Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಸರ್ಕಾರದಿಂದಲೇ ಜೀತದಾಳುಗಳ ಸೃಷ್ಟಿ : ಕಾರ್ಮಿಕ ಸಂಘಟನೆಗಳ ಆರೋಪ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸರ್ಕಾರದಿಂದಲೇ ಜೀತದಾಳುಗಳ ಸೃಷ್ಟಿ : ಕಾರ್ಮಿಕ ಸಂಘಟನೆಗಳ ಆರೋಪ

ನವೆಂಬರ್ 21, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ನ.21 : ದುಡಿಯುವ ಕಾರ್ಮಿಕ ವರ್ಗಕ್ಕೆ ಕನಿಷ್ಠ ವೇತನ ಘೋಷಿಸದ ಸರ್ಕಾರ ಸರ್ಕಾರಿ ಕಚೇರಿಗಳಲ್ಲಿ ಗುತ್ತಿಗೆ ಆಧಾರದಲ್ಲಿ ನೌಕರರನ್ನು ದುಡಿಸಿಕೊಳ್ಳುವ ಮೂಲಕ ಪರೋಕ್ಷವಾಗಿ ಜೀತದಾಳುಗಳನ್ನು ಸೃಷ್ಟಿ ಮಾಡುತ್ತಿದೆ ಎಂದು ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ನ ಕೊಡಗು ಜಿಲ್ಲಾ ಸಮಿತಿ ಆರೋಪಿಸಿದೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಐಟಿಯು ಸಮಿತಿಯ ಜಿಲ್ಲಾಧ್ಯಕ್ಷ ಪಿ.ಆರ್.ಭರತ್, ಕುಟುಂಬದ ನಿರ್ವಹಣೆ, ಆಹಾರ ಮತ್ತು ಮಕ್ಕಳ ಶಿಕ್ಷಣಕ್ಕಾಗಿ ಕಾರ್ಮಿಕರಿಗೆ ಮಾಸಿಕ ಕನಿಷ್ಠ ವೇತನ 26 ಸಾವಿರ ರೂ. ಘೋಷಿಸುವ ಅಗತ್ಯವಿದೆ ಎಂದರು.
ಕೊಡಗು ಜಿಲ್ಲೆಯ ಸರ್ಕಾರಿ ಕಚೇರಿಗಳಲ್ಲಿ 2 ಸಾವಿರಕ್ಕೂ ಅಧಿಕ ಹುದ್ದೆಗಳು ಖಾಲಿ ಇವೆ. ಆದರೆ ಇವುಗಳನ್ನು ಗುತ್ತಿಗೆ ಆಧಾರದ ನೌಕರರ ಮೂಲಕ ತುಂಬಲಾಗುತ್ತಿದೆ. ಕಡಿಮೆ ವೇತನ ನೀಡಿ ಹೆಚ್ಚು ದುಡಿಸಿಕೊಳ್ಳುವ ಜೀತ ಪದ್ಧತಿಯನ್ನು ಸರ್ಕಾರವೇ ಜಾರಿಗೆ ತರುತ್ತಿದೆ. ಜಿಲ್ಲಾಧಿಕಾರಿಗಳ ಕಚೇರಿ, ಉದ್ಯೋಗ ವಿನಿಮಯ ಕಚೇರಿಯಲ್ಲೂ ಗುತ್ತಿಗೆ ಆಧಾರದ ನೌಕರರನ್ನೇ ನೇಮಿಸಿಕೊಳ್ಳಲಾಗಿದೆ. ಸರ್ಕಾರ ಉದ್ಯೋಗ ಸೃಷ್ಟಿ ಮಾಡುವ ಪ್ರಯತ್ನವನ್ನೇ ಮಾಡುತ್ತಿಲ್ಲವೆಂದು ಟೀಕಿಸಿದರು.
::: ಭರವಸೆ ಹುಸಿಯಾಗಿದೆ :::
ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 10 ವರ್ಷಗಳೇ ಕಳೆದಿದೆ. ಆದರೆ ಸರ್ಕಾರ ನೀಡಿದ 2 ಕೋಟಿ ಉದ್ಯೋಗ ಸೃಷ್ಟಿಯ ದೊಡ್ಡ ಭರವಸೆ ಇಲ್ಲಿಯವರೆಗೆ ಈಡೇರದೆ ಹುಸಿಯಾಗಿದೆ. ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ರೈತರು ದೆಹಲಿಯಲ್ಲಿ ಹೋರಾಟ ನಡೆಸಿ ಬಲಿದಾನಗೈದು ವರ್ಷವೇ ಕಳೆದಿದೆ. ಅಂದು ಕೇಂದ್ರ ಸರ್ಕಾರ ಲಿಖಿತ ರೂಪದಲ್ಲಿ ನೀಡಿದ್ದ ಭರವಸೆ ಇಲ್ಲಿಯವರೆಗೆ ಈಡೇರಿಲ್ಲ. ಕೇವಲ ಬಾಯಿ ಮಾತಿಗಷ್ಟೇ ರೈತರನ್ನು ದೇಶದ ಅನ್ನದಾತರೆಂದು ಕೇಂದ್ರ ಬಣ್ಣಿಸುತ್ತಿದೆ. ಆದರೆ ಕೃಷಿ ಪರಿಕರಗಳ ಬೆಲೆ ಏರಿಕೆಯಿಂದ ಕೃಷಿ ಕಾರ್ಯ ಮಾಡಲಾಗದೆ ನಷ್ಟ ಅನುಭವಿಸುತ್ತಿರುವ ರೈತ ಆತ್ಮಹತ್ಯೆ ಮಾಡಿಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ಆರೋಪಿಸಿದರು.
