Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮಡಿಕೇರಿಯಲ್ಲಿ ಗಮನ ಸೆಳೆದ ‘ಬಾಲಮೇಳ’ : ಮಕ್ಕಳನ್ನು ಆಟೋಟಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರೇರೇಪಿಸಿ : ನಾಗಣ್ಣ ಗೌಡ ಸಲಹೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿಯಲ್ಲಿ ಗಮನ ಸೆಳೆದ ‘ಬಾಲಮೇಳ’ : ಮಕ್ಕಳನ್ನು ಆಟೋಟಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರೇರೇಪಿಸಿ : ನಾಗಣ್ಣ ಗೌಡ ಸಲಹೆ

ನವೆಂಬರ್ 25, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ನ.25 :  ಮಕ್ಕಳಲ್ಲಿ ಕಲಾ ಪ್ರತಿಭೆ ಸಾಕಷ್ಟು ಇದ್ದು, ಮಕ್ಕಳನ್ನು ಸದಾ ಖುಷಿಯಿಂದ ಇರಲು ಆಟೋಟಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರೇರೇಪಿಸಬೇಕು. ಅದನ್ನು ಬಿಟ್ಟು ಜೈಲಿನ ಅನುಭವ ನೀಡಬಾರದು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ  ನಾಗಣ್ಣ ಗೌಡ  ಪ್ರತಿಪಾದಿಸಿದ್ದಾರೆ.

ರಾಜ್ಯ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯುನಿಸೆಫ್, ಮಾನಸ, ಇಸಿಎಚ್ಒ ಹಾಗೂ ಸ್ಪ್ಯಾಡ್ ವತಿಯಿಂದ ನಗರದ ಗಾಂಧಿ ಮೈದಾನದಲ್ಲಿ ನಡೆದ ‘ಬಾಲಮೇಳ’ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಮಕ್ಕಳು ಮಕ್ಕಳ ತನವನ್ನು ಅನುಭವಿಸಬೇಕು. ಗ್ರಾಮೀಣ ಆಟಗಳಾದ ಮರಕೋತಿ, ಕಪ್ಪೆ ಕುಣಿತ, ಕುಂಟೆಬಿಲ್ಲೆ ಹೀಗೆ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಇದರಿಂದ ಇತರ ಮಕ್ಕಳ ಜೊತೆ ಬೆರೆಯಲು ಸಾಧ್ಯವಾಗಲಿದೆ ಎಂದರು.

ಮಕ್ಕಳು ಮೊಬೈಲ್ ಬದಲಾಗಿ ಮಣ್ಣಿನಲ್ಲಿ ಆಟ ಆಡಬೇಕು. ಇದರಿಂದ ಮಕ್ಕಳ ಚೈತನ್ಯ ಹೆಚ್ಚಾಗಲಿದೆ. ಜೊತೆಗೆ ದೈಹಿಕ, ಮಾನಸಿಕ ಮತ್ತು ಬೌದ್ಧಿಕ ವಿಕಸನ ಸದೃಢಗೊಳ್ಳಲಿದೆ ಎಂದು ನಾಗಣ್ಣ ಗೌಡ ಅಭಿಪ್ರಾಯ ವ್ಯಕ್ತಪಡಿಸಿದರು.

ಇತ್ತೀಚಿನ ದಿನಗಳಲ್ಲಿ ಆನ್ ಲೈನ್ ಕ್ರೀಡೆಗಳಲ್ಲಿ ಮಕ್ಕಳು ತೊಡಗಿಸಿಕೊಳ್ಳುವುದು ಹೆಚ್ಚಾಗುತ್ತಿವೆ. ಇಂತಹ ಚಟುವಟಿಕೆಗಳು ಒಳ್ಳೆಯದಲ್ಲ, ಶಿಸ್ತಿನ ಹೆಸರಿನಲ್ಲಿ ನಿರ್ಬಂಧಗಳನ್ನು ಹೇರಬಾರದು. ಮಕ್ಕಳ ಹಕ್ಕುಗಳಿಗೆ ಚ್ಯುತಿಯಾಗದಂತೆ ಪೋಷಕರು ಗಮನಹರಿಸಬೇಕು ಎಂದರು.

