Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»72 ಗಂಟೆಗಳ ಮಹಾಧರಣಿ : ಕೊಡಗಿನಲ್ಲಿ ಪ್ರಚಾರ ಆಂದೋಲನ ಆರಂಭ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

72 ಗಂಟೆಗಳ ಮಹಾಧರಣಿ : ಕೊಡಗಿನಲ್ಲಿ ಪ್ರಚಾರ ಆಂದೋಲನ ಆರಂಭ

ನವೆಂಬರ್ 19, 20234 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ನ.19 : ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳನ್ನು ವಿರೋಧಿಸಿ ಸಂಯುಕ್ತ ಹೋರಾಟ-ಕರ್ನಾಟಕ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ವತಿಯಿಂದ ನ.26 ರಿಂದ 28ರವರೆಗೆ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ನಡೆಯಲಿರುವ 72 ಗಂಟೆಗಳ ಮಹಾಧರಣಿಯ ಪ್ರಚಾರ ಆಂದೋಲನಕ್ಕೆ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ನ ಕೊಡಗು ಜಿಲ್ಲಾ ಸಮಿತಿ ಸಿದ್ದಾಪುರದಲ್ಲಿ ಚಾಲನೆ ನೀಡಿತು.
ಮೂರು ಮೂರು ದಿನಗಳ ಕಾಲ ಜಿಲ್ಲೆಯಾದ್ಯಂತ ಪ್ರಚಾರ ಆಂದೋಲನ ನಡೆಯಲಿದ್ದು, ಅದರ ಭಾಗವಾಗಿ ಸಿದ್ದಾಪುರದಲ್ಲಿ ಪ್ರಚಾರ ಜಾಥಾ ನಡೆಸಲಾಯಿತು.
ಬೆಲೆ ಏರಿಕೆ ನಿಯಂತ್ರಿಸಬೇಕು, ಅಗತ್ಯ ವಸ್ತುಗಳು, ಆಹಾರ, ಔಷಧಿ, ನೇಕಾರಿಕೆ, ಕೃಷಿ ಯಂತ್ರೋಪಕರಣಗಳ ಮೇಲಿನ ಜಿ.ಎಸ್.ಟಿ ರದ್ದುಪಡಿಸಬೇಕು, ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ಮೇಲಿನ ಕೇಂದ್ರೀಯ ತೆರಿಗೆಯನ್ನು ಗಣನೀಯವಾಗಿ ಇಳಿಕೆ ಮಾಡಬೇಕು ಎಂದು ಪ್ರಮುಖರು ಒತ್ತಾಯಿಸಿದರು.
ಈ ಸಂದರ್ಭ ಮಾತನಾಡಿದ ಸಿಐಟಿಯು ಜಿಲ್ಲಾಧ್ಯಕ್ಷ ಪಿ.ಆರ್.ಭರತ್, ದುಡಿಯುವ ಜನರ ಪ್ರಮುಖ 24 ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬೆಂಗಳೂರಿನಲ್ಲಿ 72 ಗಂಟೆಗಳ ಮಹಾಧರಣಿ ನಡೆಯಲಿದ್ದು, ಅದರ ಪ್ರಚಾರ ಆಂದೋಲನವನ್ನು ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ನಡೆಸಲಾಗುತ್ತಿದೆ ಎಂದರು.
