Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*
  • *ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*
  • *ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
  • *ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*
  • *ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*
  • *ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*
  • *ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬರ ಪರಿಹಾರದ ಮನವಿಗೆ ಕೇಂದ್ರ ಇನ್ನೂ ಸ್ಪಂದಿಸಿಲ್ಲ : ಸಿಎಂ ಸಿದ್ದರಾಮಯ್ಯ ಅಸಮಾಧಾನ*
ಇತ್ತೀಚಿನ ಸುದ್ದಿಗಳು ಕರ್ನಾಟಕ

*ಬರ ಪರಿಹಾರದ ಮನವಿಗೆ ಕೇಂದ್ರ ಇನ್ನೂ ಸ್ಪಂದಿಸಿಲ್ಲ : ಸಿಎಂ ಸಿದ್ದರಾಮಯ್ಯ ಅಸಮಾಧಾನ*

ನವೆಂಬರ್ 17, 20234 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮೈಸೂರು ನ. 17:  ಪಂಚ ರಾಜ್ಯಗಳ ಚುನಾವಣೆಯಲ್ಲಿ ತೆಲಂಗಾಣ, ಛತ್ತಿಸ್‍ಗಡ, ಮಧ್ಯಪ್ರದೇಶ ಹಾಗೂ ರಾಜಾಸ್ಥಾನದಲ್ಲಿಯೂ ನಾವು ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದರು.

ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ,  ನನಗೆ ಬಂದಿರುವ ಮಾಹಿತಿಯ ಪ್ರಕಾರ ಮೂರು ರಾಜ್ಯಗಳಲ್ಲಿ ಗೆಲ್ಲುತ್ತೇವೆ ಎಂದ ಅವರು. ಕಾಂಗ್ರೆಸ್ ಪರವಾಗಿ ಜನಾದೇಶ ಬಂದರೆ ಲೋಕಸಭಾ ಚುನಾವಣೆ ಮುಂದೂಡಲಾಗುವುದೇ ಎಂಬ ಬಗ್ಗೆ ಉತ್ತರಿಸಿ ಮುಂದೂಡಲಾಗುವುದಿಲ್ಲ ಏಕೆಂದರೆ ಈಗಾಗಲೇ ನವೆಂಬರ್ ಕೊನೆಯಲ್ಲಿದ್ದೇವೆ, ಚುನಾವಣಾ ನೀತಿ ಸಂಹಿತೆ ಮಾರ್ಚ್ ಅಂತ್ಯಕ್ಕೆ ಆಗಬಹುದು ಎಂಬ ನಿರೀಕ್ಷೆ ಇದೆ ಎಂದರು.

ಬರಪರಿಹಾರದ ಮನವಿಗೆ ಕೇಂದ್ರ ಇನ್ನೂ ಸ್ಪಂದಿಸಿಲ್ಲ:: 
ರಾಜ್ಯಸರ್ಕಾರ ಬರಪರಿಹಾರ ನೀಡುವ ಸಂಬಂಧ ಕೇಂದ್ರಕ್ಕೆ ಒಂದು ವಾರದ ಗಡುವು ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕೇಂದ್ರದಿಂದ 17900 ಕೋಟಿ ರೂ.ಗಳ ಬರಪರಿಹಾರಕ್ಕೆ ಮನವಿ ಸಲ್ಲಿಸಲಾಗಿದೆ. ಹಾಗೂ ಕೇಂದ್ರ ಬರ ಅಧ್ಯಯನ ತಂಡ ಪರಿಶೀಲನೆ ನಡೆಸಿ ಒಂದು ತಿಂಗಳಾದರೂ ಕೂಡ ವರದಿಯನ್ನು ನೀಡಿಲ್ಲ ಹಾಗೂ ಸರ್ಕಾರದ ಮನವಿಗೆ ಕೇಂದ್ರ ಇದುವರೆಗೂ ಸ್ಪಂದಿಸಿಲ್ಲ. ಬರಪರಿಹಾರ ರಾಜ್ಯಕ್ಕೆ ನೀಡುವ ಭಿಕ್ಷೆಯಲ್ಲ. ಎನ್ ಡಿ ಆರ್ ಎಫ್ ನಡಿ ಪರಿಹಾರವನ್ನು ನೀಡಬೇಕಿದ್ದು, ಅದನ್ನು ರಾಜ್ಯ ನೀಡಿರುವ ತೆರಿಗೆಯ ಮೊತ್ತವೇ ಆಗಿದೆ. ಬರಪರಿಹಾರಕ್ಕೆ ಸಂಬಂಧಿಸಿದಂತೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಗಂಭೀರ ಚರ್ಚೆಗಳನ್ನು ನಡೆಸಲಾಗಿದೆ ಎಂದರು.

