Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿಚಾರ ಮಂಡನೆ, ಸನ್ಮಾನ, “ನಾಡ ಕೊಡಗ್” ಪುಸ್ತಕ ಬಿಡುಗಡೆ : ಮಾತೃಭಾಷೆ ಮೂಲೆ ಗುಂಪಾಗುತ್ತಿದೆ : ರಾಣು ಅಪ್ಪಣ್ಣ ಬೇಸರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿಚಾರ ಮಂಡನೆ, ಸನ್ಮಾನ, “ನಾಡ ಕೊಡಗ್” ಪುಸ್ತಕ ಬಿಡುಗಡೆ : ಮಾತೃಭಾಷೆ ಮೂಲೆ ಗುಂಪಾಗುತ್ತಿದೆ : ರಾಣು ಅಪ್ಪಣ್ಣ ಬೇಸರ*

ನವೆಂಬರ್ 24, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.24 : ಪ್ರಸ್ತುತ ದಿನಗಳಲ್ಲಿ ಪೋಷಕರು ತಮ್ಮ ಮಕ್ಕಳನ್ನು ಆಂಗ್ಲ ಮಾಧ್ಯಮ ಶಾಲೆಗೆ ಸೇರಿಸುವ ಭರದಲ್ಲಿ ಮಾತೃಭಾಷೆಯನ್ನು ಮೂಲೆ ಗುಂಪು ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿರುವ ಪೊಮ್ಮಕ್ಕಡ ಪರಿಷತ್‍ನ ಅಧ್ಯಕ್ಷೆ ಬಾಚರಣಿಯಂಡ ರಾಣು ಅಪ್ಪಣ್ಣ, ಮಕ್ಕಳಲ್ಲಿ ಭಾಷೆ, ಸಂಸ್ಕೃತಿ, ಸಾಹಿತ್ಯದ ಬಗ್ಗೆ ಆಸಕ್ತಿ ಹೆಚ್ಚಾಗಬೇಕು ಎಂದು ಕರೆ ನೀಡಿದ್ದಾರೆ.
ವಿರಾಜಪೇಟೆ ಅಖಿಲ ಕೊಡವ ಸಮಾಜ ಪೊಮ್ಮಕ್ಕಡ ಪರಿಷತ್, ಕೊಡವ ಎಂ.ಎ.ಸ್ನಾತಕೋತ್ತರ ವಿಭಾಗ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ಮತ್ತು ಕೊಡವ ಮಕ್ಕಡ ಕೂಟದ ಸಹಯೋಗದಲ್ಲಿ ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜ್ ನ ಸಭಾಂಗಣದಲ್ಲಿ ನಡೆದ ವಿಚಾರ ಮಂಡನೆ, ಸನ್ಮಾನ ಹಾಗೂ “ನಾಡ ಕೊಡಗ್” ಪುಸ್ತಕ ಬಿಡುಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಭಾಷೆ, ಕಲೆ, ಜನಪದ ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದು ಮಹಿಳೆಯ ಪ್ರಮುಖ ಪಾತ್ರವಾಗಬೇಕು. ಆದರೆ ಪ್ರಸ್ತುತ ದಿನಗಳಲ್ಲಿ ಮಹಿಳೆಯರು ವಿವಿಧ ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ತಮ್ಮ ಪದ್ಧತಿ ಪರಂಪರೆಯನ್ನೆ ಮರೆಯುತ್ತಿದ್ದಾರೆ. ತಮ್ಮ ನೆಲವನ್ನು ಇತರರಿಗೆ ಮಾರಿ ಮಣ್ಣಿನ ಸಂಬಂಧವನ್ನು ಕಳೆದುಕೊಳ್ಳುತ್ತಿರುವುದು ವಿಪರ್ಯಸ ಎಂದರು.
