Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಹೊದ್ದೂರು ಸಹಕಾರ ಸಪ್ತಾಹ : ಆರ್ಥಿಕ ಪ್ರಗತಿಯಿಂದ ಸಹಕಾರಿ ಕ್ಷೇತ್ರದ ಸಬಲೀಕರಣ : ಮನು ಮುತ್ತಪ್ಪ ಅಭಿಮತ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಹೊದ್ದೂರು ಸಹಕಾರ ಸಪ್ತಾಹ : ಆರ್ಥಿಕ ಪ್ರಗತಿಯಿಂದ ಸಹಕಾರಿ ಕ್ಷೇತ್ರದ ಸಬಲೀಕರಣ : ಮನು ಮುತ್ತಪ್ಪ ಅಭಿಮತ

ನವೆಂಬರ್ 15, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ನ.15 : ಆರ್ಥಿಕ ಸಂಪತ್ತು ದ್ವಿಗುಣಗೊಳ್ಳುವುದರ ಮೂಲಕ ಭಾರತ ಏಷ್ಯಾ ಖಂಡದಲ್ಲಿಯೇ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಿದೆ. ಈ ರೀತಿಯ ಆರ್ಥಿಕ ಪ್ರಗತಿಯಿಂದ ಸಹಕಾರಿ ಕ್ಷೇತ್ರದ ಸಬಲೀಕರಣ ಸಾಧ್ಯ ಎಂದು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ಅಭಿಪ್ರಾಯಪಟ್ಟಿದ್ದಾರೆ.
ಹೊದ್ದೂರು ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆದ 70ನೇ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ನೂತನ ಗೋದಾಮು ಮತ್ತು ಸಭಾಂಗಣ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಹಲವಾರು ಉಪಯುಕ್ತ ಯೋಜನೆಗಳಿಂದ ರಾಜ್ಯದೆಲ್ಲೆಡೆ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರಿಗೆ ಸೂಕ್ತ ಸೇವೆಯನ್ನು ಸಲ್ಲಿಸುತ್ತಿವೆ ಎಂದರು.
ಶೂನ್ಯ ಬಡ್ಡಿ ದರದಲ್ಲಿ ರೈತರಿಗೆ ಸಾಲ ವಿತರಿಸಲಾಗುತ್ತಿದೆ. ಕಟ್ಟಡ ನಿಮಾಣ, ಗೋದಾಮು, ಗೊಬ್ಬರಕ್ಕೆ ಸಬ್ಸಿಡಿಯನ್ನು ನೀಡಲಾಗುತ್ತಿದೆ. ಆ ಮೂಲಕ ಕೃಷಿಕ ವರ್ಗದ ಅಭ್ಯುದಯಕ್ಕೆ ಸಹಕಾರಿಯಾಗಿದೆ. ಆರ್ಥಿಕ ತಜ್ಞರ ಅಭಿಪ್ರಾಯದಂತೆ ಭಾರತ ಆರ್ಥಿಕ ಬೆಳವಣಿಗೆಯಲ್ಲಿ 2028ಕ್ಕೆ ಏಷ್ಯಾ ಖಂಡದಲ್ಲಿಯೇ 3ನೇ ಸ್ಥಾನವನ್ನು ಪಡೆಯಲಿದೆ, ಈ ಹಂತದಲ್ಲಿ ಸಹಕಾರಿ ಕ್ಷೇತ್ರದಲ್ಲಿ ಭಾರೀ ಬದಲಾವಣೆಯಾಗಲಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ 280 ಸಹಕಾರ ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿದ್ದು, ಇತಿಹಾಸ ಸೃಷ್ಟಿಸಿದೆ. ಶೂನ್ಯ ಬಡ್ಡಿ ದರದ ಸಾಲದ ನೀಡಿಕೆಯನ್ನು ರೂ.5 ಲಕ್ಷಕ್ಕೆ ಏರಿಸುವ ಗುರಿ ಹೊಂದಲಾಗಿದೆ. ಮುಂದಿನ ದಿನಗಳಲ್ಲಿ ಪ್ರತಿ ಗ್ರಾಮ ಪಂಚಾಯಿತಿಗೊಂದು ಪ್ಯಾಕ್ಸ್ ನಿರ್ಮಾಣ ಆಗಬೇಕು. ಎಲ್ಲಾ ಕಾರ್ಯಚಟುವಟಿಕೆಗಳು ಪ್ಯಾಕ್ಸ್ ನಂತಹ ಆರ್ಥಿಕ ಕೇಂದ್ರದ ಮೂಲಕ ನಡೆದು, ರೈತರಿಗೆ ಪ್ರಯೋಜನಕಾರಿಯಾಗಬೇಕು ಎಂದು ಮನು ಮುತ್ತಪ್ಪ ಹೇಳಿದರು.
ಏಷ್ಯದಲ್ಲಿಯೇ ಪ್ರಥಮ ಬಾರಿಗೆ 1905ರಲ್ಲಿ ಕರ್ನಾಟಕ ರಾಜ್ಯದ ಗದಗದಲ್ಲಿ ರೈತ ಸಣ್ಣ ರಾಮನಗೌಡ ಪಾಟೀಲರ ಕನಸಿನ ಕೂಸಾದ ಪ್ಯಾಕ್ಸ್ ನಿರ್ಮಾಣ ಸಂಸ್ಥೆ ಆರಂಭಗೊಂಡು ಇದೀಗ ರಾಜ್ಯದಲ್ಲೆಡೆ ಮಾದರಿ ಸಂಸ್ಥೆಯಾಗಿ ರೂಪುಗೊಂಡಿದೆ. ಕೇಂದ್ರ ಸರ್ಕಾರ ರೈತರ ಅನುಕೂಲಕ್ಕಾಗಿ ಪೆಟ್ರೋಲ್ ಬಂಕ್, ಪೆಟ್ರೋಲ್ ರಹಿತ ಚಾರ್ಜರ್ ಬಂಕನ್ನು ನಿರ್ಮಿಸಲು ಕೂಡ ಸಹಾಯಧನ ನೀಡಲಿದ್ದು, ರೈತಾಪಿ ವರ್ಗದ ಸಂಸ್ಥೆಗಳು ಇದರ ಸದುಪಯೋಗ ಪಡೆದುಕೊಳ್ಳುವಂತಾಗಬೇಕೆಂದು ಮನವಿ ಮಾಡಿದರು.
