Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾ.16 ರಂದು ಅಂಚೆ ಅದಾಲತ್ ಸಭೆ*
  • *ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾಗಿ ಡಿ.ವಿನೋದ್ ಖನ್ನಾ ಅಧಿಕಾರ ಸ್ವೀಕಾರ*
  • *ಮಹಿಳಾ ದಿನಕ್ಕೇ ಸಿಲಿಂಡರ್ ಬೆಲೆ ಏರಿಕೆ ಶಾಕ್: ಕೇಂದ್ರದ ವಿರುದ್ಧ ಡಿಕೆಶಿ ಕಿಡಿ*
  • *ಜಿಲ್ಲಾ ಕದಳಿ ಘಟಕದ ಅಧ್ಯಕ್ಷರಾಗಿ ಸರೋಜಾ ಆರಾಧ್ಯ ನೇಮಕ*
  • *ರೆಡ್‍ಕ್ರಾಸ್ ಸಂಸ್ಥೆಯಿಂದ ಕ್ಯಾನ್ಸರ್ ತಪಾಸಣಾ ಶಿಬಿರ ಹಾಗೂ ಅರಿವು ಕಾರ್ಯಕ್ರಮ; ಮಹಿಳೆಯರು ಆರೋಗ್ಯ ಕಡೆ ಗಮನಹರಿಸಿ: ಆರ್.ಐಶ್ವರ್ಯ*
  • *ರೋಟರಿ ಮಡಿಕೇರಿಯಿಂದ ಮಕ್ಕಳ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ*
  • *ವನ್ಯಜೀವಿಗಳ ಮಾಹಿತಿ ಪಡೆದ ಶಾಸಕ ಡಾ.ಮಂತರ್ ಗೌಡ*
  • *ಕಾಡಾನೆ ದಾಳಿಗೆ ಸಿಲುಕಿ ಗ್ರಾ.ಪಂ ಮಾಜಿ ಸದಸ್ಯೆ ಬಲಿ : ವಾಲ್ನೂರು ಗ್ರಾಮದಲ್ಲಿ ಘಟನೆ*
  • *ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ : ಕೊಡವ ಮಹಿಳೆಯರ ಸಬಲೀಕರಣಕ್ಕಾಗಿ ಸಿಎನ್‌ಸಿಯಿಂದ ಹಕ್ಕೊತ್ತಾಯ ಮಂಡನೆ*
  • *ಕೂಡಿಗೆ ಡಯಟ್ ಸಂಸ್ಥೆಯಲ್ಲಿ ಜಿಲ್ಲಾ ವೃತ್ತಿ ಮಾರ್ಗದರ್ಶನ ಘಟಕ ಸ್ಥಾಪನೆ ಕುರಿತ ಸಭೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪಾಲೆಮಾಡು ಕಾನ್ಸಿರಾಂ 90 ಕುಟುಂಬಗಳಿಗೆ ಶೀಘ್ರ ಹಕ್ಕುಪತ್ರ ವಿತರಣೆ : ಶಾಸಕ ಮಂತರ್ ಗೌಡ ಭರವಸೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪಾಲೆಮಾಡು ಕಾನ್ಸಿರಾಂ 90 ಕುಟುಂಬಗಳಿಗೆ ಶೀಘ್ರ ಹಕ್ಕುಪತ್ರ ವಿತರಣೆ : ಶಾಸಕ ಮಂತರ್ ಗೌಡ ಭರವಸೆ*

