Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಜಿಲ್ಲಾ ಮಟ್ಟದ ಅಂತರ ಪ್ರೌಢಶಾಲಾ ರಸಪ್ರಶ್ನೆ ಸ್ಪರ್ಧೆ : ಕೂಡಿಗೆ ಸೈನಿಕ ಶಾಲೆಯ ತಂಡ ಪ್ರಥಮ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಜಿಲ್ಲಾ ಮಟ್ಟದ ಅಂತರ ಪ್ರೌಢಶಾಲಾ ರಸಪ್ರಶ್ನೆ ಸ್ಪರ್ಧೆ : ಕೂಡಿಗೆ ಸೈನಿಕ ಶಾಲೆಯ ತಂಡ ಪ್ರಥಮ

ನವೆಂಬರ್ 25, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ನಾಪೋಕ್ಲು ನ.25 : ಸಂಸ್ಥೆಯ ಸ್ಥಾಪಕ ಅಧ್ಯಕ್ಷ ದಿವಂಗತ ಮೇಕೇರಿರ ಕಾರ್ಯಪ್ಪ ಸ್ಮರಣಾರ್ಥ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ವತಿಯಿಂದ ನಡೆದ ಜಿಲ್ಲಾಮಟ್ಟದ ಅಂತರ ಪ್ರೌಢಶಾಲಾ ರಸಪ್ರಶ್ನೆ ಸ್ಪರ್ಧೆಯಲ್ಲಿ ಕೂಡಿಗೆ ಸೈನಿಕ್ ಶಾಲೆಯ ತಂಡ ಪ್ರಥಮ ಸ್ಥಾನ ಗಳಿಸಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.

ಪೊನ್ನಂಪೇಟೆಯ ಕೆಪಿಎಸ್ ಪ್ರೌಢಶಾಲೆಯ ತಂಡ ದ್ವಿತೀಯ ಸ್ಥಾನ ಗಳಿಸಿತು.ನಾಪೋಕ್ಲುವಿನ ಅಂಕುರ್ ಪಬ್ಲಿಕ್ ಶಾಲೆ, ಮೂರ್ನಾಡಿನ ಜ್ಞಾನಜ್ಯೋತಿ ವಿದ್ಯಾಸಂಸ್ಥೆ ಹಾಗೂ ವಿರಾಜಪೇಟೆಯ ಕಾವೇರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ತಂಡ ಕ್ರಮವಾಗಿ ತೃತೀಯ,ಚತುರ್ಥ ಹಾಗೂ ಐದನೇ ಸ್ಥಾನ ಪಡೆದವು. ಅರ್ಹತಾ ಸುತ್ತಿನ ಸ್ಪರ್ಧೆಯಲ್ಲಿ 15 ತಂಡಗಳು ಪಾಲ್ಗೊಂಡಿದ್ದವು.

ಮೊದಲಿಗೆ ಅರ್ಹತಾ ಸುತ್ತಿನ ಸ್ಪರ್ಧೆ ನಡೆದು ಐದು ತಂಡಗಳನ್ನು ಮೌಖಿಕ ಸುತ್ತಿಗೆ ಆಯ್ಕೆ ಮಾಡಿಕೊಳ್ಳಲಾಯಿತು.ಹತ್ತು ಸುತ್ತಿನಲ್ಲಿ ರಸಪ್ರಶ್ನೆ ಕಾರ್ಯಕ್ರಮವನ್ನು ನಡೆಸಲಾಯಿತು. 128 ಅಂಕ ಗಳಿಸಿ ಕೂಡಿಗೆಯ ಸೈನಿಕ್ ಶಾಲೆಯ ತಂಡದ ವಿದ್ಯಾರ್ಥಿಗಳಾದ ಉನ್ನತೇಶ್ಎಸ್.ಎಂ,ನಿಶಾಂತ್ ನಾರಾಯಣ,ಪ್ರಜ್ವಲ್ ಮೇಟಿ ಮತ್ತು ಪ್ರಣವ್ ರಾವ್ ವಿಜೇತರಾಗಿ ಹೊರಹೊಮ್ಮಿದರು.
74 ಅಂಕಗಳಿಸಿದ ಪೊನ್ನಂಪೇಟೆಯ ಕೆಪಿಎಸ್ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ತೇಜಸ್ವಿನಿ ಭಟ್,ಮೊಹಮದ್ ಆಶಿಕ್,ಲಿಖಿತ ಆರ್. ಮತ್ತು ನಿಶ್ಮಿತವಿ.ಡಿ.ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.
ನಾಪೋಕ್ಲುವಿನ ಅಂಕುರ್ ಶಾಲೆಯ ವಿದ್ಯಾರ್ಥಿಗಳ ತಂಡ 68 ಅಂಕಗಳನ್ನು,ಮೂರ್ನಾಡಿನ ಜ್ಞಾನಜ್ಯೋತಿ ಪ್ರೌಢಶಾಲೆಯ ತಂಡ 61 ಅಂಕಗಳನ್ನು ಹಾಗೂ ವಿರಾಜಪೇಟೆಯ ಕಾವೇರಿ ಪ್ರೌಢಶಾಲೆಯ ತಂಡ 51 ಅಂಕಗಳನ್ನು ಗಳಿಸಿತು.

