Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಡಿ.29 ಮತ್ತು 30 ರಂದು ಮಡಿಕೇರಿಯಲ್ಲಿ ವಿಶ್ವ ಕೊಡವ ಸಮ್ಮೇಳನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಡಿ.29 ಮತ್ತು 30 ರಂದು ಮಡಿಕೇರಿಯಲ್ಲಿ ವಿಶ್ವ ಕೊಡವ ಸಮ್ಮೇಳನ

ನವೆಂಬರ್ 23, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ನ.23 : ಎಲ್ಲಾ ಕೊಡವ ಸಮುದಾಯದವರನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಕನೆಕ್ಟಿಂಗ್ ಕೊಡವಾಸ್ ಟ್ರಸ್ಟ್ ವತಿಯಿಂದ ಡಿ.29 ಮತ್ತು 30 ರಂದು ಮಡಿಕೇರಿಯಲ್ಲಿ ವಿಶ್ವ ಕೊಡವ ಸಮ್ಮೇಳನ (“ಗ್ಲೋಬಲ್ ಕೊಡವ ಸಮ್ಮಿಟ್”) ನಡೆಯಲಿದೆ ಎಂದು ಟ್ರಸ್ಟ್‍ನ ಅಧ್ಯಕ್ಷ ಶಾಂತೆಯಂಡ ನಿರನ್ ನಾಚಪ್ಪ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಎರಡು ದಿನಗಳ ಕಾಲ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಜಿಲ್ಲೆ, ಹೊರ ಜಿಲ್ಲೆ, ರಾಜ್ಯ ಹಾಗೂ ವಿದೇಶದಲ್ಲಿ ನೆಲೆಸಿರುವ ಕೊಡವ ಜನಾಂಗ ಬಾಂಧವರು ಸೇರಿದಂತೆ ಸುಮಾರು 20 ಸಾವಿರ ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದರು.
ಕೊಡವರ ಪ್ರಸ್ತುತ ಸ್ಥಿತಿಗತಿಗಳ ಬಗ್ಗೆ, ಕೊಡವರು ಎದುರಿಸುತ್ತಿರುವ ಸಮಸ್ಯೆಗಳು, ಕೊಡವರ ಸಂಸ್ಕೃತಿ, ಸಂಪ್ರದಾಯ ಹಾಗೂ ಕೊಡವರ ವಿನೂತನ ಆಚರಣೆಗಳನ್ನು ಮುಂದಿನ ಪೀಳಿಗೆಗೆ ತಿಳಿಸುವ ಸಲುವಾಗಿ ಮತ್ತು ಮುಂದಿನ ನಡೆಯ ಬಗ್ಗೆ ನಿರ್ಧಾರಗಳನ್ನು ತೆಗೆದುಕೊಳ್ಳುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
ಈ ವಿಶಿಷ್ಟ ಕಾರ್ಯಕ್ರಮವನ್ನು ಹಲವು ವರ್ಷಗಳ ಅಧ್ಯಯನದ ನಂತರ ಆಯೋಜಿಸಲಾಗಿದೆ. 2017 ರಿಂದ ಆರಂಭಗೊಂಡ ಸರ್ವೆ ಕಾರ್ಯವನ್ನು ಈಗಾಗಲೇ ಪೂರ್ಣಗೊಳಿಸಲಾಗಿದ್ದು, ಕೊಡವ ಜನಸಂಖ್ಯೆ ಸಮೀಕ್ಷೆ ನಡೆಸಿ, ಇಂದು ಇರುವ ಪ್ರತಿ ಕೊಡವರ ಮಾಹಿತಿಯನ್ನು ಸಂಗ್ರಹಿಸಲಾಗಿದೆ ಎಂದು ನಿರನ್ ನಾಚಪ್ಪ ಹೇಳಿದರು.
