Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮಡಿಕೇರಿಯಲ್ಲಿ ಸಂಭ್ರಮದ ಓಣಂ ಆಚರಣೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿಯಲ್ಲಿ ಸಂಭ್ರಮದ ಓಣಂ ಆಚರಣೆ

ನವೆಂಬರ್ 27, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ನ.27 : ಜನಾಂಗಗಳ ನಡುವಿನ ಸಂಸ್ಕೃತಿ, ಆಚಾರ-ವಿಚಾರದಲ್ಲಿ, ಬದಲಾವಣೆಗಳಿರಬಹುದು. ಆದರೆ, ದೇಶದ ರಕ್ಷಣೆ ವಿಚಾರ ಎಂದು ಬಂದರೆ ‘ನಾವೆಲ್ಲ ಒಂದು, ನಾವೆಲ್ಲ ಬಂಧು’ ಎಂಬ ಮನಸ್ಥಿತಿ ಹೊಂದಬೇಕು ಎಂದು ಮಾಜಿ ಶಾಸಕ ಕೆ.ಜಿ.ಬೋಪಯ್ಯ ಕರೆ ನೀಡಿದರು.

ನಗರದ ಕಾವೇರಿ ಹಾಲ್ ಸಭಾಂಗಣದಲ್ಲಿ ಹಿಂದೂ ಮಲಯಾಳಿ ಸಂಘದ ವತಿಯಿಂದ ಓಣಂ ಹಬ್ಬದ ಅಂಗವಾಗಿ ಆಯೋಜಿಸಿದ್ದ ‘ಓಣಾಘೋಷಂ-ಓಣಂ ಸದ್ಯ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು, ಮಾತನಾಡಿದರು.

ನಮ್ಮ ದೇಶ ಪ್ರಜಾಪ್ರಭುತ್ವ ವ್ಯವಸ್ಥೆಯಡಿಯಲ್ಲಿದೆ. ಸಂವಿಧಾನ ಮೂಲಕ ಆಡಳಿತ ವ್ಯವಸ್ಥೆ ಕೆಲಸ ಮಾಡುತ್ತಿದೆ. ಸಂವಿಧಾನವನ್ನು ಪ್ರತಿಯೊಬ್ಬರು ಗೌರವಿಸಬೇಕು. ದೇಶದ ಏಕತೆ, ಅಖಂಡತೆ, ಸಮಗ್ರತೆ ಕಾಪಾಡುವುದು ನಮ್ಮ ಆದ್ಯತೆಯಾಗಬೇಕು. ದೇಶದ ರಕ್ಷಣೆಗೆ ಪಣ ತೊಡಬೇಕು ಎಂದು ಕರೆ ನೀಡಿದರು.

ಸಂಘಟನಾತ್ಮಕವಾಗಿದ್ದರೆ ಮಾತ್ರ ನಮ್ಮ ಬೇಡಿಕೆಗಳು ಈಡೇರಿಕೆ ಸಾಧ್ಯ ಎಂದ ಅವರು, ಆಚಾರ-ವಿಚಾರ ಉಳಿಸಿ, ಬೆಳೆಸಬೇಕು. ಮತಾಂತರ ಆಮಿಷಗಳಿಗೆ ಬಲಿಯಾಗಬಾರದು ಎಂದು ಹೇಳಿದರು.

