Advertisement
8:26 PM Saturday 9-December 2023

*ತಾಯಿ, ಮಗು ಸಾವು : ಎಇ, ಎಇಇ ಅಮಾನತು*

19/11/2023

ಬೆಂಗಳೂರು ನ.19 : ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಷಗೊಂಡು ತಾಯಿ ಹಾಗೂ 9 ತಿಂಗಳ ಮಗು ದಾರುಣವಾಗಿ ಮೃತಪಟ್ಟಿರುವ ಘಟನೆ ಮಹದೇವಪುರದ ಕಾಡುಗುಡಿ ಠಾಣೆ ವ್ಯಾಪ್ತಿಯ ವೈಟ್ ಫೀಲ್ಡ್ ನ ಹೋಪ್ ಫಾರಂ ಸಿಗ್ನಲ್ ಬಳಿ ನಡೆದಿದೆ.
ಭಾನುವಾರ ಮುಂಜಾನೆ 6 ಗಂಟೆ ಸುಮಾರಿಗೆ ಪಾದಾಚಾರಿ ಮಾರ್ಗದಲ್ಲಿ ಮನೆಗೆ ತೆರಳುತ್ತಿದ್ದ ಸೌಂದರ್ಯ ಹಾಗೂ ಮಗಳು ಸುವಿಶಾಲಯ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಷಗೊಂಡು ಸಾವನ್ನಪ್ಪಿದ್ದಾರೆ. ತಾಯಿ, ಮಗು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಸ್ಕಾಂ ಎಇ, ಎಇಇಯನ್ನು ಅಮಾನತುಗೊಳಿಸಿದ್ದೇವೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ಅವರು ತಿಳಿಸಿದ್ದಾರೆ. ಈ ಸಂಬಂಧ ಟ್ವೀಟ್‌ ಮಾಡಿರುವ ಸಚಿವ ಕೆ.ಜೆ.ಜಾರ್ಜ್‌ ಅವರು, ಈ ದುರ್ಘಟನೆಯಲ್ಲಿ ಸಂಬಂಧಿಕರನ್ನು ಕಳೆದುಕೊಂಡ ಕುಟುಂಬದ ಸದಸ್ಯರಿಗೆ ರಾಜ್ಯ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ನೀಡಲಿದೆ ಎಂದು ಹೇಳಿದ್ದಾರೆ.