ಕೊಡವ ಜನಾಂಗ ವಿಶಿಷ್ಟ ಸಂಸ್ಕೃತಿ, ಪದ್ಧತಿಯನ್ನು ಹೊಂದಿರುವ ಜನಾಂಗ. ಕೊಡವ ಬುಡಕಟ್ಟು ಸಮುದಾಯವಾದರೂ ಇಂದು ಸುಧಾರಿತ ಜನಾಂಗವೆಂದು ಗುರುತಿಸಿಕೊಂಡಿರುವುದು ಶ್ಲಾಘನೀಯ. ಬುಡಕಟ್ಟು ಸಮುದಾಯದ ಸಂಸ್ಕೃತಿ, ಆಚಾರ, ವಿಚಾರಗಳನ್ನು ಉಳಿಸಿ ಬೆಳೆಸಿಕೊಂಡು ಹೋಗಲು ಭಾಷೆ ಬಹಳ ಮುಖ್ಯ. ಆದರೆ ಪಾಶ್ಚಿಮಾತ್ಯದ ವ್ಯಾಮೋಹದಿಂದ ನಮ್ಮ ನೆಲ, ಸಂಸ್ಕೃತಿಯನ್ನು ಬಿಟ್ಟು ವಿದೇಶಿಗರ ಸಂಸ್ಕೃತಿಗೆ ಮಾರು ಹೋಗುತ್ತಿದ್ದು, ವಿದೇಶಗಳಿಗೆ ತೆರಳುತ್ತಿದ್ದಾರೆ. ಇದು ನಮ್ಮ ಸಂಸ್ಕೃತಿಯ ನಾಶಕ್ಕೆ ಮುಖ್ಯ ಕಾರಣ ಎಂದು ಅಭಿಪ್ರಾಯಪಟ್ಟರು.
ಪೋಷಕರು ಪಾಶ್ಚಿಮಾತ್ಯ ಭಾಷೆಗೆ ಆದ್ಯತೆ ನೀಡದೆ ಬಾಲ್ಯದಿಂದಲೇ ತಮ್ಮ ಮಕ್ಕಳಿಗೆ ನಮ್ಮ ಸಂಸ್ಕೃತಿಯ ಬಗ್ಗೆ ಅರಿವು ಮೂಡಿಸಿದರೆ ನಿರಂತರ ಅನುಕರಣೆಯಿಂದ ಸಂಸ್ಕೃತಿ, ಆಚಾರ, ವಿಚಾರ, ಶೌರ್ಯ, ಸಾಹಸವನ್ನು ತಿಳಿದುಕೊಳ್ಳುತ್ತಾರೆ ಎಂದರು.
ಇಂದು ಸಾಮಾಜಿಕ ಕಟ್ಟುಪಾಡುಗಳು ಸಡಿಲಗೊಂಡಿದೆ, ಐನ್‍ಮನೆಗಳು ನಾಶವಾಗುತ್ತಿವೆ. ಸಂಸ್ಕೃತಿ ಎಂಬುದು ನಿಧಿ ಇದ್ದಂತೆ, ಕೊಡವರಿಗೆ ಕೊಡವ ಸಂಸ್ಕೃತಿಯೇ ಆಧಾರ. ನಮ್ಮದು ಜಗ ಮೆಚ್ಚಿದ ಸಂಸ್ಕೃತಿ, ಅದನ್ನು ರಕ್ಷಣೆ ಮಾಡಿ ಮುಂದಿನ ಯುವ ಪೀಳಿಗೆಗೆ ಉಳಿಸಬೇಕು. ಭಾಷೆ, ಸಾಹಿತ್ಯ, ಸಂಸ್ಕೃತಿ ಮೂಲ ಸ್ಥಾನವೇ ಮನೆ. ಬೇರೆ ಭಾಷೆಗಳನ್ನು ಕಲಿಯಲು ಬೇಕಾದಷ್ಟು ಅವಕಾಶಗಳಿವೆ. ಆದರೆ ಮಾತೃಭಾಷೆಯನ್ನು ಮನೆಯಿಂದಲೇ ಬೆಳೆಸಬೇಕು ಎಂದು ರಾಣು ಅಪ್ಪಣ್ಣ ಕರೆ ನೀಡಿದರು.