ನವೆಂಬರ್ 16, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.16 : ಹೊದ್ದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಲೆಮಾಡು ಕಾನ್ಸಿರಾಮ್ ನಗರ ನಿವಾಸಿಗಳ 90 ಕುಟುಂಬಗಳಿಗೆ ಹೊಸ ವರ್ಷದ ವೇಳೆಗೆ ಹಕ್ಕುಪತ್ರ ವಿತರಿಸಲಾಗುವುದು ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಭರವಸೆ ನೀಡಿದರು.
ಮಡಿಕೇರಿ ತಾಲ್ಲೂಕು ಹೊದ್ದೂರು ಬಳಿಯ ಪಾಲೆಮಾಡು ಗ್ರಾಮದ ಕಾನ್ಸಿರಾಮ್ ನಗರ ನಿವಾಸಿಗಳ ಕುಂದುಕೊರತೆ ಸಭೆ ನಡೆಸಿ ಶಾಸಕರು ಮಾತನಾಡಿದರು.
ಹೊದ್ದೂರು ಗ್ರಾ.ಪಂ.ವ್ಯಾಪ್ತಿಯ ಪಾಲೆಮಾಡು ಬಳಿಯಲ್ಲಿ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ ಆಗುವುದರಿಂದ ಸ್ಥಳೀಯರಿಗೆ ಉದ್ಯೋಗ ದೊರೆಯಲಿದೆ. ಇದರಿಂದ ಸುತ್ತಮುತ್ತಲ ಪ್ರದೇಶಗಳ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಆ ನಿಟ್ಟಿನಲ್ಲಿ ಪಾಲೆಮಾಡು ಕಾನ್ಸಿರಾಮ್ ನಗರದಲ್ಲಿ ವಾಸಿಸುತ್ತಿರುವ ಎಲ್ಲಾ ಅರ್ಹ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲಾಗುವುದು ಎಂದು ಹೇಳಿದರು.
ಇಲ್ಲಿನ ರಸ್ತೆ ಅಗಲೀಕರಣ, ರಸ್ತೆ ಸರಿಪಡಿಸುವುದು, ಕುಡಿಯುವ ನೀರು ಸಂಪರ್ಕ ಕಲ್ಪಿಸುವುದು, ಬಸ್ ಸೌಕರ್ಯ ಜೊತೆಗೆ ನ್ಯಾಯ ಬೆಲೆ ಅಂಗಡಿ ಕಲ್ಪಿಸುವುದು ಹೀಗೆ ಹಲವು ಮೂಲಭೂತ ಸೌಕರ್ಯವನ್ನು ತ್ವರಿತವಾಗಿ ಬಗೆಹರಿಸಲಾಗುವುದು ಎಂದು ಶಾಸಕರಾದ ಡಾ.ಮಂತರ್ ಗೌಡ ಹೇಳಿದರು.
ಸರ್ಕಾರ ಬಡ ಜನರ ಏಳಿಗೆಗಾಗಿ ಎಲ್ಲಾ ರೀತಿಯ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದು, ಅದನ್ನು ಬಳಸಿಕೊಂಡು ಇತರರಂತೆ ಬದುಕು ಕಟ್ಟಿಕೊಳ್ಳುವಂತಾಗಬೇಕು ಎಂದು ಶಾಸಕರು ಇದೇ ಸಂದರ್ಭದಲ್ಲಿ ಸಲಹೆ ನೀಡಿದರು.
ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ, ಇಲ್ಲಿನ ಪಾಲೆಮಾಡು ನಿವಾಸಿಗಳಿಗೆ ಹಕ್ಕುಪತ್ರ ಕಲ್ಪಿಸುವ ನಿಟ್ಟಿನಲ್ಲಿ ಉಪ ವಿಭಾಗಾಧಿಕಾರಿಯವರ ನ್ಯಾಯಾಲಯದಲ್ಲಿ ಇತ್ಯರ್ಥಪಡಿಸಿ ಕಾನೂನು ಪ್ರಕಾರ 90 ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಲಾಗುವುದು ಎಂದು ಹೇಳಿದರು.
