Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಲ್ಲೇಂಗಡ ಬೆಳ್ಯಪ್ಪ ಸ್ಮರಣಾರ್ಥ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಲ್ಲೇಂಗಡ ಬೆಳ್ಯಪ್ಪ ಸ್ಮರಣಾರ್ಥ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿ*

ನವೆಂಬರ್ 10, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.10 : ಕೂರ್ಗ್ ಟೇಬಲ್ ಟೆನ್ನಿಸ್ ಯೂತ್ ಅಸೋಸಿಯೇಷನ್ ವತಿಯಿಂದ “ಮಲ್ಲೇಂಗಡ ಬೆಳ್ಯಪ್ಪ” ಅವರ ಸ್ಮರಣಾರ್ಥ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ “ಕೂರ್ಗ್ ಚಾಂಪಿಯನ್‍ಶಿಪ್ ಕಪ್-2023” ಪಂದ್ಯಾವಳಿಯು ನ.17, 18 ಹಾಗೂ 19 ರಂದು ನಡೆಯಲಿದೆ ಎಂದು ಅಸೋಸಿಯೇಷನ್ ಅಧ್ಯಕ್ಷ ಮಲ್ಲೇಂಗಡ ರಚನ್ ಪೊನ್ನಪ್ಪ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಜನರಲ್ ತಿಮ್ಮಯ್ಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯಾವಳಿಯನ್ನು ನ.17 ರಂದು ಬೆಳಿಗ್ಗೆ 10 ಗಂಟೆಗೆ ಕರ್ನಾಟಕ ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಕಲ್ಲೇಂಗಡ ಬಬೀನ್ ಬೋಪಣ್ಣ ಉದ್ಘಾಟಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಮುಖ್ಯ ಅತಿಥಿಗಳಾಗಿ ಕೊಡಗು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿಸ್ಮಯಿ ಚಕ್ರವರ್ತಿ, ಮಡಿಕೇರಿ ಜನನಿ ಆರೋಗ್ಯ ಕೇಂದ್ರದ ಡಾ.ಎನ್.ಎಸ್. ನವೀನ್ ಮತ್ತು ಡಾ.ಬಿ.ಕೆ.ರಾಜೇಶ್ವರಿ, ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಆಟಗಾರ್ತಿ ತಾತಪಾಂಡ ಎಂ.ಎಸ್. ಜ್ಯೋತಿ ಸೋಮಯ್ಯ ಪಾಲ್ಗೊಳ್ಳಲಿದ್ದಾರೆ ಎಂದರು.
ನ.19 ರಂದು ಸಂಜೆ 6 ಗಂಟೆಗೆ ಪಂದ್ಯಾವಳಿಯ ಸಮಾರೋಪ ಹಾಗೂ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಲಿದ್ದು, ಅತಿಥಿಗಳಾಗಿ ಸ್ಮಿತಾ ಐ ಕೇರ್ ಸೆಂಟರ್ ನ ಡಾ.ಪ್ರಶಾಂತ್ ಮತ್ತು ಗಾನ ಪ್ರಶಾಂತ್, ವಕೀಲ ಕೆ.ಎಸ್.ಕವನ್, ಅಮೃತ ಇಎನ್‍ಟಿ ಮತ್ತು ವರ್ಟಿಗೋ ಕ್ಲಿನಿಕ್ ನ ಡಾ.ಮೋಹನ್ ಅಪ್ಪಾಜಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಪಂದ್ಯಾವಳಿಯ ವಿಜೇತರಿಗೆ ಆಕರ್ಷಕ ಟ್ರೋಫಿ, ಪದಕ ಹಾಗೂ ಪಂದ್ಯಾವಳಿಯಲ್ಲಿ ಜರ್ಸಿ ಮತ್ತು 15 ವರ್ಷ ಒಳಪಟ್ಟ ಬಾಲಕ, ಬಾಲಕಿಯರ ವಿಜೇತರಿಗೆ ಟೇಬಲ್ ಟೆನ್ನಿಸ್ ಬ್ಯಾಟ್ ಮತ್ತು ಬಾಲ್ ನೀಡಲಾಗುವುದು ಎಂದು ರಚನ್ ಮಾಹಿತಿ ನೀಡಿದರು.
ಪಂದ್ಯಾವಳಿಯಲ್ಲಿ ಸಬ್ ಜೂನಿಯರ್ ಬಾಲಕ ಹಾಗೂ ಬಾಲಕಿಯರ 15 ವರ್ಷ ವಿಭಾಗ, ಹೈಸ್ಕೂಲ್ ಬಾಲಕ ಹಾಗೂ ಬಾಲಕಿಯರ 18 ವರ್ಷದ ವಿಭಾಗ, ಪದವಿ ಪೂರ್ವ ಹಾಗೂ ಪದವಿ ಕಾಲೇಜು 25 ವರ್ಷದ ವಿಭಾಗ, ಪುರುಷರ ಹಾಗೂ ಮಹಿಳೆಯರ 30 ವರ್ಷ ಮೇಲ್ಪಟ್ಟವರ ವಿಭಾಗ, 50 ವರ್ಷ ಮೇಲ್ಕಟ್ಟ ವಯಸ್ಕರ ವಿಭಾಗದಲ್ಲಿ ಪಂದ್ಯಾವಳಿ ನಡೆಯಲಿದೆ ಎಂದು ತಿಳಿಸಿದರು.
ಪಂದ್ಯಾವಳಿಯಲ್ಲಿ ಭಾಗವಹಿಸುವವರು ಪ್ರವೇಶ ಶುಲ್ಕ 15 ಹಾಗೂ 18 ವರ್ಷ ಬಾಲಕ-ಬಾಲಕಿಯರಿಗೆ ಸಿಂಗಲ್ಸ್ ವಿಭಾಗಕ್ಕೆ – ರೂ 100, 25 ವರ್ಷ ಬಾಲಕ-ಬಾಲಕಿಯರಿಗೆ ರೂ.200, ಪುರುಷ ಹಾಗೂ ಮಹಿಳೆಯರ ಸಿಂಗಲ್ಸ್ ವಿಭಾಗಕ್ಕೆ ರೂ. 500, ಡಬಲ್ಸ್ ಗೆ ರೂ.800, ಮಿಕ್ಸ್ ಡಬಲ್ಸ್ ಗೆ ರೂ.800, ವಯಸ್ಕರ ಸಿಂಗಲ್ಸ್ ವಿಭಾಗಕ್ಕೆ ರೂ.500, ಡಬಲ್ಸ್‍ಗೆ ರೂ.800 ಪಾವತಿಸಿ, ನ.16ರ ಒಳಗೆ ಹೆಸರು ನೋಂದಾಯಿಸಿಕೊಳ್ಳುವಂತೆ ಮನವಿ ಮಾಡಿದರು. ಹೆಚ್ಚಿನ ಮಾಹಿತಿಗೆ ಮಲ್ಲೇಂಗಡ ರಚನ್ ಪೊನ್ನಪ್ಪ – 9483598761, 9110677030, 9980000438 ಸಂಪರ್ಕಿಸುವಂತೆ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಅಸೋಸಿಯೇಷನ್ ನ ಖಜಾಂಚಿ ಹೆಚ್.ಆರ್ ಪುನೀತ್, ಸದಸ್ಯರಾದ ವಿ.ವೈ.ಚೇತನ್, ಕೆ.ಸಿ.ಪ್ರಜ್ವಲ್ ಹಾಗೂ ಬಿ.ಎ.ಅನನ್ಯ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.