Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
  • *ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*
  • *ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*
  • *ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*
  • *ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*
  • *ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*
  • *ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*
  • *ಅನಾರೋಗ್ಯದಿಂದ ಅಭಿ ಸಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಔಷಧಿ ವ್ಯಾಪಾರಸ್ಥರ ಸಂಘದಿಂದ ವಿಚಾರಗೋಷ್ಟಿ :  ರಾಜಿ ಪಂಚಾಯತಿಗೆ ಅವಕಾಶ ನೀಡದೇ ಶಿಕ್ಷೆ ಪ್ರಮಾಣದಲ್ಲಿ ಹೆಚ್ಚಳ : ಕೆ.ರಾಮರಾಜನ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಔಷಧಿ ವ್ಯಾಪಾರಸ್ಥರ ಸಂಘದಿಂದ ವಿಚಾರಗೋಷ್ಟಿ :  ರಾಜಿ ಪಂಚಾಯತಿಗೆ ಅವಕಾಶ ನೀಡದೇ ಶಿಕ್ಷೆ ಪ್ರಮಾಣದಲ್ಲಿ ಹೆಚ್ಚಳ : ಕೆ.ರಾಮರಾಜನ್*

ನವೆಂಬರ್ 23, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ.ನ23  :  ಕೊಡಗಿನ ಜನತೆ ಕಾನೂನಿಗೆ ಸೂಕ್ತ ಗೌರವ ನೀಡುತ್ತಿದ್ದು, ರಾಜಿ ಪಂಚಾಯತ್ ಗಳಿಗೆ ಆದ್ಯತೆ ನೀಡದೇ ಇರುವುದರಿಂದಲೇ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಈ ಜಿಲ್ಲೆಯಲ್ಲಿ ಅಪರಾಧಗಳಿಗೆ ಶಿಕ್ಷೆ ಪ್ರಮಾಣ ಹೆಚ್ಚಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ರಾಮರಾಜನ್ ಅಭಿಪ್ರಾಯಪಟ್ಟಿದ್ದಾರೆ.

ನಗರದ ಹೊರವಲಯದಲ್ಲಿನ ಆಹನ್ ಹಿಲ್ ಕಾಟೇಜ್ ನಲ್ಲಿ ಕೊಡಗು ಜಿಲ್ಲಾ ಔಷಧಿ ವ್ಯಾಪಾರಸ್ಥರ ಸಂಘದ ವತಿಯಿಂದ ಆಯೋಜಿತ ನಿರಂತರ ಕಲಿಕಾ ಕಾಯಾ೯ಗಾರ ಮತ್ತು ಔಷಧಿ ಕ್ಷೇತ್ರದಲ್ಲಿನ ಪ್ರಸಕ್ತ ವಿದ್ಯಮಾನಗಳ ಕುರಿತ ವಿಚಾರಗೋಷ್ಟಿ ಉದ್ಘಾಟಿಸಿ ರಾಮರಾಜನ್ ಮಾತನಾಡಿದರು.

ಶಿಸ್ತು ಮತ್ತು ಶಿಕ್ಷಣವಂತರಾದ ಕೊಡಗಿನ ಜನತೆ ಹೆಚ್ಚಿನ ಪಾಲು ಕಾನೂನು ಅನುಸರಿಸುತ್ತಾ ನಿಯಮಗಳನ್ನು ಪಾಲಿಸುತ್ತಾರೆ. ಹೀಗಾಗಿಯೇ ಇಲ್ಲಿ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಅಪರಾಧ ಪ್ರಕರಣಗಳ ಸಂದಭ೯ ರಾಜಿಪಂಚಾಯತ್ , ಒತ್ತಡ ಹೇರುವಿಕೆ ಗಣನೀಯವಾಗಿ ಕಡಮೆಯಿದೆ. ಇದರಿಂದಾಗಿಯೇ ತಪ್ಪಿತಸ್ಥರಿಗೆ ಸೂಕ್ತ ಕಾನೂನು ಶಿಕ್ಷೆಯ ಪ್ರಮಾಣ ಕೊಡಗಿನಲ್ಲಿ ಹೆಚ್ಚಾಗಿದೆ ಎಂದರು.