ನಿರ್ಮಾಪಕ, ನಿರ್ದೇಶಕ, ನಟ, ಸಾಹಿತಿ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಅವರು ಬರೆದಿರುವ ಕೊಡವ ಮಕ್ಕಡ ಕೂಟದ 76ನೇ ಪುಸ್ತಕ “ನಾಡ ಕೊಡಗ್” ನ್ನು ಬಿಡುಗಡೆಗೊಳಿಸಿ, ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಾಹಿತಿ ಹಾಗೂ ಎಂ.ಎ.ಕೊಡವ ಉಪನ್ಯಾಸಕ ಬಾಚರಣಿಯಂಡ ಅಪ್ಪಣ್ಣ, ಪ್ರಸ್ತುತ ದಿನಗಳಲ್ಲಿ ಸಾಹಿತ್ಯ ಕ್ಷೇತ್ರ ಬೆಳೆದಿದ್ದು, ಬರಹಗಾರರ ಸಂಖ್ಯೆಯೂ ಹೆಚ್ಚಾಗಿದೆ. ಆದರೆ ಓದುಗರ ಸಂಖ್ಯೆ ಕಡಿಮೆಯಾಗಿರುವುದು ವಿಪರ್ಯಸ ಎಂದು ಬೇಸರ ವ್ಯಕ್ತಪಡಿಸಿದರು.
ಪ್ರತಿಯೊಬ್ಬರು ಪುಸ್ತಕವನ್ನು ಹೆಚ್ಚು ಕೊಂಡುಕೊಳ್ಳುವ ಮೂಲಕ ಓದಿ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು. ಸಾಹಿತ್ಯ ಬೆಳೆಯಬೇಕು, ಕೊಡವಾಮೆಯನ್ನು ಬೆಳೆಸಬೇಕು ಎಂದ ಅವರು, ಕೊಡವ ಎಂ.ಎ. ವಿದ್ಯಾರ್ಥಿಗಳು ಸಾಹಿತ್ಯ ಲೋಕಕ್ಕೆ ಪದಾರ್ಪಣೆ ಮಾಡಿ, ಕೊಡವ ಭಾಷೆ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಪ್ರಮುಖ ಪಾತ್ರವಾಹಿಸಿದ್ದು, ಮುಂದಿನ ದಿನಗಳಲ್ಲಿ ಸಾಹಿತ್ಯ ಲೋಕದ ಬೆಳವಣಿಗೆಗೆ ಮತ್ತಷ್ಟು ಕೊಡುಗೆ ನೀಡುವಂತಾಗಲಿ ಎಂದು ಶುಭ ಹಾರೈಸಿದರು.
ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೊ.ರಾಘವ ಬಿ. ಮಾತನಾಡಿ, ಕಾಲೇಜ್‍ನಲ್ಲಿ ಎಂ.ಎ.ಕೊಡವ ಪ್ರಾರಂಭವಾದ ನಂತರ ಗಮನಾರ್ಹ ಬದಲಾವಣೆಯಾಗುತ್ತಿದೆ. ಹಿರಿಯರ ಮಾರ್ಗದರ್ಶನ ಹಾಗೂ ಕಿರಿಯರ ಉತ್ಸಾಹದಿಂದ ಪುಸ್ತಕಗಳನ್ನು ಅನಾವರಣಗೊಳಿಸಲಾಗಿದ್ದು, ಇದೇ ಮೊದಲ ಬಾರಿಗೆ ಕೃತಿ ರಚಿಸಿ ಪದವಿ ಪಡೆದಿರುವುದು ಶ್ಲಾಘನೀಯ. ಇದು ಶೈಕ್ಷಣಿಕ ಇತಿಹಾಸದಲ್ಲಿ ಉತ್ತಮ ಸಾಧನೆ ಎಂದರು.
