಂದ ಖರೀದಿ ಮಾಡಿದ ಭತ್ತದ ಮೊತ್ತವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ. ನೋಂದಣಿ ಕೇಂದ್ರದಲ್ಲಿ ರೈತರು ಫ್ರೂಟ್ಸ್ ಐಡಿ, ಆಧಾರ್ ಸಂಖ್ಯೆಗೆ ಜೋಡಣೆಯಾದ ತಮ್ಮ ಎನ್‍ಪಿಸಿಐ ಬ್ಯಾಂಕ್ ಖಾತೆಯ ವಿವರಗಳನ್ನು ನೀಡಬೇಕಿದೆ ಎಂದು ಅವರು ತಿಳಿಸಿದರು.
ಭತ್ತದ ಖರೀದಿ ನೋಂದಣಿ ಕುರಿತು ಗ್ರಾಮೀಣ ಭಾಗದಲ್ಲಿ ರೈತರಿಗೆ ಹಾಗೂ ರೈತ ಮುಖಂಡರಿಗೆ ಹಾಗೂ ರೈತ ಸಂಪರ್ಕ ಕೇಂದ್ರಗಳ ಮೂಲಕ ಹೆಚ್ಚಿನ ಮಾಹಿತಿ ನೀಡುವಂತೆ ಹಾಗೂ ರೈತರ ನೋಂದಣಿ ಕೇಂದ್ರಗಳು ಹಾಗೂ ಭತ್ತ ಖರೀದಿ ಕೇಂದ್ರಗಳ ಕುರಿತು ವಿವರಗಳನ್ನು ನೀಡುವಂತೆ ಜಿಲ್ಲಾಧಿಕಾರಿಗಳು ಖರೀದಿ ಏಜೆನ್ಸಿಯವರಿಗೆ ಆಹಾರ ಇಲಾಖೆ ಜಂಟಿ ನಿರ್ದೇಶಕರು ಸಲಹೆ ನೀಡಿದರು.
ಸರ್ಕಾರವು ಪೌಷ್ಟಿಕಾಂಶತೆಯಿಂದ ಕೂಡಿದ ಸಾರವರ್ದಿತ ಅಕ್ಕಿಯನ್ನು ಫಲಾನುಭವಿಗಳಿಗೆ ನೀಡಲು ಉದ್ದೇಶಿಸಿದ್ದು, ಈ ಸಂಬಂಧ ಅಕ್ಕಿ ಗಿರಣಿಗಳಲ್ಲಿ ಹಲ್ಲಿಂಗ್ ಮಾಡುವಾಗ ಸಾರವರ್ದಿತ ಅಕ್ಕಿಯನ್ನು ತಯಾರು ಮಾಡಲು ಕಡ್ಡಾಯವಾಗಿ ಅಕ್ಕಿ ಗಿರಣಿ ಮಾಲೀಕರುಗಳು ಬ್ಲೆಂಡಿಂಗ್ ಮಿಷನ್‍ನ್ನು ಅಳವಡಿಸಲು ಹಾಗೂ ಅಳವಡಿಸದ ಅಕ್ಕಿ ಗಿರಣಿಗಳಿಗೆ ಸರಕಾರದ ಆದೇಶದಂತೆ ಹಲ್ಲಿಂಗ್‍ಗೆ ಭತ್ತವನ್ನು ನೀಡಲು ಸಾಧ್ಯವಿರುವುದಿಲ್ಲ ಎಂದು ಹೇಳಿದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಸೋಮಸುಂದರ, ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯ ಅಧಿಕಾರಿ ಕೆ.ಪಿ.ಸೋಮಯ್ಯ, ಆಹಾರ ಇಲಾಖೆಯ ಅಧಿಕಾರಿಗಳು ಇತರರು ಇದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಅ.19ರಂದು ರೋಟರಿ ಮಡಿಕೇರಿಯಿಂದ ಉಚಿತ ಮೂಳೆ ಮತ್ತು ನರರೋಗ ತಪಾಸಣಾ ಶಿಬಿರ

ಅಕ್ಟೋಬರ್ 17, 2026

ಗಗನಕ್ಕೇರಿದ ಬೇಳೆಕಾಳುಗಳ ಬೆಲೆ; ಹಬ್ಬದ ಸಂಭ್ರಮಕ್ಕೆ ಬೆಲೆ ಏರಿಕೆಯ ಬರೆ!

ಅಕ್ಟೋಬರ್ 17, 2026

ಬೇಟೋಳಿ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ; ವನದುರ್ಗೆಗೆ ವಿಶೇಷ ಪೂಜೆ

ಅಕ್ಟೋಬರ್ 17, 2026

ಗಗನಕ್ಕೇರಿದ ಬೇಳೆಕಾಳುಗಳ ಬೆಲೆ; ಹಬ್ಬದ ಸಂಭ್ರಮಕ್ಕೆ ಬೆಲೆ ಏರಿಕೆಯ ಬರೆ!

ಅಕ್ಟೋಬರ್ 17, 2026 ಇತ್ತೀಚಿನ ಸುದ್ದಿಗಳು

ಬೆಂಗಳೂರು, NEWS DESK ಅ. 17: ಎಲ್ ನಿನೋ ಪರಿಣಾಮದಿಂದ ಮಳೆ ಕೊರತೆ ಉಂಟಾಗಿ ತೊಗರಿ ಸೇರಿದಂತೆ ವಿವಿಧ ಬೇಳೆಕಾಳುಗಳ…

ಬೇಟೋಳಿ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ; ವನದುರ್ಗೆಗೆ ವಿಶೇಷ ಪೂಜೆ

ಅಕ್ಟೋಬರ್ 17, 2026

ಮೈಸೂರು ದಸರಾ ಕಂಬಳಕ್ಕೆ ತೆರಳುವ ಕೋಣಗಳಿಗೆ ಮಡಿಕೇರಿಯಲ್ಲಿ ಸ್ವಾಗತ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಮಕ್ಕಳ ದಸರಾ ಸಂಭ್ರಮ : ವಿದ್ಯಾರ್ಥಿಗಳ ಪ್ರತಿಭೆಗೆ ಪೋಷಕರ ಪ್ರೋತ್ಸಾಹ ಅಗತ್ಯ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 16, 2026

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.