Advertisement
7:37 PM Saturday 9-December 2023

*30 ಕ್ಕೂ ಅಧಿಕ ಮೀನುಗಾರಿಕಾ ದೋಣಿಗಳು ಬೆಂಕಿಗಾಹುತಿ*

20/11/2023

ವಿಶಾಖಪಟ್ಟಣಂ ನ.20 : ಅಗ್ನಿ ಆಕಸ್ಮಿಕದಿಂದ 30 ಕ್ಕೂ ಅಧಿಕ ಮೀನುಗಾರಿಕಾ ದೋಣಿಗಳು ಸುಟ್ಟು ಕರಕಲಾಗಿರುವ ಘಟನೆ ವಿಶಾಖಪಟ್ಟಣಂ ನ ಜಟ್ಟಿ ಪ್ರದೇಶದಲ್ಲಿ ನಡೆದಿದೆ. ಮಧ್ಯರಾತ್ರಿ ಈ ಘಟನೆ ನಡೆದಿದ್ದು, ಸೋಮವಾರ ಬೆಳಗ್ಗೆ 4 ಗಂಟೆ ಸುಮಾರಿಗೆ ಅಗ್ನಿಶಾಮಕ ದಳ ಬೆಂಕಿಯನ್ನು ನಂದಿಸಿತು. ಸ್ಥಳದಲ್ಲಿದ್ದ 8 ಎಲ್‌ಪಿಜಿ ಸಿಲಿಂಡರ್‌ಗಳಿಂದ ಸ್ಫೋಟ ಸಂಭವಿಸಿರಬಹುದೆಂದು ಅಧಿಕಾರಿಗಳು ಶಂಕಿಸಿದ್ದಾರೆ.