Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಡಾ.ಅಖಿಲ್ ಕುಟ್ಟಪ್ಪ, ಅಶ್ವಥ್ ಅಯ್ಯಪ್ಪ ಸ್ಮರಣಾಥ೯ ಕ್ರಿಕೆಟ್ ಪಂದ್ಯಾವಳಿ : ಛಲ, ಪರಿಶ್ರಮದೊಂದಿಗೆ ಗುರಿಯಿದ್ದಾಗ ಗೆಲವು ಸಾಧ್ಯ : ಶಾಂತಾ ರಂಗಸ್ವಾಮಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಡಾ.ಅಖಿಲ್ ಕುಟ್ಟಪ್ಪ, ಅಶ್ವಥ್ ಅಯ್ಯಪ್ಪ ಸ್ಮರಣಾಥ೯ ಕ್ರಿಕೆಟ್ ಪಂದ್ಯಾವಳಿ : ಛಲ, ಪರಿಶ್ರಮದೊಂದಿಗೆ ಗುರಿಯಿದ್ದಾಗ ಗೆಲವು ಸಾಧ್ಯ : ಶಾಂತಾ ರಂಗಸ್ವಾಮಿ*

ನವೆಂಬರ್ 27, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.27 : ಕ್ರೀಡೆಯಲ್ಲಿ ಛಲ, ಪರಿಶ್ರಮದೊಂದಿಗೆ ಗುರಿ ಇದ್ದಾಗ ಖಂಡಿತಾ ಗೆಲವು ಸುಲಭ ಸಾಧ್ಯ ಎಂದು ಭಾರತ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಶಾಂತಾ ರಂಗಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

ನಗರದ ಜಿಲ್ಲಾ ಕ್ರೀಡಾಂಗಣ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಕೊಡಗು ವಿದ್ಯಾಲಯದ ಸಹಯೋಗದಲ್ಲಿ ಆಯೋಜಿತ ಡಾ.ಅಖಿಲ್ ಕುಟ್ಟಪ್ಪ ಮತ್ತು ಅಶ್ವಥ್ ಅಯ್ಯಪ್ಪ ಸ್ಮರಣಾಥ೯ ಅಂತರ ಪ್ರೌಢಶಾಲಾ ಕ್ರಿಕೆಟ್ ಪಂದ್ಯಾಟಕ್ಕೆ ಚಾಲನೆ ನೀಡಿ  ಮಾತನಾಡಿದರು.

ವಿದ್ಯೆಯೊಂದಿದೆ ಕ್ರೀಡೆ ಕೂಡ ಜೀವನದ ಭಾಗವಾಗಬೇಕು. ಕ್ರಿಕೆಟ್ ಸೇರಿದಂತೆ ಕ್ರೀಡೆಯಲ್ಲಿ ಛಲದ ಜತೆ ನಿದಿ೯ಷ್ಟ ಗೆಲುವಿನತ್ತ ಗುರಿ ಇದ್ದರೆ ವಿಜಯ ಸುಲಭವಾಗುತ್ತದೆ. ಯಾವುದೇ ಸಾಧನೆಯನ್ನು ಉಚಿತವಾಗಿ ಸಾಧಿಸಲಾಗದು. ಅಂತೆಯೇ ಕ್ರೀಡೆಯಲ್ಲಿ ಕಠಿಣ ಪರಿಶ್ರಮವೂ ಸಾಧನೆಗೆ ಅತೀ ಮುಖ್ಯವಾಗುತ್ತದೆ ಎಂದು ಶಾಂತ ರಂಗಸ್ವಾಮಿ ಕಿವಿಮಾತು ಹೇಳಿದರು.

ಅಥ್ಲೆಟಿಕ್ಸ್ ಗೆ ಅತೀ ಹೆಚ್ಚಿನ ಸಾಧಕ ಕ್ರೀಡಾಪಟುಗಳನ್ನು ನೀಡಿರುವ ಕೊಡಗು ಜಿಲ್ಲೆಯಲ್ಲಿ ಇದೀಗ ಬಾಲಕಿಯರ ಕ್ರಿಕೆಟ್ ತಂಡವನ್ನು ರೂಪಿಸಿರುವುದು ಶ್ಲಾಘನೀಯ ಬೆಳವಣಿಗೆಯಾಗಿದೆ ಎಂದು ಶಾಂತಾ ರಂಗಸ್ವಾಮಿ ಮೆಚ್ಚುಗೆ ವ್ಯಕ್ತಪಡಿಸಿದರು.