ಬಾಲಕರ ಮತ್ತು ಬಾಲಕಿಯರ ಮಂದಿರದ ಮಕ್ಕಳು ತುಂಬಾ ಬುದ್ದಿವಂತರಿದ್ದು, ಕ್ರೀಯಾಶೀಲರಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಬಾಲ ಮೇಳವನ್ನು ರಾಜ್ಯ ಮಟ್ಟದಲ್ಲಿಯಲ್ಲಿಯೂ ಆಯೋಜಿಸಲಾಗುವುದು ಎಂದು ನಾಗಣ್ಣ ಗೌಡ  ಇದೇ ಸಂದರ್ಭದಲ್ಲಿ ತಿಳಿಸಿದರು.

ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜಯಶಂಕರ್ ಮಾತನಾಡಿ, ವಿದ್ಯಾರ್ಥಿಗಳು ಭವಿಷ್ಯ ರೂಪಿಸಿಕೊಳ್ಳುವುದು ಅತಿಮುಖ್ಯ ಎಂದರು. ನಾವುಗಳೆಲ್ಲರೂ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಓದಿಕೊಂಡು ಮುಖ್ಯವಾಹಿನಿಗೆ ಬಂದಿದ್ದೇವೆ. ಅದೇ ರೀತಿ ಇಂದಿನ ಮಕ್ಕಳು ಸಹ ಹೆಚ್ಚಿನ ಶ್ರಮವಹಿಸಿ ಓದಿದರೆ, ಉತ್ತಮ ಭವಿಷ್ಯ ಕಾಣಬಹುದು. ಆ ನಿಟ್ಟಿನಲ್ಲಿ ಆಟದ ಜೊತೆ ಪಾಠಕ್ಕೆ ಹೆಚ್ವಿನ ಆದ್ಯತೆ ನೀಡಬೇಕು ಎಂದರು.

ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ  ಶಾಮ್ ಪ್ರಸಾದ್  ಮಾತನಾಡಿ, ಮಕ್ಕಳನ್ನು ಮೊಬೈಲ್ ದಾಸರನ್ನಾಗಿ ಮಾಡದೆ ವಿವಿಧ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರೇರೇಪಿಸಬೇಕು. ಮಕ್ಕಳ ಜೊತೆ ಪೋಷಕರು ಆಟ -ಪಾಠದಲ್ಲಿ ಪಾಲ್ಗೊಂಡಾಗ ಮಕ್ಕಳ ಲವಲವಿಕೆ ಹೆಚ್ಚಾಗಲಿದೆ ಎಂದರು.

ಮಗು ಊಟ ಮಾಡಲು ಮೊಬೈಲ್ ಬೇಕು ಬೇಕು ಎನ್ನುವಂತಾಗಿದೆ. ತಾಯಿಗೆ ಮಗು ಊಟ ಮಾಡಿದರೆ ಸಾಕು ಎನ್ನುವಂತೆ ಒಂದೆಡೆ ಸಂತಸ ಪಡುತ್ತಾರೆ. ಆದರೆ ಮೊಬೈಲ್ ನೋಡಿ ಊಟ ಮಾಡುವುದರಿಂದ ಕೆಟ್ಟ ಪರಿಣಾಮ ಬೀರಲಿದೆ. ಆದ್ದರಿಂದ ಮುಂದಿನ ಜನಾಂಗವನ್ನು ಉತ್ತಮ ರೀತಿಯಲ್ಲಿ ಕೊಂಡೊಯ್ಯುವತ್ತ ಅವಲೋಕನ ಮಾಡಬೇಕಿದೆ ಎಂದು ತಿಳಿಸಿದರು.
ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಉಪ ಕಾರ್ಯದರ್ಶಿ ರಾಘವೇಂದ್ರ ಶೆಟ್ಟಿಗಾರ್, ಜಿ.ಪಂ.ಸಿಇಒ ವರ್ಣಿತ್ ನೇಗಿ, ಯುನಿಸೆಫ್ ವಿಭಾಗದ ಮಕ್ಕಳ ತಜ್ಞರಾದ ಸೋನಿ ಕುಟ್ಟಿ ಜಾರ್ಜ್, ಮಡಿಕೇರಿ ವಕೀಲರ ಸಂಘದ ಅಧ್ಯಕ್ಷರಾದ ಎಂ.ಎ.ನಿರಂಜನ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾಜಿ ಅಧ್ಯಕ್ಷರಾದ ಆ್ಯಂಟೋನಿ ಸಭಾಸ್ಟಿನ್, ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ, ಡಿವೈಎಸ್ಪಿ ಜಗದೀಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು, ಕಾರ್ಮಿಕ ಇಲಾಖೆ ಅಧಿಕಾರಿಗಳು ಇತರರು ಇದ್ದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್ ಸ್ವಾಗತಿಸಿದರು, ಬಿಜು ನಿರೂಪಿಸಿದರು, ರೆನ್ನಿ ವಂದಿಸಿದರು.