ಕಳೆದ ಹತ್ತು ವರ್ಷಗಳಲ್ಲಿ ಕೇಂದ್ರ ಸರ್ಕಾರಕ್ಕೆ ದೇಶದ ಜನರಿಗೆ ನೀಡಿದ್ದ ವಿಶ್ವಾಸದ ಮಾತುಗಳನ್ನು ನೆರವೇರಿಸಲು ಸಾಧ್ಯವಾಗಿಲ್ಲ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶದ ಅಭಿವೃದ್ಧಿಯಾಗಿದೆ ಎಂದು ಆರ್‌ಎಸ್‌ಎಸ್, ಬಿಜೆಪಿಗರು ಸುಳ್ಳು ಸುದ್ದಿಗಳನ್ನು ಜಾಲತಾಣಗಳಲ್ಲಿ ಪ್ರಚಾರ ಮಾಡುತ್ತಿದ್ದು, ಮೇಡಿನ್ ಇಂಡಿಯಾ, ಮೇಕಿಂಗ್ ಇಂಡಿಯಾ ಎಂಬ ನೂರಾರು ಹೆಸರುಗಳನ್ನು ನೀಡುವ ಮೂಲಕ ಭಾರತ ಅತ್ಯಂತ ಪ್ರಗತಿಯ ದೇಶ ಎಂಬ ರೀತಿಯಲ್ಲಿ ಪ್ರಚಾರವನ್ನು ಗಿಟ್ಟಿಸಿಕೊಳ್ಳುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಕಾರ್ಪೋರೇಟ್ ತೆರಿಗೆಗಳನ್ನು ಕಡಿತ ಮಾಡುತ್ತಿರುವ ಕೇಂದ್ರ ಸರ್ಕಾರ, ಸಾಮಾನ್ಯ ಜನತೆಯ ಮೇಲೆ ಜಿಎಸ್‌ಟಿ ಹೊರೆ ವಿಧಿಸಿ, ಪೆಟ್ರೋಲಿಯಂ ಉತ್ಪನ್ನಗಳು ಸೇರಿದಂತೆ ಬಹುತೇಕ ಸಾರ್ವಜನಿಕ ಸೇವೆಗಳ ಬಳಕೆಗೆ ಹೆಚ್ಚಿನ ತೆರಿಗೆ ವಿಧಿಸಿರುವುದರಿಂದ ಎಲ್ಲಾ ಅಗತ್ಯ ಸರಕುಗಳ ಬೆಲೆಗಳು ತೀವ್ರವಾಗಿ ಏರಿಕೆಯಾಗುತ್ತಿದ್ದು, ಜನತೆ ತತ್ತರಿಸುವಂತಾಗಿದೆ ಎಂದು ದೂರಿದರು.
ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ಸಿ.ಸಾಬು ಮಾತನಾಡಿ, ಸಿದ್ದಾಪುರದಲ್ಲಿ ಪ್ರಾರಂಭಗೊಂಡ ಪ್ರಚಾರ ಜಾಥವು ಮೂರು ದಿನಗಳ ಕಾಲ ಜಿಲ್ಲೆಯಾದ್ಯಂತ ಸಂಚರಿಸಿ ಮಡಿಕೇರಿಯಲ್ಲಿ ಕೊನೆಗೊಳ್ಳಲಿದೆ. ನಂತರ ನ.25 ರಂದು ಜಿಲ್ಲೆಯಿಂದ ಸಾವಿರಾರು ಮಂದಿ ಬೆಂಗಳೂರಿಗೆ ತೆರಳಿ ಮಹಾಧರಣಿಯಲ್ಲಿ ಪಾಲ್ಗೊಳ್ಳಲಿದ್ದೇವೆ ಎಂದು ತಿಳಿಸಿದರು.