ಬಂಡವಾಳಶಾಹಿಗಳ ಪರವಾಗಿರುವ ಕೇಂದ್ರ ಸರ್ಕಾರ ದೇಶದಲ್ಲಿ ವಿದೇಶಿ ಕಂಪೆನಿಗಳಿಗೆ ಅವಕಾಶ ನೀಡುತ್ತಿದೆ. ಬಿಎಸ್‍ಎನ್‍ಎಲ್, ಎಲ್‍ಐಸಿ, ರೈಲ್ವೆ, ಬ್ಯಾಂಕ್ ಮತ್ತು ವಿದ್ಯುತ್ ಕ್ಷೇತ್ರಗಳನ್ನು ಖಾಸಗೀರಕಣಗೊಳಿಸಲಾಗಿದೆ. ಇದರಿಂದ ದುಡಿಯುವ ವರ್ಗಕ್ಕೆ ಅನ್ಯಾಯವಾಗುತ್ತಿದೆ ಎಂದು ಭರತ್ ಟೀಕಿಸಿದರು.
::: 50 ಸಾವಿರ ಮಂದಿ ಭಾಗಿ :::
ಕೇಂದ್ರ ಸರ್ಕಾರದ ರೈತ, ಕಾರ್ಮಿಕ ಮತ್ತು ಜನ ವಿರೋಧಿ ಧೋರಣೆಗಳ ವಿರುದ್ಧ ನ.26 ರಿಂದ 28 ರವರೆಗೆ ದೇಶವ್ಯಾಪಿ ರಾಜ್ಯಪಾಲರ ನಿವಾಸದ ಎದುರು 72 ಗಂಟೆಗಳ ಮಹಾಧರಣಿ ನಡೆಯಲಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ನಡೆಯುವ ಹೋರಾಟದಲ್ಲಿ 11 ಕಾರ್ಮಿಕ ಸಂಘಟನೆಗಳ ಸುಮಾರು 50 ಸಾವಿರ ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಕೊಡಗು ಜಿಲ್ಲೆಯಿಂದಲೂ 500 ಕ್ಕೂ ಅಧಿಕ ಮಂದಿ ತೆರಳಲಿದ್ದಾರೆ ಎಂದು ಮಾಹಿತಿ ನೀಡಿದರು.
ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ಸಿ.ಸಾಬು ಮಾತನಾಡಿ 24 ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬೃಹತ್ ಹೋರಾಟ ನಡೆಸಲಾಗುತ್ತಿದೆ. ಮೂಲಕ ಕೇಂದ್ರ ಸರ್ಕಾರದ ಹುಸಿ ಭರವಸೆಗಳ ಬಗ್ಗೆ ಜನರಿಗೆ ತಿಳಿಸಲಾಗುತ್ತದೆ. ಮಹಾಧರಣಿಯ ಹಿನ್ನೆಲೆ ಕಳೆದ ಮೂರು ದಿನಗಳಿಂದ ಜಿಲ್ಲೆಯಾದ್ಯಂತ ವ್ಯಾಪಕ ಪ್ರಚಾರಾಂದೋಲನ ನಡೆಸಲಾಗುತ್ತಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಖಜಾಂಚಿ ಎನ್.ಡಿ.ಕುಟ್ಟಪ್ಪ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ತಲಕಾವೇರಿಯಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮೂರ್ನಾಡು, NEWS DESK ಅ.17: ಇಲ್ಲಿನ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಅ.20ರಂದು ಮೂರ್ನಾಡಿನಲ್ಲಿ 33ನೇ…

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026

ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಅಕ್ಟೋಬರ್ 17, 2026

ಇಂದು ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿ ದಸರಾ ಸಂಭ್ರಮಕ್ಕೆ ಮೆರುಗು ನೀಡಿದ ಶ್ವಾನ ಪ್ರದರ್ಶನ; ಪ್ರಾಣಿ ಪ್ರಿಯರ ಮನಗೆದ್ದ ವಿವಿಧ ತಳಿಗಳು

ಅಕ್ಟೋಬರ್ 17, 2026

SSLC, ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿ: ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ

ಅಕ್ಟೋಬರ್ 17, 2026

ನಾಳೆ ಮಡಿಕೇರಿಯಲ್ಲಿ ಮಹಿಳಾ ದಸರಾ: ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 17, 2026

ಅ.19ರಂದು ರೋಟರಿ ಮಡಿಕೇರಿಯಿಂದ ಉಚಿತ ಮೂಳೆ ಮತ್ತು ನರರೋಗ ತಪಾಸಣಾ ಶಿಬಿರ

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.