ರಾಮಮಂದಿರ ಕಟ್ಟಲು ನಮ್ಮದೇನು ವಿರೋಧವಿಲ್ಲ ::  ಜನವರಿ 22 ರಂದು ರಾಮಮಂದಿರ ಉದ್ಘಾಟನೆಗೊಳ್ಳಲಿದ್ದು ಇದರ ಲಾಭವನ್ನು ಬಿಜೆಪಿ ಪಡೆಯಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ ಅದೇನು ಹೊಸದಲ್ಲ. ವಿವಾದ ಬಹಳ ವರ್ಷಗಳಿಂದ ಇದ್ದು, ನ್ಯಾಯಾಲಯದಲ್ಲಿ ಇತ್ಯರ್ಥವಾಗಿದೆ. ರಾಮಮಂದಿರ ಕಟ್ಟಲು ನಮ್ಮದೇನು ವಿರೋಧವಿಲ್ಲ. ಅದರಿಂದ ಮತದಾರರು ಬದಲಾಗುತ್ತಾರೆ ಎನ್ನುವುದು ಸುಳ್ಳು. ನಮ್ಮ ದೇಶದ ಜನ ವೈವಿಧ್ಯತೆಯಲ್ಲಿ ಏಕತೆಯನ್ನು ಕಂಡುಕೊಂಡಿದ್ದಾರೆ. ಬ್ರಿಟಿಷರ ಹಾಗೂ ಮೊಘಲರ ದಾಳಿಯಾದರೂ ಒಂದು ದೇಶವಾಗಿ ನಾವು ಉಳಿದುಕೊಂಡಿದ್ದೇವೆ. ಈ ದೇಶದಲ್ಲಿ ಅನೇಕ ಜಾತಿ, ಭಾಷೆಗಳು ಹಾಗೂ ಧರ್ಮಗಳಿದ್ದರೂ ದೇಶವಾಗಿ ಒಂದಾಗಿದ್ದು, ಐಕ್ಯತೆ, ಒಗ್ಗಟ್ಟಿನಿಂದ. ಉಳಿದುಕೊಂಡು ಬಂದಿದ್ದೇವೆ. ಒಳಗೊಳ್ಳುವಿಕೆಯಲ್ಲಿ ನಂಬಿಕೆ ಇಟ್ಟವರು ದೇಶದಲ್ಲಿ ಹೆಚ್ಚಿದ್ದಾರೆ ಎಂದರು.

ರಾಜಕೀಯ ಇಬ್ಬಂದಿತನ :: ಬೇರೆ ರಾಜ್ಯಗಳ ಚುನಾವಣೆಯಲ್ಲಿ ಕರ್ನಾಟಕವನ್ನು ಬಿಜೆಪಿ ಟೀಕೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಕರ್ನಾಟಕ ಹಾಗೂ ಸಿದ್ದರಾಮಯ್ಯನ ಬಗ್ಗೆ ಅವರಿಗೆ ಭಯ. ಅದಕ್ಕೆ ಅವರು ಮಧ್ಯ ಪ್ರದೇಶದಲ್ಲಿ ನನ್ನ ಹಾಗೂ ಕರ್ನಾಟಕದ ಬಗ್ಗೆ ಮಾತನಾಡಿದ್ದಾರೆ. ಪ್ರಧಾನಮಂತ್ರಿಗಳು ನಮ್ಮ ಗ್ಯಾರಂಟಿಗಳಿಗೆ ವಿರೋಧ ಮಾಡಿದ್ದರು. ಈಗ ವಿಕಸಿತ್ ಭಾರತ್ ಎಂದು ವ್ಯಾನ್ ಕಳಿಸಿ ಅದರಲ್ಲಿ ಪ್ರಧಾನಮಂತ್ರಿಗಳ ಗ್ಯಾರಂಟಿ ಎಂದು ಬರೆದಿದ್ದಾರೆ. ಅದನ್ನು ಭಾರತದ ಸರ್ಕಾರ ಕಳುಹಿಸಿದೆ. ಮೊದಲು ನಮ್ಮ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿ ಈಗ ಅವರು ಗ್ಯಾರಂಟಿಗಳನ್ನು ಘೋಷಿಸಿದ್ದಾರೆ. ಗ್ಯಾರಂಟಿ ಯೋಜನೆಗಳನ್ನು ಘೋಷಿಸುವ ಪರಿಕಲ್ಪನೆಯನ್ನು ಪ್ರಧಾನಿಗಳೇ ವಿರೋಧಿಸಿದ್ದರು. ಈಗ ಖುದ್ದು ಅವರೇ ಗ್ಯಾರಂಟಿಗಳನ್ನು ಘೋಷಿಸಿದ್ದಾರೆ. ಇದನ್ನು ರಾಜಕೀಯ ಇಬ್ಬಂದಿತನ ಎಂದು ಕರೆಯಬೇಕು ಎಂದರು.