ಪ್ಯಾಕ್ಸ್‍ನ ಸೇಪ್ ಲಾಕರನ್ನು ಉದ್ಘಾಟಿಸಿ ಮಾತನಾಡಿದ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಉಪಾಧ್ಯಕ್ಷ ಕೇಟೋಳಿರ ಹರೀಶ್ ಪೂವಯ್ಯ, ಉತ್ತಮ ಆಡಳಿತ ಮಂಡಳಿಯ ಸಹಕಾರವಿದ್ದಲ್ಲಿ ಸಹಕಾರಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಣಲು ಸಾಧ್ಯವಿದೆ. ಇದಕ್ಕೆ ಹೊದ್ದೂರು ಪ್ಯಾಕ್ಸ್ ಕಟ್ಟಡದ ನಿರ್ಮಾಣ ಮಾದರಿಯಾಗಿದೆ, ಅಭಿವೃದ್ಧಿಯೇ ದಾರಿದೀಪ ಎಂದು ಹರ್ಷ ವ್ಯಕ್ತಪಡಿಸಿದರು.
ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ನಿರ್ದೇಶಕ ಕನ್ನಂಡ ಸಂಪತ್ ಪ್ಯಾಕ್ಸ್‍ನ ನೂತನ ಸಭಾಂಗಣ ಉದ್ಘಾಟಿಸಿ ಮಾತನಾಡಿ, ಹಿಂದಿನ ಕಾಲಘಟ್ಟದ ಕೂಡುವಳಿ ಪದ್ಧತಿ, ಕೆಲಸಗಳು ಮರುಕಳುಹಿಸುವಂತಾಗಬೇಕು. ಇದರಿಂದ ಸಮಾಜದಲ್ಲಿ, ಸಂಸಾರದಲ್ಲಿ ಒಗ್ಗಟ್ಟು, ಶಾಂತಿ, ನೆಮ್ಮದಿ ಕಂಡುಕೊಳ್ಳಲು, ಅಭಿವೃದ್ಧಿ ಸಾಧಿಸಲು ಸಹಕಾರಿಯಾಗಲಿದೆ ಎಂದರು.
ಕೊಡಗು ಜಿಲ್ಲಾ ಸಹಕಾರ ಬ್ಯಾಂಕಿನ ನಿರ್ದೇಶಕ ಕೊಡಪಾಲು ಎಸ್.ಗಣಪತಿ ಮಾತನಾಡಿ, ಸಹಕಾರ ಕ್ಷೇತ್ರದಲ್ಲಿ ಸಲ್ಲಿಸುವ ಸೇವೆ ಇನ್ಯಾವುದೇ ಕ್ಷೇತ್ರದಲ್ಲಿ ಲಭಿಸಲು ಸಾಧ್ಯವಿಲ್ಲ. ಇಲ್ಲಿ ಸಿಗುವ ಗೌರವವೇ ಬೇರೆ, ಕೊಡಗಿನವರು ಕೊಡುಗೈ ದಾನಿಗಳು, ಸಹಕಾರಿ ಕ್ಷೇತ್ರ ಸೇರಿದಂತೆ, ಶಾಲೆ ಇನ್ನಿತರ ಸೇವಾ ಕಾರ್ಯಗಳಿಗೆ ಏಕರೆಗಟ್ಟಲೇ ಜಾಗವನ್ನು ಉದಾರವಾಗಿ ನೀಡಿದ್ದಾರೆ. ಈ ರೀತಿಯ ಸಹಕಾರಿ ಮನೋಭಾವ ಕೊಡಗು ಜಿಲ್ಲೆ ಬಿಟ್ಟರೆ ಎಲ್ಲಿಯೂ ಕಾಣಲು ಸಿಗುವುದಿಲ್ಲ. ದಾನಿಗಳ ಸೇವೆಯನ್ನು ಸ್ಮರಿಸಿ, ಮುಂದಿನ ಪೀಳಿಗೆಗೆ ಮನವರಿಕೆ ಮಾಡಿಕೊಡುವ ಕಾರ್ಯ ಸಹಕಾರಿ ಸಂಸ್ಥೆಗಳಿಂದ ಆಗಬೇಕು ಎಂದು ಕಿವಿಮಾತು ಹೇಳಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಹೊದ್ದೂರು ಪ್ಯಾಕ್ಸ್ ಅಧ್ಯಕ್ಷ ನೆರವಂಡ ಸಂಜಯ್ ಪೂಣಚ್ಚ, ಗ್ರಾಮದ ರೈತರ ಸಹಕಾರ ಇಂದು ಸಹಕಾರಿ ಸಂಸ್ಥೆಯ ಬೆಳವಣಿಗೆಗೆ ಸಹಕಾರಿಯಾಗಿದೆ. ಸಂಸ್ಥೆಯಲ್ಲಿ ದೊರಕುವ ಎಲ್ಲಾ ಸೌಲಭ್ಯಗಳನ್ನು ಮುಕ್ತವಾಗಿ ಪಡೆದು ಆರ್ಥಿಕ ಪ್ರಗತಿ ಸಾಧಿಸಬೇಕು ಎಂದು ತಿಳಿಸಿದರು.
ಸಹಕಾರ ಭಾರತಿ ರಾಜ್ಯ ಉಪಾಧ್ಯಕ್ಷ ನಂದಿನೆರವಂಡ ರವಿ ಬಸಪ್ಪ ಸಹಕಾರ ಧ್ವಜಾರೋಹಣ ನೆರವೇರಿಸಿದರು.
ಜಿಲ್ಲಾ ಸಹಕಾರಿ ರತ್ನ ಪ್ರಶಸ್ತಿ ವಿಜೇತರು, ರಾಜ್ಯ ಸಹಕಾರ ಹಾಪ್‍ಕಾಮ್ಸ್ ನಿರ್ದೇಶಕ ಬಿದ್ದಾಟಂಡ ಎ.ಚಂಗಪ್ಪ, ಕಡಂಗ ಕೃಷಿ ಪತ್ತಿನ ಅಧ್ಯಕ್ಷ ಕೋಡಿರ ಪ್ರಸನ್ನ ತಮ್ಮಯ್ಯ, ಕೊಡಗು ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕ ಎಂ.ಎಸ್.ಕೃಷ್ಣ ಪ್ರಸಾದ್, ಹೊದ್ದೂರು ಪ್ಯಾಕ್ಸ್ ಕಾರ್ಯನಿರ್ವಹಣಾಧಿಕಾರಿ ಕೂಡಂಡ ಎಂ.ಸೋಮಣ್ಣ ಉಪಸ್ಥಿತರಿದ್ದರು.
ಹೊದ್ದೂರು ಪ್ಯಾಕ್ಸ್ ಉಪಾಧ್ಯಕ್ಷ ವಾಂಚೀರ ರನ್ನ ಅಜಯ್‍ಕುಮಾರ್ ಸ್ವಾಗತಿಸಿದರು. ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯೋಗೇಂದ್ರ ನಾಯಕ್ ಪ್ರಾರ್ಥಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

