*ಮಡಿಕೇರಿಯಲ್ಲಿ ಎಂಡಿಎಂಎ ಮಾರಾಟ ಯತ್ನ : ಇಬ್ಬರು ಪೊಲೀಸ್ ವಶ*
20/11/2023

ಮಡಿಕೇರಿ ನ.20 : ಮಡಿಕೇರಿ ನಗರದಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಯನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಸೆನ್ ಪೊಲೀಸ್ ಠಾಣೆ ಸಿಬ್ಬಂದಿಗಳು ಮಾಲು ಸಹಿತ ವಶಕ್ಕೆ ಪಡೆದಿದ್ದಾರೆ.
ಮಡಿಕೇರಿ- ಮಂಗಳೂರು ರಸ್ತೆಯಲ್ಲಿ ಎಂಡಿಎಂಎ ಯನ್ನು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆ ದಾಳಿ ನಡೆಸಿದ ಪೊಲೀಸರು ಕುಂಜಿಲ ಗ್ರಾಮದ ನಿವಾಸಿ ನೌಫಲ್ (25) ಹಾಗೂ ಎಮ್ಮೆಮಾಡು ಪೈಸಾರಿ ನಿವಾಸಿ ಸಾದಿಕ್ (32) ಎಂಬುವವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯಾಚರಣೆ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
