Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯ ಎಸ್‌ಎಸ್ ಆಸ್ಪತ್ರೆ ಚಿತ್ರಕಲಾ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳ ಪ್ರತಿಭೆ ಅನಾವರಣ : ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಲು ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯ ಎಸ್‌ಎಸ್ ಆಸ್ಪತ್ರೆ ಚಿತ್ರಕಲಾ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳ ಪ್ರತಿಭೆ ಅನಾವರಣ : ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಲು ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಕರೆ*

ನವೆಂಬರ್ 12, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.12 : ಚಿತ್ರಕಲೆ ಮಕ್ಕಳ ಭಾವನೆ ಮತ್ತು ಕಲ್ಪನೆಯನ್ನು ಅನಾವರಣಗೊಳಿಸಬಲ್ಲ ಉತ್ತಮ ಕಲಾಪ್ರಕಾರವಾಗಿದೆ. ಪ್ರತಿಭೆಗಳ ಅನಾವರಣಕ್ಕೆ ವೇದಿಕೆಗಳನ್ನು ಕಲ್ಪಿಸುವ ಅಗತ್ಯವಿದೆ ಎಂದು ಅರಮೇರಿ ಕಳಂಚೇರಿ ಮಠದ ಶ್ರೀಶಾಂತ ಮಲ್ಲಿಕಾರ್ಜುನ ಸ್ವಾಮಿಗಳು ತಿಳಿಸಿದ್ದಾರೆ.
ಮಡಿಕೇರಿಯ ಮಹದೇವಪೇಟೆಯ ಎಸ್‌ಎಸ್ ಆಸ್ಪತ್ರೆ ವತಿಯಿಂದ ಮಕ್ಕಳ ದಿನಾಚರಣೆ ಪ್ರಯುಕ್ತ ಕ್ರೆಸೆಂಟ್ ಶಾಲೆಯಲ್ಲಿ ನಡೆದ ವಿದ್ಯಾರ್ಥಿಗಳ ಚಿತ್ರಕಲಾ ಸ್ಪರ್ಧೆಯ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ, ದಿವ್ಯ ಸಾನಿಧ್ಯ ವಹಿಸಿ ಅವರು ಮಾತನಾಡಿದರು.
ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಸ್ತುತ ದಿನಮಾನದ ವಿಷಯಗಳನ್ನು ನೀಡಲಾಗಿದೆ. ಇದರಲ್ಲಿ ಪ್ರಕೃತಿಯೂ ಒಂದಾಗಿದೆ, ಪ್ರಕೃತಿಯನ್ನು ಉಳಿಸಿ ಬೆಳೆಸಲು ಪೋಷಕರು ಮಕ್ಕಳಿಗೆ ಪ್ರೇರಣೆಯನ್ನು ನೀಡಬೇಕು ಎಂದು ಕರೆ ನೀಡಿದರು.