ಬಾಲ ಮೇಳ ಕಾರ್ಯಕ್ರಮಕ್ಕೆ ಮಕ್ಕಳು ಚಾಲನೆ ನೀಡಿದರು. ಬಾಲ ಮೇಳ ಕಾರ್ಯಕ್ರಮದಲ್ಲಿ ಬಾಲಕರ, ಬಾಲಕಿಯರ ಮಂದಿರ, ವಿವಿಧ ಆಶ್ರಮ ಶಾಲೆಯ 215 ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದು ವಿಶೇಷವಾಗಿತ್ತು.

ಸಿಂಹದ ಬಾಯಿಗೆ ಚೆಂಡು ಎಸೆಯುವುದು, ಬಾಸ್ಕೇಟ್ ಬಾಲ್ ಆಟ, ಬಕೆಟ್ ಗೆ ನಾಣ್ಯ ಇಡುವುದು, ಲಕ್ಕಿ ರಿಂಗ್ಸ್ ಹೀಗೆ 10 ಕ್ಕೂ ಹೆಚ್ಚು ಕ್ರೀಡೆಗಳಲ್ಲಿ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಕ್ಕಳು ಪಾಲ್ಗೊಂಡು ಸಂತಸ ಪಟ್ಟರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವಸ್ತು ಪ್ರದರ್ಶನ ಏರ್ಪಡಿಸಿವುದರ ಜತೆಗೆ ಮಕ್ಕಳಿಗೆ ಆರೋಗ್ಯ ತಪಾಸಣಾ ಕಾರ್ಯಕ್ರಮ ನಡೆಯಿತು. ಸಂವಿಧಾನ ದಿನಾಚರಣೆ ಪ್ರಯುಕ್ತ ಸಂವಿಧಾನದ ಮಹತ್ವ ದ ಬಗ್ಗೆ ವಸ್ತು ಪ್ರದರ್ಶನ ಮಳಿಗೆ ಗಮನ ಸೆಳೆಯಿತು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ತಲಕಾವೇರಿಯಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮೂರ್ನಾಡು, NEWS DESK ಅ.17: ಇಲ್ಲಿನ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಅ.20ರಂದು ಮೂರ್ನಾಡಿನಲ್ಲಿ 33ನೇ…

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026

ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಅಕ್ಟೋಬರ್ 17, 2026

ಇಂದು ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿ ದಸರಾ ಸಂಭ್ರಮಕ್ಕೆ ಮೆರುಗು ನೀಡಿದ ಶ್ವಾನ ಪ್ರದರ್ಶನ; ಪ್ರಾಣಿ ಪ್ರಿಯರ ಮನಗೆದ್ದ ವಿವಿಧ ತಳಿಗಳು

ಅಕ್ಟೋಬರ್ 17, 2026

SSLC, ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿ: ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ

ಅಕ್ಟೋಬರ್ 17, 2026

ನಾಳೆ ಮಡಿಕೇರಿಯಲ್ಲಿ ಮಹಿಳಾ ದಸರಾ: ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 17, 2026

ಅ.19ರಂದು ರೋಟರಿ ಮಡಿಕೇರಿಯಿಂದ ಉಚಿತ ಮೂಳೆ ಮತ್ತು ನರರೋಗ ತಪಾಸಣಾ ಶಿಬಿರ

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.