ಟ್ರಸ್ಟ್‍ನ ನಿರ್ದೇಶಕ ಬೊಳ್ಳೇರ ಪೃಥ್ವಿ ಪೂಣಚ್ಚ ಮಾತನಾಡಿ, ಕಾರ್ಯಕ್ರಮದಲ್ಲಿ ಜನಪ್ರಿಯ ನೃತ್ಯಗಳು, ಹಬ್ಬಗಳಾದ “ಕೈಲ್ ಪೊಳ್ದು”, ಪುತ್ತರಿ ಆಚರಣೆ, ಸಾಂಪ್ರದಾಯಿಕ ಕೊಡವ ನೃತ್ಯ, ಹಾಡುಗಳು ಮತ್ತು ಕಲಾ ಪ್ರಕಾರಗಳನ್ನು ಪ್ರದರ್ಶಿಸಲಾಗುವುದು. ಅಲ್ಲದೇ ಯುವ ಪೀಳಿಗೆಗೆ ಸಂಸ್ಕೃತಿ, ಆಚಾರ, ವಿಚಾರದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಸಮ್ಮೇಳನದ ಆವರಣದಲ್ಲಿ ಮಾದರಿ ಗ್ರಾಮದ ಮೂಲಕ ಕೊಡವರ ಪ್ರಮುಖ ಸ್ವತ್ತಾದ ಐನ್‍ಮನೆ, ಮಂದ್, ಪತ್ತಾಯ, ಕೈಮಡ ಇತ್ಯಾದಿಗಳ ವೀಕ್ಷಣೆಗೆ ಅವಕಾಶ ಕಲ್ಪಸಲಾಗಿದೆ ಎಂದರು.
ಕೊಡವ ಕಲಾಕೃತಿಗಳು, ಉಡುಗೆ, ತೊಡುಗೆ ಮತ್ತು ಐತಿಹಾಸಿಕ ವಸ್ತುಗಳನ್ನು ಪ್ರದರ್ಶಿಸಲು ಮ್ಯೂಸಿಯಂ ಸ್ಥಾಪನೆ ಮಾಡಲಾಗುವುದು, ಜೊತೆಗೆ ಕೊಡವ ಪಾಕ ಪದ್ಧತಿ, ಸಾಂಪ್ರದಾಯಿಕ ಉಡುಗೆ ಮತ್ತು ಕಲೆ, ಕಲಕುಶಲ ಕುರಿತು ಸಾಂಸ್ಕೃತಿಕ ಕಾರ್ಯಾಗಾರ, ಕೊಡವ ಭಾಷೆ ಮತ್ತು ಲಿಪಿಯನ್ನು ಉತ್ತೇಜಿಸಲು ಪುಸ್ತಕ ಮೇಳ, ಅಧಿವೇಶನ, ಚರ್ಚೆಗಳು, ಕಲಕುಶಲ ಮೇಳ ಸೇರಿದಂತೆ ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿದೆ.
ಮತ್ತೋರ್ವ ನಿರ್ದೇಶಕ ಪಾಲೆಂಗಡ ಅಮಿತ್ ಭೀಮಯ್ಯ ಮಾತನಾಡಿ, ಕನೆಕ್ಟಿಂಗ್ ಕೊಡವಾಸ್ ಟ್ರಸ್ಟ್ ನಿಂದ ಕೊಡವ ಕುಟುಂಬಗಳ ವಂಶಾವಳಿ ಮತ್ತು ಪೂರ್ವಜರ ಬಗ್ಗೆ ಸಂಶೋಧನೆ ಕೈಗೊಂಡು ಕುಟುಂಬದ ಇತಿಹಾಸಗಳನ್ನು ಅನ್ವೇಷಿಸಿ ಪ್ರತಿಯೊಂದು ಕುಟುಂಬದಲ್ಲಿರುವ ಸಂಪನ್ಮೂಲಗಳನ್ನು ಅಧ್ಯಯನ ಮಾಡಲಾಗಿದೆ. ಅಲ್ಲದೆ ಕೊಡವ ಜನಾಂಗದ ಮೂಲ ಕುಂದುಕೊರತೆಗಳನ್ನು ಗುರುತಿಸಲಾಗಿದೆ. ಕೊಡವರ ಇತಿಹಾಸದ ಸಂಶೋಧನೆ, ಮಂದ್ ಮಾನಿ ಕೈಮಡ, ಐನ್‍ಮನೆಗಳ ಬಗ್ಗೆ ವಿಸ್ತಾರವಾದ ಮಾಹಿತಿಯನ್ನು ಕಲೆಹಾಕಿ ಇದುವರೆಗೂ ಪ್ರತೀ ಕುಟುಂಬದಲ್ಲಿ ಆಚರಣೆಯಲ್ಲಿರುವ ಕಾರಣಂಗ್ ಕೊಡ್‍ಪೊ, ಕುಳಿಯಂಗ್, ನಾಥಂಗ್ ಕೊಡ್‍ಪೊ, ದೇವ ಕೊಡ್‍ಪೊ ಮುಂತಾದ ವಿಚಾರಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿದೆ ಎಂದು ತಿಳಿಸಿದರು.