ಸಿಐಟಿಯು ಜಿಲ್ಲಾ ಖಜಾಂಚಿ ಎನ್.ಡಿ.ಕುಟ್ಟಪ್ಪನ್, ಉಪಾಧ್ಯಕ್ಷರುಗಳಾದ ಹೆಚ್.ಪಿ.ರಮೇಶ್, ಸಾಜಿ ರಮೇಶ್, ಎಐಟಿಯುಸಿ ಜಿಲ್ಲಾಧ್ಯಕ್ಷ ಹೆಚ್.ಎಂ.ಸೋಮಪ್ಪ ಮತ್ತಿತರ ಸಾಮಾಜಿಕ ಸಂಘಟನೆಗಳ ಮುಖಂಡರು ಜಾಥಾದಲ್ಲಿ ಪಾಲ್ಗೊಂಡಿದ್ದರು.
::: ಹಕ್ಕೊತ್ತಾಯಗಳು :::
ರೈತರ ಉತ್ಪನ್ನಗಳಿಗೆ ಎಂ.ಎಸ್.ಸ್ವಾಮಿನಾಥನ್ ಶಿಫಾರಸ್ಸಿನಂತೆ ಕನಿಷ್ಠ ಬೆಂಬಲ ಹಾಗೂ ಖರೀದಿ ಖಾತ್ರಿ ಒದಗಿಸುವ ಶಾಸನ ಜಾರಿ ಮಾಡಬೇಕು, ರೈತರಿಗೆ ನೀಡುವ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ವಿದ್ಯುತ್‌ಚ್ಛಕ್ತಿ ಮೇಲಿನ ಸಬ್ಸಿಡಿ ಮೊತ್ತ ಹೆಚ್ಚಳ ಮಾಡಬೇಕು, ರೈತರ ಆತ್ಮಹತ್ಯೆ ತಡೆಯಲು ಎಲ್ಲಾ ರೀತಿಯ ಅಗತ್ಯ ಕ್ರಮ ಕೈಗೊಳ್ಳಬೇಕು, ಕನಿಷ್ಟ ವೇತನ ಮಾಸಿಕ 26,000 ರೂ. ನಿಗದಿ ಮಾಡಬೇಕು, ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿ, ಖಾಯಂ ಸ್ವರೂಪದ ಕೆಲಸದಲ್ಲಿ ತೊಡಗುವ ಕಾರ್ಮಿಕರ ಖಾಯಂಗೆ ಶಾಸನ ರೂಪಿಸಬೇಕು, ನಾಲ್ಕು ಕಾರ್ಮಿಕ ಸಂಹಿತೆಗಳನ್ನು, ಎಫ್‌ಟಿಇ ಪದ್ಧತಿಯನ್ನು ಹಾಗೂ ಕೆಲಸದ ಅವಧಿಯ ಹೆಚ್ಚಳವನ್ನು ರದ್ದುಪಡಿಸಬೇಕು, ಕಾರ್ಪೊರೇಟ್ ಪರವಾದ ಪಿಎಂ ಫಸಲ್ ಭೀಮಾ ಯೋಜನೆಯನ್ನು ರದ್ದುಪಡಿಸಿ, ಎಲ್ಲಾ ಬೆಳೆಗಳಿಗೂ ವಿಮೆ ಒದಗಿಸುವ ಸಮಗ್ರ ಸಾರ್ವಜನಿಕ ವಿಮಾ ಯೋಜನೆ ಜಾರಿ ಹಾಗೂ ಸಮಗ್ರ ಸಾಲ ಮನ್ನಾ ಯೋಜನೆ ಜಾರಿಗೆ ತರಬೇಕು, ಐತಿಹಾಸಿಕ ದೆಹಲಿ ರೈತ ಹೋರಾಟದ ಸಂದರ್ಭದಲ್ಲಿ ನೀಡಿದ್ದ ಲಿಖಿತ ಭರವಸೆಗಳನ್ನು ಜಾರಿ ಮಾಡಬೇಕು, ಹುತಾತ್ಮ ರೈತರ ಸ್ಮಾರಕ ನಿರ್ಮಿಸಲು ಜಾಗ, ಅವರ ಕುಟುಂಬಕ್ಕೆ ಪರಿಹಾರ ಹಾಗೂ ಪುನರ್ವಸತಿ ಕಲ್ಪಿಸಬೇಕು, ಹೋರಾಟ ಸಂದರ್ಭದಲ್ಲಿ ರೈತರ ಮೇಲೆ ಹಾಕಿರುವ ಎಲ್ಲಾ ಪೋಲಿಸ್ ಕೇಸ್‌ಗಳನ್ನು ವಾಪಾಸ್ಸು ಪಡೆಯಬೇಕು.
