Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»‘ಪಿಎಂ ಸ್ವನಿಧಿಯಿಂದ ಪಿಎಂ ಸುರಕ್ಷಾ’ ಯೋಜನೆ ತಳ ಹಂತದಲ್ಲಿರುವವರ ಆಶಾಕಿರಣ : ಎ.ರಾಮದಾಸ್
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

‘ಪಿಎಂ ಸ್ವನಿಧಿಯಿಂದ ಪಿಎಂ ಸುರಕ್ಷಾ’ ಯೋಜನೆ ತಳ ಹಂತದಲ್ಲಿರುವವರ ಆಶಾಕಿರಣ : ಎ.ರಾಮದಾಸ್

ನವೆಂಬರ್ 23, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ನ.23 : ವಿವಿಧ ಕ್ಷೇತ್ರಗಳಲ್ಲಿನ ಅಸಂಘಟಿತ ಕಾರ್ಮಿಕ ಸಮೂಹಕ್ಕೆ ಆರ್ಥಿಕ ಚೈತನ್ಯವನ್ನು ಒದಗಿಸುವ ಮೂಲಕ ರಾಷ್ಟ್ರಾಭ್ಯುದಯದ ಚಿಂತನೆಯಡಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಪಿಎಂ ಸ್ವನಿಧಿಯಿಂದ ಪಿಎಂ ಸುರಕ್ಷಾ’ ಯೋಜನೆ ಸಮಾಜದ ತಳ ಹಂತದಲ್ಲಿರುವವರ ಆಶಾಕಿರಣವಾಗಿದೆ ಎಂದು ಪ್ರಧಾನಮಂತ್ರಿ ಸ್ವನಿಧಿ ಯೋಜನೆ ಮತ್ತು ವಿಶ್ವ ಕರ್ಮ ಯೋಜನೆಯ ರಾಜ್ಯ ಸಂಚಾಲಕರಾದ ಮಾಜಿ ಸಚಿವ ಎ.ರಾಮದಾಸ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಯೋಜನೆಯ ವಿವರಗಳನ್ನು ನೀಡಿದ ಅವರು, ಕೋವಿಡ್ ಸಂಕಷ್ಟ ಕಾಲದಲ್ಲಿ ಬೀದಿ ಬದಿ ವ್ಯಾಪಾರಿಗಳ ನೆರವಿನ ಚಿಂತನಡಿಯಡಿ ರೂಪುಗೊಂಡ ಪಿಎಂ ಸ್ವನಿಧಿ ಯೋಜನೆಯಡಿ ಪ್ರಸ್ತುತ ಪತ್ರಿಕಾ ವಿತರಕರು, ವಿವಾಹ ಸಮಾರಂಭಗಳಲ್ಲಿ ಛಾಯಾಚಿತ್ರ ತೆರೆಯುವವರು, ವಿಡಿಯೋಗ್ರಾಫರ್‍ಗಳು, ಹಾಲು ವಿತರಕರು, ಹೂ ಕಟ್ಟುವವರು ಮತ್ತು ಮಾರುವವರು ಹೀಗೆ 23 ವಿವಿಧ ಕ್ಷೇತ್ರಗಳ ಅಸಂಘಟಿತರನ್ನು ಸೇರ್ಪಡೆಗೊಳಿಸಿ, ಅವರಿಗೆ ಯೋಜನೆಯ ನೆರವನ್ನು ವಿಸ್ತರಿಸಲಾಗಿದೆ ಎಂದರು.
ಸ್ವನಿಧಿ ಯೋಜನೆಯಡಿ ನೋಂದಾಯಿತ ಫಲಾನುಭವಿಗೆ ಮೊದಲ ಹಂತದಲ್ಲಿ 10ಸಾವಿರ, ಎರಡನೇ ಹಂತದಲ್ಲಿ 20 ಸಾವಿರ ರೂ., ಮೂರನೇ ಹಂvದಲ್ಲಿ 50ಸಾವಿರ ರೂ. ಮತ್ತು ನಾಲ್ಕನೇ ಹಂತದಲ್ಲಿ ಮುದ್ರಾ ಯೋಜನೆಯಡಿ 10ಲಕ್ಷದವರೆಗೆ ಸಾಲವನ್ನು ಯಾವುದೇ ಗ್ಯಾರಂಟಿ ಇಲ್ಲದೆ ಮಂಜೂರು ಮಾಡಲಾಗುತ್ತದೆ. ಬಡ್ಡಿಯ ದರದಲ್ಲಿ ಶೇ. 7ರಷ್ಟು ಹಣವನ್ನು ಕೇಂದ್ರ ಸರ್ಕಾರವೇ ಬ್ಯಾಂಕ್‍ಗೆ ಭರಿಸುತ್ತದೆ ಎಂದು ಮಾಹಿತಿ ನೀಡಿದರು.