ರಾಜಕೀಯ ಮಾತುಗಳು ::  ಗ್ಯಾರಂಟಿಯ ಜೊತೆ ಭ್ರಷ್ಟಾಚಾರದ ಬಗ್ಗೆಯೂ ಮಾತನಾಡಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಗುತ್ತಿಗೆದಾರರ ಸಂಘವು 40% ಸರ್ಕಾರ ಎಂದು ಕರೆದಿದ್ದು ಬಿಜೆಪಿ ಸರ್ಕಾರವನ್ನು. ಸಮ್ಮನೇ ರಾಜಕೀಯವಾಗಿ ಮಾತನಾಡುತ್ತಾರೆ. ನಾವು 5 ಗ್ಯಾರಂಟಿಗಳನ್ನು ಕೊಟ್ಟವರು, ನುಡಿದಂತೆ ನಡೆದಿದ್ದೇವೆ. 4 ಗ್ಯಾರಂಟಿ ಜಾರಿಯಾಗಿದೆ. ಬಾಕಿ ಒಂದು ಗ್ಯಾರಂಟಿಯನ್ನು ಜನವರಿಯಲ್ಲಿ ಅನುಷ್ಠಾನ ಮಾಡುತ್ತೇವೆ ಎಂದರು.

ಅಧಿವೇಶನದಲ್ಲಿ ಉತ್ತರ ಕೊಡುತ್ತೇವೆ ::  ಮಾಜಿ ಮುಖ್ಯಮತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಇಂದು ಕೂಡ ಪತ್ರಿಕಾಗೋಷ್ಠಿ ಕರೆದು ಮಾಡಿರುವ ಆರೋಪಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿ ವಿಧಾನಸಭಾ ಅಧಿವೇಶನದಲ್ಲಿ ಅವರು ಚರ್ಚೆ ಮಾಡಲಿ ಉತ್ತರ ಕೊಡುತ್ತೇವೆ ಎಂದರು. ಸರ್ಕಾರ ಓಡಿಹೋಗುವುದಿಲ್ಲ. ಕುಮಾರಸ್ವಾಮಿಯವರು ಯಾವಾಗ ಸತ್ಯ ಹೇಳಿದ್ದಾರೆ. ಯಾವಾಗಲೂ ಹಿಟ್ ಅಂಡ್ ರನ್ ಕೇಸ್ ಅವರದ್ದು ಎಂದು ತಿಳಿಸಿದರು. ಸುಳ್ಳನ್ನೆಲ್ಲಾ ತನಿಖೆ ಮಾಡಿಸಲು ಆಗುವುದಿಲ್ಲ. ಏನಾದರೂ ಆಧಾರ ಇದ್ದರೆ, ದಾಖಲಾತಿ ಇದ್ದರೆ ತನಿಖೆ ಮಾಡಬಹುದು ಎಂದರು.