ಸಂಸ್ಕೃತಿ  ಉಳಿದು, ಬೆಳವಣಿಗೆ ಕಾಣಬೇಕಾದರೆ ಸಾಹಿತಿಗಳ ಕೊಡುಗೆ ಅಪಾರ. ತಾಯಿಯನ್ನೇ ದೇವರು ಎಂದು ಪೂಜಿಸುವ ಸಂಸ್ಕೃತಿ ನಮ್ಮ ದೇಶದ್ದು. ಆದ್ದರಿಂದ ನಮ್ಮ ಸಂಸ್ಕೃತಿಯನ್ನು ಬೆಳೆಸಲು ತಾಯಿಯ ಪಾತ್ರ ಪ್ರಮುಖವಾಗಿದೆ. ಸಾಹಿತ್ಯ ಎನ್ನುವುದು ವ್ಯಕ್ತಿತ್ವವವನ್ನು ರೂಪಿಸುವಂತದ್ದು, ವಿದ್ಯಾರ್ಥಿಗಳು ಮೊಬೈಲ್ ಗಳನ್ನು ಬಿಟ್ಟು ಓದಿನೆಡೆಗೆ ಹೆಚ್ಚು ಆಸಕ್ತಿ ವಹಿಸಬೇಕು ಎಂದು ಕರೆ ನೀಡಿದರು.
ಕೊಡವ ಎಂ.ಎ ವಿಭಾಗದ ಸಂಯೋಜಕ ಮೇಚಿರ ರವಿಶಂಕರ್ ನಾಣಯ್ಯ ಮಾತನಾಡಿ, ಕಾರ್ಯಪ್ಪ ಕಾಲೇಜ್‍ನಲ್ಲಿ ಎಂ.ಎ ಕೊಡವ ಪದವಿಯನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಂಡಿದ್ದಾರೆ. ಪುಸ್ತಕ ರಚಿಸಿ ಬಿಡುಗಡೆ ಮಾಡುವ ಮೂಲಕ ಯುವಕ, ಯುವತಿಯರಿಗೆ ಮಾದರಿಯಾಗಿದ್ದಾರೆ. ಕೊಡವ ಸಾಹಿತ್ಯ, ಭಾಷೆ ಹಾಗೂ ಬರಹವನ್ನು ಬೆಳೆಸಲು ಎಲ್ಲರು ಮುಂದಾಗಬೇಕು ಎಂದರು.
ಕೊಡವ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಎಂ.ಎ ಕೊಡವಕ್ಕೆ ಸೇರುವಂತೆ ಮನವಿ ಮಾಡಿದ ಅವರು, ಕೊಡವ ಎಂ.ಎ ನಂತರ ವಿದ್ಯಾರ್ಥಿಗಳಿಗೆ ವಿಫುಲ ಅವಕಾಶಗಳಿದೆ ಎಂದು ತಿಳಿಸಿದರು.
“ನಾಡ ಕೊಡಗ್” ಪುಸ್ತಕದ ಬರಹಗಾರ, ನಿರ್ಮಾಪಕ, ನಿರ್ದೇಶಕ, ನಟ, ಸಾಹಿತಿ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಮಾತನಾಡಿ, ಪುಸ್ತಕದ ಬಗ್ಗೆ ವಿವರಿಸಿದರು. ವಿದ್ಯಾರ್ಥಿಗಳು ನಿರಂತರ ಮೊಬೈಲ್ ಬಳಕೆಯಿಂದ ಹೊರ ಬಂದು ಕಲೆ, ಸಂಸ್ಕೃತಿಗೆ ಹೆಚ್ಚು ಒತ್ತು ನೀಡಬೇಕು, ಹೆಚ್ಚು ಹೆಚ್ಚು ಬರೆಯುವ ಮೂಲಕ ಸಾಹಿತ್ಯ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡುವಂತೆ ಸಲಹೆ ನೀಡಿದರು.
ಕೊಡವ ಎಂ.ಎ.ವಿದ್ಯಾರ್ಥಿ ಐಚಂಡ ರಶ್ಮಿ ಮೇದಪ್ಪ “ನಂಗಡ ಮಕ್ಕಳ ಸಂಸ್ಕಾರವಂತಂಗಳಾಯಿತ್ ಬೊಳ್ತುವಲ್ಲಿ ಅವ್ವಂಗಡ ಪಾತ್ರ” ಎಂಬ ವಿಷಯದ ಕುರಿತು ವಿಚಾರ ಮಂಡನೆ ಮಾಡಿದರು.