(ವರದಿ : ಸಾಬ ಸುಬ್ರಮಣಿ) 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ತಲಕಾವೇರಿಯಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮೂರ್ನಾಡು, NEWS DESK ಅ.17: ಇಲ್ಲಿನ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಅ.20ರಂದು ಮೂರ್ನಾಡಿನಲ್ಲಿ 33ನೇ…

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026

ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಅಕ್ಟೋಬರ್ 17, 2026

ಇಂದು ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿ ದಸರಾ ಸಂಭ್ರಮಕ್ಕೆ ಮೆರುಗು ನೀಡಿದ ಶ್ವಾನ ಪ್ರದರ್ಶನ; ಪ್ರಾಣಿ ಪ್ರಿಯರ ಮನಗೆದ್ದ ವಿವಿಧ ತಳಿಗಳು

ಅಕ್ಟೋಬರ್ 17, 2026

SSLC, ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿ: ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ

ಅಕ್ಟೋಬರ್ 17, 2026

ನಾಳೆ ಮಡಿಕೇರಿಯಲ್ಲಿ ಮಹಿಳಾ ದಸರಾ: ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 17, 2026

ಅ.19ರಂದು ರೋಟರಿ ಮಡಿಕೇರಿಯಿಂದ ಉಚಿತ ಮೂಳೆ ಮತ್ತು ನರರೋಗ ತಪಾಸಣಾ ಶಿಬಿರ

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.