*ಕಾಡಾನೆ ದಾಳಿಗೆ ಮಹಿಳೆ ಬಲಿ*
19/11/2023
ಮಡಿಕೇರಿ ನ.19 : ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಮಂಡ್ಯ ತಾಲ್ಲೂಕಿನ ಲಾಳನಕೆರೆ ಬಳಿ ಭಾನುವಾರ ಬೆಳಗ್ಗೆ ನಡೆದಿದೆ. ಮೃತ ಮಹಿಳೆಯನ್ನು ಸಾಕಮ್ಮ ಎಂದು ಗುರುತಿಸಲಾಗಿದೆ. ಕೃಷಿ ಕೆಲಸಕ್ಕೆ ಹೊಲಕ್ಕೆ ತೆರಳುತ್ತಿದ್ದಾಗ ಕಾಡಾನೆ ದಾಳಿ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