ಇಲ್ಲಿನ 34 ಕುಟುಂಬಗಳಿಗೆ 94ಸಿ ರಡಿ ನಿವೇಶನ ರಹಿತರಿಗೆ ನಿವೇಶನ ಒದಗಿಸಲಾಗುವುದು. ಪಾಲೆಮಾಡು ಕಾನ್ಸಿರಾಮ್ ನಗರದ ಅಭಿವೃದ್ಧಿಗೆ ಗ್ರಾ.ಪಂ ವತಿಯಿಂದ ಎಲ್ಲಾ ರೀತಿಯ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸುವಲ್ಲಿ ಸರ್ಕಾರಕ್ಕೆ ಗ್ರಾಮ ಪಂಚಾಯತ್ ಮೂಲಕ ಕ್ರಿಯಾ ಯೋಜನೆಯ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಗ್ರಾಮದಲ್ಲಿ 260 ಕುಟುಂಬಗಳು ವಾಸಿಸುತ್ತಿದ್ದು, ನ್ಯಾಯಬೆಲೆ ಅಂಗಡಿ ಆರಂಭ, ಹಾಗೆಯೇ ಹತ್ತಿರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಆರಂಭಕ್ಕೆ ಕ್ರಮವಹಿಸಲಾಗುವುದು. ಜೊತೆಗೆ ಬಸ್ ಸೌಲಭ್ಯ ಕಲ್ಪಿಸಲು ಸಾರಿಗೆ ಇಲಾಖೆಯೊಂದಿಗೆ ಚರ್ಚಿಸಲಾಗುವುದು ಎಂದು ಜಿಲ್ಲಾಧಿಕಾರಿ ನುಡಿದರು.
ಜಿಲ್ಲಾಡಳಿತ ವತಿಯಿಂದ ಗ್ರಾಮಕ್ಕೆ ಎಲ್ಲಾ ರೀತಿಯ ಮೂಲ ಸೌಲಭ್ಯ ಕಲ್ಪಿಸಲು ಪ್ರಯತ್ನಿಸಲಾಗುವುದು. ತಮ್ಮ ಹಕ್ಕುಗಳಿಗೆ ಜಿಲ್ಲಾಡಳಿತ ಸ್ಪಂದಿಸಲಿದೆ. ಆ ನಿಟ್ಟಿನಲ್ಲಿ ಎಲ್ಲರೂ ಜಿಲ್ಲಾಡಳಿತ ಜೊತೆ ಸಹಕರಿಸಬೇಕು. ಪ್ರತಿಯೊಬ್ಬರೂ ಶಿಕ್ಷಣ ಪಡೆಯುವತ್ತ ಗಮನಹರಿಸಬೇಕು ಎಂದರು.
ಗ್ರಾಮದ ಮುಖ್ಯಸ್ಥ ಕೆ.ಮೊಣ್ಣಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ ಇಲ್ಲಿನ ಜನರ ಬದುಕು ಹಸನು ಮಾಡುವ ನಿಟ್ಟಿನಲ್ಲಿ ಕಳೆದ 16 ವರ್ಷಗಳಿಂದ ಹೋರಾಟ ಮಾಡಿಕೊಂಡು ಬರಲಾಗಿದ್ದು, ಇಲ್ಲಿನ ಕುಂದುಕೊರತೆಯನ್ನು ಪರಿಹರಿಸಬೇಕು ಎಂದು ಮನವಿ ಮಾಡಿದರು.
ಹಕ್ಕುಪತ್ರ ವಿತರಣೆಯಲ್ಲಿ ಲೋಪವಾಗಿದ್ದು, ಇದನ್ನು ಸರಿಪಡಿಸಬೇಕು. 1200 ಕ್ಕೂ ಹೆಚ್ಚು ಜನರು ವಾಸ ಮಾಡುತ್ತಿದ್ದು, ಕನಿಷ್ಠ ಸೌಲಭ್ಯಗಳನ್ನು ಈಡೇರಿಸಬೇಕು ಎಂದರು.
ಇಲ್ಲಿನ ಕ್ರೀಡಾಂಗಣ ನಿರ್ಮಾಣ ಮತ್ತು ಸ್ಮಶಾನ ಜಾಗ ಸಂಬಂಧಿಸಿದಂತೆ ಗೊಂದಲವಿದ್ದು, ಇದನ್ನು ಸರಿಪಡಿಸಬೇಕು. ಜನಸಂಖ್ಯೆ ಆಧಾರದಲ್ಲಿ ಪ್ರತಿ ಕುಟುಂಬಕ್ಕೂ 2 ಎಕರೆ ಭೂಮಿ ಒದಗಿಸಬೇಕು. ಸಮಾಜ ಮುಖಿಯಾಗಿ ಬದುಕಲು ಅವಕಾಶ ಮಾಡಬೇಕು. ನೊಂದ ಜನರಿಗೆ ನ್ಯಾಯ ಒದಗಿಸಬೇಕು ಎಂದು ಮೊಣ್ಣಪ್ಪ ಇದೇ ಸಂದರ್ಭದಲ್ಲಿ ಕೋರಿದರು.
ಗ್ರಾ.ಪಂ.ಅಧ್ಯಕ್ಷ ಎಚ್.ಎ.ಹಂಸ, ಜಿ.ಪಂ.ಮಾಜಿ ಅಧ್ಯಕ್ಷರಾದ ಕೆ.ಪಿ.ಚಂದ್ರಕಲಾ, ಹಮೀದ್ ಅವರು ಮಾತನಾಡಿದರು.
ಜಿ.ಪಂ.ಸಿಇಒ ವರ್ಣಿತ್ ನೇಗಿ, ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಲ್ಲಾಳ್, ಗ್ರಾ.ಪಂ.ಉಪಾಧ್ಯಕ್ಷರಾದ ಅನುರಾಧ, ಗ್ರಾ.ಪಂ.ಸದಸ್ಯರು, ತಹಶೀಲ್ದಾರರಾದ ಪ್ರವೀಣ್ ಕುಮಾರ್, ತಾ.ಪಂ.ಇಒ ಶೇಖರ್, ಭೂ ದಾಖಲೆಗಳ ಉಪ ನಿರ್ದೇಶಕರಾದ ಪಿ.ಶ್ರೀನಿವಾಸ್, ಪಿಡಿಒ ಅಬ್ದುಲ್ಲಾ, ರಂಜಿತ್ ಮೌರ್ಯ, ಲಕ್ಷ್ಮಿ, ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಾ.16 ರಂದು ಅಂಚೆ ಅದಾಲತ್ ಸಭೆ*