ಹೆಚ್.ಡಿ.ಕೆ ಸರ್ಕಾರದ ಭ್ರಷ್ಟಾಚಾರದ ತನಿಖೆ: *ಹಿಂದೇಟು ಹಾಕೋಲ್ಲ ::  ಹೆಚ್.ಡಿ ಕುಮಾರಸ್ವಾಮಿಯವರು ಅವರ ಭ್ರಷ್ಟಾಚಾರಗಳ ಬಗ್ಗೆ ತನಿಖೆ ಮಾಡುವಂತೆ ಸವಾಲು ಹಾಕಿರುವುದಾಗಿ ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಮಾಡಬೇಕಾಗಿ ಬಂದರೆ ಮಾಡುತ್ತೇವೆ ಎಂದರು. ಅದರಲ್ಲಿ ಹಿಂದೆ ಹೋಗುವ ಪ್ರಶ್ನೆಯೇ ಇಲ್ಲ. ಕುಮಾರಸ್ವಾಮಿಯಾಗಲಿ, ನಮ್ಮ ಪಕ್ಷದವರಾಗಲಿ ತಪ್ಪು ಮಾಡಿದರೆ ಶಿಕ್ಷೆ ಅನುಭವಿಸಲೇ ಬೇಕು ಎಂದರು.ಕುಮಾರಸ್ವಾಮಿಯವರ ಬಗ್ಗೆ ತನಿಖೆ ನಡೆಸಲು ಸರ್ಕಾರ ಹಿಂಜರಿಯುವುದಿಲ್ಲ ಎಂದರು.

ದಂಡ ಕಟ್ಟುವ ಮೂಲಕ ತಪ್ಪು ಒಪ್ಪಿಕೊಂಡಿದ್ದಾರೆ : ಹೆಚ್ಚಿನ ಮೊತ್ತದ ವಿದ್ಯುತ್ ಬಿಲ್ಲನ್ನು ಅನಗತ್ಯವಾಗಿ ನನ್ನ ಮೇಲೆ ಹೇರಲಾಗಿದೆ ಎಂಬ ಕುಮಾರಸ್ವಾಮಿಯವರ ಹೇಳಿಕೆಯ ಬಗ್ಗೆ ಉತ್ತರಿಸುತ್ತಾ, ವಿದ್ಯುತ್ ಬಿಲ್ಲನ್ನು ಬೆಸ್ಕಾಂ ನವರು ನೀಡುತ್ತಾರೆ. ಕುಮಾರಸ್ವಾಮಿಯವರು ಮೊದಲು ತಪ್ಪನ್ನೇ ಮಾಡಿಲ್ಲ ಎಂದವರು ನಂತರ ದಂಡವನ್ನು ಕಟ್ಟಿರುವುದು, ಅವರು ಅಪರಾಧ ಮಾಡಿರುವುದನ್ನು ಒಪ್ಪಿಕೊಂಡಂತಾಗಿದೆ ಎಂದರು.

ಜಿಎಸ್ ಟಿಯ ರಾಜ್ಯದ ಪಾಲು ಕೇಂದ್ರದಿಂದ ನೀಡುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, 15ನೇ ಹಣಕಾಸಿನ ಆಯೋಗದ ಅವಧಿ ಮುಗಿಯುತ್ತಾ ಬಂದಿದೆ. ಮುಂಬರುವ 16ನೇ ಹಣಕಾಸಿನ ಆಯೋಗದಲ್ಲಿಯೂ ರಾಜ್ಯಕ್ಕೆ ಅನ್ಯಾಯವಾದರೆ, ಸರ್ಕಾರದ ಮುಂದಿನ ಹೆಜ್ಜೆಯ ಬಗ್ಗೆ ನಿರ್ಧರಿಸಲಾಗುವುದು ಎಂದರು.