ಉದ್ಯೋಗದ ಹಕ್ಕನ್ನು ಮೂಲಭೂತ ಹಕ್ಕನ್ನಾಗಿ ಮಾಡಬೇಕು. ಖಾಲಿಯಿರುವ ಎಲ್ಲಾ ಉದ್ಯೋಗಗಳನ್ನು ಭರ್ತಿ ಮಾಡಬೇಕು, ನಿರುದ್ಯೋಗಿ ಯುವಜನತೆಗೆ ಕೆಲಸ ಒದಗಿಸಲು, ಉದ್ಯೋಗ ಸೃಷ್ಟಿಸಲು ಸಾರ್ವಜನಿಕ ಹೂಡಿಕೆ ಹೆಚ್ಚಿಸಬೇಕು, ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸಿ ಕೆಲಸ ದಿನಗಳನ್ನು 200 ದಿನಕ್ಕೆ ವಿಸ್ತರಿಸಿ, ರೂ.600 ಕೂಲಿ ನಿಗದಿ ಮಾಡಬೇಕು. ಗೃಹ ಆಧಾರಿತ ಕಾರ್ಮಿಕರಿಗೆ ಐಎಲ್‌ಒ ಸಮ್ಮೇಳನ ಶಿಫಾರಸ್ಸುಗಳ ಖಾತ್ರಿಗೆ ಸೂಕ್ತ ಕಾನೂನು ರಚಿಸಬೇಕು, ಅಂತರ್ ರಾಜ್ಯ ವಲಸೆ ಕಾರ್ಮಿಕರ (ಉದ್ಯೋಗ ನಿಯಂತ್ರಣ) ಕಾಯ್ದೆ 1979ನ್ನು ಸಾಮಾಜಿಕ ಸುರಕ್ಷತಾ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗುವಂತೆ ಬಲಪಡಿಸಬೇಕು.
ಭಾರತೀಯ ಕಾರ್ಮಿಕ ಸಮ್ಮೇಳನವನ್ನು ನಿಯಮಿತವಾಗಿ ಆಯೋಜಿಸಬೇಕು, ಅದರ ನಿರ್ಣಯಗಳನ್ನು ಸರ್ಕಾರಗಳು ಜಾರಿ ಮಾಡಬೇಕು, ಹೊಸ ಪಿಂಚಣಿ ಯೋಜನೆಯನ್ನು ರದ್ದು ಮಾಡಿ, ಹಳೇ ಯೋಜನೆ ಜಾರಿ ಮಾಡಬೇಕು. ಬೆಲೆ ಏರಿಕೆ ನಿಯಂತ್ರಿಸಬೇಕು. ಅಗತ್ಯ ವಸ್ತುಗ ಮೇಲಿನ ಜಿ.ಎಸ್ ರದ್ದುಪಡಿಸಬೇಕು, ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ಮೇಲಿನ ಕೇಂದ್ರೀಯ ತೆರಿಗೆಯನ್ನು ಗಣನೀಯವಾಗಿ ಇಳಿಕೆ ಮಾಡಬೇಕು, ಕೋವಿಡ್ ನೆಪದಲ್ಲಿ ಹಿರಿಯ ನಾಗರೀಕರು, ಮಹಿಳೆಯರು, ಅಂಗವಿಕಲರು, ಕ್ರೀಡಾಪಟುಗಳಿಗೆ ರದ್ದುಪಡಿಸಿದ್ದ ರೈಲ್ವೆ ಪ್ರಯಾಣ ರಿಯಾತಿಯನ್ನು ಪುನರ್ ಸ್ಥಾಪಿಸಬೇಕು, ರೈಲ್ವೆ ಖಾಸಗೀಕರಣ ನಿಲ್ಲಿಸಬೇಕು, ಆಹಾರ ಭದ್ರತೆ, ಪೋಷಕಾಂಶ ಸುರಕ್ಷತೆಯನ್ನು ಖಾತರಿಪಡಿಸಬೇಕು, ಸಾರ್ವತ್ರಿಕ ಪಡಿತರ ವ್ಯವಸ್ಥೆ ಜಾರಿಗೊಳಿಸಬೇಕು, ಜೀವನಾವಶ್ಯಕ ಅಗತ್ಯ ವಸ್ತುಗಳನ್ನು ಸಾರ್ವಜನಿಕ ವಿತರಣಾ ವ್ಯವಸ್ಥೆ ಮೂಲಕ ವಿತರಿಸಬೇಕು, ನೇರ ನಗದು ವರ್ಗಾವಣೆ ರದ್ದುಪಡಿಸಬೇಕು. ಉಚಿತ ಶಿಕ್ಷಣ, ಉಚಿತ ಆರೋಗ್ಯ ಸೇವೆ, ಉಚಿತ ನೀರು ಮತ್ತು ನೈರ್ಮಲ್ಯವನ್ನು ಮೂಲಭೂತ ಹಕ್ಕಾಗಿ ಒದಗಿಸಬೇಕು, ಜನ ವಿರೋಧಿ ರಾಷ್ಟ್ರೀಯ ಶಿಕ್ಷಣ ನೀತಿ ರದ್ದಾಗಬೇಕು. ಪ್ರತಿಯೊಬ್ಬರಿಗೂ ವಸತಿ ಹಕ್ಕು ಖಾತ್ರಿಪಡಿಸಬೇಕು, ಬಲವಂತದ ಭೂ ಸ್ವಾಧೀನ ನಿಲ್ಲಿಸಬೇಕು.
