Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮಡಿಕೇರಿ : 70ನೇ ಅಖಿಲ ಭಾರತ ಸಹಕಾರ ಸಪ್ತಾಹ : ಕೊಡಗು ಸಹಕಾರ ರತ್ನ ಪ್ರಶಸ್ತಿ ಪ್ರದಾನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ : 70ನೇ ಅಖಿಲ ಭಾರತ ಸಹಕಾರ ಸಪ್ತಾಹ : ಕೊಡಗು ಸಹಕಾರ ರತ್ನ ಪ್ರಶಸ್ತಿ ಪ್ರದಾನ

ನವೆಂಬರ್ 18, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಮಡಿಕೇರಿ ನ.18 : ಸಹಕಾರಿ ಕ್ಷೇತ್ರದಲ್ಲಿ ಸಹಕಾರಿಗಳಿಗಾಗಿ ಹಲವು ಸೌಲಭ್ಯಗಳನ್ನು ಕಲ್ಪಿಸುವುದು ಪ್ರಮುಖವಾಗಿದೆ. ಆ ನಿಟ್ಟಿನಲ್ಲಿ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಕೃಷಿಕರಿಗೆ ವಿವಿಧ ಸವಲತ್ತುಗಳನ್ನು ತಲುಪಿಸಿ ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕಿದೆ ಎಂದು ಅರಕಲಗೂಡು ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಮಂಜು ಅವರು ತಿಳಿಸಿದ್ದಾರೆ.
ನಗರದ ಬಾಲಭಾವನದಲ್ಲಿ 70ನೇ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ಸಹಕಾರ ಸಂಸ್ಥೆಗಳನ್ನು ಡಿಜಿಟಲೀಕರಣಗೊಳಿಸಲು ತಾಂತ್ರಿಕತೆಯ ಅಳವಡಿಕೆ ಉನ್ನತೀಕರಣ ದಿನಾಚರಣೆ ಕಾರ್ಯಕ್ರಮದಲ್ಲಿ ಶನಿವಾರ ಪಾಲ್ಗೊಂಡು ಅವರು ಮಾತನಾಡಿದರು.
ಸಹಕಾರ ಕ್ಷೇತ್ರವು ವಿಶಾಲ ವ್ಯಾಪ್ತಿ ಹೊಂದಿದೆ. ಕೊನೆಯಿಲ್ಲದ ಸೇವೆ ಎಂದರೆ ಜನ ಸೇವೆ ಕಷ್ಟಕಾಲಕ್ಕೆ ರೈತರಿಗೆ ನೆರವಾಗುವುದು ಎಂದರೆ ಅದು ಸಹಕಾರ ಸಂಘ ಬ್ಯಾಂಕುಗಳು ಎಂದು ತಿಳಿಸಿದರು.
ಸಹಕಾರಿ ಯೂನಿಯನ್‍ಗಳು ಸಮೃದ್ಧವಾಗಬೇಕಾದರೆ ರಾಜಕೀಯತ್ವ ನಡೆಯಬಾರದು, ಆಗಲೇ ಸಹಕಾರಿ ಸಂಘ ಹಾಗೂ ಬ್ಯಾಂಕುಗಳು ಉನ್ನತಿ ಕಾಣಲು ಸಾಧ್ಯ. ಹಾಗೆಯೇ ರೈತಾಪಿ ವರ್ಗದ ಜೀವನವೇ ಅತ್ಯಂತ ಶ್ರೀಮಂತ ಜೀವನ.  ರೈತರಿಂದಲೇ ಆರ್ಥಿಕತೆ ಸಮೃದ್ಧವಾಗಿರುವುದು ಎಂದು ಎ.ಮಂಜು ಅವರು ವಿವರಿಸಿದರು.
ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾದ ಎ.ಕೆ.ಮನುಮುತ್ತಪ್ಪ ಅವರು ಮಾತನಾಡಿ ಭಾರತದ ಆರ್ಥಿಕತೆಯನ್ನು ಮೂರನೇ ಸ್ಥಾನಕ್ಕೆ ತಲುಪಿಸಲು ಸಹಕಾರ ಸಂಸ್ಥೆಗಳಿಂದಲೇ ಸಾಧ್ಯ ಎಂಬುದನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಸಹಕಾರಿ ಸಂಸ್ಥೆಗಳನ್ನು ಸದೃಢವಾಗಿಸಬೇಕು. ಆ ನಿಟ್ಟಿನಲ್ಲಿ ದೇಶದಾದ್ಯಂತ ಸಹಕಾರ ಸಪ್ತಾಹವನ್ನು ಆಚರಿಸಲಾಗುತ್ತದೆ ಎಂದರು.
