Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ದತ್ತಿ ಕಾರ್ಯಕ್ರಮ : ಸಾಹಿತ್ಯ ಕ್ಷೇತ್ರದಲ್ಲಿ ಮಹಿಳಾ ಬರಹಗಾರರು ಮತ್ತಷ್ಟು ಸಂಖ್ಯೆಯಲ್ಲಿ ತೊಡಗಿಸಿಕೊಳ್ಳುವಂತಾಗಬೇಕು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ದತ್ತಿ ಕಾರ್ಯಕ್ರಮ : ಸಾಹಿತ್ಯ ಕ್ಷೇತ್ರದಲ್ಲಿ ಮಹಿಳಾ ಬರಹಗಾರರು ಮತ್ತಷ್ಟು ಸಂಖ್ಯೆಯಲ್ಲಿ ತೊಡಗಿಸಿಕೊಳ್ಳುವಂತಾಗಬೇಕು*

ನವೆಂಬರ್ 18, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಮಡಿಕೇರಿ ನ.18 : ಸಾಹಿತ್ಯ ಕ್ಷೇತ್ರದಲ್ಲಿ ಮಹಿಳಾ ಬರಹಗಾರರು ಮತ್ತಷ್ಟು ಸಂಖ್ಯೆಯಲ್ಲಿ ತೊಡಗಿಸಿಕೊಳ್ಳುವಂತಾಗಬೇಕು ಎಂದು ಸಾಹಿತಿ ಹಂಚೆಟ್ಟಿರ ಫ್ಯಾನ್ಸಿಮುತ್ತಣ್ಣ ಅವರು ಹೇಳಿದ್ದಾರೆ.
        ಕರ್ನಾಟಕ ಸಂಭ್ರಮ 50 ಪ್ರಯುಕ್ತ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಶ್ರೀ ರಾಜೇಶ್ವರಿ ಶಿಕ್ಷಣ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ರಾಜೇಶ್ವರಿ ಶಿಕ್ಷಣ ಸಂಸ್ಥೆಯಲ್ಲಿ ಶನಿವಾರ ನಡೆದ ಸಾಹಿತಿ ವಿಜಯ ವಿಷ್ಣುಭಟ್ ಮತ್ತು ದಿ.ಡಿ.ಜೆ.ಪದ್ಮನಾಭ ಅವರ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ‘ಕೊಡಗಿನ ಮಹಿಳಾ ಸಾಹಿತಿಗಳು’ ವಿಷಯ ಕುರಿತು ಮಾತನಾಡಿದರು.
        ಕೊಡಗಿನ ಗೌರಮ್ಮ ಹೆಸರಿನಲ್ಲಿ ಪ್ರಶಸ್ತಿ ಪ್ರಾರಂಭವಾದ ನಂತರ ಕೊಡಗು ಜಿಲ್ಲೆಯಲ್ಲಿ ಮಹಿಳಾ ಬರಹಗಾರರ ಸಂಖ್ಯೆ ಹೆಚ್ಚಾಗಿದೆ. ಆ ನಿಟ್ಟಿನಲ್ಲಿ ಇನ್ನಷ್ಟು ಮಹಿಳಾ ಬರಹಗಾರರು ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಕನ್ನಡ, ಕೊಡವ, ಅರೆಭಾಷೆ ಸೇರಿದಂತೆ ಹಲವು ಭಾಷೆಗಳ ಅಭಿವೃದ್ಧಿಗೆ ಶ್ರಮಿಸಬೇಕು. ಜೊತೆಗೆ ಸಾಹಿತ್ಯದ ಮೂಲಕ ಸಮಾಜದ ಆಗುಹೋಗುಗಳನ್ನು ಅಭಿವ್ಯಕ್ತಪಡಿಸಬೇಕು ಎಂದು ಪ್ಯಾನ್ಸಿ ಮುತ್ತಣ್ಣ ಅವರು ಅಭಿಪ್ರಾಯಪಟ್ಟರು.
         ‘ಸಾಹಿತ್ಯವು ಓದುಗರ ಮನಸ್ಸನ್ನು ತಲುಪಬೇಕು. ಆ ನಿಟ್ಟಿನಲ್ಲಿ ಮಹಿಳಾ ಬರಹಗಾರರನ್ನು ಪ್ರೋತ್ಸಾಹಿಸಬೇಕು.  ಆಧುನಿಕ ಸಮಾಜದಲ್ಲಿಯೂ ಸಹ ಆತ್ಮಚರಿತ್ರೆಯಲ್ಲಿ ಪುರುಷರಿಗೆ ಸಿಕ್ಕ ಪ್ರಾಮುಖ್ಯ, ಮಹಿಳಾ ಬರಹಗಾರರಿಗೆ ದೊರೆತಿಲ್ಲ. ಪುರುಷ ಮತ್ತು ಮಹಿಳೆಯರು ಸಮಾನರಾಗಿದ್ದು, ಪ್ರತಿಯೊಬ್ಬರನ್ನು ಗೌರವಿಸಬೇಕು ಎಂದರು.’