‘ಮಾಜಿ ಶಾಸಕ ಮಂಡೇಪಂಡ ಅಪ್ಪಚ್ಚು ರಂಜನ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿ, ನಮ್ಮ ಸಂಸ್ಕೃತಿಯನ್ನು ಮೊದಲು ಗೌರವಿಸಬೇಕು. ಆಗ ಮಾತ್ರ ಜನಾಂಗದ ಅಸ್ತಿತ್ವ ಉಳಿಯುತ್ತದೆ. ಕೊಡಗಿಗೂ ಕೇರಳಕ್ಕೂ ಅವಿನಾಭಾವ ಸಂಬಂಧವಿದೆ. ಧಾರ್ಮಿಕ ವಿಚಾರದಲ್ಲಿ ಕೊಡಗಿನೊಂದಿಗೆ ಕೇರಳ ಜನರು ಬೆರೆತಿದ್ದಾರೆ. ಕೊಡವ ಭಾಷೆಯಲ್ಲೂ ಮಲಯಾಳ ಭಾಷೆ ಪದಗಳಿವೆ. ಇದು ಮಲಯಾಳಿ- ಕೊಡವರ ಅನ್ನೋನ್ಯಕ್ಕೆ ಸಾಕ್ಷಿ. ಆರ್ಥಿಕ, ಶೈಕ್ಷಣಿಕರಾಗಿ ಸಬಲರನ್ನಾಗಿ ಮಾಡಲು ಸಂಘ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ನಗರಸಭಾ ಅಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ ಮಾತನಾಡಿ, ಒಗ್ಗಟ್ಟು ಮನೋಭಾವದಿಂದ ಸುಭದ್ರ ಭಾರತ ನಿರ್ಮಾಣ ಸಾಧ್ಯ ಸಂಘಟನೆಗಳ ಮೂಲಕ ಜನಾಂಗದ ಆಚಾರ-ವಿಚಾರ ಉಳಿಸಿ, ಬೆಳೆಸುವ ಕೆಲಸವಾಗುತ್ತದೆ ಎಂದರು.

ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಕೆ.ಎಸ್.ರಮೇಶ್ ಪ್ರಾಸ್ತಾವಿಕವಾಗಿ ಮಾತನಾಡಿ, ಓಣಂ ನೆಪದಲ್ಲಿ ಜನಾಂಗ ಬಾಂಧವರು ಸೇರಲು ವೇದಿಕೆಯಾಗಿದೆ. ಸಂಘ ಸ್ಥಾಪನೆಯಾಗಿ ಹಲವು ವರ್ಷ ಕಳೆದಿದೆ. ವರ್ಷದಿಂದ ವರ್ಷಕ್ಕೆ ಕಾರ್ಯಚಟುವಟಿಕೆ ಹೆಚ್ಚಾಗಿದೆ. ವರ್ಷಕ್ಕೆ 14 ಕಾರ್ಯಕ್ರಮ ನಡೆಸಲಾಗುತ್ತದೆ. ಒಗ್ಗೂಡುವಿಕೆ ಸಂಘದ ಉದ್ದೇಶ. ಮರಣನಿಧಿಯನ್ನು ಸಂಘದ ಸದಸ್ಯರ ಕುಟುಂಬಕ್ಕೆ ಮಾತ್ರ ನೀಡಲು ನಿರ್ಧರಿಸಲಾಗಿದೆ. ಜನಾಂಗದ ಸಾಧಕರನ್ನು ಗುರುತಿಸಿ ಪ್ರೋತ್ಸಾಹಿಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಓಣಂ ಆಚರಣಾ ಸಮಿತಿ ಅಧ್ಯಕ್ಷ ಟಿ.ಆರ್.ವಾಸುದೇವ್, ನಗರಸಭಾ ಮಾಜಿ ಸದಸ್ಯರಾದ ಕೆ.ಎಂ.ಗಣೇಶ್, ಉಣ್ಣಿಕೃಷ್ಣ, ಮಾಜಿ ಸೈನಿಕ, ಕಾವೇರಿ ಗ್ರೂಪ್ ವ್ಯವಸ್ಥಾಪಕ ಗಣೇಶ್, ಮುತ್ತಪ್ಪ ದೇವಾಲಯ ಅಧ್ಯಕ್ಷ ಟಿ.ಕೆ.ಸುಧೀರ್, ಖಜಾಂಚಿ ಕೆ.ಟಿ.ಉತ್ತಮ್ಮನ್ ಹಾಜರಿದ್ದರು.
ದೀಪ್ತಿ ಧರ್ಮೇಂದ್ರ ಪ್ರಾರ್ಥಿಸಿ, ಪ್ರಧಾ ಕಾರ್ಯದರ್ಶಿ ಕೆ.ವಿ.ಧರ್ಮೇಂದ್ರ ಸ್ವಾಗತಿಸಿ, ಅಶೋಕ್ ವಂದಿಸಿದರು.

