Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜಿಲ್ಲೆಯಲ್ಲಿ 1,47,621 ಮಂದಿ ಫ್ರೂಟ್ಸ್ ತಂತ್ರಂಶದಲ್ಲಿ ಹೆಸರು ನೋಂದಾಯಿಸಿದ್ದಾರೆ : ಜಿಲ್ಲಾಧಿಕಾರಿ ವೆಂಕಟ್ ರಾಜಾ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜಿಲ್ಲೆಯಲ್ಲಿ 1,47,621 ಮಂದಿ ಫ್ರೂಟ್ಸ್ ತಂತ್ರಂಶದಲ್ಲಿ ಹೆಸರು ನೋಂದಾಯಿಸಿದ್ದಾರೆ : ಜಿಲ್ಲಾಧಿಕಾರಿ ವೆಂಕಟ್ ರಾಜಾ*

ನವೆಂಬರ್ 23, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.23 : ಕೃಷಿಕರು ಸರ್ಕಾರದ ಸೌಲಭ್ಯವನ್ನು ಪಡೆಯಲು ಕಡ್ಡಾಯವಾಗಿ ಫ್ರೂಟ್ಸ್ ತಂತ್ರಾಂಶದಲ್ಲಿ ಹೆಸರು ನೋಂದಾಯಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಕೋರಿದ್ದಾರೆ.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಅವರು ಆಧಾರ್ ಕಾರ್ಡ್ ಜೊತೆಗೆ ಫ್ರೂಟ್ಸ್ ತಂತ್ರಾಂಶದಲ್ಲಿ ಹೆಸರು ನೋಂದಾಯಿಸುವುದು ಕಡ್ಡಾಯವಾಗಿದೆ. ಆ ನಿಟ್ಟಿನಲ್ಲಿ ರೈತರು ಈ ಬಗ್ಗೆ ವಿಶೇಷ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಮನವಿ ಮಾಡಿದರು.
ಜಿಲ್ಲೆಯಲ್ಲಿ 3,26,776 ಅದರಲ್ಲಿ 1,47,621 ಮಂದಿ ಫ್ರೂಟ್ಸ್ ತಂತ್ರಂಶದಲ್ಲಿ ಹೆಸರು ನೋಂದಾಯಿಸಿದ್ದಾರೆ. ಉಳಿದಂತೆ 1,29, 976 ಮಂದಿ ಫ್ರೂಟ್ಸ್ ತಂತ್ರಾಂಶದಡಿ ಹೆಸರು ನೋಂದಾಯಿಸಬೇಕಿದೆ.
Farmer Registration and Unified Beneficiary Information System-fruits ಸರ್ಕಾರದ ವತಿಯಿಂದ ಅಭಿವೃದ್ದಿಗೊಳಿಸಲಾಗಿದ್ದು, ಸರ್ಕಾರದಿಂದ ಸವಲತ್ತುಗಳನ್ನು ಪಡೆಯಲು ಬಯಸುವ ಎಲ್ಲಾ ರೈತರು ಫ್ರೂಟ್ಸ್ ತಂತ್ರಾಂಶದಲ್ಲಿ ನೊಂದಾಯಿಸಿಕೊಳ್ಳುವುದು ಅವಶ್ಯವಾಗಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ರೈತರು ಜಮೀನಿಗೆ ಸಂಬಂಧಿಸಿದ ವಿವರಗಳನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸಿಕೊಂಡು ಗುರುತಿನ ಸಂಖ್ಯೆ (ಎಫ್‍ಐಡಿ) ಪಡೆಯಬಹುದು ಎಂದು ಹೇಳಿದರು.
ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ, ಕಂದಾಯ ಇಲಾಖೆ ಮತ್ತು ಇತರೆ ಸಂಬಂಧಿಸಿದ ಇಲಾಖೆಗಳಿಂದ ದೊರೆಯುವ ಸಹಾಯಧನ ಸೌಲಭ್ಯ ಪಡೆಯಲು ಮತ್ತು ಬೆಂಬಲ ಬೆಲೆ, ಬೆಳೆ ವಿಮೆ, ಬೆಳೆ ಸಾಲ, ಬೆಳೆ ಹಾನಿ ಪರಿಹಾರ, ಬ್ಯಾಂಕ್ ಸಾಲ ಪಡೆಯಲು ಹಾಗೂ ಇತರೆ ಯೋಜನೆಗಳಿಗೆ ಫ್ರೂಟ್ಸ್ ತಂತ್ರಾಂಶದಲ್ಲಿರುವ ವಿವರಗಳನ್ನು ಬಳಸಲಾಗುವುದು ಎಂದರು.