ಚಿತ್ರಕಲೆಗೆ ದೊಡ್ಡ ಇತಿಹಾಸವಿದೆ, ಈ ಕಲೆಯನ್ನು ಉಳಿಸಿ ಬೆಳೆಸಲು ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಬೇಕಾಗಿದೆ. ಮಕ್ಕಳಲ್ಲಿರುವ ಚಿತ್ರಕಲಾ ಪ್ರತಿಭೆಯನ್ನು ಅನಾವರಣಗೊಳಿಸಲು ಈ ರೀತಿಯ ಸ್ಪರ್ಧೆಗಳು ಹೆಚ್ಚು ಸಹಕಾರಿಯಾಗಿದೆ. ಮಕ್ಕಳ ದಿನಾಚರಣೆಯ ಹಿನ್ನೆಲೆ ಎಸ್‌ಎಸ್ ಆಸ್ಪತ್ರೆ ಅತಿ ಕಾಳಜಿಯಿಂದ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಿರುವುದು ಶ್ಲಾಘನೀಯ ಎಂದು ಸ್ವಾಮೀಜಿ ಮೆಚ್ಚುಗೆ ವ್ಯಕ್ತಪಡಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಎಸ್‌ಎಸ್ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರಾದ ಡಾ.ಶಿಲ್ಪ ಸತೀಶ್ ಅವರು, ಪ್ರತಿವರ್ಷ ಈ ರೀತಿಯ ಸ್ಪರ್ಧೆಗಳನ್ನು ಆಯೋಜಿಸುವ ಮೂಲಕ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಲಾಗುವುದು ಎಂದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಮಡಿಕೇರಿ ಮೆಡಿಕಲ್ ಕಾಲೇಜ್ ನ ಬೋಧಕ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ರೂಪೇಶ್ ಗೋಪಾಲ್ ಎಂ.ಎಸ್ ಅವರು, ಎಲ್ಲಾ ಸಮಾಜ ಮತ್ತು ಶಾಲೆಗಳ ವಿದ್ಯಾರ್ಥಿಗಳಿಗೆ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗಿದೆ. ಇದೊಂದು ಉತ್ತಮ ಪ್ರಯತ್ನವಾಗಿದ್ದು, ಪ್ರತಿಭೆಗಳನ್ನು ಗುರುತಿಸಿ ಮುಖ್ಯ ವಾಹಿನಿಗೆ ತರುವ ಕೆಲಸ ಆಗಬೇಕಾಗಿದೆ ಎಂದು ತಿಳಿಸಿದರು.
ಮೆಡಿಕಲ್ ಕಾಲೇಜ್ ನ ಸರ್ಜರಿ ವಿಭಾಗದ ಸಹ ಪ್ರಾಧ್ಯಾಪಕ ಡಾ.ಸತೀಶ್ ಶಿವಮಲ್ಲಯ್ಯ ಅವರು ಪ್ರಾಸ್ತವಿಕ ನುಡಿಗಳನ್ನಾಡಿದರು.
ಮುಖ್ಯ ಅತಿಥಿಗಳಾಗಿ ನಗರಸಭಾ ಸದಸ್ಯರಾದ ಕಲಾವತಿ, ಎಎಲ್‌ಜಿ ಕ್ರೆಸೆಂಟ್ ಸ್ಕೂಲ್ ನ ಟ್ರಸ್ಟಿ ಹಾಗೂ ನಿರ್ದೇಶಕ ಹನೀಫ್, ಶಾಲೆಯ ಉಪಪ್ರಾಂಶುಪಾಲರಾದ ಸುಲ್ಲಾಹ್ತ್, ಜಿಲ್ಲಾ ಸಹಾಯಕ ಔಷಧ ನಿಯಂತ್ರಕ ಗುರುನಾಥ ಪಾಲ್ಗೊಂಡಿದ್ದರು.
ತೇಜಶ್ರೀ, ರಶ್ಮಿ ಹಾಗೂ ಶ್ರದ್ಧಾ ಕಟ್ಟೆಮಾಡು ಪ್ರಾರ್ಥಿಸಿ, ಆರ್.ಕೆ ಲ್ಯಾಬ್ ಮಾಲೀಕರಾದ ಪ್ರದೀಪ್ ಕುಮಾರ್ ಕೆ.ಎಸ್ ಸ್ವಾಗತಿಸಿ, ತೇಜಸ್ ಗೌಡ ಹಾಗೂ ದಿಲೀಪ್ ನಿರೂಪಿಸಿ, ಆರ್.ಕೆ ಲ್ಯಾಬ್ ನ ವ್ಯವಸ್ಥಾಪಕ ನಿರ್ದೇಶಕರಾದ ಕವಿತಾ ಪ್ರದೀಪ್ ಕುಮಾರ್ ವಂದಿಸಿದರು.
ಎಸ್‌ಎಸ್ ಆಸ್ಪತ್ರೆಯ ಸಿಬ್ಬಂದಿಗಳಾದ ಧರ್ಮಾವತಿ, ಹರ್ಷಿತಾ, ಮಾನಸ, ಅಕ್ಷಿತಾ ಹಾಗೂ ಚುಮ್ಮಿ ಉಪಸ್ಥಿತರಿದ್ದರು.
