ಮಡಿಕೇರಿ ನ.23 : ವಿರಾಜಪೇಟೆಯ ಸಂತ ಅನ್ನಮ್ಮ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧೆಯಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶಾಲೆಯ 9ನೇ ತರಗತಿ ವಿದ್ಯಾರ್ಥಿಗಳಾದ ನಿಶಾನ್ ಇಂಗ್ಲಿಷ್ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸೋಮಣ್ಣ ಮಿಮಿಕ್ರಿ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.
ಇವರ ಸಾಧನೆಗೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಬಿ.ಎಸ್.ಸುದೇಶ್ ಕಾರ್ಯದರ್ಶಿ ಪಿ.ಎನ್.ವಿನೋದ್, ಶಾಲಾ ಸಂಯೋಜಕರಾದ ಚೈತ್ರ, ಭಾಗ್ಯ, ಅಮೃತ ಮತ್ತು ಶಿಕ್ಷಕ ವೃಂದದವರು, ಪೋಷಕರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.