ಕೊಡಗು ಜಿಲ್ಲೆಯಲ್ಲಿ ಭೂಮಿ ತಂತ್ರಾಂಶದಲ್ಲಿ ಒಟ್ಟು ಸೇರ್ಪಡೆಯಾಗಿರುವ ತಾಕು ಸಂಖ್ಯೆ 3,26,776. ಸರ್ಕಾರದ ಅಧೀನದಲ್ಲಿರುವ ಹಾಗೂ ಕೃಷಿಯೇತರ ಭೂಮಿಗಳು(ಎನ್.ಎ) ಹಾಗೂ ಇತರೆ ತಾಕುಗಳನ್ನು ಹೊರತುಪಡಿಸಿ ಫ್ರೂಟ್ಸ್ ತಂತ್ರಾಂಶದಲ್ಲಿ ಸೇರ್ಪಡೆಗೊಳಿಸಬೇಕಾಗಿರುವ ತಾಕುಗಳ ಒಟ್ಟು ಸಂಖ್ಯೆ 2,69,901. ಈಗಾಗಲೇ 1,47,621 ತಾಕುಗಳು ಸೇರ್ಪಡೆಗೊಂಡಿದ್ದು, ಫ್ರೂಟ್ಸ್ ತಂತ್ರಾಂಶದಲ್ಲಿ 1,29,976 ಸರ್ವೇ ನಂಬರ್‍ಗಳು ಸೇರ್ಪಡೆಯಾಗಲು ಬಾಕಿ ಇದೆ ಎಂದು ವೆಂಕಟ್ ರಾಜಾ ವಿವರಿಸಿದರು.
ಎಲ್ಲಾ ರೈತರು ಕಡ್ಡಾಯವಾಗಿ ತಮ್ಮ ಎಲ್ಲಾ ಜಮೀನುಗಳ ವಿವರಗಳನ್ನು ತಮ್ಮ ಎಫ್‍ಐಡಿ ಗೆ ಸೇರಿಸಲು ಮತ್ತು ಯಾವ ರೈತರು ಇಲ್ಲಿಯವರೆಗೆ ಎಫ್‍ಐಡಿ ಯನ್ನು ಮಾಡಿಸಿಕೊಂಡಿಲ್ಲವೋ ಅವರು ತಮ್ಮ ಹತ್ತಿರದ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರ, ತೋಟಗಾರಿಕೆ ಇಲಾಖೆ, ಕಂದಾಯ ಇಲಾಖೆ, ಪಶು ಸಂಗೋಪನಾ ಇಲಾಖೆಗಳನ್ನು ಸಂಪರ್ಕಿಸಬಹುದಾಗಿದೆ ಎಂದರು.
ಎಫ್‍ಐಡಿ ಯನ್ನು ಮಾಡಿಸಲು ತಮ್ಮ ಹೆಸರಿನಲ್ಲಿರುವ ಎಲ್ಲಾ ಜಮೀನುಗಳ ಪಹಣಿ ಪ್ರತಿಗಳು, ರೈತರ ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಖಾತೆ ಪುಸ್ತಕದ ಪ್ರತಿ, ತಮ್ಮ ಮೊಬೈಲ್ ಸಂಖ್ಯೆ, ಜಾತಿ ಪ್ರಮಾಣ ಪತ್ರದ ಪ್ರತಿ (ಪರಿಶಿಷ್ಟ ವರ್ಗದ ರೈತರಿಗೆ ಕಡ್ಡಾಯ) ಪಾಸ್‍ಪೋರ್ಟ್ ಅಳತೆಯ ಒಂದು ಭಾವಚಿತ್ರ. ದಾಖಲಾತಿಗಳು ಅವಶ್ಯವಾಗಿದೆ ಎಂದು ಹೇಳಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಸೋಮಸುಂದರ, ಸಹಾಯಕ ನಿರ್ದೇಶಕರಾದ ಗೌರಿ ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.