ಕೊಡಗು ಹಾಗೂ ದಕ್ಷಿಣ ಕನ್ನಡದ ಸಹಕಾರ ಸಂಸ್ಥೆಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿದ್ದು, ರಾಜ್ಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ. ಕೊಡಗು ಜಿಲ್ಲೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಪ್ರಶಸ್ತಿಗಳಿಸಿದೆ ಎಂಬುದು ವಿಶೇಷ ಎಂದರು.
ಸಹಕಾರ ರತ್ನ ಪ್ರಶಸ್ತಿ ಪುರಸ್ಕøತರಾದ ಎಂ.ಬಿ.ದೇವಯ್ಯ ಅವರು ಮಾತನಾಡಿ ಸಹಕಾರ ಸಂಘದಿಂದ ಸಾಲ ಸೌಲಭ್ಯ ಪಡೆದ ಬಡ ಜನರು ಬದುಕು ಕಟ್ಟಿಕೊಂಡಿದ್ದಾರೆ ಎಂದರು.
ಕೊಡಗಿನ ಜನರು ಭೂಮಿ ಮಾರಿಕೊಳ್ಳಬಾರದು, ಕೃಷಿಕರು ಬೆಳೆದ ಬೆಳೆಗಳಿಗೆ ಸರಿಯಾದ ಬೆಲೆ ಸಿಗದಿದ್ದರೆ ಜಾಗದ ಮಾರಾಟ ಹೆಚ್ಚಾಗುತ್ತದೆ. ಇದನ್ನು ಕೂಡ ಗಮನದಲ್ಲಿಟ್ಟುಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ.
ಪತ್ರಕರ್ತರಾದ ಜಿ.ರಾಜೇಂದ್ರ ಅವರು ಮಾತನಾಡಿ ಕೊಡಗು ಜಿಲ್ಲೆಯಲ್ಲಿ ಕಾಫಿ, ಕರಿಮೆಣಸು, ಜೇನು, ಕಿತ್ತಳೆ ಹೀಗೆ ಹಲವಾರು ಕೃಷಿಯಲ್ಲಿ  ಪ್ರಸಿದ್ಧಿ ಪಡೆದಿದ್ದು, ಸಹಕಾರಿ ಬ್ಯಾಂಕ್‍ಗಳಿಂದ ಸಾಲ ವ್ಯವಸ್ಥೆಯು ರೈತರನ್ನು ಉಳಿಸಿದೆ. ಆ ನಿಟ್ಟಿನಲ್ಲಿ ಸಹಕಾರಿ ಕ್ಷೇತ್ರಗಳನ್ನು ಉಳಿಸಿದರೆ ರೈತರನ್ನು ಬೆಳೆಗಾರರನ್ನು ಉಳಿಸಿದಂತೆ ಎಂದರು.
 ಕೆಐಸಿಎಂ ಕಾಲೇಜಿನ ಪ್ರಾಂಶುಪಾಲರಾದ ಆರ್.ಎಸ್ ರೇಣುಕಾ ಅವರು ಮಾತನಾಡಿ ವಿಶ್ವಸಂಸ್ಥೆಯು ದೇಶದ ಅಭಿವೃದ್ಧಿಗೆ 17 ಅಂಶಗಳನ್ನು ನೀಡಿದ್ದು, ಅದರಲ್ಲಿ ಆರು-ಏಳು ಅಂಶಗಳು ಸಹಕಾರ ಸಂಘಕ್ಕೆ ಹತ್ತಿರವಾಗಿರುತ್ತದೆ. ಆದ್ದರಿಂದ ಸಾರ್ವಜನಿಕ ಖಾಸಗಿ ಸಂಸ್ಥೆಗಳು ಒಟ್ಟಾಗಿ ಕಾರ್ಯ ನಿರ್ವಹಿಸಿ, ನಡೆಸುವಂತದ್ದು ಒಂದು ಅಂಶವಾಗಿದೆ ಎಂದರು.
 ಒಂದು ಗ್ರಾಮದ ಅಭಿವೃದ್ಧಿ ಆಗಬೇಕೆಂದರೆ ಗ್ರಾಮದಲ್ಲಿ ಒಂದು ಶಾಲೆ, ಒಂದು ಸಹಕಾರ ಸಂಘ, ಒಂದು ಬ್ಯಾಂಕ್ ಅವಶ್ಯಕತೆ ಇದೆ ಎಂದು ತಿಳಿಸಿದರು. ಸಹಕಾರಿ ಸಂಘಗಳು ಸಾಲ ಸೌಲಭ್ಯವಲ್ಲದೆ ಇತರೆ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.
ಕೊಡಗು ಸಹಕಾರ ರತ್ನ ಪ್ರಶಸ್ತಿಗೆ ಕೊಳಕೇರಿಯ ಬಿದ್ದಾಟಂಡ ರಮೇಶ್ ಚಂಗಪ್ಪ, ಶ್ರೇಷ್ಠ  ಸಹಕಾರಿಗಳು ಪ್ರಶಸ್ತಿಗೆ  ಮಡಿಕೇರಿಯ ಕೊಂಗಂಡ ಎ.ತಿಮ್ಮಯ್ಯ, ಪೊನ್ನಂಪೇಟೆಯ ಚಿರಿಯಪಂಡ ಉತ್ತಪ್ಪ, ಸೋಮವಾರಪೇಟೆಯ ಎಚ್.ಎಸ್ ಸುಬ್ಬಪ್ಪ, ಶ್ರೇಷ್ಠ ಮಹಿಳಾ ಸಹಕಾರಿ ಪ್ರಶಸ್ತಿಗೆ ಮಡಿಕೇರಿಯ  ಮಣವಟ್ಟಿರ ಕಾವೇರಿಯಮ್ಮ ಪೂವಣ್ಣ ಅವರು ಆಯ್ಕೆಯಾಗಿದ್ದು  ಕಾರ್ಯಕ್ರಮದಲ್ಲಿ ಪ್ರಶಸ್ತಿಗೆ ಭಾಜನರಾಗಿರುವವರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಕೊಡಗು ಜಿಲ್ಲೆ ಸಹಕಾರ ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯೋಗೇಂದ್ರ ನಾಯಕ್, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಉಪಾಧ್ಯಕ್ಷರಾದ ಮನು ರಾಮಚಂದ್ರ, ಸಹಕಾರ ಭಾರತಿ ರಾಜ್ಯ ಉಪಾಧ್ಯಕ್ಷರಾದ ರವಿಬಸಪ್ಪ, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿರ್ದೇಶಕರಾದ ಕೆ.