Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಒತ್ತಾಯ*
  • *ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*
  • *ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*
  • *ಶೇ.100 ಫಲಿತಾಂಶ: ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನ*
  • *ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲಾ ವಿದ್ಯಾರ್ಥಿಗಳ ಅಮೋಘ ಸಾಧನೆ*
  •  *ರೋಟರಿ ವುಡ್ಸ್ ನಿಂದ ರಕ್ಷಾ ಬಂಧನ್ – ನಮ್ಮ ಹಬ್ಬ ನಮ್ಮ ಸೇವಾ ಯೋಜನೆ*
  • *ಕುಶಾಲನಗರ ಬಾಲಕಿಯರ ಪ್ರೌಢಶಾಲಾ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ : ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವುದು ಅವಶ್ಯಕ : ಡಾ‌ ಅಚ್ಯುತನ್*
  • *ಕೊಡಗು: ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಮಂಡಳಿ ಸಭೆ*
  • *ಆಧುನೀಕತೆಯ ಭರಾಟೆಯ ದಿನಗಳಲ್ಲಿ ಪ್ರಾಚೀನ  ಸಂಸ್ಕೖತಿ ಮರೆಯದಿರಿ – ಡಾ. ಉದಯಶಂಕರ್ ಕರೆ | ಶೖತಿಲಯ ತಂಡದಿಂದ ರಾಘವೇಂದ್ರ ಆರಾಧನೆಯ ಪ್ರಯುಕ್ತ ದಾಸರಕೀತ೯ನೆ*
  • *ವಿವಿಧೆಡೆ ರಾಖಿ ಕಟ್ಟಿದ  ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸುಂಟಿಕೊಪ್ಪದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ : ಮಕ್ಕಳಲ್ಲಿ ಸಂಸ್ಕೃತಿಯ ಅರಿವು ಮೂಡಿಸಿ : ಜಿ.ರಾಜೇಶ್‍ನಾಥ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸುಂಟಿಕೊಪ್ಪದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ : ಮಕ್ಕಳಲ್ಲಿ ಸಂಸ್ಕೃತಿಯ ಅರಿವು ಮೂಡಿಸಿ : ಜಿ.ರಾಜೇಶ್‍ನಾಥ ಕರೆ*

ನವೆಂಬರ್ 10, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ ನ.10 : ಅಗ್ನಿ ಬೆಳಕಿನ ಸಂಕೇತವಾಗಿದ್ದು, ಅಗ್ನಿಯ ಅಂಶವಾಗಿರುವ ದೀಪಾರಾಧನೆಯಿಂದ ಮನೆ ಮನಗಳಲ್ಲಿ ಜ್ಞಾನ ಜ್ಯೋತಿಯನ್ನು ಹಚ್ಚಿ ಮಕ್ಕಳಲ್ಲಿ ನಮ್ಮ ಧರ್ಮ ಪರಂಪರೆ ಆಚಾರ ವಿಚಾರಗಳ ಅರಿವು ಮೂಡಿಸು ಕೆಲಸವಾಗಲೆಂದು ಸಿದ್ಧಲಿಂಗಪುರದ ಅರಶಿನಗುಪ್ಪೆಯ ಶ್ರೀ ಮಂಜುನಾಥ ಕ್ಷೇತ್ರದ ಮುಖ್ಯಸ್ಥರು ಮತ್ತು ಅಖಿಲಭಾರತ ಸಂತಸಮಿತಿಯ ಕೊಡಗು ಜಿಲ್ಲಾಧ್ಯಕ್ಷ ಜಿ.ರಾಜೇಶ್‍ನಾಥ ಕರೆ ನೀಡಿದರು.

