Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
  • *ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*
  • *ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*
  • *ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ರಾಜ್ಯಮಟ್ಟದ ಮುಕ್ತ ತೆಂಗಿನ ಕಾಯಿ ಗುಂಡು ಹೊಡೆಯುವ ಸ್ಪರ್ಧೆ : ಸಂಸ್ಕೃತಿಯ ರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ : ಎನ್.ಯು.ನಾಚಪ್ಪ*
ಇತ್ತೀಚಿನ ಸುದ್ದಿಗಳು

*ರಾಜ್ಯಮಟ್ಟದ ಮುಕ್ತ ತೆಂಗಿನ ಕಾಯಿ ಗುಂಡು ಹೊಡೆಯುವ ಸ್ಪರ್ಧೆ : ಸಂಸ್ಕೃತಿಯ ರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ : ಎನ್.ಯು.ನಾಚಪ್ಪ*

November 13, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ನಾಪೋಕ್ಲು ನ.13 : ಕೊಡವ ಜನಾಂಗ ಅನಾಧಿಕಾಲದಿಂದ ವೈವಿಧ್ಯಮಯ ಸಂಸ್ಕೃತಿಯನ್ನು ರೂಡಿಸಿಕೊಂಡು ಬಂದಿದ್ದು, ಕೊಡವರ ಧಾರ್ಮಿಕ ಭಾವನೆಗಳಿಗೆ ಗೌರವ ಕೊಡಬೇಕಾದದ್ದು ಅತ್ಯಗತ್ಯ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ನಂದಿನೆರವಂಡ ಯು. ನಾಚಪ್ಪ ಹೇಳಿದರು.
ನಾಪೋಕ್ಲು ನಾಲ್ ನಾಡು ಪ್ಲಾಂಟರ್ಸ್ ರಿಕ್ರಿಯೇಷನ್ ಅಸೋಸಿಯೇಷನ್ ವತಿಯಿಂದ ಚೆರಿಯ ಪರಂಬುವಿನ ಕೆ.ಎಸ್. ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಮೂರನೇ ವರ್ಷದ ರಾಜ್ಯಮಟ್ಟದ ಮುಕ್ತ ತೆಂಗಿನಕಾಯಿ ಗುಂಡು ಹೊಡೆಯುವ ಸ್ಪರ್ಧೆಯಲ್ಲಿ ಕೋವಿಗಳಿಗೆ ಪೂಜೆ ಸಲ್ಲಿಸಿ ಮಾತನಾಡಿದರು.
ಈ ದೇಶ ನಾನಾ ಜನಾಂಗ ಧರ್ಮ ಸಂಸ್ಕೃತಿಯ ಬೀಡು.ಎಲ್ಲರಿಗೂ ಬದುಕಲು ಅವಕಾಶ ಕಲ್ಪಿಸಿಕೊಟ್ಟಿದೆ. ಜನಾಂಗದ ಧಾರ್ಮಿಕ ನಂಬಿಕೆಗಳನ್ನು ಸಾರ್ವಜನಿಕವಾಗಿ ಪ್ರದರ್ಶನ ಮಾಡಿದರಷ್ಟೇ ಸರ್ಕಾರದ ಗಮನ ಸೆಳೆಯಲು ಸಾಧ್ಯ ಎಂದ ಅವರು ಕೊಡವರ ಸಾಂವಿಧಾನಿಕ ಹಕ್ಕುಗಳನ್ನು ಗೌರವಿಸಬೇಕು. ಪ್ರಕೃತಿಯಲ್ಲಿ ಹೇಗೆ ವೈವಿಧ್ಯತೆ ಇದೆಯೋ ಅದೇ ರೀತಿ ಜನಾಂಗದಲ್ಲೂ ವೈವಿಧ್ಯತೆ ಇದೆ. ಇಲ್ಲಿನ ಭೂಮಿ, ನೆಲ, ಜಲ,ಕೋವಿಗಳನ್ನು ಪೂಜಿಸುವುದರ ಮೂಲಕ ಕೊಡವರು ಧಾರ್ಮಿಕ ಆಚರಣೆಗಳನ್ನು ನೆರವೇರಿಸುತ್ತಿದ್ದು, ಒಂದು ಕಿರಿಯ ಜನಾಂಗದ ಸಂಸ್ಕೃತಿಗೆ ರಕ್ಷಣೆ ಕೊಡುವಂತಹ ಕೆಲಸ ಆಗಬೇಕಿದೆ. ಇಲ್ಲಿನ ವೈವಿಧ್ಯಮಯ,ಆಚಾರ, ವಿಚಾರ, ಸಂಸ್ಕೃತಿಯನ್ನು ಕೊಡವರಿಗೆ ಪ್ರಕೃತಿದತ್ತವಾದ ಕೊಡುಗೆಯಾಗಿದ್ದು, ಇದನ್ನು ಮುಂದಿನ ಪೀಳಿಗೆಗೆ ವರ್ಗಾಯಿಸಬೇಕಾಗಿದೆ ಎಂದರು.