ಬಗರ್ ಹುಕುಂ ಸಾಗುವಳಿದಾರರು ಸೇರಿದಂತೆ ಎಲ್ಲಾ ಉಳುಮೆ ರೈತರಿಗೆ ಭೂಮಿ ಹಕ್ಕು ಖಾತರಿಪಡಿಸಬೇಕು, ಅರಣ್ಯ ಹಕ್ಕು ಕಾಯ್ದೆ-2006ನ್ನು ಕಟ್ಟುನಿಟ್ಟಾಗಿ ಜಾರಿ ಮಾಡಬೇಕು, ಕಾರ್ಪೊರೇಟ್ ಸ್ನೇಹಿ ಅರಣ್ಯ ಸಂರಕ್ಷಣಾ ತಿದ್ದುಪಡಿ ಕಾಯ್ದೆ-2023 ಹಾಗೂ ಜೀವ ವೈವಿಧ್ಯ ಕಾಯ್ದೆಯನ್ನು ರದ್ದುಪಡಿಸಬೇಕು, ಎಲ್ಲಾ ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ನಿಲ್ಲಬೇಕು, ರಾಷ್ಟ್ರೀಯ ನಗದೀಕರಣ ಪೈಪ್‌ಲೈಸ್ ಯೋಜನೆ ರದ್ದಾಗಬೇಕು, ಖನಿಜ ಹಾಗೂ ಲೋಹ ಗಣಿಗಾರಿಕೆ ಕಾಯ್ದೆಗೆ ತಿದ್ದುಪಡಿ ಮಾಡಿ ಕಲ್ಲಿದ್ದಲು ಸೇರಿದಂತೆ ಗಣಿ ಕಂಪನಿಗಳ ಲಾಭದ ಶೇ.50ರಷ್ಟನ್ನು ಆದಿವಾಸಿಗಳು, ರೈತರು, ಮುಂತಾದ ಸ್ಥಳೀಯ ನಿವಾಸಿಗಳ ಅಭಿವೃದ್ಧಿಗೆ ಬಳಸಬೇಕು. ವಿದ್ಯುತ್ ರಂಗವನ್ನು ಖಾಸಗೀಕರಣಗೊಳಿಸುವ ವಿದ್ಯುತ್ ತಿದ್ದುಪಡಿ ಮಸೂದೆ 2022ನ್ನು ಸಂಸತ್ತಿನಿಂದ ವಾಪಸ್ಸು ಪಡೆಯಬೇಕು, ಎಲ್ಲಾ ರೀತಿಯ ಅಸಂಘಟಿತ ವಲಯದ ಕಾರ್ಮಿಕರನ್ನು ನೊಂದಾಯಿಸಿ, ಪಿಂಚಣಿ ಸೇರಿದಂತೆ ಸಮಗ್ರ ಸಾಮಾಜಿಕ ಸುರಕ್ಷಿತೆಯನ್ನು ಒದಗಿಸಬೇಕು. ಅಸಂಘಟಿತ ಕಾರ್ಮಿಕರಿಗೆ ಆರೋಗ್ಯ ಯೋಜನೆ, ತಾಯ್ತನದ ಆರೈಕೆ ಸೌಲಭ್ಯ, ಜೀವ ಹಾಗೂ ಅಂಗವೈಕಲ್ಯ ಎಮ್ಮೆ, ಮತ್ತಿತರ ಕಲ್ಯಾಣ ಸೌಲಭ್ಯಗಳನ್ನು ಒದಗಿಸಬೇಕು, ಐಡಿಎಸ್, ಅಕ್ಷರ ದಾಸೋಹ, ಆಶಾ ಮುಂತಾದ ಯೋಜನೆಗಳನ್ನು ಯಾವುದೇ ಸ್ವರೂಪದಲ್ಲಿ ಖಾಸಗೀಕರಣ ಮಾಡಬಾರದು, ಗ್ರಾ.