Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಮನೆಯಂಗಣದಲ್ಲಿ ಕನ್ನಡ ಕಂಪು : ಕುಶಾಲನಗರದಲ್ಲೊಂದು ಗಮನ ಸೆಳೆದ ವಿಶೇಷ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು

*ಮನೆಯಂಗಣದಲ್ಲಿ ಕನ್ನಡ ಕಂಪು : ಕುಶಾಲನಗರದಲ್ಲೊಂದು ಗಮನ ಸೆಳೆದ ವಿಶೇಷ ಕಾರ್ಯಕ್ರಮ*

November 11, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ನ.11 : ಕುಶಾಲನಗರದ ಸೋಮೇಶ್ವರ ಬಡಾವಣೆಯ ಮನೆಯೊಂದರಲ್ಲಿ., ಕನ್ನಡ ಸ್ನೇಹ ಸಿರಿ ಬಳಗದ ವತಿಯಿಂದ ಅಲ್ಲಿನ ನಿವಾಸಿ, ಪಿ.ಎಸ್. ಜಾನ್ ಅವರ ಮನೆಯಲ್ಲಿ ಕರ್ನಾಟಕ ಸುವರ್ಣ ಸಂಭ್ರಮ ಅಂಗವಾಗಿ ಕನ್ನಡ ನಾಡು-ನುಡಿ-ಸಂಸ್ಕೃತಿ ಕುರಿತಾಗಿ ಏರ್ಪಡಿಸಲಾಗಿದ್ದ `ಮನೆಯಂಗಣದಲ್ಲಿ ಕನ್ನಡ ರಿಂಗಣ’ ಹರಟೆ ಎಂಬ ವಿಶೇಷ ಕಾರ್ಯಕ್ರಮದಲ್ಲಿ ಕನ್ನಡ ಮನಸುಗಳು ಒಂದಾಗಿ ಬೆರೆತು ಸಂಭ್ರಮಿಸಿದರು.

ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದ ಕನ್ನಡಾಭಿಮಾನಿಗಳು ತಮಗಿಷ್ಟವಾದ ಕನ್ನಡ ಹಾಡುಗಳನ್ನು ಹಾಡಿದರೆ, ಕೆಲವರು ಹಾಸ್ಯ ಚಟಾಕಿಗಳನ್ನು ಹಾರಿಸಿದರು. ಇನ್ನೂ ಕೆಲವರು ಮನದಾಳದ ಮಾತುಗಳನ್ನು ಹೇಳಿಕೊಂಡರೆ, ಇನ್ನೂ ಕೆಲವರು ಕವನ, ಚುಟುಕಗಳನ್ನು ಹೇಳಿದರು. ಪರಸ್ಪರ ಅನಿಸಿಕೆಗಳನ್ನು ಮುಕ್ತವಾಗಿ ಹಂಚಿಕೊಂಡರು.

ಕನ್ನಡ ಆಸ್ತಿಯಾಗಬೇಕು :: ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ನಿಕಟಪೂರ್ವ ಅಧ್ಯಕ್ಷ ಎಂ.ಡಿ.ರಂಗಸ್ವಾಮಿ ಮಾತನಾಡಿ, ಇದೊಂದು ಅಪರೂಪದ ಕ್ಷಣವಾಗಿದೆ. ಪ್ರೀತಿಯ ಕರೆಗೆ ಅಭಿಮಾನವಿಟ್ಟು ಕನ್ನಡದ ಮೂಲಕ ಸಂಬಂಧ ಕಲ್ಪಿಸಿ ಪರಸ್ಪರ ಒಂದುಗೂಡುವಿಕೆಗೆ ಕಾರಣವಾಗಿದೆ. ಹರಟೆಯ ಮೂಲಕ ಅಭಿಪ್ರಾಯಗಳನ್ನು ಸಮಾಜಕ್ಕೆ ಹೇಳಿದಾಗ ಮುಂದಿನ ಪೀಳಿಗೆಗೆ ತಲಪುವದಲ್ಲದೆ, ಕನ್ನಡದ ಬಗ್ಗೆ ಮನಸಿನಲ್ಲಿ ಜಾಗೃತಿ ಮೂಡಿಸಿ, ಕನ್ನಡವನ್ನು ಆಸ್ತಿಯನ್ನಾಗಿ ಮಾಡಿಕೊಳ್ಳಲು ಅವಕಾಶವಾಗಲಿದೆ ಎಂದು ಹೇಳಿದರು.
ನಾವು ಯಾವುದೇ ಭಾಷೆಯ ವಿರೋಧಿಗಳಾಗಬಾರದು, ಬಹು ಭಾಷಿಕರು ಇರುವ ಕೊಡಗು ಜಿಲ್ಲೆಯಲ್ಲಿ ಬೇರೆ ಭಾಷೆಗಳ ನಡುವೆ ಕನ್ನಡ ಬಾಷೆಯನ್ನು ಬೆಳೆಸಬೆಕು. ಎಲ್ಲರೂ ಒಂದುಗೂಡಿದರೆ ಇದು ಸಾಧ್ಯವಿದೆ. ಸಾಹಿತಿಗಳು ಬರೆದಿರುವ ಪುಸ್ತಕಗಳನ್ನು ಓದುವದರೊಂದಿಗೆ ಕನ್ನಡ ಕೃಷಿ ಮಾಡುವವರನ್ನು ಪ್ರೋತ್ಸಾಹಿಸಬೇಕೆಂದು ಕರೆ ನೀಡಿದರು.