ಸುಂಟಿಕೊಪ್ಪದ ಶ್ರೀ ಮಂಜುನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಮಡಿಕೇರಿ ತಾಲೂಕಿನ ಸುಂಟಿಕೊಪ್ಪ ವಲಯ ಮಟ್ಟದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಸಭಾಕಾರ್ಯಕ್ರಮದಲ್ಲಿ ಪಾಲ್ಗೊಂಡು ಧಾರ್ಮಿಕ ಉಪನ್ಯಾಸ ನೀಡಿದರು.
ಕೋವಿಡ್ ಬಂದ ಸಂದರ್ಭದಲ್ಲಿ ತುಳಸಿ ಗಿಡದ ಮಹತ್ವ ಮನೆಯ ಮುಂದೆ ಸಗಣಿ ಸಾರಿಸಿ ಶುದ್ಧತೆ ಸ್ವಚ್ಚತೆಯನ್ನು ಕಾಪಾಡಿಕೊಳ್ಳುವ ಅವಶ್ಯಕತೆಯ ಪ್ರಾಮುಖ್ಯತೆಯನ್ನು ಕಂಡುಕೊಂಡೆವು. ಆದರೆ ನಮ್ಮ ಹಿರಿಯರು ಪದ್ಧತಿ ಪರಂಪರೆಗಳ ಆಚರಣೆಯ ಹಿನ್ನಲೆಯಲ್ಲಿ ಬಹಳ ಹಿಂದೆಯೇ ಇದನ್ನು ಕಂಡುಕೊಂಡಿದ್ದರು. ಕೃಷಿ ನಮ್ಮ ಬೆನ್ನಲುಬು ಆಗಿದ್ದು ಮನೆಯಂಗಳದಲ್ಲಿ ತರಕಾರಿ ಹೂವಿನ ಗಿಡದೊಂದಿಗೆ ಸಾವಯವ ಕೃಷಿಗೆ ಆದ್ಯತೆ ನೀಡುವುದ್ದರಿಂದ ಉತ್ತಮ ಆರೋಗ್ಯವನ್ನು ಪಡೆಯ ಬಹುದಾಗಿದೆ. ಜಾತ್ಯತೀತ ಮತ್ತು ಧರ್ಮತೀತ ನೆಲೆಗಟ್ಟಿನಲ್ಲಿ ದೇಶಪ್ರೇಮವನ್ನು ಮೈಗೂಡಿಸಿಕೊಂಡು ನೆಲ ಜಲ ಪರಿಸದ ಪಶು ಪಕ್ಷಿ ಪ್ರಾಣಿ ಸಂರಕ್ಷಣೆ ಮಾಡಿ ಎಂದು ಕರೆ ನೀಡಿದ ಅವರು, ಧಾರ್ಮಿಕ ಕ್ಷೇತ್ರಗಳಲ್ಲಿ ಪಾವಿತ್ರತೆಯನ್ನು ಕಾಪಾಡಬೇಕು ಎಂದರು.
ಸರಕಾರಿ ಶಾಲೆಗಳಲ್ಲಿ ಕನ್ನಡಭಾಷಾಭಿಮಾನ ಸೀಮಿತವಾಗದೆ ನಮ್ಮೆಲ್ಲಾರನ್ನು ಭಾಷಾಭಿಮಾನ ಇರಬೇಕೆಂದು ಅವರು ಕರೆ ನೀಡಿದರು. ಮನಸ್ಸು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು ಮನಸ್ಸಿನ ನಿಯಂತ್ರಣಕ್ಕೆ ಪೂರಕವಾದ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕೆಂದು ಅವರು ಕರೆ ನೀಡಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದ ಸುಂಟಿಕೊಪ್ಪ ಗ್ರೇಡ್ 1 ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ವಿ.ಜಿ.ಲೋಕೇಶ್ ಅವರು ತಾವು ಧರ್ಮಸ್ಥಳ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡಿದ್ದು, ಧರ್ಮಸ್ಥಳ ಕ್ಷೇತ್ರವು ಜನಮನ ಗೆದ್ದಿರುವ ಸ್ವಾವಲಂಭಿ ಮತ್ತು ಸ್ವಾಭಿಮಾನಿ ಜೀವನಕ್ಕೆ ಪ್ರೋತ್ಸಾಹ ನೀಡಿ ಮನೆ ಮಾತಾಗಿದೆ. ವಿಶೇಷವಾಗಿ ಮಹಿಳೆಯರು ಅಬಲೆಯರು ಎನ್ನಿಸಿಕೊಂಡಿದಿದ್ದನ್ನು ಸಬಲೆಯನ್ನರಾಗಿ ಮಾಡಿ ಪ್ರತಿ ಯಶಸ್ವಿ ಪುರುಷನ ಹಿಂದೆ ಮಹಿಳೆಯರ ಪಾತ್ರ ಎಷ್ಟಿದೆ ಎಂಬುದನ್ನು ಬಣ್ಣಿಸಿದರು.
ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಬಿ.ಬಿ.ಭಾರತೀಶ್ ಮಾತನಾಡಿ, ಅರ್ಥಿಕ ಸ್ವಾಲಂಬನೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಾಯಕಾರಿಯಾಗಿದ್ದು, ನಮ್ಮ ಧರ್ಮ ಪರಂಪರೆ ಮತ್ತು ನಾಗರೀಕತೆ ಉಳಿಯುವಲ್ಲಿ ತನ್ನದೆಯಾದ ಕೊಡುಗೆ ನೀಡಿದೆ ಇಂದು ಜಗತ್ತಿನ ಆನೇಕ ನಾಗರೀಕತೆಗಳು ಅಳಿದುಹೋಗಿವೆ ಆದರೆ ಭಾರತೀಯ ಸಂಸ್ಕøತಿ ಮತ್ತು ನಾಗರೀಕತೆ ವಿಶ್ವಗುರುವಾಗುವ ಮಟ್ಟಕ್ಕೆ ಬೆಳೆದಿದ್ದು, ಇದನ್ನು ನಾವು ಉಳಿಸಿಬೆಳೆಸಿಕೊಂಡು ಹೋಗುವ ಜವಾಬ್ಧಾರಿಯನ್ನು ವಹಿಸಿಕೊಳ್ಳಬೇಕಾಗಿದೆ ಎಂದು ಕರೆ ನೀಡಿದರು.
ಫಲಾನುಭವಿಗಳಿಗೆ ಸಬ್ಸಿಡಿ, ಸಾಲಮಂಜೂರಾತಿ ಪತ್ರ ವಿತರಣೆ ಮಾಡಿ ಮಾತನಾಡಿದ ಡಾ.ಶಶಿಕಾಂತ ರೈ ಅವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ತೊಟ್ಟಿಲು ತೂಗುವ ಕೈ ಜಗತ್ತನ್ನು ಅಳಬಲ್ಲದು ಎಂಬ ಮಾತನ್ನು ಸಾಕ್ಷಿಕರಿಸಿದ್ದು, 4 ಗೋಡೆಗಳ ಮಧ್ಯೆ ಸೀಮಿತರಾಗಿದ್ದ ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಯಲ್ಲಿ ಪ್ರಮುಖ ಪಾತ್ರ ವಹಿಸುವಂತೆ ಮಾಡಿದ ಶ್ರೇಯಸ್ಸನ್ನು ಹೊಂದಿದೆ ಸಾಮೂಹಿಕ ಶ್ರೀ ಸತ್ಯ ನಾರಾಯಣ ಪೂಜೆ ನಾವೆಲ್ಲಾರೂ ಸಮಾನರು ಪ್ರೀತಿ ವಿಶ್ವಾಸ ಸಹಬಾಳ್ವೆ ನಮ್ಮ ಮಂತ್ರ ಎಂದು ಶಶಿಕಾಂತ ರೈ ಹೇಳಿದರು.
ಗ್ರಾಮೀಣ ಮಟ್ಟದಲ್ಲಿ ಇನ್ನಷ್ಟು ಸಂಘಟನಾತ್ಮಕವಾಗಿ ಮಹಿಳೆಯರು ಕಾರ್ಯಪ್ರವೃತರಾಗಬೇಕೆಂದು ಕರೆ ನೀಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಲೀಲಾವತಿ ಮಾತನಾಡಿ, ಆಧುನಿಕ ತಂತ್ರಜ್ಞಾನ ಯುಗದಲ್ಲಿ ನಾವು ಮತ್ತು ನಮ್ಮ ಮಕ್ಕಳು ಧಾರ್ಮಿಕತೆ ಸಂಸ್ಕೃತಿ, ಪರಂಪರೆ, ಉಳಿಸಿ ಬೆಳೆಸುವಲ್ಲಿ ಹಿಂದೆ ಬಿಳುತ್ತಿದ್ದು ಇದು ಒಳ್ಳೆಯ ಬೆಳವಣಿಗೆಯಲ್ಲ ಇದಕ್ಕೆ ಮುಖ್ಯ ಕಾರಣ ನಾವು ಮೊಬೈಲ್‍ಗೆ ದಾಸರಾಗಿರುವುದು ಎಂದು ವಿಷಾದ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸುಂಟಿಕೊಪ್ಪ ಗ್ರೇಡ್ 1 ಗ್ರಾ.ಪಂ ಅಧ್ಯಕ್ಷ ಪಿ.ಆರ್.ಸುನಿಲ್ ಕುಮಾರ್ ಮಾತನಾಡಿ, ಸುಂಟಿಕೊಪ್ಪದಲ್ಲಿ ಧರ್ಮಸ್ಥಳದ ವತಿಯಿಂದ ಸುಂಟಿಕೊಪ್ಪ ಹಿಂದೂ ರುದ್ರಭೂಮಿಯಲ್ಲಿ ಸಿಲಿಕಾನ್ ಚೇಂಬರ್ ಅಳವಡಿಸಿದ್ದು, ಅದು ಇದೀಗ ಶಿಥಿಲಗೊಂಡಿದೆ ಈ ಬಗ್ಗೆ ದುರಸ್ಥಿ ಕಾರ್ಯ ಪ್ರಗತಿಯಲ್ಲಿದ್ದು ಶ್ರೀ ಕ್ಷೇತ್ರದ ನೆರವನ್ನು ಕೇಳಿ ಮನವಿ ನೀಡಲಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಎಂ.ಸಿ.ಶ್ರೀಧರ್, ವಿಶ್ವಹಿಂದೂ ಪರಿಷತ್ ಮಾಜಿ ಜಿಲ್ಲಾ ಕಾರ್ಯದರ್ಶಿ ಡಿ.ನರಸಿಂಹ ಮಾತನಾಡಿದರು.
ಕಾವ್ಯ ಪ್ರಾರ್ಥಿಸಿದರು. ಮಡಿಕೇರಿ ತಾಲೂಕಿನ ಯೋಜನಾಧಿಕಾರಿ ಪುರುಷೋತ್ತಮ್ ಸ್ವಾಗತಿಸಿದರು.
ಕಾರ್ಯಕ್ರಮ ನಿರೂಪಿಸಿ ಕೊನೆಯಲ್ಲಿ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಒತ್ತಾಯ*