ಮಾರ್ಚ್ 9, 2026

*ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾಗಿ ಡಿ.ವಿನೋದ್ ಖನ್ನಾ ಅಧಿಕಾರ ಸ್ವೀಕಾರ*

ಮಾರ್ಚ್ 9, 2026

*ಮಹಿಳಾ ದಿನಕ್ಕೇ ಸಿಲಿಂಡರ್ ಬೆಲೆ ಏರಿಕೆ ಶಾಕ್: ಕೇಂದ್ರದ ವಿರುದ್ಧ ಡಿಕೆಶಿ ಕಿಡಿ*

ಮಾರ್ಚ್ 9, 2026

*ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾಗಿ ಡಿ.ವಿನೋದ್ ಖನ್ನಾ ಅಧಿಕಾರ ಸ್ವೀಕಾರ*

ಮಾರ್ಚ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಮಾ.9 : ಕೊಡಗು ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾಗಿ ಡಿ.ವಿನೋದ್ ಖನ್ನಾ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.

*ಮಹಿಳಾ ದಿನಕ್ಕೇ ಸಿಲಿಂಡರ್ ಬೆಲೆ ಏರಿಕೆ ಶಾಕ್: ಕೇಂದ್ರದ ವಿರುದ್ಧ ಡಿಕೆಶಿ ಕಿಡಿ*

ಮಾರ್ಚ್ 9, 2026

*ಜಿಲ್ಲಾ ಕದಳಿ ಘಟಕದ ಅಧ್ಯಕ್ಷರಾಗಿ ಸರೋಜಾ ಆರಾಧ್ಯ ನೇಮಕ*

ಮಾರ್ಚ್ 9, 2026

*ರೆಡ್‍ಕ್ರಾಸ್ ಸಂಸ್ಥೆಯಿಂದ ಕ್ಯಾನ್ಸರ್ ತಪಾಸಣಾ ಶಿಬಿರ ಹಾಗೂ ಅರಿವು ಕಾರ್ಯಕ್ರಮ; ಮಹಿಳೆಯರು ಆರೋಗ್ಯ ಕಡೆ ಗಮನಹರಿಸಿ: ಆರ್.ಐಶ್ವರ್ಯ*

ಮಾರ್ಚ್ 9, 2026

*ರೋಟರಿ ಮಡಿಕೇರಿಯಿಂದ ಮಕ್ಕಳ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ*

ಮಾರ್ಚ್ 9, 2026

*ವನ್ಯಜೀವಿಗಳ ಮಾಹಿತಿ ಪಡೆದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 9, 2026

*ಕಾಡಾನೆ ದಾಳಿಗೆ ಸಿಲುಕಿ ಗ್ರಾ.ಪಂ ಮಾಜಿ ಸದಸ್ಯೆ ಬಲಿ : ವಾಲ್ನೂರು ಗ್ರಾಮದಲ್ಲಿ ಘಟನೆ*

ಮಾರ್ಚ್ 9, 2026

*ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ : ಕೊಡವ ಮಹಿಳೆಯರ ಸಬಲೀಕರಣಕ್ಕಾಗಿ ಸಿಎನ್‌ಸಿಯಿಂದ ಹಕ್ಕೊತ್ತಾಯ ಮಂಡನೆ*

ಮಾರ್ಚ್ 8, 2026

*ಕೂಡಿಗೆ ಡಯಟ್ ಸಂಸ್ಥೆಯಲ್ಲಿ ಜಿಲ್ಲಾ ವೃತ್ತಿ ಮಾರ್ಗದರ್ಶನ ಘಟಕ ಸ್ಥಾಪನೆ ಕುರಿತ ಸಭೆ*

ಮಾರ್ಚ್ 8, 2026

*ಗೋಣಿಕೊಪ್ಪಲು : ಮಹಿಳೆಯರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಳ್ಳಿ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.