ಆಕರ್ಷಕ ಮೆರವಣಿಗೆ : ನಗರದ ಗಾಂದಿ ಮೈದಾನ ದಲ್ಲಿ ಮುಖ್ಯಬೀದಿಯಲ್ಲಿ ಸಾಗಿದ ಮೆರವಣಿಗೆ ಆಕರ್ಷಕವಾಗಿ ಮೂಡಿಬಂತು. ಸಾಂಪ್ರದಾಯಿಕ ಉಡುಗೆ ತೊಟ್ಟು ಪುರುಷ ಮಹಿಳೆಯರು ಮೆರವಣಿಗೆಯಲ್ಲಿ ಪಾಲ್ಗೊಂಡರು. ಜೊತೆಗೆ ಪುಟಾಣಿಗಳು ಛದ್ಮವೇಷ ಧರಿಸಿ ಗಮನಸೆಳೆದರು. ಮೆರವಣಿಗೆಯಲ್ಲಿ ವಿಶೇಷವಾಗಿ ಸಂವಿಧಾನ ಪೀಠಿಕೆ ಇರುವ ರಥ ಸಾಗಿತು. ಇದರೊಂದಿಗೆ ಕೇರಳದ ಚಂಡೆ ವಾದ್ಯ ಆಕರ್ಷಕವಾಗಿತ್ತು. ಕಾವೇರಿ ಹಾಲ್‍ನಲ್ಲಿ ಮಹಿಳೆಯರು ರಚಿಸಿದ್ದ ಹೂವಿನ ರಂಗೋಲಿಗಳು (ಪೊಕೊಳಂ) ಜನಮನ ಸೆಳೆದವು.

ಸಾಂಸ್ಕೃತಿಕ ಕಾರ್ಯಕ್ರಮ ಪ್ರತಿಭಾ ಪುರಸ್ಕಾರ :: ಕಾರ್ಯಕ್ರಮದ ಅಂಗವಾಗಿ ಮಹಿಳೆಯರು, ಮಕ್ಕಳಿಂದ ಮೂಡಿಬಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಮನರಂಜಿಸಿದವು. ಕೇರಳದ ಸಾಂಪ್ರದಾಯಕ ನೃತ್ಯಗಳು ಮೂಡಿಬಂದವು. ಇದೇ ಸಂದರ್ಭ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಯಿತು.
ಸಬ್ ಜೂನಿಯರ್ ಹಾಕಿ ತಂಡವನ್ನು ಪ್ರತಿನಿಧಿಸಿದ ತೃಪ್ತ ಅವರನ್ನು ಇದೇ ವೇಳೆ ಸನ್ಮಾನಿಸಿ, ಗೌರವಿಸಲಾಯಿತು.
ಕಾರ್ಯಕ್ರಮಕ್ಕೆ ಆಗಮಿಸಿದ್ದ ಮಂದಿ ಓಣಂ ವಿಶೇಷ ಬೋಜನ ಸವಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ತಲಕಾವೇರಿಯಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮೂರ್ನಾಡು, NEWS DESK ಅ.17: ಇಲ್ಲಿನ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಅ.20ರಂದು ಮೂರ್ನಾಡಿನಲ್ಲಿ 33ನೇ…

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026

ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಅಕ್ಟೋಬರ್ 17, 2026

ಇಂದು ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿ ದಸರಾ ಸಂಭ್ರಮಕ್ಕೆ ಮೆರುಗು ನೀಡಿದ ಶ್ವಾನ ಪ್ರದರ್ಶನ; ಪ್ರಾಣಿ ಪ್ರಿಯರ ಮನಗೆದ್ದ ವಿವಿಧ ತಳಿಗಳು

ಅಕ್ಟೋಬರ್ 17, 2026

SSLC, ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿ: ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ

ಅಕ್ಟೋಬರ್ 17, 2026

ನಾಳೆ ಮಡಿಕೇರಿಯಲ್ಲಿ ಮಹಿಳಾ ದಸರಾ: ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 17, 2026

ಅ.19ರಂದು ರೋಟರಿ ಮಡಿಕೇರಿಯಿಂದ ಉಚಿತ ಮೂಳೆ ಮತ್ತು ನರರೋಗ ತಪಾಸಣಾ ಶಿಬಿರ

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.