ಉದ್ಯಮಿ ಚಿಳ್ಳವಂಡ ದರ್ಶನ್ ಚಿನ್ನಪ್ಪ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಶುಭ ಹಾರೈಸಿ ತೆಂಗಿನಕಾಯಿ ಗುಂಡು ಹೊಡೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾಫಿ ಬೆಳೆಗಾರ, ದಾನಿ ನಂಬುಡಮಂಡ ಶಂಭು ಅಪ್ಪಯ್ಯ ಮಾತನಾಡಿ, ತಾನು ಕಾಡಾನೆಯಿಂದ ಜೀವವನ್ನು ರಕ್ಷಿಸಿಕೊಂಡ ತನ್ನ ಅನುಭವವನ್ನು ಸಭೆಯಲ್ಲಿ ಹಂಚಿಕೊಂಡರು.
ಕ್ಲಬ್ ಅಧ್ಯಕ್ಷ ಬಾಚಮಂಡ ಲವ ಚಿಣ್ಣಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಪ್ರಾಸ್ತಾವಿಕ ನುಡಿಯಾಡಿ ಕಾರ್ಯಕ್ರಮಕ್ಕೆ ಸಹಕರಿಸಿದವರನ್ನು ನೆನೆಸಿಕೊಂಡರು.
ಈ ಸಂದರ್ಭ ಕುಂಜಿಲದ ಕಾಫಿ ಬೆಳೆಗಾರ, ಬಾಚಮಂಡ ವಿಠಲ ಕಾವೇರಪ್ಪ, ಬಲ್ಲಮಾವಟಿಯ ಕಾಫಿ ಬೆಳೆಗಾರ, ದಾನಿ ಅಪ್ಪಚೆಟ್ಟೋಳಂಡ ಶ್ಯಾಮ್ ಕಾಳಯ್ಯ , ಜಿಲ್ಲಾ ಆಫ್ಕಾಂ ಅಧ್ಯಕ್ಷ , ಜಿಲ್ಲಾ ಹಿರಿಯ ಸಹಕಾರ ರತ್ನ ಪ್ರಶಸ್ತಿಗೆ ಆಯ್ಕೆಯಾಗಿರುವ ಬಿದ್ದಾಟಂಡ ರಮೇಶ್ ಚಂಗಪ್ಪ , ಅಸೋಸಿಯೇಷನ್ ಉಪಾಧ್ಯಕ್ಷ ಅರೆಯಡ ರತ್ನ ಪೆಮ್ಮಯ್ಯ ,ಕಾರ್ಯದರ್ಶಿ ಚೇಕ್ ಪುವಂಡ ಅಪ್ಪಚ್ಚು , ಸಹ ಕಾರ್ಯದರ್ಶಿ ಕೇಟೋಳಿರ ಹರೀಶ್ ಪೂವಯ್ಯ ,ಖಜಾಂಚಿ ಕರವಂಡ ಬೆಲ್ಲು ಬೆಳ್ಳಿಯಪ್ಪ ಹಾಗೂ ನಿರ್ದೇಶಕರು, ಸದಸ್ಯರು, ಸಾರ್ವಜನಿಕರು ಹಾಜರಿದ್ದರು.
ಕೇಟೋಳಿರ ತಂಗಮ್ಮ ಮತ್ತು ದೇಚಮ್ಮ ಪ್ರಾರ್ಥಿಸಿದರು. ನಿರ್ದೇಶಕ ಬೊಳ್ಳಚೆಟ್ಟೀರ ಸುರೇಶ್ ಸ್ವಾಗತಿಸಿದರು. ಶಿವಚಳಿಯಂಡ ನಿತ್ಯ ಕಾರ್ಯಪ್ಪ ಕಾರ್ಯಕ್ರಮ ನಿರೂಪಿಸಿ, ನಿರ್ದೇಶಕ ಚೇನಂಡ ಸುರೇಶ್ ನಾಣಯ್ಯ ವಂದಿಸಿದರು. ಬಳಿಕ ಸ್ಪರ್ಧಾ ಕಾರ್ಯಕ್ರಮಗಳು ಆರಂಭಗೊಂಡವು.

ವರದಿ : ದುಗ್ಗಳ ಸದಾನಂದ 

Share. Facebook Twitter Pinterest LinkedIn Tumblr Email WhatsApp
Previous Article*ಕುಂಜಿಲ : ಕಲ್ಯಾಟಂಡ ಐನ್ ಮನೆಯಲ್ಲಿ ಡಾ. ಬಿ.ಗಣಪತಿ ಗೆ ಸನ್ಮಾನ*
Next Article *ನ.27ಕ್ಕೆ ಪುತ್ತರಿ ಹಬ್ಬ*

Website design development company services in Mangalore

Forex Trading Teacher in India

Related Posts

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

ಚೆಟ್ಟಳ್ಳಿ: ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಶ್ರೀ ವೀರಾಂಜನೇಯ ಯುವಕ ಸಂಘ, ಚೆಟ್ಟಳ್ಳಿ ಇವರ ಸಂಯುಕ್ತ…

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*

February 13, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.