         ಸಂತ ಜೋಸೆಫರ ಶಿಕ್ಷಣ ಸಂಸ್ಥೆಯ ಉಪನ್ಯಾಸಕಿ ಕೆ.ಜಯಲಕ್ಷ್ಮಿ ಅವರು ಕೊಡಗಿನ ಜನಪದ ಹಿನ್ನೆಲೆ ಕುರಿತು ಮಾತನಾಡಿ ಕೊಡಗು ಶ್ರೀಮಂತ ಜಾನಪದ ಸಂಸ್ಕøತಿಯನ್ನು ಹೊಂದಿದೆ ಎಂದು ಹೇಳಿದರು.
         ಕೊಡಗು ಜಿಲ್ಲೆಯಲ್ಲಿ ಹಿರಿಯರನ್ನು ಗೌರವಿಸುವುದು, ಐನ್‍ಮನೆ ಸಂಸ್ಕøತಿ, ಮದುವೆ ಪದ್ಧತಿ, ಕೈಮುಹೂರ್ತ, ಹುತ್ತರಿ, ಹೀಗೆ ಸಂಸ್ಕøತಿ, ಸಂಪ್ರದಾಯ, ಜಾನಪದ ವಿಶೇಷತೆಯನ್ನು ಕಾಣಬಹುದಾಗಿದೆ ಎಂದು ಜಯಲಕ್ಷ್ಮಿ ಅವರು ತಿಳಿಸಿದರು.
        ರಾಜೇಶ್ವರಿ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ದಾಕ್ಷಾಯಣಿ ವಾಸುದೇವ ಅವರು ಮಾತನಾಡಿ ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು. ಶಿಕ್ಷಣದಿಂದ ಸಾಹಿತ್ಯ, ಭಾಷೆ ಅಭಿವೃದ್ಧಿ ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.
       ನಾಡಿನ ಭಾಷೆ ಉಳಿಸಿ ಬೆಳೆಸುವುದರೊಂದಿಗೆ ಭವಿಷ್ಯ ರೂಪಿಸಿಕೊಳ್ಳುವತ್ತ ವಿದ್ಯಾರ್ಥಿಗಳು ಗಮನಹರಿಸಬೇಕು ಎಂದು ಸಲಹೆ ಮಾಡಿದರು.
       ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಟಿ.ಪಿ.ರಮೇಶ್ ಅವರು ಮಾತನಾಡಿ ವಿದ್ಯಾರ್ಥಿಗಳು ಕವಿ, ಸಾಹಿತಿಗಳ ಹೆಸರನ್ನು ತಿಳಿದುಕೊಳ್ಳುವಂತಾಗಬೇಕು. ಕವಿ, ಸಾಹಿತಿಗಳ, ಲೇಖನ, ಕಥೆಗಳನ್ನು ಅಧ್ಯಯನ ಮಾಡಬೇಕು. ಶಿಕ್ಷಕರೇ  ಸಾಹಿತಿಗಳಾಗಿದ್ದು, ಆ ನಿಟ್ಟಿನಲ್ಲಿ ಶಿಕ್ಷಕರು ಮಕ್ಕಳಲ್ಲಿ ಸಾಹಿತ್ಯ ಬರವಣಿಗೆಗೆ ಪ್ರೋತ್ಸಾಹಿಸಬೇಕು ಎಂದರು.
       ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಘಟಕದ ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್ ಅವರು ಮಾತನಾಡಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಎಲ್ಲರ ಮನೆ, ಮನವನ್ನು ತಲುಪುವ ಕೆಲಸ ಮಾಡಲಾಗುತ್ತಿದೆ ಎಂದರು.
        ರಾಜೇಶ್ವರಿ ಪ.ಪೂ.ಕಾಲೇಜಿನ ಪ್ರಾಚಾರ್ಯರಾದ ಕೆ.ಪಿ.ಮಂದಣ್ಣ ಅವರು ಮಾತನಾಡಿದರು. ಕಸಾಪ ತಾಲ್ಲೂಕು ಘಟಕದ ಮಾಜಿ ಅಧ್ಯಕ್ಷರಾದ ಕೆ.ಟಿ.ಬೇಬಿ ಮ್ಯಾಥ್ಯೂ, ಅಂಬೆಕಲ್ ನವೀನ್, ಕುಡೆಕಲ್ ಸಂತೋಷ್, ರಾಜೇಶ್ವರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ದಿವ್ಯಾ ಅರೂರು, ಪ್ರೇಮ ರಾಘವಯ್ಯ, ಚುಮ್ಮಿ ದೇವಯ್ಯ, ಚಂದ್ರಶೇಖರ್, ವಾಸು ರೈ, ರೇಣುಕಾ ಕಿರಣ್, ಇತರರು ಇದ್ದರು.
Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.