ಛಲವಿದ್ದರೆ ಸಾಧ್ಯ :: ಹಿರಿಯ ಸಾಹಿತಿ, ಕಣಿವೆಯ ಭಾರಧ್ವಾಜ ಆನಂದತೀರ್ಥ ಮಾತನಾಡಿ, ಕನ್ನಡ ಮನಸುಗಳನ್ನು ಒಂದುಗೂಡಿಸುವಂತಹ ಇಂತಹ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತಿರುವದು ಶ್ಲಾಘನೀಯವಾದುದು. ಇಲ್ಲಿ ಎಲ್ಲರೂ ಎಲ್ಲವನ್ನೂ ಮರೆತು ಒಟ್ಟುಗೂಡಿದ್ದಾರೆ. ಯಾವದೇ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಛಲವಿದ್ದರೆ ಎಲ್ಲವೂ ಸಾಧ್ಯವೆಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕನ್ನಡ ಗೀತೆ ಹಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ, ಕನ್ನಡ ಸ್ನೇಹ ಸಿರಿ ಬಳಗದ ಅಧ್ಯಕ್ಷ, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಿಕಟಪೂರ್ವ ಅಧ್ಯಕ್ಷ ಬಿ.ಎಸ್.ಲೋಕೇಶ್ ಸಾಗರ್, ಕನ್ನಡ ಮನಸುಗಳನ್ನು ಒಂದುಗೂಡಿಸುವ ನಿಟ್ಟಿನಲ್ಲಿ ಹಾಗೂ ಕನ್ನಡದ ಕೆಲಸಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರಲಾಗುತ್ತಿದೆ. ಸುವರ್ಣ ಸಂಭ್ರಮ ಅಂಗವಾಗಿ ಒಟ್ಟು ಐವತ್ತು ಕಾರ್ಯಕ್ರಮಗಳನ್ನು ನಡೆಸುವ ಉದ್ದೇಶ ಹೊಂದಲಾಗಿದ್ದು, ಈಗಾಗಲೇ ಐದು ಕಾರ್ಯಕ್ರಮಗಳನ್ನು ಪೂರೈಸಲಾಗಿದೆ. ಎಲ್ಲ ಕನ್ನಡ ಮನಸುಗಳ ಸಹಕಾರದಿಂದ ಇದು ಸಾಧ್ಯವಾಗುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಕುಡೆಕಲ್ ಸಂತೋಷ್, ಸೊಮವಾರಪೇಟೆ ತಾಲೂಕು ಮಾಜಿ ಅಧ್ಯಕ್ಷ ಜವರಪ್ಪ, ಮಡಿಕೇರಿ ನಗರ ಚೇಂಬರ್ ಅಧ್ಯಕ್ಷ ಎಂ.ದನಂಜಯ, ವೆಂಕಟನಾಯಕ್, ಪತ್ರಕರ್ತ ಕುಶಾಲನಗರದ ಪ್ರಭುದೇವ್, ಸಿದ್ದಾಪುರದ ನಾ ಕನ್ನಡಿಗ, ತಳೂರು ಉಷಾರಾಣಿ ಮಾತನಾಡಿದರು. ಪೆರುಬಾಯಿ ತುಳಸಿ, ಬಸವರಾಜಪ್ಪ, ಹಂಚೆಟ್ಟಿರ ಫ್ಯಾನ್ಸಿ ಮುತ್ತಣ್ಣ, ನೊನಿಟಾ ಜಾನ್, ಮೀರಾ ಜಾನ್ ಸೇರಿದಂತೆ ಇತರರು ಹಾಡು ಹಾಡಿದರು.
ಚಿತ್ರಕಲಾ ಶಿಕ್ಷಕ ಉ.ರಾ.ನಾಗೇಶ್ ಕಾರ್ಯಕ್ರಮ ನಡೆಸಿಕೊಟ್ಟರೆ, ಪ್ರಾಂಶುಪಾಲ ಪಿ.ಎಸ್.ಜಾನ್ ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ಕೊಡಗಿನ ಗ್ರಾಮೀಣ ರಸ್ತೆಗಳಲ್ಲಿ ಹೊಂಡ, ಗುಂಡಿಗಳದ್ದೇ ದರ್ಬಾರ್*
Next Article *ನೆಲಜಿ ನಾಡ್ ಮಂದ್ ನಲ್ಲಿ ಪಾದಯಾತ್ರೆ : ಕೊಡವ ಲ್ಯಾಂಡ್ ಮತ್ತು ಎಸ್.ಟಿ ಪಟ್ಟಿ ಅನಿವಾರ್ಯ : ಎನ್.ಯು.ನಾಚಪ್ಪ ಪ್ರತಿಪಾದನೆ*

Website design development company services in Mangalore

Forex Trading Teacher in India

Related Posts

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

ಬೆಂಗಳೂರು: ರಾಜ್ಯದ ಲಕ್ಷಾಂತರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಭರ್ಜರಿ ಸಿಹಿಸುದ್ದಿ ನೀಡಿದೆ.…

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.