ಮಡಿಕೇರಿ ನ.27 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕೊಡಗು ಜಿಲ್ಲಾ ಕುರುಬ ಸಮಾಜ ಇವರ ಸಹಕಾರದಲ್ಲಿ ಕನಕದಾಸರ ಜಯಂತಿ ಆಚರಣೆಯು ನ,30 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ, ಕೊಡಗು ಜಿಲ್ಲಾ ಕುರುಬ ಸಂಘದ ಅಧ್ಯಕ್ಷರಾದ ಎಚ್.ಎಸ್.ಮಹೇಶ್, ಕೊಡಗು ಜಿಲ್ಲಾ ಕುರುಬ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಎ.ಗಂಗಾಧರ, ಹುಣಸೂರು ಡಿ.ದೇವರಾಜ ಅರಸು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸ್ನಾತಕೋತ್ತರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಎಂ.ಆರ್.ರಾಶಿ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ ಇತರರು ಪಾಲ್ಗೊಳ್ಳಲಿದ್ದಾರೆ.