ಮಾದಕ ವ್ಯಸನಿಗಳಿಗೆ ಮಾದಕ ಪದಾಥ೯ಗಳನ್ನು ಅಂಗಡಿಗಳಲ್ಲಿ ಯಾರೂ ನೀಡಬಾರದು. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯೊಂದಿಗೆ ಔಷಧಿ ವ್ಯಾಪಾರಸ್ಥರೂ ಕೈಜೋಡಿಸುವಂತೆ ಮನವಿ ಮಾಡಿದ ಪೊಲೀಸ್ ವರಿಷ್ಠಾಧಿಕಾರಿ, ಔಷಧಿ ವ್ಯಾಪಾರಸ್ಥರ ಬಗ್ಗೆ ಜನಸಾಮಾನ್ಯರಲ್ಲಿ ಅತೀಯಾದ ವಿಶ್ವಾಸ, ನಂಬಿಕೆ ಇರುತ್ತದೆ. ಹೀಗಾಗಿ ಈ ವಿಶ್ವಾಸವನ್ನು ಖಂಡಿತವಾಗಿಯೂ ವ್ಯಾಪಾರಸ್ಥರು ಕಳೆದುಕೊಳ್ಳಬಾರದು ಎಂದರು.

ಸರಿಯಾದ ಔಷಧಿ ನೀಡದೇ ರೋಗಿ ಆರೋಗ್ಯ ಸಂಬಂಧಿತ ಸಮಸ್ಯೆಗೆ ಸಿಲುಕಿದ್ದೇ ಆದಲ್ಲಿ ಔಷಧಿ ವ್ಯಾಪಾರಸ್ಥರೂ ಒಂದಲ್ಲ ಒಂದು ದಿನ ಕಾನೂನಿನ ಕುಣಿಕೆ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ ರಾಮರಾಜನ್, ಓವ೯ ಔಷಧಿ ವ್ಯಾಪಾರಸ್ಥ ಲೋಪದೋಷಗಳಿಂದ ಕೂಡಿದ ಔಷಧಿ ನೀಡಿದ್ದೇ ಆದಲ್ಲಿ ಆಗ ಸಮಸ್ಯೆ ಉಂಟಾದರೆ ಅದು ಎಲ್ಲಾ ಔಷಧಿ ವ್ಯಾಪಾರಸ್ಥರ ಮೇಲೂ ಸಮಾಜದಲ್ಲಿ ಪ್ರತಿಕೂಲ ಪರಿಣಾಮ ಬೀರುತ್ತದೆ. ಹೀಗಾಗಿ ಔಷಧಿ ವ್ಯಾಪಾರಸ್ಥರು ಅತ್ಯಂತ ಜಾಗರೂಕತೆಯಿಂದ ಔಷಧಿ ಮಾರಾಟ ಮಾಡುವಂತೆಯೂ ಸಲಹೆ ನೀಡಿದರು.

ಕೊಡಗು ಜಿಲ್ಲಾ ಔಷಧಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷ, ರಾಜ್ಯ ಔಷಧಿ ವ್ಯಾಪಾರಸ್ಥರ ಸಂಘಧ ಪ್ರಧಾನ ಕಾಯ೯ದಶಿ೯ ಅಂಬೆಕಲ್ ಜೀವನ್ ಕುಶಾಲಪ್ಪ ಮಾತನಾಡಿ, ದೇಶದಲ್ಲಿ 12.50 ಲಕ್ಷ ಔಷಧಿ ವ್ಯಾಪಾರಸ್ಥರಿದ್ದು, ಕನಾ೯ಟಕ ರಾಜ್ಯ ಔಷಧಿ ವ್ಯಾಪಾರಸ್ಥರ ಸಂಘದಲ್ಲಿ 26 ಸಾವಿರ ಸದಸ್ಯರಿದ್ದರೆ, ಕೊಡಗು ಜಿಲ್ಲಾ ಸಂಘದಲ್ಲಿ 260 ಸದಸ್ಯರಿದ್ದಾರೆ ಎಂದರು. ಮಾದಕ ದ್ರವ್ಯಗಳ ವಿರುದ್ದ ಪೊಲೀಸ್ ಇಲಾಖೆ ಕೈಗೊಂಡಿರುವ ಸಮರಕ್ಕೆ ಜಿಲ್ಲಾ ಔಷಧಿ ವ್ಯಾಪಾರಸ್ಥರು ಸಹಕಾರ ನೀಡುತ್ತಾರೆ ಎಂದು ಭರವಸೆ ನೀಡಿದ ಜೀವನ್, ಮಾದಕ ವಸ್ತು ಮುಕ್ತ ಸಮಾಜ ನಿಮಾ೯ಣ ಎಲ್ಲರ ಸಂಕಲ್ಪವೂ ಆಗಿರಬೇಕೆಂದು ಅಭಿಪ್ರಾಯಪಟ್ಟರು.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಅಂಕಿತ ಅಧಿಕಾರಿ ಡಾ. ಅನಿಲ್ ಧವನ್ ಮಾತನಾಡಿ, ಉತ್ತಮ ಆರೋಗ್ಯಕ್ಕೆ ಉತ್ತಮ ಆಹಾರ ಕಾರಣವಾಗುತ್ತದೆ. ಈ ಹಿನ್ನಲೆಯಲ್ಲಿ ಔಷಧಿ ಅಂಗಡಿಗಳಲ್ಲಿ ಆಹಾರ ಪದಾಥ೯ಗಳ ಗುಣಮಟ್ಟಕ್ಕೆ ವ್ಯಾಪಾರಿಗಳು ಮಹತ್ವ ನೀಡಲೇಬೇಕು. ಕಳಪೆ ಗುಣಮಟ್ಟದ ಆಹಾರ ವಿತರಣೆ ಬಗ್ಗೆ ಕಾನೂನಿನಲ್ಲಿ ಕಠಿಣ ಶಿಕ್ಷೆ ಇದೆ ಎಂದು ಎಚ್ಚರಿಸಿದರು.