ಕೊಡಗು ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ.ಅನಂತಶಯನ ಮಾತನಾಡಿ, ಆದ್ಯಾತ್ಮಿಕ ನೆಲೆಯಾದ ಭಾರತ ಪುಣ್ಯ ಭೂಮಿ ಕೂಡ ಆಗಿದ್ದು, ಹೀಗಾಗಿಯೇ ವಿಶ್ವದಲ್ಲಿಯೇ ವಿಶ್ವಗುರುವಿನ ಸ್ಥಾನವನ್ನು ಭಾರತ ಪಡೆದಿದೆ. ಈ ಖ್ಯಾತಿಗೆ ಅನೇಕ ಸಾಧಕರ ಕೊಡುಗೆ ಇದೆ ಎಂದರಲ್ಲದೇ, 18 ನೇ ಶತಮಾನದಲ್ಲಿ ಬ್ರಿಟಿಷರು ಪರಿಚಯಿಸಿದ ಕ್ರಿಕೆಟ್ ಕ್ರೀಡೆಯು 1932 ರಲ್ಲಿ ಭಾರತದಲ್ಲಿಯೂ ಪರಿಚಿತವಾಯಿತು. 1973 ರಲ್ಲಿ ಪ್ರಥಮ ಬಾರಿಗೆ ಮಹಿಳಾ ಕ್ರಿಕೆಟ್ ತಂಡವು ಕ್ರೀಡಾರಂಗಕ್ಕೆ ಪದಾಪ೯ಣೆ ಮಾಡಿತು. ಒಟ್ಟು 16 ಕ್ಯಾಪ್ಟನ್ ಗಳನ್ನು ಕಂಡಿರುವ ಮಹಿಳಾ ಕ್ರಿಕೆಟ್ ತಂಡದ 15 ನೇ ಕ್ಯಾಪ್ಟನ್ ಆಗಿರುವ ಶಾಂತಾ ರಂಗಸ್ವಾಮಿ ಕೊಡಗಿಗೆ ಬಂದಿರುವುದು ಮಹತ್ವದ ವಿಚಾರ ಎಂದು ಹೆಮ್ಮೆಯಿಂದ ನುಡಿದರು.

ಹೆಸರಾಂತ ಆಧ್ಯಾತ್ಮ ಗುರು ಮಮ್ತಾಜ್ ಅಲಿ (ಶ್ರೀ ಎಂ) ಮಾತನಾಡಿ, ಮಹಿಳಾ ಕ್ರಿಕೆಟ್ ತಂಡವು ಕೂಡ ಸಾಧನೆಯ ಮೂಲಕ ವಿಶ್ವಮಟ್ಟದಲ್ಲಿ ಗುರುವಿನ ಸ್ಥಾನ ಪಡೆಯುವಂತಾಗಲಿ ಎಂದು ಹಾರೈಸಿದರು.

ಜಿಲ್ಲಾ ಜಾನಪದ ಪರಿಷತ್ ಪ್ರಧಾನ ಕಾಯ೯ದಶಿ೯ ಎಸ್.ಐ. ಮುನೀರ್ ಅಹಮ್ಮದ್ ಮಾತನಾಡಿ, ಹಿರಿಯರು ನೀಡಿದ ಮಾಗ೯ದಶ೯ನ ಎಲ್ಲರಿಗೂ ಜೀವನದಲ್ಲಿ ಮೇಲ್ಪಂಕ್ತಿಯಾಗಬೇಕು. 10 ವಷ೯ಗಳ ಹಿಂದೆ ಅಕಾಲಿಕವಾಗಿ ಸಾವನ್ನಪ್ಪಿದ ಕೊಡಗಿನ ಕ್ರೀಡಾ ಧ್ರುವತಾರೆಗಳಾದ ಡಾ.ಅಖಿಲ್ ಮತ್ತು ಅಶ್ವಥ್ ಅವರ ಸ್ಮರಣಾಥ೯ ಈ ಸಹೋದರರ ತಂದೆ ರಘುಮಾದಪ್ಪ ಅವರು ಪ್ರೌಡಶಾಲಾ ವಿದ್ಯಾಥಿ೯ಗಳಿಗೆ 9 ವಷ೯ಗಳಿಂದ ಕ್ರಿಕೆಟ್ ಪಂದ್ಯಾವಳಿ ಆಯೋಜಿಸುತ್ತಾ ಕಿರಿಯ ವಯಸ್ಸಿನ ಕ್ರಿಕೆಟ್ ಪ್ರತಿಭೆಗಳನ್ನು ಪ್ರೋತ್ಸಾಹಿಸುತ್ತಿರುವುದು ಮೆಚ್ಚತಕ್ಕದ್ದು ಎಂದರು.

