ಮಡಿಕೇರಿ ನ.16 : ಸುಂಟಿಕೊಪ್ಪ 66/11 ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಮಾದಾಪುರ ಮತ್ತು ಕೆದಕಲ್ ಫೀಢರ್‍ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಬೇಕಿರುವುದರಿಂದ ನ.17 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ಆದ್ದರಿಂದ ಗರಗಂದೂರು, ಮಾದಾಪುರ, ಕಾಂಡನಕೊಲ್ಲಿ, ಹಟ್ಟಿಹೊಳೆ. ಕುಂಬೂರು, ಬಿಳಿಗೇರಿ, ಸೂರ್ಲಬಿ, ಹಾಲೇರಿ, ಕೆದಕಲ್, ಹೊರೂರು, ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅನಿತಾ ಬಾಯಿ ಕೋರಿದ್ದಾರೆ.