ಮಡಿಕೇರಿ ತಾಲೂಕು ಕ್ಷಯ ರೋಗ ನಿಯಂತ್ರಣಧಿಕಾರಿ ಡಾ.ಚೇತನ್ ಮಾತನಾಡಿ, ಕೊಡಗಿನಲ್ಲಿ ಪ್ರಸ್ತುತ 190 ಕ್ಷಯ ರೋಗ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿ ಈಗಾಗಲೇ ಕ್ಷಯ ರೋಗ ನಿಯಂತ್ರಣ ಸಂಬಂಧ ಮನೆ ಮನೆ ಪರಿಶೀಲನಾ ಕಾಯ೯ವನ್ನು ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿಗಳ ಮೂಲಕ ನಡೆಸಲಾಗುತ್ತಿದೆ. 2025 ರಲ್ಲಿ ಭಾರತವನ್ನು ಕ್ಷಯ ಮುಕ್ತ ದೇಶವನ್ನಾಗಿ ರೂಪಿಸುವ ಗುರಿ ಹೊಂದಲಾಗಿದೆ. ಕ್ಷಯ ರೋಗ ಲಕ್ಷಣವನ್ನು ಬೇಗ ಪತ್ತೆ ಹಚ್ಚಿ ಚಿಕಿತ್ಸೆ ಪ್ರಾರಂಭಿಸಿದರೆ ಕ್ಷಯ ರೋಗ ನಿವಾರಣೆ ಸುಲಭ ಸಾಧ್ಯ ಎಂದರು. ಅಗತ್ಯವುಳ್ಳವರಿಗೆ ಮನೆಗಳಿಗೇ ತೆರಳಿ ಕ್ಷಯ ರೋಗ ನಿವಾರಣೆಗೆ ಔಷಧಿ ನೀಡುವ ಕೆಲಸವನ್ನೂ ವೈದ್ಯಕೀಯ ಸಿಬ್ಬಂದಿಗಳು ಕೈಗೊಂಡಿದ್ದಾರೆ ಎಂದು  ತಿಳಿಸಿದರು.

ಮೈಸೂರು ವೖತ್ತದ ಉಪಔಷಧ ನಿಯಂತ್ರಕ ಬಿ.ಪಿ. ಅರುಣ್ ಮಾತನಾಡಿ, ಸಾಮಾಜಿಕ ಬದ್ದತೆಯೊಂದಿಗೆ ಔಷಧಿ ನೀಡುವ ಮೂಲಕ ಆರೋಗ್ಯವಂತ ಭಾರತಕ್ಕೆ ಔಷಧಿ ವ್ಯಾಪಾರಿಗಳು ಗಣನೀಯ ಕೊಡುಗೆ ನೀಡಬೇಕೆಂದು ಕರೆ ನೀಡಿದರು.

ಕೊಡಗು ಜಿಲ್ಲೆಯ ಸಹಾಯಕ ಔಷಧ ನಿಯಂತ್ರಕ ಗುರುನಾಥ್ ಮಾಗಣಗೇರಿ ಮಾತನಾಡಿ, ನಕಲಿ ಔಷಧಿಗಳ ವಹಿವಾಟು ಕಂಡುಬಂದಲ್ಲಿ ಔಷಧ ನಿಯಂತ್ರಣಾದಿಕಾರಿಗೆ ಸಾವ೯ಜನಿಕರು ದೂರು ನೀಡಲು ಅವಕಾಶವಿದೆ ಎಂದು ಮಾಹಿತಿ ನೀಡಿದರಲ್ಲದೇ, ರೋಗ ನಿರೋಧಕ ಶಕ್ತಿಯು ದೇಹಕ್ಕೆ ಅತ್ಯಗತ್ಯವಾಗಿದ್ದು ಇತ್ತೀಚಿನ ದಿನಗಳಲ್ಲಿ ರೋಗ ನಿರೋಧಕ ಶಕ್ತಿಯೇ ಮಾನವನ ದೇಹದಲ್ಲಿ ಕುಂಠಿತಗೊಳ್ಳುತ್ತಿರುವುದು ಕಳವಳಕಾರಿ ಎಂದು ಆತಂಕ ವ್ಯಕ್ತಪಡಿಸಿದರು.