ಕುಮಾರಸ್ವಾಮಿಯವರದು ದ್ವೇಷ ಹಾಗೂ ಅಸೂಯೆಗಳ ರಾಜಕಾರಣ: :  ಜೆಡಿಎಸ್ ನಿಂದ ಮತ್ತಷ್ಟು ನಾಯಕರು ಕಾಂಗ್ರೆಸ್ ಗೆ ಬರಲಿದ್ದಾರೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಜೆಡಿಎಸ್ ಅಥವಾ ಬಿಜೆಪಿಯ ನಾಯಕರು , ಕಾಂಗ್ರೆಸ್ ನ ಸಿದ್ದಾಂತ ಹಾಗೂ ನಾಯಕತ್ವವನ್ನು ಒಪ್ಪಿ ಬಂದಲ್ಲಿ , ಅವರನ್ನು ಸ್ವಾಗತಿಸಲಾಗುವುದು. ರಾಜ್ಯದ ಒಟ್ಟು 224 ಸ್ಥಾನದಲ್ಲಿ 136 ನ್ನು ಕಾಂಗ್ರೆಸ್ ಪಡೆದಿದೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಕಾಂಗ್ರೆಸ್ ನ ಶಕ್ತಿಯನ್ನು ವಿಸ್ತರಿಸಬೇಕಿದೆ. ಕೋಮುವಾದಿ ಪಕ್ಷಗಳು ಮತ್ತೆ ಅಧಿಕಾರಕ್ಕೆ ಬರಬಾರದು. ಜೆಡಿಎಸ್ ನ ಕುಮಾರಸ್ವಾಮಿಯವರು ಕೇವಲ ದ್ವೇಷ ಹಾಗೂ ಅಸೂಯೆಗಳ ರಾಜಕಾರಣ ಮಾಡುತ್ತಾರೆ. ನನ್ನ ಮಗ ಯತೀಂದ್ರ ಆಶ್ರಯ ಸಮಿತಿ ಅಧ್ಯಕ್ಷನಾಗಿದ್ದು, ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದರೆ, ಅವರ ಮೇಲೆ ವೃಥಾ ಆರೋಪ ಮಾಡುವ ಮೂಲಕ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ನನ್ನ ರಾಜಕೀಯ ಜೀವನದಲ್ಲಿ ಇದುವರೆಗೂ ದ್ವೇಷದ ರಾಜಕಾರಣವನ್ನು ಮಾಡಿಲ್ಲ, ಮುಂದೆಯೂ ಮಾಡುವುದಿಲ್ಲ. ಕುಮಾರಸ್ವಾಮಿಯವರಿಗೆ ಸುಳ್ಳು ಹೇಳುವುದು ಬಿಟ್ಟರೆ ಬೇರೇನೂ ತಿಳಿದಿಲ್ಲ. ಸುಳ್ಳೇ ಅವರ ಮನೆದೇವರು ಎಂದರು.

ಹಗರಣಗಳ ತನಿಖೆ : ಹಿಂದಿನ ಸರ್ಕಾರದ ಹಗರಣಗಳ ತನಿಖೆ ನಡೆಯುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, 40% ಕಮಿಷನ್, ಕೋವಿಡ್, ಬಿಟ್ ಕಾಯಿನ್ ಸೇರಿದಂತೆ ಇತರೆ ಹಗರಣಗಳ ತನಿಖೆಗೆ ಆಯೋಗಗಳನ್ನು ರಚಿಸಲಾಗಿದ್ದು, ವರದಿಯನ್ನು ನಿರೀಕ್ಷಿಸಲಾಗಿದೆ ಎಂದರು.

ಭಾರತ ವಿಶ್ವಕಪ್ ಗೆಲ್ಲುವ ವಿಶ್ವಾಸವಿದೆ ::  ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ವಿಶ್ವಕಪ್ ಅಂತಿಮ ಪಂದ್ಯ ನಡೆಯುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ನವೆಂಬರ್ 19 ರಂದು ಈ ಪಂದ್ಯ ನಡೆಯಲಿದ್ದು, ಭಾರತದ ತಂಡ ಅಜೇಯರಾಗಿ ಕೊನೆಯ ಹಂತದವರೆಗೆ ತಲುಪಿದ್ದು, ಭಾರತದ ತಂಡ ಒಗ್ಗಟ್ಟಿನಿಂದ ತಂಡಸ್ಪೂರ್ತಿಯಿಂದ ಆಡಿದಾಗ ಮಾತ್ರ ಗೆಲುವು ನಮ್ಮದಾಗುತ್ತದೆ. ಭಾರತ ತಂಡ ಈ ಬಾರಿಯ ವಿಶ್ವಕಪ್ ಗೆಲ್ಲುತ್ತಾರೆ ವಿಶ್ವಾಸವನ್ನು ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು, ತಂಡಕ್ಕೆ ಶುಭವನ್ನು ಹಾರೈಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.10 : ಕೊಡಗು ಜಿಲ್ಲೆಯಲ್ಲಿ ನಿರಂತರ ಕಾಡಾನೆ ದಾಳಿಯಿಂದ ಅಮಾಯಕ ಜೀವಗಳು ಬಲಿಯಾಗುತ್ತಿರುವುದರಿಂದ ಅರಣ್ಯ ಸಚಿವರು…

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*

ಮಾರ್ಚ್ 10, 2026

*ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*

ಮಾರ್ಚ್ 10, 2026

*ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*

ಮಾರ್ಚ್ 10, 2026

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.