ಎ.ಸಂಪತ್, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ ಮಾಜಿ ಅಧ್ಯಕ್ಷರು ಹಾಗೂ ಹಾಲಿ ನಿರ್ದೇಶಕರಾದ ಬಿ.ಡಿ.ಮಂಜುನಾಥ್, ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರಾದ ಪಿ.ಸಿ.ಅಚ್ಚಯ್ಯ, ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರಾದ ಪ್ರೇಮ ಸೋಮಯ್ಯ, ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರಾದ ಕೆ.ಎಮ್.ತಮ್ಮಯ್ಯ, ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರಾದ ಸಿ.ಎಸ್.ಕೃಷ್ಣ ಗಣಪತಿ, ಪಿ.ವಿ.ಭರತ್, ವಿ.ಕೆ.ಅಜಯ್ ಕುಮಾರ್, ಎನ್.ಎಂ.ಉಮೇಶ್ ಉತ್ತಪ್ಪ, ಪಿ.ಬಿ.ಯತೀಶ್, ಸಹಕಾರ ಸಂಘಗಳ ಉಪನಿಬಂಧಕರಾದ ಎಂ.ಎಸ್.ಕೃಷ್ಣ ಪ್ರಸಾದ್, ಸಿಬ್ಬಂದಿಗಳಾದ ಬಿ.ಸಿ.ಅರುಣ್ ಕುಮಾರ್, ಸುರೇಶ್, ಜಿಲ್ಲಾ ಸಹಕಾರ ಸಂಘದ ಯೂನಿಯನ್ ವ್ಯವಸ್ಥಾಪಕರಾದ ಮಂಜುಳ ಆರ್. ಮತ್ತಿತರರು ಇದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ತಲಕಾವೇರಿಯಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮೂರ್ನಾಡು, NEWS DESK ಅ.17: ಇಲ್ಲಿನ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಅ.20ರಂದು ಮೂರ್ನಾಡಿನಲ್ಲಿ 33ನೇ…

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026

ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಅಕ್ಟೋಬರ್ 17, 2026

ಇಂದು ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿ ದಸರಾ ಸಂಭ್ರಮಕ್ಕೆ ಮೆರುಗು ನೀಡಿದ ಶ್ವಾನ ಪ್ರದರ್ಶನ; ಪ್ರಾಣಿ ಪ್ರಿಯರ ಮನಗೆದ್ದ ವಿವಿಧ ತಳಿಗಳು

ಅಕ್ಟೋಬರ್ 17, 2026

SSLC, ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿ: ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ

ಅಕ್ಟೋಬರ್ 17, 2026

ನಾಳೆ ಮಡಿಕೇರಿಯಲ್ಲಿ ಮಹಿಳಾ ದಸರಾ: ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 17, 2026

ಅ.19ರಂದು ರೋಟರಿ ಮಡಿಕೇರಿಯಿಂದ ಉಚಿತ ಮೂಳೆ ಮತ್ತು ನರರೋಗ ತಪಾಸಣಾ ಶಿಬಿರ

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.