ಜಿಲ್ಲಾ ಕಾಮಿ೯ಕ ಅಧಿಕಾರಿ ಎಸ್.ಎಲ್. ಹಷ೯ವಧ೯ನ್ ಮಾತನಾಡಿ, ಪ್ರತೀಯೊಬ್ಬ ವ್ಯಾಪಾರಸ್ಥರೂ ಕಾನೂನು ಪ್ರಕಾರ ವಹಿವಾಟನ್ನು ನೋಂದಾಯಿಸಿಕೊಂಡು ತಮ್ಮಲ್ಲಿನ ಕಾಮಿ೯ಕ, ಸಿಬ್ಬಂದಿಗಳಿಗೆ ನಿಯಮಾನುಸಾರ ಕಲ್ಪಿಸಬೇಕಾದ ಸೌಲಭ್ಯಗಳನ್ನು ನೀಡಬೇಕೆಂದು ಸೂಚಿಸಿದರು.

ರಾಜ್ಯ ಔಷಧಿ ವ್ಯಾಪಾರಿಗಳ ಸಂಘದ ಕಾನೂನು ಸಲಹೆಗಾರ ಕೆ.ಹರೀಶ್ , ಸಂಘದ ಜಿಲ್ಲಾ ಗೌರವ ಕಾಯ೯ದಶಿ೯ ಡಿ.ಐ. ಪುರುಷೋತ್ತಮ , ಉಪಾಧ್ಯಕ್ಷರಾದ ಅಂಬೆಕಲ್ ವಿನೋದ್, ಸಂಪತ್ ಕುಮಾರ್, ಕೃಷ್ಣಪ್ಪ, ಸಂಘಟನಾ ಕಾಯ೯ದಶಿ೯ ಶ್ರೀನಿವಾಸ್ ವೇದಿಕೆಯಲ್ಲಿದ್ದರು. ಸಂಘದ ಖಜಾಂಚಿ ಪ್ರಸಾದ್ ಗೌಡ ವಂದಿಸಿ, ಸಂಘಟನಾ ಕಾಯ೯ದಶಿ೯ ಕೆ. ವಸಂತ್ ಕುಮಾರ್ ನಿರೂಪಿಸಿ, ರಮ್ಯ ಪ್ರಸಾದ್ ಪ್ರಾಥಿ೯ಸಿದರು. ಜಿಲ್ಲೆಯ ವಿವಿಧೆಡೆಗಳಿಂದ ಔಷಧಿ ವ್ಯಾಪಾರಸ್ಥರು ಕಾಯ೯ಕ್ರಮದಲ್ಲಿ ಪಾಲ್ಗೊಂಡು ಪ್ರಶ್ನೆಗಳ ಮೂಲಕ ವಿವಿಧ ವಿಚಾರಗಳ ಬಗ್ಗೆ ತಮ್ಮಲ್ಲಿನ ಸಂದೇಹ ಪರಿಹರಿಸಿಕೊಂಡರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.9 NEWS DESK : ನಗರಸಭೆಯ 2026-27ನೇ ಸಾಲಿನ ಆಯವ್ಯಯ ಮಂಜೂರಾತಿಗೆ ಮಾರ್ಚ್, 11 ರಂದು ಬೆಳಗ್ಗೆ 11.30…

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026

*ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*

ಮಾರ್ಚ್ 9, 2026

*ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*

ಮಾರ್ಚ್ 9, 2026

*ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*

ಮಾರ್ಚ್ 9, 2026

*ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*

ಮಾರ್ಚ್ 9, 2026

*ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*

ಮಾರ್ಚ್ 9, 2026

*ಅನಾರೋಗ್ಯದಿಂದ ಅಭಿ ಸಾವು*

ಮಾರ್ಚ್ 9, 2026

*ಕಾಡಾನೆ ಹಾವಳಿ ನಿಯಂತ್ರಿಸಲು ಸರ್ಕಾರ ವಿಫಲ : ಕೂಡಲೇ ಕೊಡಗಿಗೆ ಅರಣ್ಯ ಸಚಿವರು ಭೇಟಿ ನೀಡಲಿ : ಎಡಿಕೇರಿ ಪ್ರಸನ್ನ ಒತ್ತಾಯ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.