ಪ್ರತೀ ಕುಟುಂಬದ ಒಕ್ಕಾಮೆಯ ವಿಚಾರಗಳ ಬಗ್ಗೆ ತಿಳಿದುಕೊಂಡು ಪಟ್ಟೆದಾರ, ಅಧ್ಯಕ್ಷರ ಬಗ್ಗೆ ಹಾಗೂ ಕೌಟುಂಬಿಕ ಆಡಳಿತರ ಬಗ್ಗೆ ಸಂಗ್ರಹಿಸಿ ಕಾಲಾನುಕಾಲದಿಂದ ಆ ಕುಟುಂಬದ ತಕ್ಕಾಮೆ, ಪದ್ಧತಿ, ಊರ ದೇವಾಲಯ, ಮಂದ್ ಮಾನಿಗಳಲ್ಲಿನ ತಕ್ಕ ಮುಖ್ಯಸ್ಥರ ವ್ಯವಸ್ಥೆ ಬಗ್ಗೆಯೂ ತಿಳಿದುಕೊಳ್ಳಲಾಗಿದ್ದು, ಈ ಎಲ್ಲಾ ಮಾಹಿತಿಗಳನ್ನು ಕ್ರೋಢೀಕರಿಸಿ ದಾಖಲೀಕರಣದ ಕೆಲಸಗಗಳಿಗೆ ಈಗಾಗಲೇ ಚಾಲನೆ ನೀಡಲಾಗಿದೆ. ವೆಬ್‍ಸೈಟ್ ಮೂಲಕ ಈ ಎಲ್ಲಾ ಮಾಹಿತಿಗಳ ದಾಖಲೀಕರಣ ಮಾಡುವ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಟ್ರಸ್ಟ್‍ನ ನಿರ್ದೇಶಕರುಗಳಾದ ಅಚ್ಚಂಡೀರ ಕುಶಾಲಪ್ಪ, ಪಟ್ರಪಂಡ ಪಂತ್ ಮೊಣ್ಣಪ್ಪ ಹಾಗೂ ಒಡಿಯಂಡ ನವೀನ್ ತಿಮ್ಮಯ್ಯ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ತಲಕಾವೇರಿಯಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮೂರ್ನಾಡು, NEWS DESK ಅ.17: ಇಲ್ಲಿನ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಅ.20ರಂದು ಮೂರ್ನಾಡಿನಲ್ಲಿ 33ನೇ…

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026

ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಅಕ್ಟೋಬರ್ 17, 2026

ಇಂದು ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿ ದಸರಾ ಸಂಭ್ರಮಕ್ಕೆ ಮೆರುಗು ನೀಡಿದ ಶ್ವಾನ ಪ್ರದರ್ಶನ; ಪ್ರಾಣಿ ಪ್ರಿಯರ ಮನಗೆದ್ದ ವಿವಿಧ ತಳಿಗಳು

ಅಕ್ಟೋಬರ್ 17, 2026

SSLC, ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿ: ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ

ಅಕ್ಟೋಬರ್ 17, 2026

ನಾಳೆ ಮಡಿಕೇರಿಯಲ್ಲಿ ಮಹಿಳಾ ದಸರಾ: ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 17, 2026

ಅ.19ರಂದು ರೋಟರಿ ಮಡಿಕೇರಿಯಿಂದ ಉಚಿತ ಮೂಳೆ ಮತ್ತು ನರರೋಗ ತಪಾಸಣಾ ಶಿಬಿರ

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.