ಪಿಎಂ ಸ್ವನಿಧಿ ಯೋಜನೆಯಡಿ ಕೊಡಗಿನಲ್ಲಿ ಇಲ್ಲಿಯವರೆಗೆ 1776 ಮಂದಿಗೆ ನೆರವನ್ನು ಒದಗಿಸಲಾಗಿದೆ. ಪ್ರಸ್ತುತ ಜಿಲ್ಲೆಯ ಪಟ್ಟಣ ಪಂಚಾಯ್ತಿ ನಗರಸಭೆ ಸೇರಿದಂತೆ ಒಟ್ಟು ನಾಲ್ಕು ಸ್ಥಳೀಯ ಸಂಸ್ಥೆಗಳಿಗೆ, ಸ್ವನಿಧಿ ಯೋಜನೆಯಡಿ ಬರುವ ಫಲಾನುಭವಿಗಳ ಸರ್ವೇ ನಡೆಸಿ, ಅರ್ಹ ಫಲಾನುಭವಿಗಳನ್ನು ಯೋಜನೆಗೆ ಒಳಪಡಿಸುವಂತೆ ಸೂಚಿಸಲಾಗಿದೆಯೆಂದು ರಾಮದಾಸ್ ತಿಳಿಸಿದರು.
ಪಿ.ಎಂ.ಸ್ವನಿಧಿ ಫಲಾನುಭವಿಗಳಿಗೆ ಪಿಎಂ ಸುರಕ್ಷಾ ಭೀಮಾ ಯೋಜನೆಯ ಅಡಿಯಲ್ಲಿ ಅಪಘಾತದಿಂದ ಮೃತಪಟ್ಟಲ್ಲಿ 20ರೂ.ವಾರ್ಷಿಕ ಚಂದಾಕ್ಕೆ 2 ಲಕ್ಷ , ಅಪಘಾತದಿಂದ ಅಂಗವೈಕಲ್ಯತೆ ಒಳಗಾದಲ್ಲಿ 1 ಲಕ್ಷ ರೂ.ಗಳನ್ನು ನೀಡಲಾಗುತ್ತದೆ. ಇದರೊಂದಿಗೆ ಪಿ.ಎಂ.ಸುರಕ್ಷಾ ಜೀವನ ಜ್ಯೋತಿ ಯೋಜನೆ, ಪಿ.ಎಂ.ಜನನಿ ಸುರಕ್ಷಾ ಯೋಜನೆ, ಪಿ.ಎಂ. ಮಾತೃವಂದನಾ ಯೋಜನೆ, ಪಿ.ಎಂ.ಶ್ರಮಯೋಗಿ ಮನ್‍ಧನ್ ಯೋಜನೆಯ ಸೌಲಭ್ಯಗಳನ್ನು ಒದಗಿಸಲಾಗುತ್ತದೆಂದು ವಿವರಗಳನ್ನಿತ್ತರು.
ಪಿಎಂ ಸ್ವನಿಧಿ ಯೋಜನೆಯಡಿ ರಾಷ್ಟ್ರವ್ಯಾಪಿ 44 ಲಕ್ಷ ಕುಟುಂಬಗಳಿಗೆ ನೆರವನ್ನು ನೀಡಲಾಗಿದ್ದು, 8 ಲಕ್ಷ ಕೋಟಿ ರೂ.ಗಳ ಈ ಯೋಜನೆಯಡಿ 8 ಸಾವಿರ ಕೋಟಿ ರೂ.ಗಳನ್ನು ಪಿಎಂ ಸ್ವನಿಧಿಗೆ ಮೀಸಲಿರಿಸಲಾಗಿದೆ. ಕರ್ನಾಟಕ ರಾಜ್ಯದಲ್ಲಿ ಯೋಜನೆಯಡಿ 3.10 ಲಕ್ಷ ಜನರಿಗೆ 600 ಕೊಟಿ ರೂ.ಗಳ ನೆರವನ್ನು ಒದಗಿಸಲಾಗಿದೆ. ಆ ಮೂಲಕ ಯೋಜನೆ ಅನುಷ್ಟಾನದಲ್ಲಿ ರಾಜ್ಯ ಇಡೀ ದೇಶದಲ್ಲಿ ನಾಲ್ಕನೇ ಸ್ಥಾನದಲ್ಲಿದೆಯೆಂದು ಸಂತಸ ವ್ಯಕ್ತಪಡಿಸಿದರು.
ಪ್ರಧಾನಿ ಮೋದಿ ಅವರ ಹುಟ್ಟಿದ ದಿನವಾದ ಸೆ.17 ರಂದು ‘ವಿಶ್ವ ಕರ್ಮ ಯೋಜನೆ’ ಜಾರಿಗೆ ಬಂದಿದೆ. ಇದು ಕೇವಲ ವಿಶ್ವ ಕರ್ಮ ಸಮಾಜಕ್ಕೆ ಸೀಮಿತವಾಗಿಲ್ಲ. ಬದಲಾಗಿ ಕೈ ಕೆಲಸಗಳಲ್ಲಿ ನಿರತರಾದ 18 ಸಮಾಜಗಳಿಗೆ ಯೋಜನೆ ಅನ್ವಯಿಸುತ್ತದೆ ಎಂದರು.
ಈ ಯೋಜನೆಯಡಿ ಫಲಾನುಭವಿಗಳಿಗೆ ಅವರ ಉದ್ಯೋಗಕ್ಕೆ ಸಂಬಂಧಿಸಿದಂತೆ ಭತ್ಯೆಯೊಂದಿಗೆ ಅಗತ್ಯ ತರಬೇತಿಯನ್ನು ನೀಡಿ, 15 ಸಾವಿರ ರೂ. ಮೌಲ್ಯದ ಟೂಲ್ ಕಿಟ್ ಒದಗಿಸಲಾಗುತ್ತದೆ. ಈ ಯೋಜನೆಯಡಿ ಹೆಸರನ್ನು ಪಿಎಂ ವಿಶ್ವಕರ್ಮ ಪೋರ್ಟಲ್ ಮೂಲಕ ಹೆಸರನ್ನು ನೋಂದಾಯಿಸಲು ಅವಕಾಶವನ್ನು ಒದಗಿಸಲಾಗಿದೆ ಎಂದು ಎ.ರಾಮದಾಸ್ ತಿಳಿಸಿದರು.
