ಮಡಿಕೇರಿ ನ.24 : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬೀದಿನಾಟಕ, ಜಾನಪದ ಸಂಗೀತ ಕಾರ್ಯಕ್ರಮಗಳ ಮೂಲಕ ಸರ್ಕಾರದ ಯೋಜನೆಗಳನ್ನು ಪ್ರಚಾರ ಮಾಡಲಾಗುತ್ತಿದೆ.
ಈ ಸಂಬಂಧ ಜಿಲ್ಲಾಧಿಕಾರಿ ವೆಂಕಟ್ ರಾಜಾ ಬೀದಿನಾಟಕ ಹಾಗೂ ಸಂಗೀತ ಕಾರ್ಯಕ್ರಮವನ್ನು ನಗರದ ಜಿಲ್ಲಾಡಳಿತ ಭವನದಲ್ಲಿ ವೀಕ್ಷಿಸಿದರು.
ನೂತನ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆ, ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಯೋಜನೆ ಕುರಿತು ಕಲಾವಿದ ಈ.ರಾಜು ಮತ್ತು ತಂಡದವರು ಹಾಡು ಹಾಡಿದರು.
ಬೀದಿನಾಟಕ, ಸಂಗೀತ ಕಾರ್ಯಕ್ರಮಗಳು ಸೇರಿದಂತೆ ಹೆದ್ದಾರಿ ಫಲಕಗಳು ಹೀಗೆ ವಿವಿಧ ಮಾಧ್ಯಮಗಳ ಮೂಲಕ ಸರ್ಕಾರದ ಹಲವು ಯೋಜನೆಗಳ ಬಗ್ಗೆ ಮಾಹಿತಿ ನೀಡಲಾಗುತ್ತಿದೆ ಎಂದು ವಾರ್ತಾಧಿಕಾರಿ ಚಿನ್ನಸ್ವಾಮಿ ಮಾಹಿತಿ ನೀಡಿದರು.