::: ವಿಜೇತರ ವಿವರ :::
ಎಲ್‌ಕೆಜಿಯಿಂದ 1ನೇ ತರಗತಿವರೆಗಿನ ವಿದ್ಯಾರ್ಥಿಗಳ ವಿಭಾಗದಲ್ಲಿ ಪ್ರಥಮ ಬಹುಮಾನ (ರೂ.2ಸಾವಿರ) ದುಹಾ ಫಾತಿಮಾ ಯುಕೆಜಿ ಎಎಲ್‌ಜಿ ಕ್ರೆಸೆಂಟ್ ಶಾಲೆ, ದ್ವಿತೀಯ (1,500 ರೂ.) ರಿಥ್ವಿಕ್, 1ನೇ ತರಗತಿ ಕೇಂದ್ರೀಯ ವಿದ್ಯಾಲಯ ಕೊಡಗು, ತೃತೀಯ ಬಹುಮಾನ (1ಸಾವಿರ ರೂ.) ಶೌರ್ಯ ಕುಶಾಲಪ್ಪ ಎಲ್‌ಕೆಜಿ, ಕೊಡಗು ವಿದ್ಯಾಲಯ ಪಡೆದುಕೊಂಡರು.
2ನೇ ತರಗತಿಯಿಂದ 6ನೇ ತರಗತಿ ವರೆಗಿನ ವಿಭಾಗದಲ್ಲಿ ಪ್ರಥಮ ಬಹುಮಾನ (3,500ರೂ.) ಬಿನೀತ್ ಕೆ.ಪಿ 6ನೇ ತರಗತಿ, ಜನರಲ್ ತಿಮ್ಮಯ್ಯ ಪಬ್ಲಿಕ್ ಸ್ಕೂಲ್, ದ್ವಿತೀಯ ಬಹುಮಾನ (ರೂ.3ಸಾವಿರ) ಎಂ.ಆರ್.ಕಿರಣಕಾಂತ್, 5ನೇ ತರಗತಿ ಕೇಂದ್ರೀಯ ವಿದ್ಯಾಲಯ, ತೃತೀಯ ಬಹುಮಾನ (2,500 ರೂ.) ಬಾನ್ವಿ ಕೆ.ಎಸ್, 6ನೇ ತರಗತಿ, ಸಂತ ಮೈಕಲರ ಶಾಲೆ ಪಡೆದುಕೊಂಡರು.
7ನೇ ತರಗತಿಯಿಂದ 10ನೇ ತರಗತಿವರೆಗಿನ ವಿಭಾಗದಲ್ಲಿ ಪ್ರಥಮ ಬಹುಮಾನ (5 ಸಾವಿರ ರೂ.) ಹರ್ಷಿತ್ ಪೊನ್ನಪ್ಪ 8ನೇ ತರಗತಿ, ಸಂತ ಜೋಸೆಫರ ಶಾಲೆ, ಮಡಿಕೇರಿ, ದ್ವಿತೀಯ ಬಹುಮಾನ (4,500 ರೂ.) ಮೌಲ್ಯ ಜಿ.ಪಿ., 9ನೇ ತರಗತಿ, ಸಂತ ಜೋಸೆಫರ ಶಾಲೆ ಮಡಿಕೇರಿ, ತೃತೀಯ ಬಹುಮಾನ (4 ಸಾವಿರ ರೂ.) ಧ್ರುವ ನಂಜಪ್ಪ 9ನೇ ತರಗತಿ, ಜನರಲ್ ತಿಮ್ಮಯ್ಯ ಪಬ್ಲಿಕ್ ಸ್ಕೂಲ್ ಪಡೆದುಕೊಂಡರು.
ಪ್ರತಿ ವಿಜೇತರಿಗೆ ನಗದು ಬಹುಮಾನದೊಂದಿಗೆ ಪದಕ ಮತ್ತು ಪ್ರಶಸ್ತಿ ಪತ್ರ ನೀಡಲಾಯಿತು. ಸ್ಪರ್ಧೆಯಲ್ಲಿ ಸುಮಾರು 400 ಕ್ಕೂ ಅಧಿಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದು, ಎಲ್ಲರಿಗೂ ಪ್ರಶಂಸನಾ ಪತ್ರ ನೀಡಿ ಪ್ರೋತ್ಸಾಹಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.