ಪಿಎಂ ಸ್ವನಿಧಿ ಯೋಜನೆಗಳನ್ನು ಆರಂಭಿಕ ಹಂತರಲ್ಲಿ ರಾಜ್ಯದ 18 ಜಿಲ್ಲೆಗಳಿಗೆ ಸೀಮಿತವಾಗಿ ಜಾರಿಗೆ ತರಲಾಗಿತ್ತು. ಆದರೆ ಡಿ.1 ರಿಂದ ರಾಜ್ಯದ ಎಲ್ಲಾ ಜಿಲ್ಲೆಗಳು ಇದರ ವ್ಯಾಪ್ತಿಗೆ ಒಳಪಡುತ್ತದೆಂದು ಸ್ಪಷ್ಟಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ, ಮಾಜಿ ಎಂಎಲ್‍ಸಿ ಸುನಿಲ್ ಸುಬ್ರಮಣಿ, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಬಿ.ಬಿ.ಭಾರತೀಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ನಾಪಂಡ ಕಾಳಪ್ಪ ಹಾಗೂ ಹುಲ್ಲೂರಿಕೊಪ್ಪ ಮಾದಪ್ಪ ಉಪಸ್ಥಿತರಿದ್ದರು. 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ತಲಕಾವೇರಿಯಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮೂರ್ನಾಡು, NEWS DESK ಅ.17: ಇಲ್ಲಿನ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಅ.20ರಂದು ಮೂರ್ನಾಡಿನಲ್ಲಿ 33ನೇ…

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026

ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಅಕ್ಟೋಬರ್ 17, 2026

ಇಂದು ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿ ದಸರಾ ಸಂಭ್ರಮಕ್ಕೆ ಮೆರುಗು ನೀಡಿದ ಶ್ವಾನ ಪ್ರದರ್ಶನ; ಪ್ರಾಣಿ ಪ್ರಿಯರ ಮನಗೆದ್ದ ವಿವಿಧ ತಳಿಗಳು

ಅಕ್ಟೋಬರ್ 17, 2026

SSLC, ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿ: ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ

ಅಕ್ಟೋಬರ್ 17, 2026

ನಾಳೆ ಮಡಿಕೇರಿಯಲ್ಲಿ ಮಹಿಳಾ ದಸರಾ: ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 17, 2026

ಅ.19ರಂದು ರೋಟರಿ ಮಡಿಕೇರಿಯಿಂದ ಉಚಿತ ಮೂಳೆ ಮತ್ತು ನರರೋಗ ತಪಾಸಣಾ ಶಿಬಿರ

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.