::: ಸನ್ಮಾನ :::
ಕೊಡವ ಎಂ.ಎ ವಿದ್ಯಾರ್ಥಿಗಳಾದ ಬೊಪ್ಪಂಡ ಶ್ಯಾಮ್ ಪೂಣಚ್ಚ, ಲೆ.ಕರ್ನಲ್ ಬಿ.ಎಂ.ಪಾರ್ವತಿ, ಐಚಂಡ ರಶ್ಮಿ ಮೇದಪ್ಪ, ಪುತ್ತರಿರ ವನಿತ ಮುತ್ತಪ್ಪ,  ಬೊಳ್ಳಾರ್ ಪಂಡ  ಎನ್.ಹೇಮಾವತಿ (ಜಾನ್ಸಿ), ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ, ಚೌಂಡಿರ ಶಿಲ್ಪ ಪೊನ್ನಪ್ಪ, ಬೊಳ್ಳಜಿರ ಯಮುನಾ ಅಯ್ಯಪ್ಪ, ಕರವಂಡ ಸೀಮಾ ಗಣಪತಿ ಅವರನ್ನು ಗಣ್ಯರು ಸನ್ಮಾನಿಸಿ, ಗೌರವಿಸಿದರು.
ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ, ಅಖಿಲ ಕೊಡವ ಸಮಾಜ ಪೊಮ್ಮಕ್ಕಡ ಪರಿಷತ್ ಉಪಾಧ್ಯಕ್ಷೆ ಪೂವಿ ಮುತ್ತಪ್ಪ, ಖಜಾಂಚಿ ಮೂವೇರ ಧರಣಿ ಗಣಪತಿ ಉಪಸ್ಥಿತರಿದ್ದರು. ಎಂ.ಎ ವಿದ್ಯಾರ್ಥಿಗಳಾದ ಚಿಯಕ್‍ಪೂವಂಡ ಶ್ವೇತನ್ ಚೆಂಗಪ್ಪ ಪ್ರಾರ್ಥಿಸಿದರು. ಕರವಂಡ ಸೀಮಾ ಗಣಪತಿ ಸ್ವಾಗತಿಸಿ, ಬೊಳ್ಳಜಿರ ಯಮುನಾ ಅಯ್ಯಪ್ಪ ನಿರೂಪಿಸಿದರು. ಅಖಿಲ ಕೊಡವ ಸಮಾಜ ಪೊಮ್ಮಕ್ಕಡ ಪರಿಷತ್ ನಿರ್ದೇಶಕಿ ತಿತೀರ ಊರ್ಮಿಳ ಸೋಮಯ್ಯ ವಂದಿಸಿದರು.
ಬೊಪ್ಪಂಡ ಶ್ಯಾಮ್ ಪೂಣಚ್ಚ ಅವರು ನಿರ್ದೇಶಕ ಪ್ರಕಾಶ್ ಕಾರ್ಯಪ್ಪ ಅವರ ವ್ಯಕ್ತಿ ಪರಿಚಯ ಮಾಡಿ, ವಿದ್ಯಾರ್ಥಿಗಳ ಪರವಾಗಿ ಅನಿಸಿಕೆ ವ್ಯಕ್ತಪಡಿಸಿದರು. ಸಭಾ ಕಾರ್ಯಕ್ರಮದ ನಂತರ ಕರವಂಡ ಪದ್ಮಿತಾ ತಂಗಮ್ಮ, ಕರವಂಡ ಕಲ್ಪಿತ ಮುತ್ತಮ್ಮ ನ್ಯತ್ಯ ಪ್ರದರ್ಶಿಸಿ ಗಮನ ಸೆಳೆದರು. ಕೊನೆಯಲ್ಲಿ ಆಶುಭಾಷಣ ಸ್ಪರ್ಧೆ ನಡೆಯಿತು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.