ಆಗಷ್ಟ್ 30, 2026

*ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*

ಆಗಷ್ಟ್ 30, 2026

*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*

ಆಗಷ್ಟ್ 30, 2026

*ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*

ಆಗಷ್ಟ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಆ.30 : ರಕ್ಷಾ ಬಂಧನ ಹಬ್ಬವು ಪುರಾಣ ಕಾಲದಿಂದಲೂ ಸಹೋದರತೆಯ ಸಂಕೇತವಾಗಿ ಅಣ್ಣ ತಂಗಿಯ ಮಧುರ…

*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*

ಆಗಷ್ಟ್ 30, 2026

*ಶೇ.100 ಫಲಿತಾಂಶ: ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನ*

ಆಗಷ್ಟ್ 30, 2026

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲಾ ವಿದ್ಯಾರ್ಥಿಗಳ ಅಮೋಘ ಸಾಧನೆ*

ಆಗಷ್ಟ್ 30, 2026

 *ರೋಟರಿ ವುಡ್ಸ್ ನಿಂದ ರಕ್ಷಾ ಬಂಧನ್ – ನಮ್ಮ ಹಬ್ಬ ನಮ್ಮ ಸೇವಾ ಯೋಜನೆ*

ಆಗಷ್ಟ್ 30, 2026

*ಕುಶಾಲನಗರ ಬಾಲಕಿಯರ ಪ್ರೌಢಶಾಲಾ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ : ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವುದು ಅವಶ್ಯಕ : ಡಾ‌ ಅಚ್ಯುತನ್*

ಆಗಷ್ಟ್ 30, 2026

*ಕೊಡಗು: ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಮಂಡಳಿ ಸಭೆ*

ಆಗಷ್ಟ್ 30, 2026

*ಆಧುನೀಕತೆಯ ಭರಾಟೆಯ ದಿನಗಳಲ್ಲಿ ಪ್ರಾಚೀನ  ಸಂಸ್ಕೖತಿ ಮರೆಯದಿರಿ – ಡಾ. ಉದಯಶಂಕರ್ ಕರೆ | ಶೖತಿಲಯ ತಂಡದಿಂದ ರಾಘವೇಂದ್ರ ಆರಾಧನೆಯ ಪ್ರಯುಕ್ತ ದಾಸರಕೀತ೯ನೆ*

ಆಗಷ್ಟ್ 30, 2026

*ವಿವಿಧೆಡೆ ರಾಖಿ ಕಟ್ಟಿದ  ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು*

ಆಗಷ್ಟ್ 30, 2026

*ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ಸಂಘಕ್ಕೆ ರೂ.35.20 ಲಕ್ಷ ಲಾಭ : ಪ್ರತಿಭಾವಂತ ವಿದ್ಯಾಥಿಗಳಿಗೆ ಪ್ರೋತ್ಸಾಹ ಧನ ವಿತರಣೆ*

ಆಗಷ್ಟ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.