ಸಮಾರೋಪ :  ಸಮಾರೋಪ ಸಮಾರಂಭದಲ್ಲಿ ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರದ ದಂತವೈದ್ಯೆ-ಸರ್ಜನ್ ನೂರ್ ಫಾತಿಮ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ನಗದು ಬಹುಮಾನ ವಿತರಿಸಿದರು. ನಂತರ ಮಾತನಾಡಿದ ಅವರು ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದಲ್ಲಿ ಸ್ಪರ್ಧಾಮನೋಭಾವವನ್ನು,ನಾಯಕತ್ವ ಗುಣಗಳನ್ನು ಬೆಳಸಿಕೊಳ್ಳಬೇಕು.ಮುಂದೆ ಸಮಾಜದಲ್ಲಿ ಉತ್ತಮ ಸ್ಥಾನ ಗಳಿಸಲು ಸ್ಪೂರ್ತಿ ಸಿಕ್ಕಂತಾಗುತ್ತದೆ ಎಂದರು.ಸಮಯದ ಸದುಪಯೋಗ ಪಡಿಸಿಕೊಳ್ಳುವುದರಿಂದ ಮುಂದಿನ ಭವಿಷ್ಯಕ್ಕೆ ಸಹಕಾರಿ ಎಂದರು.
ಸಂಸ್ಥೆಯ ಅಧ್ಯಕ್ಷ ಡಾ. ಬೊಪ್ಪಂಡ ಜಾಲಿ ಬೋಪಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ನಿವೃತ್ತ ಪ್ರಾಂಶುಪಾಲ ಕಲ್ಯಾಟಂಡ ಪೂಣಚ್ಚ ಮಾತನಾಡಿ ಸಾಮಾನ್ಯ ಜ್ಞಾನ ವೃದ್ದಿಸುವ ರಸಪ್ರಶ್ನೆ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡು ಜ್ಞಾನ ಹೆಚ್ಚಿಕೊಳ್ಳಬೇಕು ಎಂದರು.
ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಕಲ್ಯಾಟಂಡ ಶಾರದಾ ಅಪ್ಪಣ್ಣ, ಉಪಾಧ್ಯಕ್ಷ ಕಲಿಯಂಡ ಹ್ಯಾರಿ ಮಂದಣ್ಣ,ನಿರ್ದೇಶಕರಾದ ಬಿದ್ದಾಟ೦ಡ ಪಾಪ ಮುದ್ದಯ್ಯ, ಬೊಪ್ಪಂಡ ಕುಶಾಲಪ್ಪ (ನಿವೃತ ಡಿ ವೈ ಎಸ್ ಪಿ) , ಶಿಕ್ಷಕ ಭಗವತಿ ಪ್ರಸಾದ್ ಅಂಬ್ರಟಿ , ಮೂಡೇರ ಕಾಳಯ್ಯ ,ಶಿಕ್ಷಕ ವೃಂದ ಪಾಲ್ಗೊಂಡಿದ್ದರು.ಬಲ್ಲಮಾವಟಿ ನೇತಾಜಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಸಿ.ಎಸ್.ಸುರೇಶ್ ಹಾಗೂ ಪೊನ್ನಂಪೇಟೆಯ ಕೆಪಿಎಸ್ ಶಾಲೆಯ ಗಣಿತ ಶಿಕ್ಷಕ ಅಯ್ಯಪ್ಪ ಪಿ.ಆರ್.ರಸಪ್ರಶ್ನೆ ಸ್ಪರ್ಧೆ ನಡೆಸಿಕೊಟ್ಟರು.

ವರದಿ : ದುಗ್ಗಳ ಸದಾನಂದ 

 

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ತಲಕಾವೇರಿಯಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮೂರ್ನಾಡು, NEWS DESK ಅ.17: ಇಲ್ಲಿನ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಅ.20ರಂದು ಮೂರ್ನಾಡಿನಲ್ಲಿ 33ನೇ…

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026

ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಅಕ್ಟೋಬರ್ 17, 2026

ಇಂದು ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿ ದಸರಾ ಸಂಭ್ರಮಕ್ಕೆ ಮೆರುಗು ನೀಡಿದ ಶ್ವಾನ ಪ್ರದರ್ಶನ; ಪ್ರಾಣಿ ಪ್ರಿಯರ ಮನಗೆದ್ದ ವಿವಿಧ ತಳಿಗಳು

ಅಕ್ಟೋಬರ್ 17, 2026

SSLC, ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿ: ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ

ಅಕ್ಟೋಬರ್ 17, 2026

ನಾಳೆ ಮಡಿಕೇರಿಯಲ್ಲಿ ಮಹಿಳಾ ದಸರಾ: ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 17, 2026

ಅ.19ರಂದು ರೋಟರಿ ಮಡಿಕೇರಿಯಿಂದ ಉಚಿತ ಮೂಳೆ ಮತ್ತು ನರರೋಗ ತಪಾಸಣಾ ಶಿಬಿರ

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.