ಪಂ ನೌಕರರಿಗೆ ಕನಿಷ್ಠ ವೇತನ ಸಮರ್ಪಕವಾಗಿ ಜಾರಿ ಮಾಡಬೇಕು, ಕಟ್ಟಡ ಕಾರ್ಮಿಕರಿಗೆ ಜಾರಿಯಲ್ಲಿರುವ ಸೌಲಭ್ಯಗಳ ಜೊತೆಗೆ ಇಎಸ್‌ಐ, ವಸತಿ ಸೌಲಭ್ಯವನ್ನು ಒದಗಿಸಬೇಕು, ಬಾಕಿ ಇರುವ ಶೈಕ್ಷಣಿಕ ಸಹಾಯಧನವನ್ನು ತಕ್ಷಣ ಬಿಡುಗಡೆ ಮಾಡಬೇಕು. ಸಂವಿಧಾನದ ಮೂಲಭೂತ ಹಕ್ಕುಗಳಾದ ಅಭಿವ್ಯಕ್ತಿ ಸ್ವಾತಂತ್ರ್ಯ, ಧಾರ್ಮಿಕ ಸ್ವಾತಂತ್ರ್ಯ, ಭಾಷೆ, ವೈವಿಧ್ಯತೆ, ಸಾಂಸ್ಕೃತಿಕ, ಸಮಾನತೆ, ಜಾತ್ಯಾತೀತತೆ, ಒಕ್ಕೂಟ ವ್ಯವಸ್ಥೆ ಮುಂತಾದವುಗಳ ಮೇಲಿನ ಆಕ್ರಮಣವನ್ನು ನಿಲ್ಲಿಸಬೇಕು ಎಂದು ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಒತ್ತಾಯಿಸಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ತಲಕಾವೇರಿಯಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮೂರ್ನಾಡು, NEWS DESK ಅ.17: ಇಲ್ಲಿನ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಅ.20ರಂದು ಮೂರ್ನಾಡಿನಲ್ಲಿ 33ನೇ…

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026

ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಅಕ್ಟೋಬರ್ 17, 2026

ಇಂದು ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿ ದಸರಾ ಸಂಭ್ರಮಕ್ಕೆ ಮೆರುಗು ನೀಡಿದ ಶ್ವಾನ ಪ್ರದರ್ಶನ; ಪ್ರಾಣಿ ಪ್ರಿಯರ ಮನಗೆದ್ದ ವಿವಿಧ ತಳಿಗಳು

ಅಕ್ಟೋಬರ್ 17, 2026

SSLC, ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿ: ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ

ಅಕ್ಟೋಬರ್ 17, 2026

ನಾಳೆ ಮಡಿಕೇರಿಯಲ್ಲಿ ಮಹಿಳಾ ದಸರಾ: ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 17, 2026

ಅ.19ರಂದು ರೋಟರಿ ಮಡಿಕೇರಿಯಿಂದ ಉಚಿತ ಮೂಳೆ ಮತ್ತು ನರರೋಗ ತಪಾಸಣಾ ಶಿಬಿರ

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.