ಕೊಡಗು ವಿದ್ಯಾಲಯದ ಪ್ರಾಂಶುಪಾಲರಾದ ಕೆ.ಎಸ್.ಸುಮಿತ್ರಾ ಮಾತನಾಡಿ, ಯಾವುದೇ ಪಂದ್ಯದಲ್ಲಿ ಸೋತಾಗ ಅಂಥ ತಂಡವನ್ನು ಟೀಕಿಸದೇ ಸೋಲಿಗೆ ಕಾರಣವಾದ ಅಂಶಗಳ ಬಗ್ಗೆ ಸೂಕ್ತ ರೀತಿಯಲ್ಲಿ ಪರಾಮಶಿ೯ಸಿ ಗೆಲುವಿನ ಹಾದಿಗೆ ಅಗತ್ಯವಾದ ಅಂಶಗಳನ್ನು ಕಂಡುಕೊಳ್ಳಬೇಕು ಎಂದರು.

ಕಾಯ೯ಕ್ರಮದಲ್ಲಿ ಕೊಡಗು ವಿದ್ಯಾಲಯದ ಕ್ರೀಡಾ ಸಮಿತಿ ಅಧ್ಯಕ್ಷ, ಪಂದ್ಯಾವಳಿಯ ಆಯೋಜಕರಾದ ಕೋಡಿಮಣಿಯಂಡ ರಘುಮಾದಪ್ಪ, ಕೊಡಗು ವಿದ್ಯಾಲಯದ ಆಡಳಿತ ವ್ಯವಸ್ಥಾಪಕ ಪಿ. ರವಿ, ಪ್ರಮುಖರಾದ ಡಾ.ಅನಿಲ್ ಚಂಗಪ್ಪ, ಬೋಸ್ ಮಂದಣ್ಣ, ಅಜಿತ್ ಅಪ್ಪಚ್ಚು, ಸಿ.ಎಸ್.ಗುರುದತ್, ಯಾಲದಾಳ್ ಹರೀಶ್, ಐಮುಡಿಯಂಡ ನಂದ, ದಾಮೋದರ್, ದಿನೇಶ್, ಬಿ.ವಿ.ನಂದ ಸೇರಿದಂತೆ ಅನೇಕರು ಹಾಜರಿದ್ದರು.

ಕೊಡಗು ವಿದ್ಯಾಲಯದ ಶಿಕ್ಷಕಿ ಎ.ಜಿ.ದಿವ್ಯಾ ನಿರೂಪಿಸಿದರು. ವಿದ್ಯಾಥಿ೯ನಿಯರಾದ ಮೌಲ್ಯ ಪುಟ್ಟಯ್ಯ, ಪ್ರಥ್ವಿ ಪಿ.ರೈ ಪ್ರಾಥಿ೯ಸಿ, ಇಶಾನ್ ವಂದಿಸಿದರು.

ಕೊಡಗು ಬಾಲಕಿಯರ ಕ್ರಿಕೆಟ್ ತಂಡ ಅಸ್ತಿತ್ವಕ್ಕೆ ::  ಇದೇ ಮೊದಲ ಬಾರಿಗೆ ಕೊಡಗಿನಲ್ಲಿ ಪ್ರೌಡಶಾಲಾ ವಿಭಾಗದ ಬಾಲಕಿಯರ ಕ್ರಿಕೆಟ್ ತಂಡವನ್ನು ರೂಪಿಸಲಾಗಿದೆ. ಮುಂದಿನ ದಿನಗಳಲ್ಲಿ ಕೊಡಗು ಬಾಲಕಿಯರ ಕ್ರಿಕೆಟ್ ತಂಡವು ರಾಜ್ಯಮಟ್ಟದ ಸ್ಪಧೆ೯ಗಳಿಗೂ ತೆರಳಲಿದೆ. ಮಡಿಕೇರಿಯಲ್ಲಿ ನಡೆದ ಪ್ರದಶ೯ನ ಪಂದ್ಯದಲ್ಲಿ ದಕ್ಷಿಣ ಕನ್ನಡ ಬಾಲಕಿಯರ ಕ್ರಿಕೆಟ್ ತಂಡವು 9 ವಿಕೆಟ್ ಗಳಿಂದ ಕೊಡಗು ಬಾಲಕಿಯರ ಕ್ರಿಕೆಟ್ ತಂಡವನ್ನು ಸೋಲಿಸಿತು.

 

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.